29-07-2026, 8:00 PM
ಬಜಪೆ, ಜುಲೈ 29: ಗುರು ಪೂರ್ಣಿಮೆಯ ಪವಿತ್ರ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಇಲ್ಲಿ ಜುಲೈ 29ರಂದು ಸಂಜೆ 4.30ರಿಂದ 6.00 ಗಂಟೆಯವರೆಗೆ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರಿಂದ ವಿಶೇಷ ಭಜನಾ ಸಂಕೀರ್ತನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಭಜನಾ ಸಂಕೀರ್ತನೆಯ ಮೂಲಕ ಶ್ರೀ ನಾರಾಯಣ ಗುರುಗಳ ತತ್ವ-ಆದರ್ಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರು ಸ್ಮರಣೆಯಲ್ಲಿ ತೊಡಗಿದರು. ಭಜನಾ ಸಂಕೀರ್ತನೆಯ ಬಳಿಕ ಗುರುವರ್ಯರಿಗೆ ವಿಶೇಷ ಗುರುಪೂಜೆ […]
Read More
29-07-2026, 8:00 PM
ಕೂಳೂರು, ಜು. 29: ದೇಶದ ರಕ್ಷಣೆ ಮತ್ತು ಭದ್ರತೆಯ ವಿಚಾರ ಬಂದಾಗ ಭಾರತದ ಪ್ರತಿಯೊಬ್ಬ ಪ್ರಜೆಯೂ ಸೈನಿಕನ ಮನೋಭಾವವನ್ನು ಹೊಂದಿರಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಆಶೋಕ್ ಕುಮಾರ್ ಪಡ್ಪು ಹೇಳಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಫಲ್ಗುಣಿ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಗಿಲ್ ವಿಜಯ್ ದಿವಸ್–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೇಶದ ಭದ್ರತೆಗೆ ಸವಾಲೊಡ್ಡಿದ ಶತ್ರುಗಳನ್ನು ಧೈರ್ಯದಿಂದ ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರ ಸಾಹಸ, ಶೌರ್ಯ ಮತ್ತು ತ್ಯಾಗ […]
Read More
28-07-2026, 8:00 PM
ಮಂಗಳೂರು, ಜು. 28: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂದರೆ ಕಷ್ಟದ ದಿನಗಳ ಸಂಕೇತವಾಗಿತ್ತು. ನಿರಂತರ ಸುರಿಯುವ ಮಳೆಯಿಂದ ಸೂರ್ಯನ ಮುಖವೇ ಕಾಣದ ದಿನಗಳು, ಆಹಾರದ ಅಭಾವ, ಅನಾರೋಗ್ಯ ಮತ್ತು ಬದುಕಿನ ಸಂಕಷ್ಟಗಳು ಆಟಿಯ ಅವಿಭಾಜ್ಯ ಅಂಗವಾಗಿದ್ದವು. ಆ ದಿನಗಳ ಅನುಭವವನ್ನು ಮರೆಯಲು ಸಾಧ್ಯವಿಲ್ಲ ಎಂದು ಖ್ಯಾತ ಉಪನ್ಯಾಸಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕವು ಆಯೋಜಿಸಿದ್ದ ಕಾರ್ಗಿಲ್ ವಿಜಯ್ ದಿವಸ್, ಆಟಿದ ಕಂಪು-ನೆಂಪು ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ […]
Read More
27-07-2026, 10:00 PM
ಮಂಗಳೂರು, ಜುಲೈ 27: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುತ್ತಿರುವ “ಒಂದೇ ನಾಮ, ಒಂದೇ ಭಾವ” ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಜುಲೈ 27ರಂದು ಸಂಜೆ ಭಜನಾ ಸೇವೆಯು ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಮಂಜುಳ ಪ್ರಭಾಕರ್ ಮತ್ತು ಬಳಗ, ಅಶೋಕನಗರ, ಮಂಗಳೂರು ಅವರ ಸಹಯೋಗದಲ್ಲಿ ಭಜನಾ ಸಂಕೀರ್ತನ ನಡೆಯಿತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಗಾಯನ ಮಾಡಿ, ಶ್ರೀ ಗೋಕರ್ಣನಾಥ […]
Read More
27-07-2026, 6:00 PM
ಮಾಣಿ, ಜುಲೈ 27: ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷೆಯ “ಯುವ ಸೇವಾ ಸ್ಪರ್ಶ” ಯೋಜನೆಯ ಮೂರನೇ ಹಂತದ ಸೇವಾ ಕಾರ್ಯದ ಅಂಗವಾಗಿ, ಪೆರಾಜೆ ಗ್ರಾಮದ ನಿವಾಸಿ ಪದ್ಮಾವತಿ ಅವರಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳ ಕಿಟ್ನ್ನು ವಿತರಿಸಲಾಯಿತು. ಪದ್ಮಾವತಿ ಅವರು ಒಂಟಿಯಾಗಿ ಜೀವನ ಸಾಗಿಸುತ್ತಿದ್ದು, ಅನಾರೋಗ್ಯದ ಕಾರಣ ದುಡಿದು ಜೀವನ ನಿರ್ವಹಿಸಲು ಅಸಮರ್ಥರಾಗಿದ್ದಾರೆ. ಅವರ ಸಂಕಷ್ಟವನ್ನು, ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಮನಗಂಡ ಯುವವಾಹಿನಿ (ರಿ.) ಮಾಣಿ ಘಟಕವು ಮಾನವೀಯ ಕಳಕಳಿಯಿಂದ ಒಂದು ತಿಂಗಳಿಗೆ […]
Read More
26-07-2026, 8:00 PM
ಶಕ್ತಿನಗರ, ಜುಲೈ 26 : ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಇವರ ಜಂಟಿ ಆಶ್ರಯದಲ್ಲಿ ಜುಲೈ 26ರಂದು ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರಯೋಧರಿಗೆ ಮೌನ […]
Read More
26-07-2026, 7:00 PM
ಕಂಕನಾಡಿ, ಜುಲೈ 26: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ‘ಅಟಿದ ನೆಂಪು’ ಕಾರ್ಯಕ್ರಮವು ಜುಲೈ 26ರಂದು ಭಾನುವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಭಗವತಿ ಇಂಗ್ಲೀಷ್ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಾವತಿ ದೀಪ ಬೆಳಗಿಸಿ ಹಾಗೂ ಹಲಸಿನ ಹಣ್ಣನ್ನು ಸಾಂಪ್ರದಾಯಿಕವಾಗಿ ತುಂಡು ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿಂದಿನ ಕಾಲದಲ್ಲಿ ಸ್ಥಳೀಯವಾಗಿ ದೊರೆಯುವ ಸೊಪ್ಪು, ಹಣ್ಣು ಹಾಗೂ ನೈಸರ್ಗಿಕ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಜನರು ತಮ್ಮ ಜೀವನವನ್ನು ಸಾಗಿಸುತ್ತಿದ್ದರು. […]
Read More
26-07-2026, 2:00 PM
ಬೆಳ್ತಂಗಡಿ, ಜು. 26 : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಿ, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವು ಭಾನುವಾರ ಯಶಸ್ವಿಯಾಗಿ ನಡೆಯಿತು. ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡಿಕೊಡಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಘಟನೆಯ ಬೆಳವಣಿಗೆಯಲ್ಲಿ ತರಬೇತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿ, ನೂತನ ಕಾರ್ಯಕಾರಿ ಸಮಿತಿಯ […]
Read More
26-07-2026, 2:00 PM
ಸುಳ್ಯ, ಜು. 26 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಘಟಕದ ಪೂರ್ವಾಧ್ಯಕ್ಷರು ಹಾಗೂ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿದ್ದು ಸಮಾಜಸೇವೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದ ದಿವಂಗತ ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನವನ್ನು ಭಾನುವಾರ ಗೌರವಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಳಿಗ್ಗೆ 8 ಗಂಟೆಗೆ ನೆಟ್ಟಾರು ನಿವಾಸದಲ್ಲಿ ದಿವಂಗತ ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಸಮಾಜಮುಖಿ ಸೇವೆ, ಸಂಘಟನಾ ಕೌಶಲ್ಯ ಹಾಗೂ ಯುವವಾಹಿನಿಯ ಬೆಳವಣಿಗೆಗೆ ನೀಡಿದ ಅಮೂಲ್ಯ […]
Read More
26-07-2026, 2:00 PM
ಮೂಡುಬಿದಿರೆ, ಜುಲೈ 26: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಶಿರ್ತಾಡಿ ಇವರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ, ಶಿರ್ತಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು–ಮೂಡುಬಿದಿರೆ ವತಿಯಿಂದ ಉಚಿತ ನೇತ್ರ ತಪಾಸಣೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, […]
Read More