Yuvavahini

ಘಟಕಗಳು

ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ನೊಂದವರ ಬದುಕಿಗೊಂದು ಆಶಾ ಕಿರಣ

ಕೂಳೂರು: ವಾಮಾಂಜೂರು ಕೆತ್ತಿಕಲ್ ನಿವಾಸಿ ಲಕ್ಷ್ಮೀ, 85 ವರ್ಷ ಇವರು ತುಂಬಾ ಅನಾರೋಗ್ಯದಿಂದ ಇದ್ದು, ಅವರ ಗಂಡು ಮಕ್ಕಳು ತೀರಿ ಹೋಗಿದ್ದಾರೆ. ಒಬ್ಬ ಹೆಣ್ಣು ಮಗಳು ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಾರೆ. ಅವರ ಕುಟುಂಬ ತುಂಬಾ ಕಷ್ಟದಲ್ಲಿ ಇದ್ದು, ನಮ್ಮ ಘಟಕದ ನೆರವು ಕೋರಿದ್ದರು. ಅವರಿಗೆ ನಮ್ಮ ಯುವವಾಹಿನಿ (ರಿ.) ಕೂಳೂರು ಘಟಕದ ಸೇವಾನಿಧಿ ಯೋಜನೆಯಡಿಯಲ್ಲಿ 10,000/- ಸಹಾಯಧನವನ್ನು ನೀಡಲಾಯಿತು. ಮೂಡುಶೆಡ್ಡೆ ನಿವಾಸಿ ಯಶ್ವಿರಾಜ್ ಇವರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು, A.J ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರು. ಇವರ […]

Read More

ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚಿನ‌ ಕಾಳಜಿ ಅಗತ್ಯ: ಡಾ.ಮೋಹನ್ ಆಳ್ವ

ಮೂಡುಬಿದಿರೆ: ಕಣ್ಣುಗಳು ನಾವು ಹೊಂದಿರುವ ಅತ್ಯಂತ ಸೂಕ್ಷ್ಮ ಅಂಗಗಳಲ್ಲಿ ಒಂದಾಗಿದೆ. ಹೆಚ್ಚಿದ ಪರದೆಯ ಸಮಯ, ಮಾಲಿನ್ಯ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದಾಗಿ, ಕಳಪೆ ಕಣ್ಣಿನ ಆರೋಗ್ಯವು ಸಾಮಾನ್ಯ ಸಮಸ್ಯೆಯಾಗಿದೆ. ದೃಷ್ಟಿಹೀನತೆ ಮೂಲಭೂತ ದೈನಂದಿನ ಕೆಲಸಗಳನ್ನು ಅಡ್ಡಿಪಡಿಸಬಹುದು ಮತ್ತು ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ನಮ್ಮ ಕಣ್ಣುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ತಿಳಿಸಿದರು. ಅವರು ದಿನಾಂಕ 14-03-2024 ನೇ ಗುರುವಾರದಂದು ಮೂಡುಬಿದಿರೆ ಆಳ್ವಾಸ್ ಆಯುರ್ವೇದ […]

Read More

ಸಂಭ್ರಮದ ಮಹಿಳಾ ದಿನಾಚರಣೆ

ಕೊಲ್ಯ: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ದಿನಾಂಕ 13-03-2024 ರಂದು ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಂದು ಘಟಕದ ಮಹಿಳಾ ಸದಸ್ಯರಿಗೆ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಸದಸ್ಯರಿಗೆ ವಿವಿಧ ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮಹಿಳಾ ಸದಸ್ಯರಿಗೆ ಅಂತರ್ಜಾಲದಲ್ಲಿ ನಾರಿಯರಿಗೊಂದು ಸವಾಲು ರಸ ಪ್ರಶ್ನೆ ಸ್ಪರ್ಧೆ ನಡೆಸಲಾಗಿತ್ತು. ಕೊಲ್ಯ ಘಟಕದ ಕಾರ್ಯದರ್ಶಿ ಜೀವನ್ ಕೊಲ್ಯ ಮಹಿಳೆಯರಿಗೆ ಅಂತರ್ಜಾಲ ಸ್ಪರ್ಧೆ ನಡೆಸಿಕೊಟ್ಟರು. ಮಹಿಳಾ ಸಾಧಕರ ಕುರಿತಾಗಿ ಗಂಟೆಗೊಂದು ಪ್ರಶ್ನೆಗಳನ್ನು ಗುಂಪಿನಲ್ಲಿ ಹಾಕಿ ವೇಗವಾಗಿ ಸರಿಯಾದ ಉತ್ತರ ನೀಡಿದ […]

Read More

ಮನೆ‌ ಮನೆ ಭಜನೆ

ಭಜನೆಗಳು ಆರಾಧನೆಯ ಶ್ರೇಷ್ಠ ರೂಪ. ಭಜನೆಗಳು ನಮ್ಮ ಕೃತಜ್ಞತೆ ಮತ್ತು ದೇವರ ಮೇಲಿನ ಪ್ರೀತಿಯನ್ನು ತೋರಿಸಲು ಹಾಡುವ ಹಾಡುಗಳಾಗಿವೆ. ಭಕ್ತಿಗೀತೆಗಳನ್ನು ಹಾಡುವುದು ಅಥವಾ ಕೇಳುವುದು ಒಬ್ಬರ ಮನಸ್ಸಿನಲ್ಲಿರುವ ಎಲ್ಲಾ ನಕಾರಾತ್ಮಕತೆಯನ್ನು ತೊಡೆದುಹಾಕುತ್ತದೆ ಮತ್ತು ಒಬ್ಬರ ಹೃದಯದಲ್ಲಿ ಸಂತೋಷ, ಶಾಂತಿ ಮತ್ತು ಸಂತೃಪ್ತಿಯನ್ನು ತುಂಬುತ್ತದೆ. ಯುವವಾಹಿನಿ (ರಿ.) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ […]

Read More

ವಿಭಿನ್ನ ಪರಿಕಲ್ಪನಾ – ವಿಶ್ವ ಮಹಿಳಾ ದಿನಾಚರಣೆ

ವಿಟ್ಲ: ವಿಟ್ಲ ಕಸಬಾ ಭಾಗದ ಚಂದಳಿಕೆ ನಿವಾಸಿ ದಾಮೋದರ ಪೂಜಾರಿ ಪತ್ನಿ ಗೀತಾ ಕಿಡ್ನಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಕಿಡ್ನಿ ಮರುಜೋಡಣೆಗಾಗಿ ಯುವವಾಹಿನಿ ವಿಟ್ಲ ಘಟಕದ ನೆರವು ಕೋರಿದ್ದರು. ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 11/3/2024 ರಂದು 10,000/- ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ಸಮಾಜ ಸೇವಾ ನಿರ್ದೇಶಕರಾದ ಧನಲಕ್ಷ್ಮಿ ರಾಜೇಶ್, ಜೊತೆ ಕಾರ್ಯದರ್ಶಿ ಯಶೋಧರ ಪಟ್ಲ ಮತ್ತು ನಯನ, ಶ್ಯಾಮಲಾ […]

Read More

ಹಣಕಾಸು ನಿರ್ವಹಣೆ ಕಾರ್ಯಗಾರ

ಕೊಲ್ಯ : “ಮೇಲಕ್ಕೆ ಎಸೆಯಲ್ಪಟ್ಟ ಮಗುವಿಗೆ ಅಮ್ಮ ಹಿಡಿಯುತ್ತಾಳೆಂಬ ಬಲವಾದ ನಂಬಿಕೆ ಇರುವಂತೆ ಮ್ಯೂಚುವಲ್ ಫಂಡ್ ಹಣ ಹೂಡಿಕೆಯಲ್ಲಿ ನಂಬಿಕೆಯೇ ಬಹು ದೊಡ್ಡ ಭದ್ರತೆ” ನಮಗೆ ಬರುವ ಆದಾಯದಲ್ಲಿ ಮೊದಲು ಒಂದಿಷ್ಟು ಉಳಿತಾಯ ಮಾಡಿ ನಂತರ ನಮ್ಮ ಖರ್ಚು ವೆಚ್ಚಗಳನ್ನು ಸರಿದೂಗಿಸಿದರೆ ಮುಂದೆ ಹಣಕಾಸು ನಿರ್ವಹಣೆ ಕ್ಷೇತ್ರದಲ್ಲಿ ಉತ್ತಮ ಹೂಡಿಕೆದಾರರಾಗಲು ಸಾಧ್ಯ ಎಂದು ಬೆಂಗಳೂರು ಮೂಲದ ಖ್ಯಾತ ಸಂಪನ್ಮೂಲ ವ್ಯಕ್ತಿ ಡಾ. ಬಾಲಾಜಿ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಹೂಡಿಕೆ ಕ್ಷೇತ್ರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಕಾಲದಲ್ಲಿ ಯಾವ […]

Read More

ವಿಶ್ವ ಮಹಿಳಾ ದಿನಾಚರಣೆ

ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅರೋಗ್ಯಮಾಹಿತಿ ಕಾರ್ಯಕ್ರಮ ದಿನಾಂಕ 10-3-2024 ರಂದು ಶ್ರೀ ಆದಿ ಜನಾರ್ದನ ದೇವಸ್ಥಾನದ ವಠಾರದಲ್ಲಿ ಜರಗಿತು. ಕೊಳಚಿಕಂಬಳ ಶ್ರೀ ಜಾರಂದಾಯ ಮಹಿಳಾ ಮಂಡಳಿದ ಅಧ್ಯಕ್ಷರು ಲತಾ ಶೇಖರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ (ರಿ.) ಮೂಲ್ಕಿ ಘಟಕದ ಅಧ್ಯಕ್ಷರು ಮಾಧವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಹಿರಿಯ ಕೃಷಿಕೆ ಕಮಲ […]

Read More

ಮಹಿಳಾ ದಿನಾಚರಣೆ ಆಚರಣೆ

ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕವು ಪ್ರತಿ ವರುಷ ಆಚರಿಸಿಕೊಂಡು ಬರುತ್ತಿರುವ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಈ ವರುಷ ಯುವವಾಹಿನಿ ಬಜಪೆ ಘಟಕದ ಮಾಜಿ ಅಧ್ಯಕ್ಷರಾದ ಉಷಾ ಸುವರ್ಣ ಇವರ ತಾಯಿಯಾದ 83 ವರುಷದ ರಾಜಮ್ಮ ಇವರನ್ನು ದಿನಾಂಕ 09-03-2024 ನೇ ಶನಿವಾರ ಇವರ ಮನೆಗೆ ತೆರಳಿ ಶಾಲು ಹೊದಿಸಿ, ಕೇಕ್ ಕತ್ತರಿಸಿ, ಆರತಿ ಬೆಳಗುದರ ಮೂಲಕ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ರಾಜಮ್ಮ ಅವರ ಮಕ್ಕಳಾದ ಯಾದವ ಸುವರ್ಣ, ಯಶವಂತ ಸುವರ್ಣ, ಉಷಾ ಸುವರ್ಣ, ಆಶಾ […]

Read More

ಮನೆ ಮನೆ ಭಜನೆ

ಮೂಲ್ಕಿ : ಯುವವಾಹಿನಿ ಸದಸ್ಯರೊಳಗೆ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ಯುವವಾಹಿನಿ(ರಿ) ಮುಲ್ಕಿ ಘಟಕ ಹಮ್ಮಿಕೊಂಡ ಮನೆ ಮನೆ ಭಜನೆ ಕಾರ್ಯಕ್ರಮ ದಿನಾಂಕ 09-03-2024 ಶನಿವಾರ ಘಟಕದ ಮಾಜಿ ಅಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದ ನೆನಪಿಗಾಗಿ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ಚರಿತ್ರೆ ಪುಸ್ತಕವನ್ನು ನೀಡಲಾಯಿತು. ಭಜನಾ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Read More

ಭಜನಾ ಸಂಕೀರ್ತನೆ

ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಭಜನಾ ಸಂಕೀರ್ತಣೆಯು ಬಜಪೆ ದೊಡ್ಡಿಕಟ್ಟ ಸ್ವಯಂ ಭೂಲಿಂಗೇಶ್ವರ ದೇವಸ್ಥಾನ ದಲ್ಲಿ ದಿನಾಂಕ 8-03-2024 ರಂದು ಸಾಯಂಕಾಲ 5:00 ರಿಂದ 7:30 ಗಂಟೆಯವರೆಗೆ ಅರ್ಥ ಪೂರ್ಣವಾಗಿ ನಡೆಯಿತು. ದೊಡ್ಡಿಕಟ್ಟ ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಭಜನಾ ಸಂಕೀರ್ತನೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲು ಹಾಕಿ, ಪ್ರಸಾದ ವಿತರಣೆ ಮಾಡಿ ಗೌರವಿಸಿದರು. ಘಟಕದ ಅಧ್ಯಕ್ಷರಾದ ಮಾಧವ ಸಾಲಿಯಾನ್, ಉಪಾಧ್ಯಕ್ಷರಾದ ರೇಣುಕಾ ಶೇಖರ್, ಮಾಜಿ ಅಧ್ಯಕ್ಷರುಗಳಾದ ದೇವರಾಜ್ ಅಮೀನ್, ಸಂಧ್ಯಾ ಕುಳಾಯಿ, ಚಂದ್ರಶೇಖರ್, ಯೋಗೀಶ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!