
02-10-2026, 2:00 PM
ಕಡಬ, ಅ. 2: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಜಯದುರ್ಗ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಶ್ರಮದಾನ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಉದ್ದೇಶದಿಂದ ಬೆಳಿಗ್ಗೆ 10 ಗಂಟೆಯಿಂದ ನಡೆದ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷ ಉಮೇಶ್ ಬಳ್ಪ, ಯುವವಾಹಿನಿ (ರಿ.) ಕೇಂದ್ರ ಸಮಿತಿ ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಅಂಙನ, ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಎನ್.ಎಸ್., ಮಾಜಿ ಅಧ್ಯಕ್ಷ ಕೃಷ್ಣಪ್ಪ ಅಮೈ, ಉಪಾಧ್ಯಕ್ಷೆ ಸರಿತಾ ಉಂಡಿಲ, […]
Read More

01-10-2026, 8:30 PM
ತೆಂಕ ಕಜೆಕಾರು ಅ 01 : ಸಮಾಜದ ಪ್ರಗತಿಗೆ ಜ್ಞಾನ ಮತ್ತು ವಿವೇಕ ಅತ್ಯಂತ ಅಗತ್ಯ. ಅಂಧಶ್ರದ್ಧೆ ಹಾಗೂ ಮೂಢನಂಬಿಕೆಗಳಿಂದ ದೂರವಾಗಿ ವಿಚಾರಶೀಲತೆಯನ್ನು ಬೆಳೆಸಿಕೊಂಡಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಲೋಹಿತ್ ಕನಪಾದೆ (ಆಪ್ತ ಸಮಾಲೋಚಕರು ಮನೋರೋಗ ವಿಭಾಗ ಆಳ್ವಾಸ್ ಮೂಡಬಿದ್ರೆ )ತಿಳಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿದ್ದ ಅಜ್ಞಾನ, ಅಸಮಾನತೆ ಹಾಗೂ ಅನಿಷ್ಟ ಆಚರಣೆಗಳ ವಿರುದ್ಧ ಜಾಗೃತಿ ಮೂಡಿಸಿ, ಶಿಕ್ಷಣ ಮತ್ತು ಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಅವರ ಚಿಂತನೆ ಮನುಷ್ಯನನ್ನು ವಿಚಾರಶೀಲನನ್ನಾಗಿ […]
Read More

01-10-2026, 8:00 PM
ಮಾಣಿ ಅ 01 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಒಂದು ತಿಂಗಳ ಕಾಲ ನಡೆದ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮದ ಸಮಾರೋಪ ಸಮಾರಂಭವು ನಿರೂಪಕಿ ಲೋಕೇಶ್–ರೇಣುಕಾ ಅವರ ಐಸಿರಿ ಮನೆಯಲ್ಲಿ ನಡೆಯಿತು. “ಗುರುತತ್ತ್ವದ ಸತ್ವವನ್ನು ನೆನಪಿಸುವ ಕಾಲ ಕೂಡಿ ಬಂದಿದೆ” ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ, ನಿರೂಪಕ ದಿನೇಶ್ ಸುವರ್ಣ ರಾಯಿ ಹೇಳಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವು ಜಾತಿ, ಧರ್ಮ ಹಾಗೂ ಭಾಷೆಯ ಎಲ್ಲ ಗಡಿಗಳನ್ನು ಮೀರಿ ಮಾನವೀಯತೆಯನ್ನು […]
Read More

01-10-2026, 3:00 PM
ಮಂಗಳೂರು, ಅ. 1: ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಇವರ ಜಂಟಿ ಆಶ್ರಯದಲ್ಲಿ ಐದು ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಆಂಜನೇಯ ಭವನದ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ನ ಅಧ್ಯಕ್ಷ ತುಕಾರಾಂ ಪೂಜಾರಿ ಅವರು ತರಬೇತಿಯನ್ನು ಉದ್ಘಾಟಿಸಿ, ಇಂತಹ ಕೌಶಲ್ಯ ತರಬೇತಿಗಳು ಮಹಿಳೆಯರ ಸ್ವಾವಲಂಬನೆಯ ಕನಸಿಗೆ ಸಹಕಾರಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ […]
Read More

30-09-2026, 12:00 PM
ಮಿತ್ತೂರು ಸೆ 30 : ಕನ್ನಡಿಯಲ್ಲಿ ದೇವರನ್ನು ಕಂಡ ಬ್ರಹ್ಮಶ್ರೀ ನಾರಾಯಣ ಗುರುಗಳು, ಮನುಷ್ಯನು ಮೊದಲು ತನ್ನನ್ನು ತಾನು ಅರಿತುಕೊಳ್ಳಬೇಕು ಎಂಬ ಮಹತ್ವದ ಸಂದೇಶವನ್ನು ಸಮಾಜಕ್ಕೆ ಸಾರಿದರು ಎಂದು ಸಚಿನ್ ಅಮೀನ್ ಪೆರಾಜೆ ಹೇಳಿದರು. ಸೆಪ್ಟೆಂಬರ್ 30ರಂದು ಶಶಿಪ್ರಭಾ ಮೋಹನ ಮಿತ್ತೂರು ಅವರ ಮನೆಯಲ್ಲಿ ನಡೆದ “ಮನೆಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡಿ ನಮ್ಮ ಬಾಹ್ಯರೂಪವನ್ನು ತೋರಿಸುವಂತೆ ಆತ್ಮದರ್ಶನವು ನಮ್ಮ ಅಂತರಂಗವನ್ನು ಅರಿಯಲು ದಾರಿದೀಪವಾಗುತ್ತದೆ. ನಮ್ಮೊಳಗಿನ ಶುದ್ಧತೆ, ಸತ್ಯ ಮತ್ತು ಮಾನವೀಯತೆಯನ್ನು ಗುರುತಿಸಿಕೊಂಡು ಆತ್ಮಪರಿಶೀಲನೆಯ […]
Read More

29-09-2026, 8:00 PM
ಮಾಣಿ: ಮನುಷ್ಯನ ಬದುಕಿನಲ್ಲಿ ಕರುಣೆ, ಶಾಂತಿ ಮತ್ತು ಸತ್ಯಕ್ಕೆ ಅತ್ಯಂತ ಮಹತ್ವವಿದೆ. ಕರುಣೆಯು ಮಾನವೀಯತೆಯನ್ನು ಬೆಳೆಸಿದರೆ, ಶಾಂತಿಯು ಬದುಕಿಗೆ ಸಾರ್ಥಕತೆಯನ್ನು ನೀಡುತ್ತದೆ. ಸತ್ಯದ ಹಾದಿಯಲ್ಲಿ ನಡೆಯುವುದರಿಂದ ಜೀವನಕ್ಕೆ ನೈಜ ಅರ್ಥ ದೊರೆಯುತ್ತದೆ ಎಂದು ರೇಣುಕಾ ಕಣಿಯೂರು ಹೇಳಿದರು. ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮದ ಅಂಗವಾಗಿ ಸೆ. 29ರಂದು ನಿವೃತ್ತ ಸೈನಿಕ ಜಯಕರ ಸುಪ್ರೀತ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರತಿಪಾದಿಸಿದ […]
Read More

29-09-2026, 8:00 PM
ಮಂಗಳೂರು ಸೆ 29 : ಹದಿಹರೆಯದವರ ಮನಸ್ಸು ಸೂಕ್ಷ್ಮವಾಗಿದ್ದು, ಈ ವಯಸ್ಸಿನಲ್ಲಿ ಉಂಟಾಗುವ ದೈಹಿಕ, ಭಾವನಾತ್ಮಕ ಹಾಗೂ ಸಾಮಾಜಿಕ ಬದಲಾವಣೆಗಳು ಅವರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಮಕ್ಕಳಲ್ಲಿ ಕಂಡುಬರುವ ಮಾನಸಿಕ ಸಮಸ್ಯೆಗಳನ್ನು ಪೋಷಕರು ನಿರ್ಲಕ್ಷಿಸದೆ, ಆರಂಭದಲ್ಲಿಯೇ ಗುರುತಿಸಿ ಸೂಕ್ತ ಸಲಹೆ ಹಾಗೂ ಚಿಕಿತ್ಸೆಯನ್ನು ಕೊಡಿಸುವುದು ಅಗತ್ಯ ಎಂದು ಕೆ.ಎಂ.ಸಿ. ಆಸ್ಪತ್ರೆಯ ಆರೋಗ್ಯ ಸಲಹೆಗಾರರಾದ ಮಮತಾ ಸುವರ್ಣ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ 29-09-2026-ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ‘ಹದಿಹರೆಯದವರಲ್ಲಿ ಮಾನಸಿಕ ಸಮಸ್ಯೆಗಳು […]
Read More

29-09-2026, 6:00 PM
ಮಂಗಳೂರು, ಸೆ. 29: ಯುವವಾಹಿನಿ (ರಿ.) ಕೇಂದ್ರ ಸಮಿತಿ ಆಶ್ರಯದಲ್ಲಿ ಹಾಗೂ ಪಣಂಬೂರ ಕುಳಾಯಿ ಘಟಕದ ಆತಿಥ್ಯದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ‘ಯುವ ದಿಕ್ಸೂಚಿ–2026’ರ ಮುಂದುವರಿದ ಭಾಗವಾಗಿ IBPS ಪರೀಕ್ಷೆಯ ಇಂಗ್ಲಿಷ್ ವಿಷಯಕ್ಕೆ ಪೂರಕವಾದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಮಂಗಳೂರಿನ ಸ್ಕೌಟ್ ಭವನದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬ್ಯಾಂಕ್ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ 17 ಉದ್ಯೋಗಾಕಾಂಕ್ಷಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡರು. ಕೆನರಾ ಬ್ಯಾಂಕ್ನ ಹಿರಿಯ ಪ್ರಬಂಧಕಿ ಶಾಂಭವಿ ಪ್ರಭು ಅವರು […]
Read More

28-09-2026, 8:00 PM
ಮಾಣಿ: ಸೆಪ್ಟೆಂಬರ್ 28 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾದ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮವು ರವಿ ಭಂಡಾರಿ ಕೆದಿಲ ಅವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿನ್ ಅಮೀನ್ ಪೆರಾಜೆ, “ಪರಿಶುದ್ಧ ಮನಸ್ಸು ಮತ್ತು ನಿರ್ಮಲ ಹೃದಯದಿಂದಲೇ ದೇವರನ್ನು ಕಾಣಲು ಸಾಧ್ಯ. ನಾರಾಯಣ ಗುರುಗಳ ತತ್ತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು” ಎಂದು ಹೇಳಿದರು. ಗ್ರಾಮದ ದೈವದ ಚಾಕ್ರಿಯಾಗಿ ಸೇವೆ ಸಲ್ಲಿಸುತ್ತಿರುವ ರವಿ ಭಂಡಾರಿ ಮಾತನಾಡಿ, ನಾರಾಯಣ ಗುರುಗಳ […]
Read More

28-09-2026, 8:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 28-09-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಶ್ರೀ ನಾಗಬ್ರಹ್ಮ ಭಜಕಾ ವೃಂದ ಕೋಡಿಕಲ್ ಇವರ ಸಹಯೋಗದಲ್ಲಿ ನೆರವೇರಿತು. ದೇವರ ನಾಮ ಸ್ಮರಣೆಯ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ […]
Read More