Yuvavahini

ಘಟಕಗಳು

ಆಧ್ಯಾತ್ಮಿಕ ಕ್ಷೇತ್ರದರ್ಶನ ಯಾತ್ರೆ

ಕೂಳೂರು, ಜುಲೈ 5: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ಜುಲೈ 5ರಂದು ಉಡುಪಿ ಜಿಲ್ಲೆಯ ವಿವಿಧ ಪ್ರಸಿದ್ಧ ದೇವಾಲಯಗಳಿಗೆ ಆಧ್ಯಾತ್ಮಿಕ ಕ್ಷೇತ್ರದರ್ಶನ ಯಾತ್ರೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಳಿಗ್ಗೆ ಕೂಳೂರಿನಿಂದ ನಾಲ್ಕು ಬಸ್‌ಗಳಲ್ಲಿ ಸುಮಾರು 200ಕ್ಕೂ ಅಧಿಕ ಸದಸ್ಯರು ವಿವಿಧ ತಂಡಗಳಾಗಿ ಹೊರಟು ವೇಣುಗೋಪಾಲ ದೇವಸ್ಥಾನ (ಮಣಿಪಾಲ), ಗುಡ್ಡಟ್ಟು ಶ್ರೀ ವಿನಾಯಕ ದೇವಸ್ಥಾನ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ವೀರಕಲ್ಲುಟಿಗ ದೇವಸ್ಥಾನ, ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮಿ […]

Read More

ಪ್ರತಿಭಾವಂತರಿಗೆ ಸನ್ಮಾನ – ಸಮಾಜಸೇವೆಗೆ ಮತ್ತಷ್ಟು ಒತ್ತು

ಗ್ರಾಮಚಾವಡಿ-ಕೊಣಾಜೆ, ಜುಲೈ 5: ಯುವವಾಹಿನಿ (ರಿ.) ಗ್ರಾಮಚಾವಡಿ-ಕೊಣಾಜೆ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜುಲೈ 5ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಚಾವಡಿ-ಕೊಣಾಜೆಯ ಅಧ್ಯಕ್ಷರಾದ ವಿಜೇತ್ ಪಜೀರು ಉದ್ಘಾಟಿಸಿದರು. ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಬಾಬು ಬಂಗೇರ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ […]

Read More

ಅಧ್ಯಕ್ಷರಾಗಿ ಮುರಳೀಧರ ಕೊಣಾಜೆ ಆಯ್ಕೆ

ಗ್ರಾಮಚಾವಡಿ ಕೊಣಾಜೆ ಜುಲೈ 5 : ಯುವವಾಹಿನಿ(ರಿ) ಗ್ರಾಮ ಚಾವಡಿ ಕೊಣಾಜೆ ಘಟಕದ 2026-27ನೇ ಸಾಲಿನಅಧ್ಯಕ್ಷರಾಗಿ ಮುರಳೀಧರ ಕೋಣಾಜೆ ಆಯ್ಕೆಯಾಗಿದ್ದರೆ ಕಾರ್ಯದರ್ಶಿಯಾಗಿ ಆಶಾ ಪ್ರವೀಣ್ ಆಯ್ಕೆಯಾದರು

Read More

ಮಹಿಳೆಯರಿಗಾಗಿ ಉದ್ಯಮಶೀಲತಾ ತರಬೇತಿ ಶಿಬಿರ

ಮಂಗಳೂರು, ಜೂನ್ 30: ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಸಿಡಾಕ್ ಮಂಗಳೂರು ವತಿಯಿಂದ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಸಹಕಾರದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಕೌಶಲ್ಯ ಮಿಷನ್, ಯುವವಾಹಿನಿ (ರಿ.) ಸುರತ್ಕಲ್ ಘಟಕ, ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಹಾಗೂ ಮಹಿಳಾ ಮಂಡಲ (ರಿ.) ಕುಳಾಯಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಒಂದು ದಿನದ ಉದ್ಯಮಶೀಲತಾ ತರಬೇತಿ ಶಿಬಿರ ಕುಳಾಯಿಯ ಮಹಿಳಾ ಮಂಡಲ ಸಭಾಂಗಣದಲ್ಲಿ […]

Read More

ಉದ್ಯಮಶೀಲತೆಯಿಂದ ಮಹಿಳೆಯರು ಸ್ವಾವಲಂಬಿಗಳಾಗಬೇಕು : ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ

ಮಂಗಳೂರು, ಜೂನ್ 30: ಮಹಿಳೆಯರು ಸ್ವಂತ ಉದ್ಯಮ ಆರಂಭಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ದಿಟ್ಟ ನಿರ್ಧಾರ ಮತ್ತು ಆತ್ಮವಿಶ್ವಾಸದಿಂದ ಯಾವುದೇ ಕ್ಷೇತ್ರದಲ್ಲಿಯೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ ಹೇಳಿದರು. ಅವರು ಮಹಿಳಾ ಮಂಡಲ (ರಿ.) ಕುಳಾಯಿ, ಮಂಗಳೂರಿನಲ್ಲಿ ನಡೆದ “ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮಾತನಾಡಿ, ಮಹಿಳೆಯರು ಸಣ್ಣ-ಪುಟ್ಟ […]

Read More

“ವಿದ್ಯೆ, ಉದ್ಯೋಗ, ಸಂಪರ್ಕ – ಕಲಿಯೋಣ, ಬೆಳೆಯೋಣ, ಸಮಾಜದ ಸೇವೆಗೆ ಕೈಜೋಡಿಸೋಣ!”

ಪರಪಾದೆ, ಜೂನ್ 30: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಪರಪಾದೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 135 ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡೆಗಳನ್ನು ವಿತರಿಸುವ ಸಮಾಜಮುಖಿ ಸೇವಾ ಕಾರ್ಯಕ್ರಮ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆ ಗೀತಾ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ವಂದೀಪ್, ಕಾರ್ಯಕ್ರಮದ ಸಂಚಾಲಕಿ ಹಾಗೂ ವಿದ್ಯಾರ್ಥಿ ಸಂಘಟನೆ ನಿರ್ದೇಶಕಿ ವೀಣಾ ಭಾಸ್ಕರ್, ಮಾರ್ಗದರ್ಶಕರಾದ ಜಯಾನಂದ ಅಮೀನ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಖಾ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು: ದಿನಾಂಕ: 29-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಮಿತ್ರ ಮಂಡಳಿ ಯೋಗ ಭಜನಾ ತಂಡ ಬಿಜೈ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿಯ ನಾಮ ಸ್ಮರಣೆ ಒಂದೇ ಮುಕ್ತಿಯ ದಾರಿ ಎಂಬಂತೆ ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ […]

Read More

ಯುವವಾಹಿನಿ (ರಿ.) ಮೂಡುಬಿದಿರೆ ಘಟಕದಿಂದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಸಮಾರೋಪ

ಮೂಡುಬಿದಿರೆ, ಜೂನ್ 29: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮೂಡುಬಿದಿರೆಯ ಸಮಾಜ ಮಂದಿರದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಮಾತನಾಡಿ, ಮಹಿಳೆಯರು ಕಾಲಕ್ಕೆ ತಕ್ಕಂತೆ ಬೇಡಿಕೆಯಿರುವ ಕೌಶಲ್ಯಗಳನ್ನು ಕಲಿತು ಸ್ವಯಂ […]

Read More

ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆ 2026 : ಆಮಂತ್ರಣ ಬಿಡುಗಡೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ 2026ನೇ ಅಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು

Read More

ಯುವವಾಹಿನಿ ಕ್ರೀಡೋತ್ಸವ 2026 : ಆಮಂತ್ರಣ ಬಿಡುಗಡೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 2026ನೇ ಅಕ್ಟೋಬರ್ 4ರಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಯುವವಾಹಿನಿ ಕ್ರೀಡೋತ್ಸವ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!