Yuvavahini

ಘಟಕಗಳು

ಗುರು ಸ್ಮರಣೆ-ಗುರು ಭಜನೆ

ಕೋಟೆಕಾರ್: ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ದಿನಾಂಕ 14-05-2026 ನೇ ಗುರುವಾರ ಸಾಯಂಕಾಲ 7 ಗಂಟೆಗೆ, ನೆತ್ತಿಲ ಕೋಟೆಕಾರಿನಲ್ಲಿರುವ ಘಟಕದ ಕಾರ್ಯದರ್ಶಿ ಸೌಮ್ಯ ಯೋಗೀಶ್ ರವರ ಗೃಹದಲ್ಲಿ ಗುರು ಸ್ಮರಣೆ-ಗುರು ಭಜನೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಯೋಗೀಶ್ ಕೋಟೆಕಾರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಭಕ್ತಿಪೂರ್ವಕ ಚಾಲನೆ ನೀಡಿದರು. ಘಟಕದ ಸದಸ್ಯರಿಂದ ಸುಮಧುರ ಗುರು ಭಜನಾ ಸಂಕೀರ್ತನೆ ನೆರವೇರಿತು.ಭಜನೆಯ ಬಳಿಕ ಗುರುಗಳಿಗೆ ಮಹಾಪೂಜೆ ನಡೆದು, ಕಾಫಿ ತೀರ್ಥ ಪ್ರಸಾದ ವಿತರಿಸಲಾಯಿತು. ಘಟಕದ ಮಾಜಿ […]

Read More

ಗುರು ಸತ್ಸಂಗ ಹಾಗೂ ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಆಮಂತ್ರಣ ಬಿಡುಗಡೆ

ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ‘ಗುರು ಸತ್ಸಂಗ’ ಕಾರ್ಯಕ್ರಮವು ಬಲಯಿಪಾದೆಯ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಪ್ರೀತ್ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಜರುಗಿತು. ದೀಪ ಪ್ರಜ್ವಲನೆ ಮತ್ತು ಗುರು ಸಂದೇಶ:ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ಅವರು ಜಂಟಿಯಾಗಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಭಕ್ತಿಪೂರ್ವಕ ‘ಗುರು ಸತ್ಸಂಗ […]

Read More

ಮನರಂಜನಾ ಪ್ರವಾಸ

ವಿಟ್ಲ : ದಿನಾಂಕ 12/05/2026 ಮಂಗಳವಾರದಂದು ಯುವವಾಹಿನಿ ಘಟಕದ ವತಿಯಿಂದ ಹೊನ್ನಾವರದಲ್ಲಿರುವ ಜಾಲಿ ಆಂಡ್ ಜಾಲಿ ವಾಟರ್ ಪಾರ್ಕ್‌ಗೆ ಮನರಂಜನಾ ಪ್ರವಾಸವನ್ನು ಆಯೋಜಿಸಲಾಯಿತು. ಈ ಪ್ರವಾಸದಲ್ಲಿ ಘಟಕದ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಸೇರಿದಂತೆ ಒಟ್ಟು 41 ಮಂದಿ ಭಾಗವಹಿಸಿದ್ದರು. ಬೆಳಗ್ಗಿನಿಂದಲೇ ಉತ್ಸಾಹಭರಿತವಾಗಿ ಆರಂಭವಾದ ಈ ಪ್ರವಾಸದಲ್ಲಿ ಸದಸ್ಯರು ವಿವಿಧ ಜಲಕ್ರೀಡೆಗಳು ಹಾಗೂ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷವನ್ನು ಹಂಚಿಕೊಂಡರು. ಪ್ರವಾಸದ ಅವಧಿಯು ಸ್ನೇಹ, ಸಹಕಾರ ಮತ್ತು ಸಂಘಟನಾ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಂತಾಗಿತ್ತು. ಎಲ್ಲಾ ಸದಸ್ಯರು ಸಂತೋಷ ಹಾಗೂ […]

Read More

ಮಹಿಳೆಯರಿಗಾಗಿ 15 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ ಉದ್ಘಾಟನೆ

ಮೂಡಬಿದಿರೆ : ಯುವವಾಹಿನಿ (ರಿ.) ಮೂಡಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (BVT) ಮಣಿಪಾಲ ಹಾಗೂ ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ, ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಸಹಕಾರದೊಂದಿಗೆ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾದ 15 ದಿನಗಳ ‘ಉಚಿತ ಫ್ಯಾಷನ್ ಡಿಸೈನ್ ತರಬೇತಿ’ ಕಾರ್ಯಕ್ರಮವು ದಿನಾಂಕ 12.05.2026 ರ ಮಂಗಳವಾರದಂದು ಇಲ್ಲಿನ ಸಮಾಜ ಮಂದಿರದಲ್ಲಿ ದೀಪ ಪ್ರಜ್ವಲನೆಗಳೊಂದಿಗೆ ಸಡಗರದಿಂದ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಮೂಡಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು, “ಇಂದಿನ ದಿನಗಳಲ್ಲಿ ಮಹಿಳೆಯರು […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 11-05-2026 ರಂದು ಸಂಜೆ 5.30 ಗಂಟೆಗೆ ಶ್ರೀ ತ್ರಯಂಬಕ ಭಜನಾ ಮಂಡಳಿ ಸುರತ್ಕಲ್ ಇವರ ಸಹಯೋಗದೊಂದಿಗೆ ನಡೆಯಿತು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More

ಸಮಾಜಸೇವೆಯಲ್ಲಿ ಯುವವಾಹಿನಿಯ ನಡೆ ಶ್ಲಾಘನೀಯ : ವೈ ಭರತ್ ಶೆಟ್ಟಿ

ಕುಪ್ಪೆಪದವು : “ನಾರಾಯಣ ಗುರುಗಳ ತತ್ವದಂತೆ ‘ವಿದ್ಯೆ–ಉದ್ಯೋಗ–ಸಂಪರ್ಕ’ ಎಂಬ ಧ್ಯೇಯೋದ್ದೇಶದೊಂದಿಗೆ ರಾಜ್ಯವ್ಯಾಪಿ ಬೆಳೆಯುತ್ತಿರುವ ಯುವವಾಹಿನಿ ಸಂಸ್ಥೆಯು, ಯುವಶಕ್ತಿಯನ್ನು ಸಮಾಜಸೇವೆಯತ್ತ ಕೊಂಡೊಯ್ಯುತ್ತಿರುವುದು ಹೆಮ್ಮೆಯ ವಿಚಾರ,” ಎಂದು ಶಾಸಕರಾದ ವೈ ಭರತ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ವಿದ್ಯಾನಿಧಿ ಸಹಾಯಾರ್ಥವಾಗಿ ಕಿಲೆಂಜಾರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಘಟಕವು ಯುವಜನರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಶ್ಲಾಘಿಸಿದರು. ಪಂದ್ಯಕೂಟವನ್ನು ಕಿಲೆಂಜಾರು ಅರಮನೆ […]

Read More

ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಸುರತ್ಕಲ್ : ದಿನಾಂಕ 10-05-2026 ರಂದು ಇಡ್ಯಾ ಕ್ಷೇತ್ರದಲ್ಲಿ ನಡೆದ ಶ್ರೀ ವಿಠೋಭ ರುಕುಮಾಯಿ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪುನಃಪ್ರತಿಷ್ಠೆ ಮತ್ತು ಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ರೂ.15,000 ಮೊತ್ತದ ಚೆಕ್ ಅನ್ನು ಕ್ಷೇತ್ರದ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು, ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು ಮತ್ತು ಕ್ಷೇತ್ರದ ಶಾಂತಿಯವರು ಘಟಕದ ಅಧ್ಯಕ್ಷರನ್ನು ಸ್ಮರಣಿಕೆ ಹಾಗೂ ಶಾಲು […]

Read More

ಸಾರ್ವಜನಿಕ ಶನಿಪೂಜೆ ಹಾಗೂ ಯಕ್ಷಗಾನ ತಾಳಮದ್ದಳೆ

ಹೆಜಮಾಡಿ: ಯುವವಾಹಿನಿ (ರಿ.) ಹೆಜಮಾಡಿ ಘಟಕ ಹಾಗೂ ಹೆಜಮಾಡಿ ಬಿಲ್ಲವರ ಸಂಘದ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕ ಶನಿಪೂಜೆ ಹಾಗೂ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಭಕ್ತಿಭಾವ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹಾಗೂ ಕೋಶಾಧಿಕಾರಿಯಾದ ಸತೀಶ್ ಕಿಲ್ಪಾಡಿ ಅವರು ಭಾಗವಹಿಸಿ ಶುಭ ಹಾರೈಸಿದರು. ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ಅವರು ತಮ್ಮ ಸಂದೇಶದಲ್ಲಿ ತಿಳಿಸಿದರು. ಸಾರ್ವಜನಿಕ ಶನಿಪೂಜೆಯಲ್ಲಿ […]

Read More

28 ನೇ ವರ್ಷದ ಸಾರ್ವಜನಿಕ ಶನಿಪೂಜೆ

ಹೆಜಮಾಡಿ : ಯುವವಾಹಿನಿ(ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಹರೀಶ್ ಶಾಂತಿ ಹೆಜಮಾಡಿ ಇವರ ಪೌರೋಹಿತ್ಯದಲ್ಲಿ 28 ನೇ ವರ್ಷದ ಸಾರ್ವಜನಿಕ ಶನಿಪೂಜೆ ಮತ್ತು ಭಾಸ್ಕರ್. ಕೆ. ಪಡುಬಿದ್ರಿ ಇವರ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಹೆಜಮಾಡಿ ನಾರಾಯಣಗುರು ಮಂದಿರದಲ್ಲಿ ದಿನಾಂಕ:09-05-2026 ರಂದು ಆದಿತ್ಯವಾರ ಜರಗಿತು.ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮತ್ತು ಕೋಶಾಧಿಕಾರಿ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು.

Read More

ಪ್ರತಿಭಾ ಪುರಸ್ಕಾರ

ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ವತಿಯಿಂದ ಬಿಲ್ಲವ ಸಂಘ (ರಿ) ಕುಂಡಡ್ಕ ಸಹಕಾರದೊಂದಿಗೆದಿನಾಂಕ 08/05/2026 ರಂದು ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯ ಸಾಧಕರಿಗೆ ಪ್ರತಿಭಾ ಪುರಸ್ಕಾರ ಮತ್ತು ರಾಜ್ಯಕ್ಕೆ ಎಸ್ ಎಸ್ ಎಲ್ ಸಿ ಯಲ್ಲಿ 7ನೇ ರಾಂಕ್ ಬಂದ ವಿದ್ಯಾರ್ಥಿಗೆ ಸನ್ಮಾನಿಸಲಾಯಿತು

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!