Yuvavahini

ಸಾಧನಾ ಶ್ರೀ ಪ್ರಶಸ್ತಿ

38ನೇ ವಾರ್ಷಿಕ ಸಮಾವೇಶದ ಉದ್ಘಾಟನೆ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ 38ನೇ ವಾರ್ಷಿಕ ಸಮಾವೇಶವನ್ನು ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ಸಮಾವೇಶವು ಯುವವಾಹಿನಿ ಕೂಳೂರು ಘಟಕದ ಆತಿಥ್ಯದಲ್ಲಿ ಜರುಗಿತು. ಬ್ರಹ್ಮಶ್ರೀ […]

Read More

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

ಕೆ.ಚಿತ್ತರಂಜನ್ ಗರೋಡಿ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಬಂಟ್ವಾಳ : ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಅನನ್ಯ ಸೇವೆ ಹಾಗೂ ಕಂಕನಾಡಿ ಗರಡಿ ಕ್ಷೇತ್ರ ಅಧ್ಯಕ್ಷರಾಗಿ ನಿಸ್ವಾರ್ಥವಾಗಿ ಸಲ್ಲಿಸಿದ ಸೇವೆಯು ಗರಡಿಯ ಮೂಲ ಬೆಳವಣಿಗೆಗೆ ಕಾರಿಣಿಕರ್ತರೆಂದು ಗುರುತಿಸಿ ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ 2023 ನೇ ಸಾಲಿನ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಾರಂಭದ ಉದ್ಘಾಟಕರಾದ ಪದ್ಮರಾಜ್.ಆರ್, ಕೇಂದ್ರ ಸಮಿತಿ ಅಧ್ಯಕ್ಷರು ರಾಜೇಶ್.ಬಿ, ನಾರ್ದನ್ ಸ್ಲೈ ನಿರ್ದೇಶಕರಾದ ಕೃತೀನ್ ಅಮೀನ್, ರಾಣಿ ಅಬ್ಬಕ್ಕ […]

Read More

ರಾಜ್ ಕುಮಾರ್ ಬೆಹರೈನ್ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬೆಹರೈನ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ , ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ ಹಾಗೂ ಸಾಧನಾ ಶ್ರೇಷ್ಠ ಪ್ರದಾನ ಮಾಡಲಾಯಿತು. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ […]

Read More

ಯುವವಾಹಿನಿ ಸಾಧನಾಶ್ರೀ’ ಪ್ರಶಸ್ತಿ-2017 ಪುರಸ್ಕ್ರತ ಶ್ರೀ ಚಂದಯ್ಯ ಬಿ. ಕರ್ಕೇರಾ

ತಾವು ಪಟ್ಟ ಕಷ್ಟ ನಮ್ಮ ಮಕ್ಕಳಿಗೆ ಸಿಗದಿರಲಿ ಎಂದು ಆಶಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಅವರ ಜೀವನಕ್ಕಾಗಿ ಎಲ್ಲವನ್ನೂ ಧಾರೆ ಎರೆಯುವ ಹೆತ್ತವರನ್ನು ಈ ಸಮಾಜದಲ್ಲಿ ಕಂಡಿದ್ದೇವೆ, ಆದರೆ ಬಡತನದ ಬೇಹುದಿಯಲ್ಲಿ ಬೆಳೆಯುತ್ತಾ ಶಿಕ್ಷಣ ಪಡೆಯಲು ಈ ಸಮಾಜದಲ್ಲಿ ತಾನು ಕಂಡುಕೊಂಡ ಕಷ್ಟ ಇನ್ನೊಬ್ಬರಿಗೆ ಬರದಿರಲಿ ಎಂದು ಆಶಿಸಿ ಒಂದೆರಡು ವರುಷವಲ್ಲ ನಿರಂತರವಾದ ಐವತ್ತು ಸಂವತ್ಸರದಿಂದ ಎಲೆಮರೆಯ ಕಾಯಿಯಂತೆಯೇ ಉಳಿದು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಬಂದ ಅಪರೂಪದ ಸಾಧಕರ ಸಾಲಿನಲ್ಲಿ ಬರುವ ಮೇರು ವ್ಯಕ್ತಿತ್ವದ […]

Read More

ಶ್ರೀ ಶೈಲೇಂದ್ರ ವೈ.ಸುವರ್ಣ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ – 2016

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿಯ ಪುರಭವನದಲ್ಲಿ ದಿನಾಂಕ 31.07.2016 ರಂದು ಜರುಗಿದ ಯುವವಾಹಿನಿಯ 29ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಸಾಮಾಜಿಕ ಕ್ಷೇತ್ರದ ಸಾಧನೆ ಗುರುತಿಸಿ ಶ್ರೀ ಶೈಲೇಂದ್ರ ವೈ.ಸುವರ್ಣ ಇವರಿಗೆ  ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ 2016 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅದ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಮಾಧವ ಬನ್ನಂಜೆ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, […]

Read More

ಜಯ ಸಿ. ಸುವರ್ಣಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಜಯ ಸಿ. ಸುವರ್ಣರ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ-2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿ, ಆಳ್ವಾಸ್ […]

Read More

ಶ್ರೀ ಜೆ. ತಿಮ್ಮಪ್ಪ ಪೂಜಾರಿ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2014

ಸದಾ ಹಸನ್ಮುಖಿ, ಕ್ರಿಯಾ ಶೀಲ ನಡಿಗೆ, ಮೆಲು ಮಾತು, ಹಿತವಾದ ನುಡಿ, ಬಿಳಿ ಪಂಚೆ, ಬಿಳಿ ಅಂಗಿ ಇವಷ್ಟೇ ಅವರ ಆಸ್ತಿ. ಆದರೆ ಸಾಹಿತ್ಯದಲ್ಲಿ ಅವರದ್ದು ದೈತ್ಯ ಪ್ರತಿಭೆ. ತಿಮ್ಮಪ್ಪ ಪೂಜಾರಿಯವರು ಮೂಲತಃ ಜೆಪ್ಪಿನಮೊಗರು ನಿವಾಸಿ. ಈ ನಾಡು ಕಂಡ ಅಪರೂಪದ ಸಾಹಿತಿ, ತುಳು ಭಾಷೆಯಲ್ಲಿ ಎರಡು ಕೃತಿಗಳನ್ನು ಪ್ರಕಟಿಸಿದ್ದು ಇನ್ನೆರಡು ಕೃತಿಗಳನ್ನು ಪ್ರಕಟಣೆಗೆ ಸಿದ್ಧ ಪಡಿಸಿರುವ ತಿಮ್ಮಪ್ಪ ಪೂಜಾರಿಯವರು ತುಳು ಭಾಷೆಯಲ್ಲಿ ಸಾಕಷ್ಟು ಹಿಡಿತವನ್ನು ಹೊಂದಿದ್ದಾರೆ. ಗ್ರಾಮ್ಯವಾದ ಮತ್ತು ಅಷ್ಟೇ ಸರಳವಾದ ಭಾಷಾ ಪ್ರಯೋಗದ ಮೂಲಕ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!