Yuvavahini

ಘಟಕಗಳು

ಅಶಕ್ತ ಕುಟುಂಬಕ್ಕೆ ತಿಂಗಳ ಆಹಾರ ಸಾಮಗ್ರಿ ವಿತರಣೆ

ಮಾಣಿ, ಸೆ. 6: ಯುವವಾಹಿನಿ (ರಿ.) ಮಾಣಿ ಘಟಕದ “ಸೇವಾಸ್ಪರ್ಶ” ಕಾರ್ಯಕ್ರಮದ 4ನೇ ಹಂತದ ಸೇವಾ ಕಾರ್ಯದ ಅಂಗವಾಗಿ ಪೆರಾಜೆ ಗ್ರಾಮದ ಗೀತಾ ರಮೇಶ್ ಅವರ ಕುಟುಂಬಕ್ಕೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಕುಟುಂಬದ ಯಜಮಾನರು ಕೆಲಸ ಮಾಡಲು ಅಸಮರ್ಥರಾಗಿದ್ದು, ಒಬ್ಬ ಮಗ ವಿದ್ಯಾಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ವಯೋವೃದ್ಧ ತಾಯಿ ದುಡಿದು ಕುಟುಂಬದ ಜೀವನ ನಿರ್ವಹಣೆ ಮಾಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ […]

Read More

ಮೂಡುಮಾರ್ನಾಡಿನ ಅಶಕ್ತ ಕುಟುಂಬಕ್ಕೆ ರೂ. 12 ಲಕ್ಷ ವೆಚ್ಚದ ನೂತನ ಮನೆ ಹಸ್ತಾಂತರ

ಯುವವಾಹಿನಿ(ರಿ.)ಮೂಡುಬಿದಿರೆ ಘಟಕವು ದಾನಿಗಳ ಸಹಕಾರದೊಂದಿಗೆ ಮೂಡುಮಾರ್ನಾಡ್‌ನಲ್ಲಿ ಅಶಕ್ತ ಕುಟುಂಬಕ್ಕಾಗಿ ಸುಮಾರು ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯನ್ನು ಸೆ. 6ರಂದು ಸುಮಿತ್ರ ವಿಶ್ವನಾಥ್ ದಂಪತಿಗೆ ಹಸ್ತಾಂತರಿಸಿತು ದೀಪ ಬೆಳಗಿಸುವ ಮೂಲಕ ಮನೆ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಶಕ್ತ ಕುಟುಂಬವೊಂದಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಸ್ವಾಭಿಮಾನದ ಬದುಕಿಗೆ ದಾರಿ ಮಾಡಿಕೊಡುವ ಮೂಲಕ ಯುವವಾಹಿನಿ ಕೈಗೊಂಡಿರುವ ಸಮಾಜಮುಖಿ ಹಾಗೂ ರಚನಾತ್ಮಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಕರ್ನಾಟಕ ಸರ್ಕಾರದ ಹೈಕೋರ್ಟ್ ಹೆಚ್ಚುವರಿ ಅಡ್ವೊಕೇಟ್ ಜನರಲ್ ಇರುವೈಲು ತಾರಾನಾಥ್ ಪೂಜಾರಿ […]

Read More

ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತ : ರೇಣುಕಾ ಕಣಿಯೂರು

ಮಾಣಿ, ಸೆ. 3: ನಾರಾಯಣ ಗುರುಗಳ ತತ್ವ ಹಾಗೂ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮದ ಅಂಗವಾಗಿ ದೇರಣ್ಣ ಪೂಜಾರಿ ಹಾಗೂ ಶಮಿತಾ ದೇರಣ್ಣ ಪೂಜಾರಿ ಅವರ ಮನೆಯಲ್ಲಿ ಭಜನೆ, ಸಂಕೀರ್ತನೆ ಹಾಗೂ ಗುರುತತ್ವ ಸಂದೇಶ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರೇಣುಕಾ ಕಣಿಯೂರು ಅವರು, “ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತವಾಗಿವೆ. ಅವರು ಸಮಾಜದಲ್ಲಿ ಸಮಾನತೆ, ಮಾನವೀಯತೆ, […]

Read More

ನಾರಾಯಣಗುರುಗಳು ಮನುಕುಲದ ದಿವ್ಯಜ್ಯೋತಿಯಾದರು : ರೇಣುಕಾ ಕಣಿಯೂರು

ಸಜಿಪ, ಸೆಪ್ಟೆಂಬರ್ 1 : ಬ್ರಹ್ಮಶ್ರೀ ನಾರಾಯಣಗುರುಗಳು ಅಜ್ಞಾನ, ಅಸಮಾನತೆ ಹಾಗೂ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ, ಜ್ಞಾನ, ಸಮಾನತೆ ಮತ್ತು ಮಾನವೀಯತೆಯ ಬೆಳಕನ್ನು ಸಮಾಜಕ್ಕೆ ನೀಡಿದ ಮನುಕುಲದ ದಿವ್ಯಜ್ಯೋತಿಯಾಗಿದ್ದಾರೆ ಎಂದು ಬರಹಗಾರ್ತಿ ಹಾಗೂ ನಿರೂಪಕಿ ರೇಣುಕಾ ಕಣಿಯೂರು ಹೇಳಿದರು. ಸಜಿಪ ದೇರಾಜೆಯ ಗಾಯತ್ರಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ‘ಗುರುತತ್ವವಾಹಿನಿ’ 76ನೇ ಮಾಲಿಕೆಯಲ್ಲಿ ಗುರುಸಂದೇಶ ನೀಡಿದ ಅವರು, ನಾರಾಯಣಗುರುಗಳು ಶಿಕ್ಷಣವೇ ಸಾಮಾಜಿಕ ಪ್ರಗತಿಯ ಪ್ರಮುಖ ಸಾಧನವೆಂದು ಸಾರಿದ್ದರು. ಜ್ಞಾನ, […]

Read More

‘ಒಂದೇ ಜಾತಿ, ಒಂದೇ ಮತ’ ತತ್ವದ ಮೂಲ ಅರ್ಥವನ್ನು ಅರಿಯುವುದು ಮುಖ್ಯ : ವರದರಾಜ್ ಮಟ್ಟು ಕಟಪಾಡಿ

ಮಂಗಳೂರು, ಸೆ. 1: ನಾರಾಯಣ ಗುರುಗಳ ತತ್ವ ಹಾಗೂ ಆದರ್ಶಗಳನ್ನು ಪಾಲಿಸುವ ಮೊದಲು ಅವುಗಳ ಮೂಲ ಅದ್ವೈತದ ಅರ್ಥವನ್ನು ಅರಿತುಕೊಳ್ಳುವುದು ಅತ್ಯಂತ ಮುಖ್ಯ ಎಂದು ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.)ನ ಟ್ರಸ್ಟಿ ವರದರಾಜ್ ಮಟ್ಟು ಕಟಪಾಡಿ ಹೇಳಿದರು. ಉರ್ವಸ್ಟೋರ್‌ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸೆ. 1ರಂದು ನಡೆದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದ ಅವರು ಮಾತನಾಡಿದರು. ನಾರಾಯಣ ಗುರುಗಳು […]

Read More

ಯುವವಾಹಿನಿ ಕ್ರೀಡೋತ್ಸವ–2026 : ನಿಯಮಾವಳಿ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4, 2026ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ನಿಯಮಾವಳಿ ಈ ಕೆಳಗಿನಂತಿದೆ. ಅರ್ಹತೆ ಮತ್ತು ಸದಸ್ಯತ್ವ1) ಯುವವಾಹಿನಿ ಕ್ರೀಡೋತ್ಸವ–2026 ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾದ ಅಂತರ್‌ಘಟಕ ಕ್ರೀಡಾಕೂಟವಾಗಿದೆ.2) ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ನಿಗದಿತ ಅವಧಿಯೊಳಗೆ ವಾರ್ಷಿಕ ಸದಸ್ಯತ್ವ ಶುಲ್ಕ ಪಾವತಿಸಿರುವ ಹಾಗೂ ಕೇಂದ್ರ ಸಮಿತಿಯಿಂದ ಅನುಮೋದಿಸಲ್ಪಟ್ಟ ಹಾಗೂ ಸದಸ್ಯತ್ವ ಸಂಖ್ಯೆಯನ್ನು ಹೊಂದಿರುವ ಅರ್ಹ ಸದಸ್ಯರಾಗಿರಬೇಕು3) ಘಟಕದಲ್ಲಿ […]

Read More

ಸಂಘಟನೆಯ ಮಹತ್ವವನ್ನು ಜಗತ್ತಿಗೆ ಸಾರಿದವರು ನಾರಾಯಣ ಗುರುಗಳು: ರಾಜೇಶ್ ಬಲ್ಯ

ಮಾಣಿ: ಬ್ರಹ್ಮಶ್ರೀ ನಾರಾಯಣ ಗುರುಗಳು ಅಂದಿನ ಕಾಲದಲ್ಲಿಯೇ ವಿದ್ಯೆ, ಸಂಘಟನೆ ಹಾಗೂ ಸಾಮಾಜಿಕ ಬದ್ಧತೆಗೆ ಹೆಚ್ಚಿನ ಒತ್ತು ನೀಡಿದ ಮಹಾನ್ ಚಿಂತಕರಾಗಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯನ್ನು ತಂದ ಅವರು, ಎಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಬದುಕಬೇಕು, ಯಾರನ್ನೂ ಕೀಳು–ಮೇಲು ಎಂಬ ಭೇದದಿಂದ ನೋಡಬಾರದು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದರು ಎಂದು ಯುವವಾಹಿನಿ (ರಿ.)ಯ ರಾಜೇಶ್ ಬಲ್ಯ ಹೇಳಿದರು. ಆಗಸ್ಟ್ 30ರಂದು ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಘಟಕದ ಸಮಾಜ ಸೇವಾ ನಿರ್ದೇಶಕರಾದ ಸುರೇಶ್ ಬಾಕಿಲ […]

Read More

8ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ

ಕೆಂಜಾರು–ಕರಂಬಾರು ಅಗಸ್ಟ್ 30 : ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ಆಶ್ರಯದಲ್ಲಿ 8ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ–2026 ಕಾರ್ಯಕ್ರಮವು ಆಗಸ್ಟ್ 30ರಂದು ಶ್ರೀ ದೇವಿ ಭಜನಾ ಮಂದಿರದಲ್ಲಿ ಸಂಭ್ರಮ ಹಾಗೂ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವು ಪ್ರತಿಮಾ ಪಾಲನ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮಕ್ಕೆ ಸ್ಥಳಾವಕಾಶ ಒದಗಿಸಿ ಸಹಕರಿಸಿದ ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರಾದ ಮಿತ್ರದಾಸ್ ಅಮೀನ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿಯ ವಿವಿಧ ಕಾರ್ಯಕ್ರಮಗಳಿಗೆ ನಿರಂತರವಾಗಿ ಬೆಂಬಲ ಹಾಗೂ ಪ್ರೋತ್ಸಾಹ […]

Read More

ನಾರಾಯಣ ಗುರುಗಳ ಸಂದೇಶಗಳು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ದಾರಿದೀಪ : ಧನ್ಯಕುಮಾರ್ ರೈ

ಉಪ್ಪಿನಂಗಡಿ ಅಗಸ್ಟ್ 30 : ಮಾನವ ಕುಲಕ್ಕೆ ಜ್ಞಾನದ ಬೆಳಕನ್ನು ಪಸರಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ವಿವಿಧ ಸಮಾಜಗಳ ಮುಖಂಡರ ಸಹಭಾಗಿತ್ವದೊಂದಿಗೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಆಗಸ್ಟ್ 30ರಂದು ಉಪ್ಪಿನಂಗಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವ ಮಾನವ ಕುಲವನ್ನು ಗೌರವಿಸುವ ಹಾಗೂ ಸಮಾನತೆಯ ಸಂದೇಶ ಸಾರಿದ […]

Read More

ಯುವವಾಹಿನಿ ಪಡುಬಿದ್ರಿ ಘಟಕದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ

ಪಡುಬಿದ್ರಿ ಅಗಸ್ಟ್ 30 : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ಪಿ.ಕೆ. ಜಯರಾಮ್ ಪ್ರವರ್ತಿತ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಆಗಸ್ಟ್ 30ರಂದು ಪಡುಬಿದ್ರಿಯ ಸಹಕಾರ ಸಂಗಮ ಸಿ.ಎ. ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಪಿ.ಕೆ. ಮನೋಜ್ ಪೂಜಾರಿ ಅವರು, “ಯುವವಾಹಿನಿ ಸ್ಫೂರ್ತಿದಾಯಕ ಸಂಸ್ಥೆಯಾಗಿದ್ದು, ಯುವಜನರನ್ನು ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ರೂಪಿಸಲು ಶ್ರಮಿಸುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸವು ಸಣ್ಣ ವಯಸ್ಸಿನಲ್ಲಿಯೇ ಮೂಡಿಬರಬೇಕು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!