
11-10-2026, 6:30 PM
ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ ಗುಂಪು ಸ್ಪರ್ಧೆಗಳು ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಗುಂಪು ಸ್ಪರ್ಧೆಗಳ ವಿಜೇತರ ವಿವರ ಈ ಕೆಳಗಿನಂತಿದೆ ವಾಲಿಬಾಲ್ಪ್ರಥಮ : ಉಡುಪಿ ಘಟಕದ್ವಿತೀಯ : ಪಣಂಬೂರು ಕುಳಾಯಿ ಘಟಕ ತ್ರೋಬಾಲ್ಪ್ರಥಮ : ಪಣಂಬೂರು […]
Read More

04-10-2026, 11:00 PM
ಮೂಡುಬಿದಿರೆ ಅ 04 : ಭಾರತೀಯ ನೌಕಾಪಡೆಯಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಕಾರವಾರ ನೌಕಾನೆಲೆಯ ಐಎನ್ಎಸ್ ವಿಕ್ರಮಾದಿತ್ಯದ ಮುಖ್ಯ ವೈದ್ಯಾಧಿಕಾರಿ ಸರ್ಜನ್ ಕಮಾಂಡರ್ (ಡಾ.) ಅರ್ಜುನ್ ಅಂಚನ್ ಅವರ ವಿಶಿಷ್ಟ ಸಾಧನೆ ಹಾಗೂ ದೇಶಸೇವೆಯನ್ನು ಗುರುತಿಸಿ ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವದ ಸಂದರ್ಭದಲ್ಲಿ ನಡೆದ ಪಥಸಂಚಲನದಲ್ಲಿ ಧ್ವಜವಂದನೆ ಸ್ವೀಕರಿಸಿದ ಸರ್ಜನ್ ಕಮಾಂಡರ್ ಡಾ. ಅರ್ಜುನ್ ಅಂಚನ್ ಅವರನ್ನು ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಸಮುದ್ರದಾಳದ […]
Read More

04-10-2026, 8:00 PM
ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರೋಟರಿ ಜಿಲ್ಲೆ 1381ರ ಜಿಲ್ಲಾ ಗವರ್ನರ್ ರೊಟೇರಿಯನ್ ಸತೀಶ್ ಬೋಳಾರ್ ಮಾತನಾಡಿ, “ಯುವವಾಹಿನಿ ಕ್ರೀಡೋತ್ಸವ ಅತ್ಯಂತ ಶಿಸ್ತುಬದ್ಧವಾಗಿ ನಡೆದಿದ್ದು, ಸಮಾಜದ […]
Read More

04-10-2026, 11:00 AM
ಮೂಡುಬಿದಿರೆ ಅ. 04 : ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ಸಂಸ್ಕೃತಿ, ವೈದ್ಯಕೀಯ, ಆಡಳಿತ, ಉದ್ಯಮ ಹಾಗೂ ದೇಶಪ್ರೇಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಆಧುನಿಕ ಮೂಡುಬಿದಿರೆಯ ನಿರ್ಮಾತೃ ಎಂದೇ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. 2026ರ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವದ ಸಂದರ್ಭದಲ್ಲಿ ಡಾ. ಮೋಹನ ಆಳ್ವರಿಗೆ ಅಭಿನಂದನೆ ಸಲ್ಲಿಸಿ, […]
Read More

04-10-2026, 10:00 AM
ಮೂಡುಬಿದಿರೆ ಅ 4: ಯುವಜನತೆಯೇ ದೇಶದ ನಿಜವಾದ ಸಂಪತ್ತು. ಈ ಯುವಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬೆಳೆಸಿದರೆ ದೇಶದ ಭವಿಷ್ಯ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ಅಕ್ಟೋಬರ್ 4 ಭಾನುವಾರ ನಡೆದ *‘ಯುವವಾಹಿನಿ ಕ್ರೀಡೋತ್ಸವ–2026’*ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಯ ಪ್ರಮುಖ ಸಂದೇಶವೇ ಕ್ರೀಡಾ ಸ್ಫೂರ್ತಿ. […]
Read More

24-09-2026, 2:00 PM
ಮೂಡಬಿದಿರೆ ಸೆ 24 : ಯುವವಾಹಿನಿ (ರಿ.) ಮೂಡಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ, ಮೂಡಬಿದಿರೆ ಇವರ ಸಹಯೋಗದಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮವನ್ನು ಮೂಡಬಿದಿರೆಯ ಬಿಲ್ಲವ ಸಂಘದಲ್ಲಿ ಆಯೋಜಿಸಲಾಯಿತು. ಯುವವಾಹಿನಿ (ರಿ.) ಮೂಡಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು, ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಮಹಾ ಪ್ರಬಂಧಕ ಅರುಣ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ದಕ್ಷಿಣ ಕನ್ನಡ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ […]
Read More

13-09-2026, 1:00 PM
ಮೂಡುಬಿದಿರೆ, ಸೆ. 13: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಮಾಸಿಕ ಸಭೆಯು ಸೆಪ್ಟೆಂಬರ್ 13ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮೇಘನಾ ಘಟಕದ ವರದಿಯನ್ನು ಮಂಡಿಸಿದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ 17 ಮಂದಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ […]
Read More

06-09-2026, 2:00 PM
ಮೂಡುಬಿದ್ರೆ ಸೆಪ್ಟೆಂಬರ್ 6 : ಯುವವಾಹಿನಿ (ರಿ.) ಮೂಡುಬಿದ್ರೆ ಘಟಕದ ವತಿಯಿಂದ ಸಮಾಜ ಸೇವಾ ನಿರ್ದೇಶಕ ಶ್ರೀ ಉಮೇಶ್ ಕೋಟ್ಯಾನ್ ಅವರ ಸಹಕಾರದೊಂದಿಗೆ ಸಂಕಷ್ಟದಲ್ಲಿದ್ದ ಬಡ ಕುಟುಂಬಕ್ಕೆ ಮಾನವೀಯ ನೆರವು ನೀಡಲಾಯಿತು. ಮೂಡುಬಿದ್ರೆ ರೇಂಜ್ ಫಾರೆಸ್ಟ್ ಆಫೀಸ್ ಬಳಿಯ ನಿವಾಸಿ ಇಬ್ರಾಹೀಂ ಅವರ ಅನಾರೋಗ್ಯ ಸಮಸ್ಯೆಗೆ ಸ್ಪಂದಿಸಿದ ಘಟಕವು ಕುಟುಂಬಕ್ಕೆ ಆರ್ಥಿಕ ಧನಸಹಾಯ ನೀಡುವುದರ ಜೊತೆಗೆ, ಮನೆಗೆ ಅಗತ್ಯವಿರುವ ರೇಷನ್ ಸಾಮಗ್ರಿಗಳನ್ನು ವಿತರಿಸಿತು. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಕಾರ್ಯವನ್ನು […]
Read More

06-09-2026, 2:00 PM
ಮೂಡುಬಿದ್ರೆ ಸೆ 6 : ಯುವವಾಹಿನಿ (ರಿ.) ಮೂಡುಬಿದ್ರೆ ಘಟಕದ ಸಮಾಜ ಸೇವಾ ನಿರ್ದೇಶಕ ಶ್ರೀ ಉಮೇಶ್ ಕೋಟ್ಯಾನ್ ಅವರ ಸಹಕಾರದಲ್ಲಿ ಚಾಮುಂಡಿಬೆಟ್ಟ, ಕೋಟೆಬಾಗಿಲು ನಿವಾಸಿ ಶ್ರೀಮತಿ ಬೇಬಿ ಪೂಜಾರ್ತಿ ಅವರ ಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಸ್ಪಂದಿಸಲಾಯಿತು. ಕುಟುಂಬಕ್ಕೆ ಅಗತ್ಯವಿರುವ ದಿನಸಿ ಹಾಗೂ ರೇಷನ್ ಸಾಮಗ್ರಿಗಳನ್ನು ವಿತರಿಸುವುದರ ಜೊತೆಗೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯ ಸಹಾಯ ಹಸ್ತ ಚಾಚಲಾಯಿತು. ಅಶಕ್ತ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿ, ಅಗತ್ಯದ ಸಂದರ್ಭದಲ್ಲಿ ನೆರವಿನ ಹಸ್ತ ಚಾಚುವುದು ಯುವವಾಹಿನಿಯ ಸಮಾಜ ಸೇವೆಯ […]
Read More

06-09-2026, 2:00 PM
ಮೂಡುಬಿದ್ರೆ ಸೆ 6 : ಯುವವಾಹಿನಿ (ರಿ.) ಮೂಡುಬಿದ್ರೆ ಘಟಕದ ವತಿಯಿಂದ ಮೂಡುಮಾರ್ನಾಡು ಗ್ರಾಮದ ಹೊಸಮನೆ ಪರಪು ನಿವಾಸಿ ಸರಸ್ವತಿ ಅವರ ಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಮಾನವೀಯವಾಗಿ ಸ್ಪಂದಿಸಲಾಯಿತು. ಕುಟುಂಬಕ್ಕೆ ಆರ್ಥಿಕ ಧನಸಹಾಯ ನೀಡುವುದರ ಜೊತೆಗೆ, ಮನೆಗೆ ಅಗತ್ಯವಿರುವ ರೇಷನ್ ಸಾಮಗ್ರಿಗಳನ್ನು ವಿತರಿಸಿ ನೆರವು ನೀಡಲಾಯಿತು.ಸಂಕಷ್ಟದಲ್ಲಿರುವ ಹಾಗೂ ಅಶಕ್ತ ಕುಟುಂಬಗಳ ಅಗತ್ಯಗಳಿಗೆ ಸ್ಪಂದಿಸಿ, ಅಗತ್ಯದ ಸಂದರ್ಭದಲ್ಲಿ ನೆರವಿನ ಹಸ್ತ ಚಾಚುವುದು ಯುವವಾಹಿನಿಯ ಸಮಾಜ ಸೇವೆಯ ಪ್ರಮುಖ ಉದ್ದೇಶವಾಗಿದೆ. ಈ ಮೂಲಕ ಸಮಾಜದಲ್ಲಿ ಮಾನವೀಯತೆ, ಸಹಕಾರ ಮತ್ತು ಪರಸ್ಪರ […]
Read More