Yuvavahini

ಘಟಕಗಳು

ದೇವಸ್ಥಾನದಲ್ಲಿ ಸ್ವಯಂಸೇವೆ

ವಿಟ್ಲ : ಶ್ರೀಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 2024ನೇ ಜನವರಿ 21 ರಂದು  ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಯುವವಾಹಿನಿ (ರಿ ) ವಿಟ್ಲ ಘಟಕದ ಸುಮಾರು 20ಕ್ಕೂ ಹೆಚ್ಚು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.

Read More

ಗುರುಪೂಜೆ

ಯುವವಾಹಿನಿ (ರಿ.) ಶಕ್ತಿನಗರ ಘಟಕ ಮತ್ತು ನಾರಾಯಣಗುರು ಮಂದಿರ ಕುಂಟಲ್ಪಾಡಿ ಇದರ ವತಿಯಿಂದ ಗುರು ಪೂಜೆಯು ದಿನಾಂಕ 18-01-2024 ರ ಗುರುವಾರದಂದು ಸಂಜೆ 8:30ಕ್ಕೆ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕರಾದ ಜಯರಾಮ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿಯವರನ್ನು ಗೌರವಿಸಲಾಯಿತು. ಕೇಂದ್ರ ಸಮಿತಿಯ ಕೋಶಾಧಿಕಾರಿಗಳಾದ ಹರೀಶ್ ವಿ ಪಚ್ಚನಾಡಿ, ಪ್ರಚಾರ ನಿರ್ದೇಶಕರಾದ ಪೃಥ್ವಿರಾಜ್ ಎಂ ಕಂಕನಾಡಿ, ಘಟಕದ ಮಾಜಿ ಅಧ್ಯಕ್ಷರಾದ ಭಾರತಿ ಜಿ.ಅಮೀನ್, ಕೇಂದ್ರ […]

Read More

ಸ್ವಚ್ಚತಾ ಕಾರ್ಯಕ್ರಮ

ಕಂಕ‌ನಾಡಿ : ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನ ಉಜ್ಜೋಡಿ ಕಂಕನಾಡಿ ಇದರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ದೈವಸ್ಥಾನ ಹಾಗೂ ಉಜ್ಜೋಡಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವು 2024 ನೇ ಜನವರಿ 21 ರಂದು ಬೆಳಗ್ಗೆ 7 ರಿಂದ 10ರ ವರೆಗೆ ಕಂಕನಾಡಿ ಘಟಕದ ಸದಸ್ಯರ‌ ನೇತ್ರತ್ವದಲ್ಲಿ ಜರಗಿತು. ಈ ಸ್ವಚ್ಚತಾ ಅಭಿಯಾನದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು ಹಾಗೂ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

Read More

ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿದಾಗ ಯಶಸ್ಸು ಸಾಧ್ಯ : ಮುನಿರಾಜ ರೆಂಜಾಳ

ಮೂಡುಬಿದಿರೆ : ಎಸ್.ಎಸ್.ಎಲ್.ಸಿ ಪರೀಕ್ಷೆ ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯನ್ನು ಕಷ್ಟದಿಂದ ಎದುರಿಸಿದರೂ ಬಹಳ ಇಷ್ಟಪಟ್ಟು ಎದುರಿಸಿ. ಆತ್ಮ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಎಂತಹ ಕಷ್ಟ ಬಂದರೂ ಮೆಟ್ಟಿ ನಿಂತು ಗುರಿ ಮುಟ್ಟಬಲ್ಲೆ ಎಂಬ ಅಚಲ ನಿರ್ಧಾರ, ದೃಢವಿಶ್ವಾಸ ನಮ್ಮದಾಗಲಿ. ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಉನ್ನತ ಮಟ್ಟದ ಅಂಕಗಳನ್ನು ಗಳಿಸುವಂತಾಗಲಿ. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಬಗ್ಗೆ ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಯುವವಾಹಿನಿ(ರಿ.) ಮೂಡಬಿದರೆ ಘಟಕ, […]

Read More

ಭಜನಾ ಸಂಕೀರ್ತನೆ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ, 2024ನೇ ಜನವರಿ 15 ರಂದು ಭಜನಾ ಸಂಕೀರ್ತನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಸೋಮಸುಂದರ್ ಕೊಡಿಪ್ಪಾನ, ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಸನಿಲ್, ಕಾರ್ಯದರ್ಶಿ ಅನಿತಾ ಸತೀಶ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

Read More

ಸಂಘಟನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಜಯಂತ್ ಪೂಜಾರಿ

ಯಡ್ತಾಡಿ: ಸಮಾಜದಲ್ಲಿ ಸಂಘಟನೆಗಳ ಅರ್ಥಪೂರ್ಣ ಕಾರ್ಯಗಳ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣವಾಗುತ್ತದೆ. ಈ ದಿಸೆಯಲ್ಲಿ ಯುವವಾಹಿನಿಯು ಮುಖ್ಯ ಧ್ಯೇಯಕ್ಕೆ ಪೂರಕವಾಗಿ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ ಪೂಜಾರಿ ಹೇಳಿದರು. ಅವರು ಯುವವಾಹಿನಿ (ರಿ) ಯಡ್ತಾಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನರೇಂದ್ರ ಕುಮಾರ ಕೋಟ, ಅಂತರಾಷ್ಟ್ರೀಯ ಕ್ರೀಡಾಪಟು ಸುರೇಶ ಪೂಜಾರಿ ಸಾಸ್ತನ, […]

Read More

ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು : ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಧಿಕಾರಿ

ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. […]

Read More

ಕ್ರೀಡೆಯಿಂದ ದೈಹಿಕ ಸದೃಢತೆ, ಮಾನಸಿಕ ಆರೋಗ್ಯದ ಸುಧಾರಣೆ: ಲ| ಶೀನಾ ಪೂಜಾರಿ

ಮಂಗಳೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸದೃಢತೆ ಸಾಧಿಸಿಲಾಗುವುದು ಹಾಗೂ ಮಾನಸಿಕ, ದೈಹಿಕ, ಆರೋಗ್ಯವು ಸುಧಾರಿಸುತ್ತದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲ| ಶೀನಾ ಪೂಜಾರಿ ಇವರು ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ 2024 ನೇ ಜನವರಿ 7 ರಂದು ಮಂಗಳೂರಿನ ನಂತೂರಿನ ಪಾದುವ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, […]

Read More

ನಾರಾಯಣ ಗುರುವರ್ಯರ ಸಂದೇಶಗಳು ಯುವಜನತೆಗೆ ದಾರಿದೀಪ: ಉಮೇಶ್ ಎಂ. ಕರ್ಕೇರ

ಸುರತ್ಕಲ್: ಯುವಜನತೆಗೆ ದಿನನಿತ್ಯದ ಬದುಕಿನ ಬಾಳ ಬುಟ್ಟಿಯಲ್ಲಿ ನಾರಾಯಣ ಗುರುವರ್ಯರ ಜೀವನಚರಿತ್ರೆಯ ಆದರ್ಶ ಸಂದೇಶಗಳು ದಾರಿದೀಪವಾಗಿರಬೇಕು ಹಾಗೂ ಪರರಿಗೆ ಸದಾ ಒಳಿತನ್ನು ಬಯಸುವಂತಿರಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜು ಕಾಟಿಪಳ್ಳದ ಪ್ರಾಂಶುಪಾಲರಾದ ಉಮೇಶ್ ಎಂ. ಕರ್ಕೇರರರು ಹೇಳಿದರು. ಅವರು ಯುವವಾಹಿನಿ(ರಿ.) ಸುರತ್ಕಲ್ ಘಟಕದ 2023-2024ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ದಿನಾಂಕ 07-01-2024 ರಂದು ದೇವಾಡಿಗ ಸಭಾಭವನ ಹೊಸಬೆಟ್ಟುವಿನಲ್ಲಿ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ತಾರ ಅಶೋಕ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. […]

Read More

ಹೃದಯ ತುಂಬಿದ ಅಭಿಮಾನ ಮರೆಯಲಸಾಧ್ಯ : ನಯನಾ ಸುರೇಶ್

ಕೊಲ್ಯ: ಕೊಲ್ಯ ಘಟಕದ ಸರ್ವ ಸದಸ್ಯರ ಪ್ರೀತಿ ಅಭಿಮಾನಕ್ಕೆ ನಾನು ಮೂಕಳಾಗಿದ್ದೇನೆ, ಮಾತು ಮೌನವಾಗಿದೆ ಹೃದಯ ತುಂಬಿ ಬಂದಿದೆ. ಸಂತೋಷವನ್ನು ವ್ಯಕ್ತ ಪಡಿಸಲು ನನ್ನಲ್ಲಿ ಪದಗಳಿಲ್ಲ ಎಂದು ಆನಂದ ಬಾಷ್ಪಿತರಾಗಿ ಕೊಲ್ಯ ಘಟಕದಲ್ಲಿ ಡಿಸೆಂಬರ್ 27 ರಂದು ನಡೆದ ಸಾಪ್ತಾಹಿಕ ಸಭೆಯಲ್ಲಿನ ಬೀಳ್ಕೊಡುಗೆಯ ಸನ್ಮಾನದ ಕುರಿತು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಯನಾ ಸುರೇಶ್ ಅವರು ಬಾವುಕರಾಗಿ ಮತನಾಡಿದರು. ಸಂಘಟನಾ ಕಾರ್ಯದರ್ಶಿಯಾಗಿ ಕೊಲ್ಯ ಘಟಕಕ್ಕೆ ಪ್ರೋತ್ಸಾಹ ನೀಡಿ ಸಹಕರಿಸಿದ ಶ್ರೀಮತಿ ನಯನಾ ಸುರೇಶ್ ರವರನ್ನು ಯುವವಾಹಿನಿ(ರಿ.) ಕೊಲ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!