05-03-2026, 9:00 PM
ನಾರಾವಿ: ಇಲ್ಲಿನ ಪ್ರಸಿದ್ಧ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಜರಗುತ್ತಿರುವ ಬ್ರಹ್ಮಕಲಶ ಮಹೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವೇಣೂರು ಘಟಕದ ಸದಸ್ಯರು ದಿನಾಂಕ 05-03-2026, ಗುರುವಾರ ಸಂಜೆ ದೇವಾಲಯದಲ್ಲಿ ಸ್ವಯಂಸೇವಕರಾಗಿ ವಿಶೇಷ ಸೇವೆಯನ್ನು ಸಲ್ಲಿಸಿದರು. ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತಿಪೂರ್ವಕವಾಗಿ ಪಾಲ್ಗೊಂಡ ಸದಸ್ಯರು, ಬಳಿಕ ದೇವಾಲಯದ ಅನ್ನಪ್ರಸಾದ ವಿತರಣಾ ವಿಭಾಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಸಂಜೆ 7 ಗಂಟೆಯಿಂದ ಆರಂಭಗೊಂಡ ಈ ಸೇವಾ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ಅನ್ನಪ್ರಸಾದ ಬಡಿಸುವ ಮೂಲಕ ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರಮದಾನ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ […]
Read More
02-03-2026, 9:00 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 02-03-2026, ಸೋಮವಾರದಂದು ನೆರವೇರಿತು. ಈ ವಾರದ ಭಜನಾ ಸೇವೆಯನ್ನು ಅಶೋಕ್ ನಗರ ದಂಬೇಲ್‌ನ ವೆಂಕಟೇಶ್ ರಾವ್ ಮತ್ತು ಬಳಗದವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಭಕ್ತಿಪ್ರಧಾನವಾದ ಸಂಕೀರ್ತನೆಗಳ ಮೂಲಕ ನೆರೆದಿದ್ದ ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೇವರ […]
Read More
01-03-2026, 10:00 PM
ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ವತಿಯಿಂದ ದಿನಾಂಕ 01-03-2026, ಭಾನುವಾರದಂದು ಕಣ್ಣೂರಿನತ್ತ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಪ್ರವಾಸವು ಅತ್ಯಂತ ಯಶಸ್ವಿಯಾಗಿ ಮತ್ತು ಸಂಭ್ರಮದಿಂದ ನೆರವೇರಿತು. ಬೆಳಿಗ್ಗೆ 5.45ಕ್ಕೆ ಗ್ರಾಮ ಚಾವಡಿ ಗುರುಮಂದಿರದಲ್ಲಿ ಗುರುಗಳಿಗೆ ನಮನ ಸಲ್ಲಿಸಿ ಪ್ರವಾಸಕ್ಕೆ ಚಾಲನೆ ನೀಡಲಾಯಿತು. ಘಟಕದ ಒಂದನೇ ಉಪಾಧ್ಯಕ್ಷರಾದ ಮುರಳೀಧರ ಕೊಣಾಜೆ ಅವರ ನೇತೃತ್ವದಲ್ಲಿ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಒಟ್ಟು 52 ಮಂದಿ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ದಾರಿಯಲ್ಲಿ ಪರ್ಸಿನಕಡವು ದೇವಸ್ಥಾನಕ್ಕೆ […]
Read More
01-03-2026, 9:00 PM
ವಿಟ್ಲ: ಇಲ್ಲಿನ ಪ್ರಸಿದ್ಧ ಪುಣಚ ನೀರುಮಜಲು ವಾರ್ಷಿಕ ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವಿಟ್ಲ ಘಟಕದ ಸದಸ್ಯರು ದಿನಾಂಕ 01-03-2026, ಭಾನುವಾರದಂದು ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಿದರು.ನೇಮೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆಯ ಜವಾಬ್ದಾರಿಯನ್ನು ಹೊತ್ತಿದ್ದ ಘಟಕದ ಸದಸ್ಯರು, ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಭಕ್ತಿಪೂರ್ವಕವಾಗಿ ಶ್ರಮದಾನ ಮಾಡಿದರು. ಯುವವಾಹಿನಿ ಸದಸ್ಯರ ಈ ನಿಸ್ವಾರ್ಥ ಸೇವೆಯನ್ನು ಗುರುತಿಸಿದ ಗರಡಿಯ ಆಡಳಿತ ಮಂಡಳಿಯು, ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದೆ. ಈ ಸೇವಾ ಕಾರ್ಯಕ್ರಮದಲ್ಲಿ ವಿಟ್ಲ ಘಟಕದ […]
Read More
01-03-2026, 9:00 PM
ಮಂಗಳೂರು: ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಿಲ್ ಇಲ್ಲಿ ಜರುಗಿದ ವಾರ್ಷಿಕ ಮಹೋತ್ಸವ ಹಾಗೂ ನೇಮೋತ್ಸವ ಪುಣ್ಯ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಸಮಾಜದ ಸಾಂಸ್ಕೃತಿಕ ಅಸ್ಮಿತೆಯ ತಾಣವಾಗಿರುವ ಗೆಜ್ಜೆಗಿರಿಗೆ ಸಂಘಟಿತವಾಗಿ ಭೇಟಿ ನೀಡಿದ ಘಟಕದ ತಂಡವು, ಕ್ಷೇತ್ರದ ದೈವಿಕ ವಿಧಿವಿಧಾನಗಳಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಣೆ ಮಾಡಿತು.
Read More
01-03-2026, 8:00 PM
ಸುರತ್ಕಲ್: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಕುಟುಂಬ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ–2026” ಕಾರ್ಯಕ್ರಮವನ್ನು ದಿನಾಂಕ 01-03-2026 ರಂದು ಸದಾಶಿವನಗರ 1ನೇ ಅಡ್ಡರಸ್ತೆ, ಸುರತ್ಕಲ್‌ನಲ್ಲಿರುವ ಘಟಕದ ಸದಸ್ಯೆಯಾದ ನೇಹಾ ಅವರ ಮನೆಯಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೇವತಿ ನವೀನ್, ಮೊದಲ ಉಪಾಧ್ಯಕ್ಷರಾದ ಸುಲತಾ ಪೂಜಾರಿ ಹಾಗೂ ಕಾರ್ಯದರ್ಶಿ ಸನೀಶ್ ಎಸ್. ಅಂಚನ್ ಉಪಸ್ಥಿತರಿದ್ದರು. ಅಧ್ಯಕ್ಷರಾದ ರೇವತಿ ನವೀನ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಸದಸ್ಯರು ಹಾಗೂ ಅವರ ಕುಟುಂಬಸ್ಥರನ್ನು ಸ್ವಾಗತಿಸಿದರು.ಕಾರ್ಯಕ್ರಮದ ಸಂಚಾಲಕರಾದ ಸ್ವಾತಿ […]
Read More
01-03-2026, 2:00 PM
ಮಂಗಳೂರು : “ಸಂಘಟನೆಯ ಯಶಸ್ಸು ಕೇವಲ ಅಧಿಕಾರ ಚಲಾಯಿಸುವುದರಲ್ಲಿಲ್ಲ, ಬದಲಾಗಿ ಎಲ್ಲರನ್ನೂ ಒಗ್ಗೂಡಿಸಿ ದಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕತ್ವದ ಮೇಲಿದೆ” ಎಂದು ಆಪ್ತ ಸಮಾಲೋಚಕರು, ತರಬೇತುದಾರರಾದ ಸ್ಮಿತೇಶ್ ಎಸ್ ಬಾರ್ಯ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮತ್ತು ಮಂಗಳೂರು ಘಟಕದ ಆತಿಥ್ಯದಲ್ಲಿ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಚ್ 1, ಭಾನುವಾರ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಪದಾಧಿಕಾರಿಗಳ ಮತ್ತು ಸದಸ್ಯರ ತರಬೇತಿ ಕಾರ್ಯಾಗಾರ ‘ವಿಕಾಸ 2026’ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ […]
Read More
01-03-2026, 10:00 AM
ವೇಣೂರು: ನಾರಾವಿಯ ಪುಣ್ಯಕ್ಷೇತ್ರ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಜರಗುತ್ತಿರುವ ಬ್ರಹ್ಮಕಲಶ ಮಹೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ಅತ್ಯಂತ ಯಶಸ್ವಿಯಾಗಿ ಹೊರಕಾಣಿಕೆ ಸಮರ್ಪಿಸಲಾಯಿತು.ದಿನಾಂಕ 01-03-2026ರ ಭಾನುವಾರದಂದು ನಡೆದ ಈ ವೈಭವದ ಹೊರಕಾಣಿಕೆ ಮೆರವಣಿಗೆಯಲ್ಲಿ ವೇಣೂರು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಭಕ್ತಿ ಮತ್ತು ಶ್ರದ್ಧೆಯ ಸಂಕೇತವಾಗಿ ಸಮರ್ಪಿಸಲಾದ ಈ ಹೊರಕಾಣಿಕೆಯನ್ನು ದೇವಸ್ಥಾನದ ಸಮಿತಿಯವರು ಗೌರವಪೂರ್ವಕವಾಗಿ ಸ್ವೀಕರಿಸಿದರು. ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ ವೇಣೂರು ಘಟಕದ ಪದಾಧಿಕಾರಿಗಳು, ಮಾಜಿ […]
Read More
28-02-2026, 9:00 PM
ಕಡಬ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಆದರ್ಶಗಳನ್ನು ಮನೆಮನಕ್ಕೆ ತಲುಪಿಸುವ ನಿಟ್ಟಿನಲ್ಲಿ ಯುವವಾಹಿನಿ (ರಿ.) ಕಡಬ ಘಟಕದ ಆಶ್ರಯದಲ್ಲಿ ಎರಡನೇ ಹಂತದ ‘ಗುರುಸ್ಫೂರ್ತಿ’ ಕಾರ್ಯಕ್ರಮವು ದಿನಾಂಕ 28-02-2026ರ ಶನಿವಾರದಂದು ಬಳ್ಪದ ತುಳಸಿ ನಾಗೇಶ್ ಪಡ್ಕಿಲಾಯ ಅವರ ನಿವಾಸದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಬಳ್ಪ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಚಿನ್ನಪ್ಪ ಪೂಜಾರಿ ಕೊರಪ್ಪಣೆ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶಿಕ್ಷಕಿ ರೇಣುಕಾ ಕಣಿಯೂರು ಅವರು […]
Read More
28-02-2026, 9:00 PM
ಕೊಲ್ಯ : ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್‌ನಲ್ಲಿ ಜರುಗಿದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಸ್ವಯಂ ಸೇವೆಯನ್ನು ಸಲ್ಲಿಸಿದರು.ಆದಿ ದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ಹಾಗೂ ದೇಯಿ ಬೈದ್ಯೆತಿ-ಕೋಟಿ ಚೆನ್ನಯರ ಮೂಲಸ್ಥಾನವಾದ ಈ ಪವಿತ್ರ ಕ್ಷೇತ್ರದಲ್ಲಿ ಫೆಬ್ರವರಿ 28ರಂದು ಜರುಗಿದ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸಂಖ್ಯೆಯ ಸದಸ್ಯರು ಪಾಲ್ಗೊಂಡರು. ಬೆಳಿಗ್ಗೆಯಿಂದ ಸಂಜೆಯವರೆಗೆ ಕ್ಷೇತ್ರದ ಪ್ರಸಾದ ಪ್ಯಾಕಿಂಗ್ ಹಾಗೂ ದೇಯಿ ಬೈದ್ಯೆತಿ […]
Read More