Yuvavahini

ಮಾಣಿ

ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಸನ್ಮಾನ

ಮಾಣಿ, ಜುಲೈ 16: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಘಟಕದ ಸದಸ್ಯರ ಮಕ್ಕಳಿಗೆ ‘ಪ್ರತಿಭಾ ಗೌರವ ಅಭಿನಂದನಾ ಕಾರ್ಯಕ್ರಮ’ ಆಯೋಜಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಆಧ್ಯಾ ಎಂ.ಎಸ್., ಗ್ರೀಷ್ಮಾ, ಪ್ರಗತಿ ಆರ್. ಸಾಲ್ಯಾನ್, ಹನ್ಶಿಕಾ ಎಸ್.ಡಿ. ಪೂಜಾರಿ, ಕೌಶಿಕ್, ದಿಶಾ ಕೆ. ಪೂಜಾರಿ, ದಿಶಾಂತ್ ಪೂಜಾರಿ ಹಾಗೂ ಪೂರ್ವಿ ಬಿ.ಕೆ. ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದ […]

Read More

ಯುವವಾಹಿನಿ ಮಾಣಿ ಘಟಕದಿಂದ ₹75 ಸಾವಿರ ಧನಸಹಾಯ

ಮಾಣಿ, ಜುಲೈ 15: ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕರಾದ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ₹75,000 ಧನಸಹಾಯ ಹಸ್ತಾಂತರಿಸಲಾಯಿತು. ಘಟಕದ ಸದಸ್ಯರ ಸ್ವಯಂಪ್ರೇರಿತ ಸಹಕಾರದಿಂದ ಈ ಧನಸಹಾಯವನ್ನು ಸಂಗ್ರಹಿಸಿ, ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ, ಸಂಕಷ್ಟದ […]

Read More

‘ಯುವ ಆರೋಗ್ಯ ಸ್ಪರ್ಶ’ ಯೋಜನೆಯಡಿ ಮಾನವೀಯ ನೆರವು

ಮಾಣಿ, ಜುಲೈ 8: ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಯುವವಾಹಿನಿ (ರಿ.) ಮಾಣಿ ಘಟಕವು ತನ್ನ ‘ಯುವ ಆರೋಗ್ಯ ಸ್ಪರ್ಶ’ ಯೋಜನೆಯಡಿ ಘಟಕದ ಸಕ್ರಿಯ ಸದಸ್ಯ ಯಶೋಧರ ಕೊಡಾಜೆ (ಮಾಣಿ ಗ್ರಾಮದ ದೈವಪಾತ್ರಿ) ಅವರ ಚಿಕಿತ್ಸೆಗೆ ₹50,000 ಧನಸಹಾಯವನ್ನು ವಿತರಿಸಿತು. ಯಶೋಧರ ಕೊಡಾಜೆ ಅವರು ಎಲುಬುಗಳಿಗೆ ಸಂಬಂಧಿಸಿದ ಅಪರೂಪದ ಆಲ್ಕಾಪ್ಟೋನೂರಿಯಾ (Alkaptonuria) ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಹಲವು ವರ್ಷಗಳಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ […]

Read More

ಯುವವಾಹಿನಿ ಮಾಣಿ ಘಟಕದಿಂದ ಮಾನವೀಯ ನೆರವು

ಮಾಣಿ, ಜೂನ್: ಯುವವಾಹಿನಿ (ರಿ.) ಮಾಣಿ ಘಟಕದ ‘ಯುವ ಸೇವಾ ಸ್ಪರ್ಶ’ ಯೋಜನೆಯಡಿ ಗೋಳಿಕಟ್ಟೆಯ ನಿವಾಸಿಗಳಾದ ಆನಂದ ಹಾಗೂ ಲೀಲಾ ದಂಪತಿಗಳಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಅನಾರೋಗ್ಯದಿಂದ ಬಳಲುತ್ತಿರುವ ಲೀಲಾ ಅವರು ನಡೆಯಲೂ ಕಷ್ಟಪಡುತ್ತಿರುವುದಲ್ಲದೆ ಆನಂದ ಅವರ ಆರೋಗ್ಯವೂ ಉತ್ತಮವಾಗಿಲ್ಲ. ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಈ ದಂಪತಿಗಳಿಗೆ ಮಾನವೀಯ ಕಾಳಜಿಯಿಂದ ಯುವವಾಹಿನಿ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಿಸಿ ನೆರವು ನೀಡಲಾಯಿತು. ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ಅವರ ಅಧ್ಯಕ್ಷತೆಯಲ್ಲಿ ಹಾಗೂ […]

Read More

ಯುವ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಯುವಜನರಲ್ಲಿ ಜಾಗೃತಿ ಮೂಡಿಸಲಿ: ಕಿರಣ್ ಹೆಗ್ಡೆ

ಮಾಣಿ, ಜೂ. 28: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಯುವ ಸದಸ್ಯತ್ವ ಅರಿವು, ನಾಯಕತ್ವ ತರಬೇತಿ ಹಾಗೂ ವಿದ್ಯಾರ್ಥಿ ಅಭಿನಂದನಾ ಕಾರ್ಯಕ್ರಮ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜೇಶ್ ಸುವರ್ಣ, ಬಂಟ್ವಾಳ ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪ್ರೌಢಶಾಲಾ ಮಂಡಳಿಯ ಅಧ್ಯಕ್ಷ ಕಿರಣ್ ಹೆಗ್ಡೆ ಮಾತನಾಡಿ, “ಯುವಜನರಲ್ಲಿ ಸಂಘಟನಾ ಮನೋಭಾವ, […]

Read More

“ಸದಸ್ಯತ್ವದ ಅರಿವಿನಿಂದ ನಾಯಕತ್ವದ ಬೆಳಕಿನೆಡೆಗೆ ಯುವ ಪಯಣ”: ರಾಜೇಶ್ ಸುವರ್ಣ

ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಾಮಾಜಿಕ ಜಾಲತಾಣ ಹಾಗೂ ವೆಬ್‌ಸೈಟ್ ಸಂಪಾದಕರಾದ ರಾಜೇಶ್ ಸುವರ್ಣ ಅವರು ಯುವಕರಿಗೆ ಸದಸ್ಯತ್ವದ ಮಹತ್ವ, ನಾಯಕತ್ವದ ಗುಣಗಳು […]

Read More

ಮರದ ನೆರಳು ಬದುಕಿಗೆ ನೆರಳು ಸಂಪನ್ನ

ಮಾಣಿ: “ಮರದ ನೆರಳು – ಬದುಕಿಗೆ ನೆರಳು” ಎಂಬ ಮಹೋನ್ನತ ಧ್ಯೇಯದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿದ್ದ “ಯುವ ವೃಕ್ಷೋತ್ಸವ” ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಘಟಕವು 20 ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿತು. ಅಭಿಯಾನದ ಸಮಾರೋಪ ಕಾರ್ಯಕ್ರಮವು ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಈ ಅಭಿಯಾನದ ಮೂಲಕ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು […]

Read More

ಶಾಲೆಗಳ ಅಭಿವೃದ್ಧಿಗೆ ನೀಡುವ ಸಹಕಾರ ಮಕ್ಕಳ ಉಜ್ವಲ ಭವಿಷ್ಯಕ್ಕೆ ನೆರವು: ಅಶೋಕ್ ಕುಮಾರ್ ಪಡ್ಪು

ಮಾಣಿ, ಜೂನ್ 25: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮಜಿ ವೀರಕಂಭ ಶಾಲೆಯ ಮುಖಮಂಟಪದ ಮೇಲ್ಚಾವಣಿಗೆ ಅಳವಡಿಸಲಾದ ಶೀಟ್‌ಗಳ ಸಮರ್ಪಣೆ ಹಾಗೂ ಹಸ್ತಾಂತರ ಕಾರ್ಯಕ್ರಮ ಮತ್ತು “ಯುವ ವೃಕ್ಷೋತ್ಸವ–2026” ಕಾರ್ಯಕ್ರಮವು ಗುರುವಾರ ಶಾಲಾ ಆವರಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಅಶೋಕ್ ಪಡ್ಪು ಮಾತನಾಡಿ, “ಶಾಲೆಗಳ ಅಭಿವೃದ್ಧಿಗೆ ನೀಡುವ […]

Read More

ಯುವವಾಹಿನಿ ಮಾಣಿ ಘಟಕದಿಂದ ವಿವಿಧೆಡೆ ಹಸಿರು ಅಭಿಯಾನ

ಮಾಣಿ, ಜೂನ್ 22: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಯುವ ವೃಕ್ಷೋತ್ಸವ–2026” ಅಂಗವಾಗಿ ಮಾಣಿ ವ್ಯಾಪ್ತಿಯ ವಿವಿಧ ಶಾಲೆಗಳು, ಧಾರ್ಮಿಕ ಕ್ಷೇತ್ರಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಈ ಅಭಿಯಾನದ ಭಾಗವಾಗಿ ಶ್ರೀರಾಮಚಂದ್ರ ಪದವಿ ಪೂರ್ವ ಕಾಲೇಜು ಪೆರ್ನೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇರ, ಸರಕಾರಿ ಪ್ರೌಢಶಾಲೆ ಸೂರ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು, ಮಾಣಿ ಶ್ರೀ ಉಳ್ಳಾಲ್ತಿ ಧರ್ಮಚಾವಡಿ ಹಾಗೂ ಇಡ್ಕಿದು ಗ್ರಾಮ ಪಂಚಾಯಿತಿ ಅಂಗನವಾಡಿ ಕೇಂದ್ರ […]

Read More

ಸಾಯಿ ನಾಮಸ್ಮರಣೆಯಲ್ಲಿ ತಲ್ಲೀನರಾದ ಭಕ್ತರು : ಯುವವಾಹಿನಿ ಮಾಣಿ ಘಟಕದ ವತಿಯಿಂದ “ಸಾಯಿ ಭಕ್ತಿ ಸುಧೆ”

ಶಂಭೂರಿನ ದಕ್ಷಿಣ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 18-06-2026ರಂದು ಸಂಜೆ 6.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೆ “ಸಾಯಿ ಭಕ್ತಿ ಸುಧೆ” ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಮಂದಿರದ ಅರ್ಚಕರಾದ ಶ್ರೀ ಕೇಶವ ಶಾಂತಿ ಹಾಗೂಆಡಳಿತ ಮುಖ್ಯಸ್ಥರು ಸುರಜ್ ಸಾಯಿಅವರ ಮಾರ್ಗದರ್ಶನ ಹಾಗೂ ಸಮ್ಮುಖದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಜನಾ ತಂಡದ ಸದಸ್ಯರು ಮಂದಿರದ ಪರಿಸರದಲ್ಲಿ ಎರಡು ಸಂಪಿಗೆ ಗಿಡಗಳನ್ನು ನೆಡುವುದರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!