17-05-2026, 8:30 PM
ಪೆರ್ಮಂಕಿ : ಯುವವಾಹಿನಿ (ರಿ.) ಪೆರ್ಮಂಕಿ ಘಟಕದ ವತಿಯಿಂದ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ಶ್ರೀದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲ್ಕುಡ-ಕಲ್ಲುರ್ಟಿ ದೈವದ ಮಹಾತ್ಮೆ ಸಾರುವ ‘ನಾಗರತಿ’ ಎಂಬ ಕಾಲಮಿತಿ ಯಕ್ಷಗಾನ ಪ್ರದರ್ಶನವು ಪೆರ್ಮಂಕಿಯ ವಿಶಾಲ್ ಗಾರ್ಡನ್ನಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ಸನ್ಮಾನ ಮತ್ತು ಆರ್ಥಿಕ ನೆರವು:ಇದೇ ಸಂದರ್ಭದಲ್ಲಿ ಉದ್ಯಮ ರಂಗದ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಪ್ರಮುಖ ಉದ್ಯಮಿ, ಸಮಾಜ ಸೇವಕ ಶೈಲೇಂದ್ರ ವೈ. ಸುವರ್ಣ ಅವರನ್ನು ಘಟಕದ ವತಿಯಿಂದ ಅತ್ಯಂತ […]
Read More
17-05-2026, 8:00 PM
ಬಜಪೆ: ಯುವವಾಹಿನಿ ಬಜಪೆ ಘಟಕದ ವತಿಯಿಂದ ಮೇ ತಿಂಗಳ ‘ಮನೆ ಮನೆ ಭಜನಾ ಸಂಕೀರ್ತನೆ’ ಕಾರ್ಯಕ್ರಮವು ದಿನಾಂಕ 17.05.2026 ರಂದು ಸಂಜೆ 6.00 ರಿಂದ 7.30 ರವರೆಗೆ ಅತ್ಯಂತ ಶ್ರದ್ಧಾ-ಭಕ್ತಿಭಾವದಿಂದ ಜರಗಿತು. ಘಟಕದ ಮಾಜಿ ಅಧ್ಯಕ್ಷರಾದ ದೇವರಾಜ್ ಅಮೀನ್ ಹಾಗೂ ಕಾರ್ಯದರ್ಶಿ ಸುಚಿತ ದೇವರಾಜ್ ದಂಪತಿಗಳ ನಿವಾಸವಾದ ಬಜಪೆ-ಕಟೀಲ್ ರಸ್ತೆಯ “ಶಿವಗಿರಿ” ಯಲ್ಲಿ ಈ ಭಕ್ತಿಪೂರ್ವಕ ಭಜನಾ ಸೇವೆ ನೆರವೇರಿತು. ದೇವರಾಜ್ ಅಮೀನ್ ಅವರ ತಂದೆ-ತಾಯಿಯವರ 45ನೇ ವಿವಾಹ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಈ ವಿಶೇಷ ಭಜನಾ […]
Read More
17-05-2026, 8:00 PM
ಕೆಂಜಾರು : ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮೇ 17ರಂದು ಕೆಂಜಾರು ಶ್ರೀದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ಜರುಗಿತು.ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಅಧ್ಯಕ್ಷರಾದ ಮಹಾಬಲ ಪೂಜಾರಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ ತಂಡದ ಸಮಾಜಮುಖಿ ಚಿಂತನೆಗಳಿಗೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಸಂದೀಪ್ ಕೋರೆಮನೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು […]
Read More
17-05-2026, 8:00 PM
ಕೆಂಜಾರು : ಯುವವಾಹಿನಿ (ರಿ) ಕೆಂಜಾರು -ಕರಂಬಾರು ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಪ್ರಿತೇಶ್ ಕುಮಾರ್ ಅರ್ಬಿ ಆಯ್ಕೆಯಾಗಿದ್ದಾರೆ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಅಧ್ಯಕ್ಷರು :- ಪ್ರಿತೇಶ್ ಕುಮಾರ್ ಅರ್ಬಿಒಂದನೇ ಉಪಾಧ್ಯಕ್ಷರು :- ಮಿಥುನ್ ಕುಮಾರ್ ಕರಂಬಾರುಎರಡನೇ ಉಪಾಧ್ಯಕ್ಷರು :- ನವ್ಯ ಜಯಂತ್ಕಾರ್ಯದರ್ಶಿ :- ರಾಜೇಶ್ ಎಸ್ ಪೂಜಾರಿ ಕೆಂಜಾರುಜತೆ ಕಾರ್ಯದರ್ಶಿ :- ರೇಷ್ಮ ಲೋಕೇಶ್ಕೋಶಾಧಿಕಾರಿ :- ಉಷಾ ಶಂಕರ್ವಿದ್ಯಾನಿಧಿ ನಿರ್ದೇಶಕರು : ಮಾಯ ಸಂದೀಪ್ಮಹಿಳಾ ಸಂಘಟನಾ ನಿರ್ದೇಶಕರು :-ಗೀತ ಲಿಂಗಪ್ಪ, ಪ್ರಜ್ಞಾ, ಹೇಮಲತಾ ಹೇಮಂತ್ಪ್ರಚಾರ ನಿರ್ದೇಶಕರು […]
Read More
17-05-2026, 7:00 PM
ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಮೇ 17, 2026ರಂದು ಮಂಗಳೂರಿನ ತಣ್ಣೀರುಬಾವಿ ಟ್ರೀ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವವಾಹಿನಿ ಕುಟುಂಬದ ‘ಸ್ನೇಹ ಮಿಲನ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಅವರು ಆಗಮಿಸಿದ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಬಂಟ್ವಾಳ ಘಟಕದ ಯುವವಾಹಿನಿ ಕುಟುಂಬದ ಒಟ್ಟು 94 ಸದಸ್ಯರು ಈ ಪ್ರಕೃತಿಯ ಮಡಿಲಲ್ಲಿ ನಡೆದ ಸ್ನೇಹಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಸಂಭ್ರಮದ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳುಬೆಳಗಿನ […]
Read More
17-05-2026, 7:00 PM
ಸುಳ್ಯ: ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ನಾಲ್ಕನೇ ತಿಂಗಳ ‘ಗುರುಸ್ಫೂರ್ತಿ’ ಕಾರ್ಯಕ್ರಮವು ಮೇ 17 ರಂದು ಬೆಳಿಗ್ಗೆ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ರಮೇಶ್ ಪೂಜಾರಿ ಜಯನಗರ ಇವರ ಗೃಹದಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಜರುಗಿತು. ದೀಪ ಪ್ರಜ್ವಲನೆ ಮತ್ತು ಭಜನೆ:ಕಾರ್ಯಕ್ರಮದ ಆತಿಥ್ಯ ವಹಿಸಿದ್ದ ರಮೇಶ್ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಉದ್ಘಾಟನೆಯ ಬಳಿಕ ನೆರೆದಿದ್ದ ಸದಸ್ಯರಿಂದ ಭಕ್ತಿಪೂರ್ವಕ ಭಜನಾ ಕಾರ್ಯಕ್ರಮ ನಡೆಯಿತು. ನಾರಾಯಣ ಗುರುಗಳ ತತ್ವ […]
Read More
17-05-2026, 2:00 PM
ಕೊಲ್ಯ : ಮಾನವ ಸೇವೆಯೇ ಮಾಧವ ಸೇವೆ ಎಂಬ ಧ್ಯೇಯದೊಂದಿಗೆ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಜಂಟಿ ಆಶ್ರಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ “ಸಹಾಯ ಹಸ್ತ” ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು. ದಿನಾಂಕ 17-05-2026 ರಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ತಾಯಂದಿರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಧನಸಹಾಯ ಹಸ್ತಾಂತರಿಸಲಾಯಿತು: ಸೋಮೇಶ್ವರ ನಿವಾಸಿ ದಾಮೋದರ ಪೂಜಾರಿ ಇವರ ಧರ್ಮಪತ್ನಿಯವರ ಚಿಕಿತ್ಸಾ ವೆಚ್ಚಕ್ಕಾಗಿ. […]
Read More
17-05-2026, 1:30 PM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ತರಬೇತಿ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ “ಉಚಿತ ಮಲ್ಲಿಗೆ ಕೃಷಿ ಮಾಹಿತಿ ಶಿಬಿರವು ದಿನಾಂಕ 17/05/2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲ್ಲಿಗೆ ಕೃಷಿ ಮಾಹಿತಿ ಮತ್ತು ಪ್ರೇರಣೆ : ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ […]
Read More
17-05-2026, 1:00 PM
ಯುವವಾಹಿನಿ ಉಡುಪಿ ಘಟಕದ ವತಿಯಿಂದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಮೇ 17/5/2026ರ ಭಾನುವಾರ ನಡೆಯಿತು. ಬದುಕಿನ ಅನುಭವ ಸಾಧನೆಗೆ ಪ್ರೇರಕ: ಡಾ| ಅಭಯ ಕುಮಾರ್ : ಬದುಕಿನ ಅನುಭವ ಮನುಷ್ಯನ ಸಾಧನೆಗೆ ಪ್ರೇರಕ. ಶಿಕ್ಷಣ ಮತ್ತು ಸಿಕ್ಕ ಅವಕಾಶಗಳನ್ನು ನಾವು ಬಳಸಿಕೊಳ್ಳುವುದರಿಂದ ವೃದ್ಧಿಯಾಗುತ್ತದೆ ವ್ಯಕ್ತಿತ್ವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಡಾ ಅಭಯ ಕುಮಾರ್ ಹೇಳಿದರು. ಯುವವಾಹಿನಿ ಉಡುಪಿ ಘಟಕದ ವತಿಯಿಂದ ರವಿವಾರ ಚಿಟ್ಟಾಡಿ ಲಕ್ಷ್ಮೀ ಟ್ರೇಡ್ ಸೆಂಟರ್ […]
Read More
17-05-2026, 1:00 PM
ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (ಬಿ.ವಿ.ಟಿ.) ಮಣಿಪಾಲ (ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ) ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಸೌರಶಕ್ತಿ ಯೋಜನೆ ಹಾಗೂ ಬ್ಯಾಂಕ್ ಸಾಲ ಸೌಲಭ್ಯಗಳ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಸಮಾಜ ಮಂದಿರದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ. ಅವರು, “ಪ್ರಸ್ತುತ ದಿನಗಳಲ್ಲಿ ಸೌರಶಕ್ತಿ ಆಧಾರಿತ ತಂತ್ರಜ್ಞಾನಗಳ ಬಳಕೆ […]
Read More