ಭರವಸೆಯ ಬದುಕಿಗೊಂದು ಸೂರು ಯೋಜನೆ 2026 : ಮನೆ ಹಸ್ತಾಂತರ
08-08-2026, 11:34 AM
04-08-2026, 11:30 AM
ಕಂಕನಾಡಿ, ಆ. 4: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ (ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ) ಸಹಯೋಗದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (KSTA) ಭವನ, ಗೋರಿಗುಡ್ಡದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಯುಷ್ ಇಲಾಖೆಯ ಹೋಮಿಯೋಪತಿ ತಜ್ಞೆ ಡಾ. ಶ್ರೀ ದೇವಿ ವೆಂಕಟಾಪುರ ಅವರು, “ಹೋಮಿಯೋಪತಿ ಔಷಧಿಗಳಿಗೆ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಶಿಶುವಿನಿಂದ ಹಿಡಿದು ಎಲ್ಲಾ ವಯೋಮಾನದವರು […]
03-08-2026, 8:00 PM
ಮಂಗಳೂರು, ಆ. 3: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಆಗಸ್ಟ್ 3ರಂದು ಸಂಜೆ ಭಜನಾ ಸೇವೆ ಭಕ್ತಿಭಾವದಿಂದ ನಡೆಯಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ.), ಕರ್ನಾಟಕ, ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಹಾಡಿ, ಶ್ರೀ ಗೋಕರ್ಣನಾಥ ಸ್ವಾಮಿ […]
02-08-2026, 11:00 PM
ಮೂಡುಬಿದಿರೆ, ಆ. 2: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಮಹತ್ವ, ಸಾಮಾಜಿಕ ಜವಾಬ್ದಾರಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ‘ಅರಿವು–2026’ ಕಾರ್ಯಕ್ರಮವು ಮೂಡುಬಿದಿರೆಯ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿ ಜಿನೇಂದ್ರ […]
02-08-2026, 8:00 PM
ಹೆಜಮಾಡಿ, ಆ. 2: ಯುವವಾಹಿನಿ (ರಿ.) ಹೆಜಮಾಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಹೆಜಮಾಡಿ ಬಿಲ್ಲವರ ಸಂಘ (ರಿ.) ಸಭಾಂಗಣದಲ್ಲಿ ಘಟಕದ ಅಧ್ಯಕ್ಷ ನಿಶಾಂಕ್ ಎಸ್. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘ (ರಿ.) ಅಧ್ಯಕ್ಷ ಮೋಹನ್ ದಾಸ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವವಾಹಿನಿಯು ಸಮಾಜಮುಖಿ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ […]
02-08-2026, 8:00 PM
ಹೆಜಮಾಡಿ ಅಗಸ್ಟ್ 02 : ಯುವವಾಹಿನಿ (ರಿ) ಹೆಜಮಾಡಿ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಪ್ರಥಮೇಶ್ ಪಿ ಬಂಗೇರ ಆಯ್ಕೆಯಾಗಿದ್ದರೆ ನೂತನ ಕಾರ್ಯಕಾರಿ ಸಮಿತಿ ಅಧ್ಯಕ್ಷರು : ಪ್ರಥಮೇಶ್ ಪಿ. ಬಂಗೇರಪ್ರಥಮ ಉಪಾಧ್ಯಕ್ಷರು : ಜಯಶ್ರೀ ಸದಾಶಿವದ್ವಿತೀಯ ಉಪಾಧ್ಯಕ್ಷರು : ಪ್ರಾಪ್ತಿ ಆರ್ ಸುವರ್ಣಕಾರ್ಯದರ್ಶಿ : ದೀಕ್ಷಿತ್ ಸಿ. ಪೂಜಾರಿಜೊತೆ ಕಾರ್ಯದರ್ಶಿ : ಸುರೇಖಾ ಆನಂದ್ಕೋಶಾಧಿಕಾರಿ : ವಿಶ್ವೇಶ್ ಪೂಜಾರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಅವಿನ್ ಎ. ಪೂಜಾರಿಕ್ರೀಡೆ ನಿರ್ದೇಶಕರು : […]
02-08-2026, 7:00 PM
ಮುಲ್ಕಿ, ಆ. 2: ಕಾರ್ಗಿಲ್ ವಿಜಯ ದಿನಾಚರಣೆಯು ಕೇವಲ ವಿಜಯದ ಸಂಭ್ರಮವಲ್ಲ, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹುತಾತ್ಮ ಯೋಧರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಗೌರವ ಸಲಹೆಗಾರ ವೈ.ಎನ್. ಸಾಲ್ಯಾನ್ ಹೇಳಿದರು. ಅವರು ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕಾರ್ಗಿಲ್ ವಿಜಯ ಸುಲಭವಾಗಿ ದೊರೆತ ಗೆಲುವಲ್ಲ. ನಮ್ಮ ಯೋಧರು ತಮ್ಮ […]
02-08-2026, 4:00 PM
ಬೆಳ್ಳಾರೆ, ಆ. 2: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಆಟಿ ತಿಂಗಳ ಮಹತ್ವವನ್ನು ಇಂದಿನ ಯುವಜನತೆಗೆ ಪರಿಚಯಿಸುವ ಕಾರ್ಯ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಭಾನುವಾರ ಬೆಳ್ಳಾರೆ ಪೆರುವಾಜೆಯ ಜೆ.ಡಿ. ಆಡಿಟೋರಿಯಂನಲ್ಲಿ ಆಯೋಜಿಸಲಾದ ಆಟಿದ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಟಿ ತಿಂಗಳು ಕೇವಲ ಆಚರಣೆಯ ತಿಂಗಳಲ್ಲ; ಅದು […]
02-08-2026, 3:00 PM
ಮೂಡುಬಿದಿರೆ, ಆ. 2: ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನಶೈಲಿಯತ್ತ ಅವರನ್ನು ಪ್ರೇರೇಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಹಾಗೂ ಸರ್ಕಾರಿ ಶಾಲಾ ಶಿಕ್ಷಕಿ ಯೋಗಿತಾ ನವಾನಂದ ಹೇಳಿದರು. ಅವರು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿ ಮನೋಹಿತ’ […]