Yuvavahini

ಬೆಂಗಳೂರು

ಕ್ರೀಡೆ ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ: ರೋಹಿತ್ ಎಸ್

ಬೆಂಗಳೂರು, ಜುಲೈ 19: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ “ಕೋಟಿ ಚೆನ್ನಯ್ಯ ಟ್ರೋಫಿ – ಸೀಸನ್ 2” ಬ್ಯಾಡ್ಮಿಂಟನ್ ಕ್ರೀಡಾಕೂಟವು ಭಾನುವಾರ ಬೆಂಗಳೂರಿನ ದಾಸರಹಳ್ಳಿ ಸಮೀಪದ ಎಎಂ ಸ್ಪೋರ್ಟ್ಸ್ ಅರೆನಾದಲ್ಲಿ ಸಂಭ್ರಮ, ಉತ್ಸಾಹ ಮತ್ತು ಕ್ರೀಡಾಸ್ಫೂರ್ತಿಯ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿತ್ಯಾನಂದ ಶೆಟ್ಟಿ ಹಾಗೂ ನಂಜುಂಡ ಪೂಜಾರಿ ಅವರು, ಘಟಕದ ಅಧ್ಯಕ್ಷ ವಿಜೇತ್ ವಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. […]

Read More

ನೂತನ ಕಚೇರಿ ಉದ್ಘಾಟನೆ

ಬೆಂಗಳೂರು, ಜೂ. 28: ಯುವವಾಹಿನಿ (ರಿ.) ಬೆಂಗಳೂರು ಘಟಕದ ನೂತನ ಕಚೇರಿಯನ್ನು ಚಿಕ್ಕಬಿದಿರೆಕಲ್ಲು ಸಮೀಪದ ಭವಾನಿನಗರದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ಭಾನುವಾರ ಉದ್ಘಾಟಿಸಲಾಯಿತು. ಗುರುಗಳಾದ ಜಯಂತ್ ಸಾಲಿಯಾನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರಾದ ಕೆ.ಬಿ. ಜಯರಾಮ್ ಹಾಗೂ ಸುಧೀರ್ ಎಸ್.ಪಿ. ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶ್ರೀಧರ್ ಡಿ., ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೋಟ್ಯಾನ್, ನಿಕಟಪೂರ್ವ ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ, ನೂತನ ಅಧ್ಯಕ್ಷ […]

Read More

ಅಧ್ಯಕ್ಷರಾಗಿ ವಿಜೇತ್ ವಿ ಪೂಜಾರಿ

ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ವಿಜೇತ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ 2026-27 ನೇ ಸಾಲಿನ ಕಾರ್ಯಕಾರಿ ಸಮಿತಿ ಅಧ್ಯಕ್ಷರು : ವಿಜೇತ್ ವಿ ಪೂಜಾರಿಪ್ರಥಮ ಉಪಾಧ್ಯಕ್ಷರು : ಕಿಶೋರ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ಸಚಿಂದ್ರ ಕೋಟ್ಯಾನ್ಕಾರ್ಯದರ್ಶಿ : ಮನೋಜ್ ಕುಮಾರ್ ಟಿಜೊತೆ ಕಾರ್ಯದರ್ಶಿ : ಪ್ರಜ್ವಲ್ ಕೋಟ್ಯಾನ್ಕೋಶಾಧಿಕಾರಿ : ಶ್ರುತಿ ಸಾಲ್ಯಾನ್ಆಂತರಿಕ ಲೆಕ್ಕಪರಿಶೋಧಕರು : ಅಶ್ವಿನಿ ಅಮೀನ್ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು : ದೇವಿಪ್ರಸಾದ್ […]

Read More

ಬೆಂಗಳೂರು ಘಟಕದ ಪದಗ್ರಹಣ ಸಮಾರಂಭಕ್ಕೆ ವಿವಿಧ ಘಟಕಗಳಿಂದ ಅಭೂತಪೂರ್ವ ಬೆಂಬಲ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಪದಗ್ರಹಣ ಸಮಾರಂಭವು ಸಂಘಟನಾ ಬದ್ಧತೆ, ಏಕತೆ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಸಂಖ್ಯೆಯು ಕೇವಲ ಹಾಜರಾತಿಯನ್ನು ಮಾತ್ರ ಸೂಚಿಸುವುದಲ್ಲ; ಸಂಘಟನೆಯ ಮೇಲಿನ ಸದಸ್ಯರ ಬದ್ಧತೆ, ಪ್ರೀತಿ ಹಾಗೂ ಅಚಲ ನಂಬಿಕೆಯ […]

Read More

ಶಿಸ್ತು, ಸಾಂಘಿಕತೆ ಮತ್ತು ಸಮಾಜಸೇವೆಯ ಸಂಭ್ರಮ: ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 14 ಜೂನ್ 2026 ರಂದು ಬೆಂಗಳೂರಿನ ವಿಧಾನಸೌಧದ ಬಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಘಿಕ ಮನೋಭಾವದಿಂದ ನೆರವೇರಿತು. . ಸಂಘಟನಾ ಸಾಮರ್ಥ್ಯ ಶ್ಲಾಘನೀಯ : ಜೆ.ಪಿ.ಸುಧಾಕರ್ಬೆಂಗಳೂರು ಘಟಕದ ಸಂಘಟನಾ ಸಾಮರ್ಥ್ಯ, ಸಮಯಪಾಲನೆ, ಶಿಸ್ತು ಮತ್ತು ಸದಸ್ಯರ ನಡುವಿನ ಐಕ್ಯತೆಯು ಶ್ಲಾಘನೀಯ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಖ್ಯಾತ […]

Read More

ಯುವಸಿಂಚನ ಜೂನ್ ಸಂಚಿಕೆ ಬಿಡುಗಡೆ

ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]

Read More

ಬಿ‌ ಕೆ ಹರಿಪ್ರಸಾದ್ ಅವರಿಗೆ ಯುವವಾಹಿನಿಯಿಂದ ಅಭಿನಂದನೆ

ಬೆಂಗಳೂರು : ಬಿ‌ ಕೆ ಹರಿಪ್ರಸಾದ್ ಅವರು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ದಿನಾಂಕ 14.06.2026 ಯುವವಾಹಿನಿ ಕೇಂದ್ರ ಸಮಿತಿಯ ಸುಮಾರು 50 ಸದಸ್ಯರ ತಂಡವು ಬೆಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರು ಬಿ‌ ಕೆ ಹರಿಪ್ರಸಾದ್ ಅವರಿಗೆ ಶುಭ ಹಾರೈಸಿ, ಅವರ ಮುಂದಿನ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಯಶಸ್ಸನ್ನು ಕೋರಿದರು. ಹರಿಪ್ರಸಾದ್ ಅವರು ಯುವವಾಹಿನಿಯ ಸಮಾಜಮುಖಿ ಚಟುವಟಿಕೆಗಳನ್ನು ಶ್ಲಾಘಿಸಿ, ಸಂಸ್ಥೆಯ ಕಾರ್ಯಗಳಿಗೆ ತಮ್ಮ […]

Read More

ಯುವವಾಹಿನಿ (ರಿ) ಬೆಂಗಳೂರು ಘಟಕವು ಪಂಚಮ ಪ್ರಶಸ್ತಿ ಪಡೆಯಿತು

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಬೆಂಗಳೂರು ಘಟಕವು ಆಕರ್ಷಕ ಟ್ರೋಫಿಯೊಂದಿಗೆ ಪಂಚಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

Read More

ಸೋಶಿಯಲ್ ಮೀಡಿಯಾವನ್ನು ಜವಾಬ್ದಾರಿಯುತವಾಗಿ ಬಳಸಿ: ಎಸಿಪಿ ರೀನಾ ಸುವರ್ಣ

ಬೆಂಗಳೂರು: “ಇಂದಿನ ಯುವ ಪೀಳಿಗೆ ಮತ್ತು ಮಹಿಳೆಯರು ಸೋಶಿಯಲ್ ಮೀಡಿಯಾವನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣಗಳು ಕೇವಲ ಮನೋರಂಜನೆಗೆ ಸೀಮಿತವಾಗದೆ, ಜ್ಞಾನಾರ್ಜನೆ ಮತ್ತು ಸಮಾಜದ ಏಳಿಗೆಗೆ ಪೂರಕವಾಗಿರಲಿ,” ಎಂದು ಬೆಂಗಳೂರು ನಗರದ ಸಹಾಯಕ ಪೊಲೀಸ್ ಆಯುಕ್ತರಾದ (ACP) ರೀನಾ ಸುವರ್ಣ ಅವರು ಕಿವಿಮಾತು ಹೇಳಿದರು. ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 08.03.2026 ರಂದು ಇತ್ತೀಚೆಗೆ ನಗರದ ಕರ್ನಾಟಕ ಗವರ್ನ್ಮೆಂಟ್ ಸೆಕ್ರೆಟೇರಿಯಟ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!