
23-08-2026, 2:00 PM
ಕುಪ್ಪೆಪದವು : ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ಹತ್ತು ವರ್ಷದೊಳಗಿನ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಎಂಟನೇ ವರ್ಷದ ಕೃಷ್ಣ ವೇಷ ಸ್ಪರ್ಧೆ ಕುಲವೂರು ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿ ಭವಾನಂದ ಶೆಟ್ಟಿ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಇಲಾಖೆಯ ನಿವೃತ್ತ ಸಿಬ್ಬಂದಿ ಚಂದ್ರಶೇಖರ್ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ವೈ. ಭರತ್ ಶೆಟ್ಟಿ ಮಾತನಾಡಿ, ಪುಟ್ಟ ಮಕ್ಕಳು ಶ್ರೀಕೃಷ್ಣನ ವೇಷಭೂಷಣ ಧರಿಸಿ ಶ್ರೀಕೃಷ್ಣ […]
Read More

18-08-2026, 9:58 AM
ಕುಪ್ಪೆಪದವು : ಯುವವಾಹಿನಿ ಕುಪ್ಪೆಪದವು ಎಡಪದವು ಘಟಕದ 2026-27 ನೇ ಸಾಲಿನಅಧ್ಯಕ್ಷರಾಗಿ ಗೋಪಾಲ್ ಪೂಜಾರಿ ಆಯ್ಕೆಯಾಗಿದ್ದಾರೆ
Read More

09-08-2026, 8:00 PM
ಕುಪ್ಪೆಪದವು, ಆಗಸ್ಟ್ 09: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಕುಪ್ಪೆಪದವು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಘಟಕದ ಸದಸ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಸಮಾಜದ ಮುಖಂಡ ಉಮೇಶ್ ಪೂಜಾರಿ ಸೂರಲ್ಪಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ನೂತನ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಶ್ರೀಧರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಘಟಕದ ಮಾಜಿ ಅಧ್ಯಕ್ಷ ಅಜಯ್ ಅಮೀನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಳೆದ ಒಂದು […]
Read More

16-07-2026, 6:00 PM
ಕುಪ್ಪೆಪದವು, ಜುಲೈ 16: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ಸಕ್ರಿಯ ಸದಸ್ಯೆ ಹರೀನಾಕ್ಷಿ ಅವರು ಆಕಸ್ಮಿಕವಾಗಿ ಬಿದ್ದು ಕಾಲಿನ ಮೂಳೆ ಮುರಿತಕ್ಕೊಳಗಾದ ಹಿನ್ನೆಲೆಯಲ್ಲಿ, ಘಟಕದ ವತಿಯಿಂದ ಆರೋಗ್ಯ ನಿಧಿಯಡಿ ಧನಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಪದಾಧಿಕಾರಿಗಳು, ಸದಸ್ಯರ ಸಂಕಷ್ಟದ ಸಂದರ್ಭದಲ್ಲಿ ಯುವವಾಹಿನಿ ಸದಾ ಅವರೊಂದಿಗೆ ನಿಲ್ಲುವ ಬದ್ಧತೆಯನ್ನು ಹೊಂದಿದ್ದು, ಆರೋಗ್ಯ ನಿಧಿಯಂತಹ ಯೋಜನೆಗಳು ಸದಸ್ಯರಿಗೆ ನೆರವಾಗುವ ಮಹತ್ವದ ಉಪಕ್ರಮಗಳಾಗಿವೆ ಎಂದು ತಿಳಿಸಿದರು. ಹರೀನಾಕ್ಷಿ ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದರು. ಧನಸಹಾಯ ವಿತರಣೆಯ […]
Read More

21-06-2026, 6:00 PM
ಕುಪ್ಪೆಪದವು: ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ಸರಕಾರಿ ಪ್ರಾಥಮಿಕ ಶಾಲೆ ಕಲ್ಲಾಡಿ ಕಿಲೆಂಜಾರು, ಕುಪ್ಪೆಪದವು ಇಲ್ಲಿ ಪರಿಸರ ಸ್ವಚ್ಛತಾ ಹಾಗೂ ವೃಕ್ಷಾರೋಪಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ವಠಾರದ ಸ್ವಚ್ಛತಾ ಕಾರ್ಯವನ್ನು ಕೈಗೊಂಡು, ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ವಿವಿಧ ಗಿಡಗಳನ್ನು ನೆಟ್ಟು ಶ್ರಮದಾನ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕುಪ್ಪೆಪದವು-ಎಡಪದವು ಘಟಕದ ಅಧ್ಯಕ್ಷರಾದ ಶ್ರೀಧರ ಪೂಜಾರಿ, ಕಾರ್ಯದರ್ಶಿ ಅಕ್ಷತಾ, ಯುವವಾಹಿನಿ […]
Read More

10-05-2026, 7:00 PM
ಕುಪ್ಪೆಪದವು : “ನಾರಾಯಣ ಗುರುಗಳ ತತ್ವದಂತೆ ‘ವಿದ್ಯೆ–ಉದ್ಯೋಗ–ಸಂಪರ್ಕ’ ಎಂಬ ಧ್ಯೇಯೋದ್ದೇಶದೊಂದಿಗೆ ರಾಜ್ಯವ್ಯಾಪಿ ಬೆಳೆಯುತ್ತಿರುವ ಯುವವಾಹಿನಿ ಸಂಸ್ಥೆಯು, ಯುವಶಕ್ತಿಯನ್ನು ಸಮಾಜಸೇವೆಯತ್ತ ಕೊಂಡೊಯ್ಯುತ್ತಿರುವುದು ಹೆಮ್ಮೆಯ ವಿಚಾರ,” ಎಂದು ಶಾಸಕರಾದ ವೈ ಭರತ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ವಿದ್ಯಾನಿಧಿ ಸಹಾಯಾರ್ಥವಾಗಿ ಕಿಲೆಂಜಾರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಘಟಕವು ಯುವಜನರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಶ್ಲಾಘಿಸಿದರು. ಪಂದ್ಯಕೂಟವನ್ನು ಕಿಲೆಂಜಾರು ಅರಮನೆ […]
Read More

15-09-2025, 3:29 PM
7 ನೇ ವರ್ಷದ ಕೃಷ್ಣವೇಷ ಸ್ಪರ್ಧೆಯು ದಿನಾಂಕ 10.8.25 ನೇ ಆದಿತ್ಯವಾರ ಆಶಾಕಿರಣ ಸಭಾ ಭವನದಲ್ಲಿ ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಪ್ರಾರಂಭವಾಯಿತು.. ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ ಮುಂದಾಳು ಐ ಕೃಷ್ಣ ಅಸ್ರಣ್ಣ ರವರು ನಡೆಸಿಕೊಟ್ಟರು..ವೇದಿಕೆಯಲ್ಲಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಸ್ಥಾಪಕ ಅಧ್ಯಕ್ಷರು, ಘಟಕದ ಕಾರ್ಯದರ್ಶಿ, ಉಪಸ್ಥಿತರಿದ್ದರು. ಯಶೋಧ ಕೃಷ್ಣ, ಮುದ್ದುಕೃಷ್ಣ,ಬಾಲಕೃಷ್ಣ ,ತುಂಟಕೃಷ್ಣ ಎಂಬ 4 ವಿಭಾಗದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.. ಪ್ರತಿವಿಭಾಗಕ್ಕೂ ಪ್ರಥಮ, ದ್ವಿತೀಯ ಪ್ರಶಸ್ತಿಯನ್ನು ಹಾಗೂ ಸ್ಪರ್ಧಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ […]
Read More

24-06-2024, 4:19 PM
ಕುಪ್ಪೆಪದವು: ಯುವವಾಹಿನಿ(ರಿ.) ಕುಪ್ಪೆಪದವು ಮತ್ತು ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಜಂಟಿ ಆಶ್ರಯದಲ್ಲಿ ದಿನಾಂಕ 24-06-2024 ಸೋಮವಾರದಂದು ಅರಮನೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕುಪ್ಪೆಪದವು ಘಟಕದ ಅಧ್ಯಕ್ಷರು ಅಕ್ಷಿತ್ ಕುಮಾರ್ ಮತ್ತು ಶಾಲಾ ನಾಯಕಿ ಸಾನ್ವಿ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಕರು ಮಾರ್ಕ್ ಮೆಂಡೊನ್ಸಾ, ಕಾರ್ಯಕ್ರಮದ ಉದ್ದೇಶ ಮತ್ತು ಅವಶ್ಯಕತೆಯನ್ನು ತಿಳಿ ಹೇಳಿದರು. ನಮ್ಮ ಮತ್ತು ಪರಿಸರ ಸಂಬಂಧ ಗಟ್ಟಿಗೊಳಿಸಿದಾಗ ಪ್ರಕೃತಿಯ […]
Read More

09-06-2024, 3:13 PM
ಕುಪ್ಪೆಪದವು: ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ವತಿಯಿಂದ 09-06-2024 ನೇ ಆದಿತ್ಯವಾರ ನಾಗಂದಡಿ ಸಭಾಭವನದಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ಅಧ್ಯಕ್ಷರು ಅಕ್ಷಿತ್ ಕುಮಾರ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರು ಸೌಮ್ಯಾ ಕೋಟ್ಯಾನ್, ಕಾರ್ಯದರ್ಶಿ ರೇಣುಕಾ ಸುನಿಲ್, ಕೋಶಾಧಿಕಾರಿ ದೇಜಪ್ಪ ಪೂಜಾರಿ ಉಪಸ್ಥಿತರಿದ್ದರು. ಸುಮಾರು 56 ಮಕ್ಕಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಮಾಜಿ ಅಧ್ಯಕ್ಷರು ಅಜಯ್ ಅಮೀನ್ ಸ್ವಾಗತಿಸಿದರು. ಅಧ್ಯಕ್ಷರು ತಮ್ಮ ಅಧ್ಯಕ್ಷೀಯ ಮಾತನ್ನಾಡಿದರು. ಕಾರ್ಯದರ್ಶಿ ರೇಣುಕಾ ಸುನಿಲ್ ನಿರೂಪಿಸಿ […]
Read More

19-05-2024, 3:02 PM
ಮಂಗಳೂರು: ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ವತಿಯಿಂದ 19-05-2024ನೇ ಆದಿತ್ಯವಾರ ಶ್ರೀ ದುರ್ಗಾ ಕ್ರಿಕೆಟರ್ಸ್ ಸಹಯೋಗದೊಂದಿಗೆ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಉದ್ಘಾಟನೆಯನ್ನು ಘಟಕದ ಅಧ್ಯಕ್ಷರಾದ ಅಕ್ಷಿತ್ ಕುಮಾರ್ ನಡೆಸಿಕೊಟ್ಟರು. ವೇದಿಕೆಯಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ಅರುಣ್ ಕುಮಾರ್, ಕ್ರೀಡಾ ನಿರ್ದೇಶಕರಾದ ನವೀನ್ ಚಂದ್ರ, ಮಾಜಿ ಅಧ್ಯಕ್ಷರಾದ ಅಜಯ್ ಅಮೀನ್, ಮುತ್ತೂರ್ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ದುರ್ಗಾಕೋಡಿ, ಶ್ರೀ ದುರ್ಗಾ ಕ್ರಿಕೆಟರ್ಸ್ ನ ಅಧ್ಯಕ್ಷರಾದ ಹನೀಫ್ ನೆಲಚ್ಚೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 20 ತಂಡಗಳು ಭಾಗವಹಿಸಿದ್ದವು. 30 ಗಜಗಳ ಅಂಡರ್ ಆರ್ಮ್ ಶೈಲಿಯ, ಲೀಗ್ […]
Read More