15-07-2026, 6:00 PM
ಮಾಣಿ, ಜುಲೈ 15: ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕರಾದ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ₹75,000 ಧನಸಹಾಯ ಹಸ್ತಾಂತರಿಸಲಾಯಿತು. ಘಟಕದ ಸದಸ್ಯರ ಸ್ವಯಂಪ್ರೇರಿತ ಸಹಕಾರದಿಂದ ಈ ಧನಸಹಾಯವನ್ನು ಸಂಗ್ರಹಿಸಿ, ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ, ಸಂಕಷ್ಟದ […]
Read More
15-07-2026, 6:00 PM
ಅಜೆಕಾರು, ಜು. 15: ಯುವವಾಹಿನಿ (ರಿ.) ಕಾರ್ಕಳ ಘಟಕವು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಜೆಕಾರು ಶ್ರೀರಾಮ ಮಂದಿರದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಪೊರೆ (ಕಣ್ಣಿನ ಮುತ್ತು) ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಂಡ ಸಾರ್ವಜನಿಕರಿಗೆ ಸಮಗ್ರ ನೇತ್ರ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಿತು. ಕಣ್ಣಿನ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ […]
Read More
14-07-2026, 8:00 PM
ಮಂಗಳೂರು, ಜು.14: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ “ಧೂಮಪಾನ ನಿಷೇಧ ಮತ್ತು ಕಾನೂನು ನಿಯಮ” ಕುರಿತು ಜಾಗೃತಿ ಕಾರ್ಯಕ್ರಮವು ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗುರುಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪುಂಡಲೀಕ ಲಕಾಟಿ ಅವರು ಧೂಮಪಾನ ಮತ್ತು ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಧೂಮಪಾನದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ […]
Read More
13-07-2026, 8:00 PM
“ಎಲ್ಲಿ ನಾಮವಿದೆಯೋ ಅಲ್ಲಿ ನಾರಾಯಣನಿದ್ದಾನೆ. ಎಲ್ಲಿ ಭಜನೆಯಿದೆಯೋ ಅಲ್ಲಿ ಶಾಂತಿಯಿದೆ. ಮಂಗಳೂರು ಜುಲೈ 13 : ದಿನಾಂಕ: 13-07-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಪ್ರಥಮ್ ಮತ್ತು ಬಳಗ ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 […]
Read More
13-07-2026, 2:00 PM
ಮಂಗಳೂರು, ಜು. 13: ಯುವವಾಹಿನಿ (ರಿ.) ಮಂಗಳೂರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ದಿವಂಗತ ಅಶೋಕ್ ಅಂಚನ್ ಕೋಡಿಕಲ್ ಅವರ ಕುಟುಂಬಕ್ಕೆ ಯುವವಾಹಿನಿ (ರಿ.) ಮಂಗಳೂರು ಘಟಕವು ಮಾನವೀಯ ಕಾಳಜಿಯಿಂದ ₹75,000/- ಧನಸಹಾಯವನ್ನು ಹಸ್ತಾಂತರಿಸಿತು. ಅಶೋಕ್ ಅಂಚನ್ ಕೋಡಿಕಲ್ ಅವರು ದಿನಾಂಕ 30-06-2026ರಂದು ದೈವಾದೀನರಾಗಿದ್ದರು. ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವುದನ್ನು ಮನಗಂಡ ಯುವವಾಹಿನಿ (ರಿ.) ಮಂಗಳೂರು ಘಟಕವು, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಹಾಗೂ ವಿವಿಧ ಘಟಕಗಳ ಸದಸ್ಯರ ಸಹಕಾರದೊಂದಿಗೆ ಧನಸಹಾಯವನ್ನು ಸಂಗ್ರಹಿಸಿತು. ದಿನಾಂಕ 13-07-2026ರಂದು […]
Read More
12-07-2026, 7:00 PM
ಅಡ್ವೆ, ಜು.12: ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಘಟಕದ ಸದಸ್ಯರು ಹಾಗೂ ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗಾಗಿ ಅಡ್ವೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ದೇವರ ಗದ್ದೆಯಲ್ಲಿ ‘ಕೆಸರ್ಡೊಂಜಿ ದಿನ-2026’ ಕಾರ್ಯಕ್ರಮವು ಭಾನುವಾರ ಬೆಳಗ್ಗಿನಿಂದ ಸಂಜೆಯವರೆಗೆ ಅತ್ಯಂತ ಸಂಭ್ರಮ, ಸಡಗರ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಗಂಧಪ್ರಸಾದ, ತೀರ್ಥ, ಸಿಯಾಳ, ಹಾಲು ಸಮರ್ಪಣೆ ಹಾಗೂ ತೆಂಗಿನಕಾಯಿ ಒಡೆಯುವ […]
Read More
12-07-2026, 4:00 PM
ಬೆಳ್ತಂಗಡಿ ಜುಲೈ 12 : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಲೀಲಾವತಿ ಕೆ ಆಯ್ಕೆಯಾಗಿದ್ದಾರೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿಕೆ ಆಯ್ಕೆಯಾದರು
Read More
12-07-2026, 1:00 PM
ಉಪ್ಪಿನಂಗಡಿ, ಜು. 12: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಉಪಯುಕ್ತವಾಗಿದ್ದು, […]
Read More
11-07-2026, 4:00 PM
ಮಂಗಳೂರು, ಜುಲೈ 11: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಹಾಗೂ ಭಾರತಿ ಟ್ರೈನಿಂಗ್ ಸೆಂಟರ್ನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಐದು ದಿನಗಳ ಫ್ಯಾಬ್ರಿಕ್ ಬ್ಯಾಗ್ ತರಬೇತಿಯ ಸಮಾರೋಪ ಸಮಾರಂಭವು ಜುಲೈ 11ರಂದು ಕೊಟ್ಟಾರ ಚೌಕಿಯ ಭಾರತಿ ಟ್ರೈನಿಂಗ್ ಸೆಂಟರ್ನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್, ಯಾವುದೇ ವಿಷಯವನ್ನು ಕಲಿಯಲು ಮತ್ತು ಸಾಧಿಸಲು ಆಸಕ್ತಿ ಅತ್ಯಗತ್ಯ. ಆರಂಭದಲ್ಲಿ ಹಿಂಜರಿಕೆ ಸಹಜವಾದರೂ ಧೈರ್ಯದಿಂದ ಮುಂದುವರಿದರೆ ಯಶಸ್ಸು […]
Read More
11-07-2026, 4:00 PM
ಮೂಡುಬಿದಿರೆ, ಜುಲೈ 11: ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಮಾನಸಿಕ ಆರೋಗ್ಯದ ಮಹತ್ವ ತಿಳಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ-ಮಾದಕ ವಸ್ತು ವ್ಯಸನ ಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಹಾಗೂ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿ ಮನೋಹಿತ” ಆರೋಗ್ಯ ಮಾಹಿತಿ ಕಾರ್ಯಾಗಾರ ಜ್ಯೋತಿನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಆಪೋಲೀನೋ […]
Read More