Yuvavahini

ಘಟಕಗಳು

ಕಾರ್ಗಿಲ್ ವಿಜಯ ದಿನಾಚರಣೆ ಹುತಾತ್ಮ ಯೋಧರಿಗೆ ಸಲ್ಲಿಸುವ ಗೌರವ: ವೈ.ಎನ್. ಸಾಲ್ಯಾನ್

ಮುಲ್ಕಿ, ಆ. 2: ಕಾರ್ಗಿಲ್ ವಿಜಯ ದಿನಾಚರಣೆಯು ಕೇವಲ ವಿಜಯದ ಸಂಭ್ರಮವಲ್ಲ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹುತಾತ್ಮ ಯೋಧರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಗೌರವ ಸಲಹೆಗಾರ ವೈ.ಎನ್. ಸಾಲ್ಯಾನ್ ಹೇಳಿದರು. ಅವರು ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕಾರ್ಗಿಲ್ ವಿಜಯ ಸುಲಭವಾಗಿ ದೊರೆತ ಗೆಲುವಲ್ಲ. ನಮ್ಮ ಯೋಧರು ತಮ್ಮ […]

Read More

ಯುವಜನತೆಗೆ ಆಟಿ ಸಂಸ್ಕೃತಿಯ ಅರಿವು ಮೂಡಿಸಿ: ರೇಖಾ ಗೋಪಾಲ್

ಬೆಳ್ಳಾರೆ, ಆ. 2: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಆಟಿ ತಿಂಗಳ ಮಹತ್ವವನ್ನು ಇಂದಿನ ಯುವಜನತೆಗೆ ಪರಿಚಯಿಸುವ ಕಾರ್ಯ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಭಾನುವಾರ ಬೆಳ್ಳಾರೆ ಪೆರುವಾಜೆಯ ಜೆ.ಡಿ. ಆಡಿಟೋರಿಯಂನಲ್ಲಿ ಆಯೋಜಿಸಲಾದ ಆಟಿದ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಟಿ ತಿಂಗಳು ಕೇವಲ ಆಚರಣೆಯ ತಿಂಗಳಲ್ಲ; ಅದು […]

Read More

ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದು ಅಗತ್ಯ: ಯೋಗಿತಾ ನವಾನಂದ

ಮೂಡುಬಿದಿರೆ, ಆ. 2: ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನಶೈಲಿಯತ್ತ ಅವರನ್ನು ಪ್ರೇರೇಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಹಾಗೂ ಸರ್ಕಾರಿ ಶಾಲಾ ಶಿಕ್ಷಕಿ ಯೋಗಿತಾ ನವಾನಂದ ಹೇಳಿದರು. ಅವರು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿ ಮನೋಹಿತ’ […]

Read More

ಬ್ರೈನ್ ಟ್ಯೂಮರ್ ಪೀಡಿತರಿಗೆ ಯುವವಾಹಿನಿ ಬಂಟ್ವಾಳದಿಂದ ₹25 ಸಾವಿರ ನೆರವು

ಬಂಟ್ವಾಳ, ಆ. 3: ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ರಾಮಚಂದ್ರ ಸಾಲ್ಯಾನ್ ಅವರಿಗೆ ಸೇವಾ ಯೋಜನೆಯಡಿ ₹25,000 ಮೊತ್ತದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಈ ಸೇವಾ ಯೋಜನೆಯನ್ನು ರೂಪಿಸಲಾಗಿದ್ದು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ನೆರವಿನ ಮೊತ್ತವನ್ನು ಫಲಾನುಭವಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾರ್ಗದರ್ಶಕರಾದ ಭುವನೇಶ್ ಪಚ್ಚಿನಡ್ಕ ಚಕ್ ಹಸ್ತಾಂತರ ಮಾಡಿದರು ಯುವವಾಹಿನಿ ಬಂಟ್ವಾಳ […]

Read More

ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ

ಮೂಡುಬಿದಿರೆ, ಆ. 1: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಮೂಡುಬಿದಿರೆಯಲ್ಲಿ ಆಗಸ್ಟ್ 1ರಂದು ‘ವಿದ್ಯಾರ್ಥಿ ಮನೋಹಿತ’ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಾಗಾರ–2 ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ, ಶಿಸ್ತುಬದ್ಧ ಜೀವನಶೈಲಿಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಸಂತೋಷ್ ನಾಯ್ಕ್ […]

Read More

ಎಲ್ಲ ಧರ್ಮಗಳ ಸಾರ – ಮಾನವೀಯತೆಯೇ ಶ್ರೇಷ್ಠ ಧರ್ಮ: ಪ್ರಶಾಂತ್ ಅನಂತಾಡಿ

ಕಲ್ಲಡ್ಕ, ಜುಲೈ 31: “ಎಲ್ಲಾ ಮತಧರ್ಮಗಳಲ್ಲಿರುವ ಉತ್ತಮಾಂಶಗಳ ಸಾರವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಆಧ್ಯಾತ್ಮಿಕತೆ. ಶ್ರೀ ನಾರಾಯಣಗುರುಗಳ ಸಂದೇಶಗಳಲ್ಲಿ ಈ ವಿಶಾಲ ಮಾನವೀಯ ದೃಷ್ಟಿಕೋನ ಸ್ಪಷ್ಟವಾಗಿ ಕಾಣುತ್ತದೆ” ಎಂದು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಪ್ರಶಾಂತ್ ಅನಂತಾಡಿ ಹೇಳಿದರು.ಅವರು ಜುಲೈ 31ರಂದು ಮುರಬೈಲು–ಗೊಳ್ತಮಜಲು, ಕಲ್ಲಡ್ಕದ ಮೋಹನ್ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ – 73ನೇ ಮಾಲಿಕೆ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿದರು.ಗುರುಗಳ ಚಿಂತನೆಗಳನ್ನು ಅರಿತಾಗ ಭಗವಾನ್ ಬುದ್ಧ, ಆದಿ […]

Read More

ಮಹಿಳೆಯರು ಆತ್ಮವಿಶ್ವಾಸದಿಂದ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು: ರೇಖಾ ಗೋಪಾಲ್

ಮಂಗಳೂರು, ಜು. 30: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸೀಡಾಕ್), ಧಾರವಾಡ, ಸೀಡಾಕ್ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ಮಂಗಳೂರು, ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ ಚೌಕಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜುಲೈ 30ರಂದು ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ […]

Read More

ವಿಶೇಷ ಭಜನಾ ಸಂಕೀರ್ತನೆ

ಬಜಪೆ, ಜುಲೈ 29: ಗುರು ಪೂರ್ಣಿಮೆಯ ಪವಿತ್ರ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಇಲ್ಲಿ ಜುಲೈ 29ರಂದು ಸಂಜೆ 4.30ರಿಂದ 6.00 ಗಂಟೆಯವರೆಗೆ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರಿಂದ ವಿಶೇಷ ಭಜನಾ ಸಂಕೀರ್ತನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಭಜನಾ ಸಂಕೀರ್ತನೆಯ ಮೂಲಕ ಶ್ರೀ ನಾರಾಯಣ ಗುರುಗಳ ತತ್ವ-ಆದರ್ಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರು ಸ್ಮರಣೆಯಲ್ಲಿ ತೊಡಗಿದರು. ಭಜನಾ ಸಂಕೀರ್ತನೆಯ ಬಳಿಕ ಗುರುವರ್ಯರಿಗೆ ವಿಶೇಷ ಗುರುಪೂಜೆ […]

Read More

ದೇಶದ ರಕ್ಷಣೆ ಮತ್ತು ಭದ್ರತೆಯ ವಿಚಾರ ಬಂದಾಗ ಪ್ರತಿಯೊಬ್ಬ ಭಾರತೀಯನು ಸೈನಿಕನಾಗಬೇಕು – ಆಶೋಕ್ ಕುಮಾರ್ ಪಡ್ಪು

ಕೂಳೂರು, ಜು. 29: ದೇಶದ ರಕ್ಷಣೆ ಮತ್ತು ಭದ್ರತೆಯ ವಿಚಾರ ಬಂದಾಗ ಭಾರತದ ಪ್ರತಿಯೊಬ್ಬ ಪ್ರಜೆಯೂ ಸೈನಿಕನ ಮನೋಭಾವವನ್ನು ಹೊಂದಿರಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಆಶೋಕ್ ಕುಮಾರ್ ಪಡ್ಪು ಹೇಳಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಫಲ್ಗುಣಿ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಗಿಲ್ ವಿಜಯ್ ದಿವಸ್–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೇಶದ ಭದ್ರತೆಗೆ ಸವಾಲೊಡ್ಡಿದ ಶತ್ರುಗಳನ್ನು ಧೈರ್ಯದಿಂದ ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರ ಸಾಹಸ, ಶೌರ್ಯ ಮತ್ತು ತ್ಯಾಗ […]

Read More

“ಆಟಿ ಎಂದರೆ ಕಷ್ಟದ ದಿನಗಳು; ಆ ದಿನಗಳ ಸಂಕಷ್ಟವನ್ನು ಇಂದಿನ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ” – ಡಾ. ಮೀನಾಕ್ಷಿ ರಾಮಚಂದ್ರ

ಮಂಗಳೂರು, ಜು. 28: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂದರೆ ಕಷ್ಟದ ದಿನಗಳ ಸಂಕೇತವಾಗಿತ್ತು. ನಿರಂತರ ಸುರಿಯುವ ಮಳೆಯಿಂದ ಸೂರ್ಯನ ಮುಖವೇ ಕಾಣದ ದಿನಗಳು, ಆಹಾರದ ಅಭಾವ, ಅನಾರೋಗ್ಯ ಮತ್ತು ಬದುಕಿನ ಸಂಕಷ್ಟಗಳು ಆಟಿಯ ಅವಿಭಾಜ್ಯ ಅಂಗವಾಗಿದ್ದವು. ಆ ದಿನಗಳ ಅನುಭವವನ್ನು ಮರೆಯಲು ಸಾಧ್ಯವಿಲ್ಲ ಎಂದು ಖ್ಯಾತ ಉಪನ್ಯಾಸಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕವು ಆಯೋಜಿಸಿದ್ದ ಕಾರ್ಗಿಲ್ ವಿಜಯ್ ದಿವಸ್, ಆಟಿದ ಕಂಪು-ನೆಂಪು ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!