Yuvavahini

ಶಕ್ತಿನಗರ

ಯುವವಾಹಿನಿ ಶಕ್ತಿನಗರ ಘಟಕದಿಂದ ಭಜನಾ ಸಂಕೀರ್ತನೆ

ಶಕ್ತಿನಗರ, ಅ. 11: ನವರಾತ್ರಿ ಉತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಅಕ್ಟೋಬರ್ 11ರಂದು ಕುಂಟಲ್ಪಾಡಿಯ ಶ್ರೀ ಚಾಮುಂಡಿ ರಾಹು ಗುಳಿಗ ದೈವಸ್ಥಾನದಲ್ಲಿ ಭಜನಾ ಸಂಕೀರ್ತನೆ ಕಾರ್ಯಕ್ರಮ ನಡೆಯಿತು. ಶಕ್ತಿ ಸ್ವರೂಪಿಣಿಯಾದ ದೇವಿಯನ್ನು ಆರಾಧಿಸುವ ನವರಾತ್ರಿ ಹಬ್ಬದಲ್ಲಿ ಭಜನೆ ಮತ್ತು ಸಂಕೀರ್ತನೆಗಳಿಗೆ ವಿಶೇಷ ಮಹತ್ವವಿದೆ. ಭಕ್ತಿಭಾವ, ಆಧ್ಯಾತ್ಮಿಕ ಚಿಂತನೆ ಹಾಗೂ ಸಾಮೂಹಿಕ ಪ್ರಾರ್ಥನೆಯ ಮೂಲಕ ದೈವಿಕ ಅನುಭೂತಿಯನ್ನು ಪಡೆಯುವ ಉದ್ದೇಶದಿಂದ ಘಟಕದ ಸದಸ್ಯರೆಲ್ಲರೂ ಒಗ್ಗೂಡಿ ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ […]

Read More

ಮಹಿಳೆಯರು ಕೌಶಲ್ಯ ಕಲಿತು ಸ್ವ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು – ಜೀವನ್ ಕೊಲ್ಯ

ಶಕ್ತಿನಗರ ಅ 06: ಮಹಿಳೆಯರು ಕಾಲಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ಬೇಡಿಕೆಯಿರುವ ಕೌಶಲ್ಯಗಳನ್ನು ಕಲಿತು ಸ್ವ ಉದ್ಯೋಗ ಆರಂಭಿಸುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಹೇಳಿದರು. ಯುವವಾಹಿನಿ (ರಿ.) ಶಕ್ತಿನಗರ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಐದು ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ […]

Read More

ಮಹಿಳೆಯರ ಸ್ವಾವಲಂಬನೆಗೆ ಸೀರೆ ಕುಚ್ಚು ಕೌಶಲ್ಯ ತರಬೇತಿ

ಮಂಗಳೂರು, ಅ. 1: ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಇವರ ಜಂಟಿ ಆಶ್ರಯದಲ್ಲಿ ಐದು ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಆಂಜನೇಯ ಭವನದ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್‌ನ ಅಧ್ಯಕ್ಷ ತುಕಾರಾಂ ಪೂಜಾರಿ ಅವರು ತರಬೇತಿಯನ್ನು ಉದ್ಘಾಟಿಸಿ, ಇಂತಹ ಕೌಶಲ್ಯ ತರಬೇತಿಗಳು ಮಹಿಳೆಯರ ಸ್ವಾವಲಂಬನೆಯ ಕನಸಿಗೆ ಸಹಕಾರಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ […]

Read More

‘ಯುವಸಿಂಚನ’ 4,250 ಪ್ರತಿಗಳ ಪೋಸ್ಟಿಂಗ್ ಕಾರ್ಯ

ಮಂಗಳೂರು, ಸೆ. 27 : ಯುವವಾಹಿನಿ (ರಿ.) ಸಂಸ್ಥೆಯ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಸೆಪ್ಟೆಂಬರ್ ತಿಂಗಳ ಸಂಚಿಕೆಯ 4,250 ಪ್ರತಿಗಳ ಪೋಸ್ಟಿಂಗ್ ಕಾರ್ಯವು ಯುವವಾಹಿನಿ ಶಕ್ತಿನಗರ, ಪಣಂಬೂರು–ಕುಳಾಯಿ ಹಾಗೂ ಕೊಲ್ಯ ಘಟಕಗಳ ಸದಸ್ಯರ ಸಹಕಾರದೊಂದಿಗೆ ನಡೆಯಿತು. ‘ಯುವಸಿಂಚನ’ ಪತ್ರಿಕೆಯ ಪ್ರತಿಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿರುವ ಸದಸ್ಯರು ಹಾಗೂ ಹಿತೈಷಿಗಳಿಗೆ ತಲುಪಿಸುವ ಉದ್ದೇಶದಿಂದ ನಡೆದ ಪೋಸ್ಟಿಂಗ್ ಕಾರ್ಯದಲ್ಲಿ ಮೂರು ಘಟಕಗಳ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಪತ್ರಿಕೆಯ ಪ್ರತಿಗಳ ವಿಂಗಡಣೆ, ವಿಳಾಸ ಪರಿಶೀಲನೆ, ಪ್ಯಾಕಿಂಗ್ ಹಾಗೂ ಪೋಸ್ಟಿಂಗ್ ಸೇರಿದಂತೆ ವಿವಿಧ […]

Read More

ಯುವವಾಹಿನಿ(ರಿ.) ಶಕ್ತಿನಗರ ಘಟಕದಿಂದ ಭಜನಾ ಸಂಕೀರ್ತನೆ

ದಿನಾಂಕ 23-09-2026 ರಂದು ಶ್ರೀ ಆದಿಶಕ್ತಿ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಾರ್ಮಿಕ ಕಾಲೊನಿ ಇಲ್ಲಿ ನಡೆದ ಪುನರ್‌ಪ್ರತಿಷ್ಠೆ ಹಾಗೂ ಸಹಸ್ರ ಕಳಶ ಸಹಿತ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಯುವವಾಹಿನಿ(ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಇವರ ಸಹಭಾಗಿತ್ವದಲ್ಲಿ ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಜನಾ ಸಂಕೀರ್ತನೆಯ ಮೂಲಕ ಭಕ್ತಿಮಯ ವಾತಾವರಣ ನಿರ್ಮಿಸಿ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸುವಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು.

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿ ಆಚರಣೆ

ಶಕ್ತಿನಗರ ಅಗಸ್ಟ್ 29 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಹಾಗೂ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಸಹಯೋಗದಲ್ಲಿ ಆಗಸ್ಟ್ 29ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜನ್ಮ ಜಯಂತಿ ಮಹೋತ್ಸವ ಹಾಗೂ ಬೃಹತ್ ಶೋಭಾಯಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗಣಹೋಮ ನೆರವೇರಿಸಿ ಮಂದಿರವನ್ನು ಶುದ್ಧೀಕರಿಸಲಾಯಿತು. ಬಳಿಕ ಗುರುಗಳ ಪಂಚಲೋಹದ ಮೂರ್ತಿಗೆ ವಿಶೇಷ […]

Read More

‘ರಕ್ಷಾ ಬಂಧನ’ ಆಚರಣೆ

ಮಂಗಳೂರು ಅಗಸ್ಟ್ 28 : ಭಾರತವು ಹಬ್ಬಗಳ ತವರೂರಾಗಿದ್ದು, ಇಲ್ಲಿ ಆಚರಿಸಲಾಗುವ ಪ್ರತಿಯೊಂದು ಹಬ್ಬವೂ ತನ್ನದೇ ಆದ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವವನ್ನು ಹೊಂದಿದೆ. ಅಂತಹ ವಿಶಿಷ್ಟ ಹಬ್ಬಗಳಲ್ಲಿ ಒಂದಾದ ‘ರಕ್ಷಾ ಬಂಧನ’ವನ್ನು ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಆಗಸ್ಟ್ 28ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕುಂಟಲ್ಪಾಡಿ ಇಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ರಕ್ಷಾ ಬಂಧನವು ಸಹೋದರ–ಸಹೋದರಿಯರ ನಡುವಿನ ಪವಿತ್ರ ಪ್ರೀತಿ, ವಿಶ್ವಾಸ ಹಾಗೂ ಬಾಂಧವ್ಯದ ಸಂಕೇತವಾಗಿದೆ. ಇದೇ ಆಶಯದೊಂದಿಗೆ […]

Read More

ರಾಷ್ಟ್ರಭಕ್ತಿಯ ಸಂಭ್ರಮದೊಂದಿಗೆ 80ನೇ ಸ್ವಾತಂತ್ರ್ಯೋತ್ಸವ

ಮಂಗಳೂರು, ಆಗಸ್ಟ್ 15: ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಇವರ ಜಂಟಿ ಆಶ್ರಯದಲ್ಲಿ ಭಾರತದ 80ನೇ ಸ್ವಾತಂತ್ರ್ಯೋತ್ಸವವನ್ನು ಕುಂಟಲ್ಪಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಅಧ್ಯಕ್ಷ ತೇಜಸ್ ವಿ. ಪೂಜಾರಿ ಅವರು ಎಲ್ಲರನ್ನು ಸ್ವಾಗತಿಸಿದರು. ಘಟಕದ ಸದಸ್ಯರು ಹಾಗೂ ಉಪಸ್ಥಿತರಿದ್ದವರು ಒಗ್ಗೂಡಿ ‘ವಂದೇ […]

Read More

ಆಟಿಡೊಂಜಿ ದಿನ ಆಚರಣೆಯಲ್ಲಿ ಸಂಸ್ಕೃತಿ, ಸೇವೆ ಮತ್ತು ಸಾಮಾಜಿಕ ಜಾಗೃತಿ

ಶಕ್ತಿನಗರ, ಜುಲೈ 26 : ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಇವರ ಜಂಟಿ ಆಶ್ರಯದಲ್ಲಿ ಜುಲೈ 26ರಂದು ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರಯೋಧರಿಗೆ ಮೌನ […]

Read More

ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಶಕ್ತಿನಗರ, ಜೂನ್ 28: ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಮಂದಿರದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!