28-01-2024, 3:30 PM
ಮುಲ್ಕಿ: ನಿರಂತರ ಅಭ್ಯಾಸ, ಆತ್ಮವಿಶ್ವಾಸ, ಏಕಾಗ್ರತೆಯ ಮೂಲಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ ಎಂದು ತರಬೇತುದಾರರಾದ ಜಯಶ್ರೀ ತಿಳಿಸಿದರು. ಅವರು ಯುವವಾಹಿನಿ(ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ದಿನಾಂಕ 28-01-2024 ರಂದು ಮುಲ್ಕಿ ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಜರುಗಿದ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಸಂಚಾಲಕರಾದ ಹರಿಂದ್ರ ಸುವರ್ಣರವರು ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿದರು. […]
Read More
27-01-2024, 2:30 PM
ಮುಲ್ಕಿ: ಯುವವಾಹಿನಿ ಸದಸ್ಯರೊಳಗೆ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಮನೆ ಮನೆ ಭಜನೆ ಕಾರ್ಯಕ್ರಮವು ದಿನಾಂಕ 27-01-2024 ಶನಿವಾರ ಸಂಜೆ 6 ರಿಂದ 7 ರ ವರೆಗೆ ಮುಲ್ಕಿ ಘಟಕದ ಮಾಜಿ ಅಧ್ಯಕ್ಷರಾದ ಜಯ ಕುಮಾರ್ ಕುಬೇವೂರುರವರ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಯಿತು.ಈ ಕಾರ್ಯಕ್ರಮದ ನೆನಪಿಗಾಗಿ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ಚರಿತ್ರೆ ಪುಸ್ತಕವನ್ನು ನೀಡಲಾಯಿತು. ಭಜನಾ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಈ ಸಂಧರ್ಬದಲ್ಲಿ ಉಪಸ್ಥಿತರಿದ್ದರು.
Read More
25-01-2024, 8:44 AM
ವೇಣೂರು: ಬಿಲ್ಲವ ಸಮಾಜದ ಭರವಸೆಯ ಸಂಘಟನೆಯಾಗಿ ಹೊರಹೊಮ್ಮಿದ ಯುವವಾಹಿನಿ, ಯುವಜನತೆಯ ಆಶಾಕಿರಣವಾಗಿ ಮೂಡಿಬರುತ್ತಿರುವುದು ಸಂತಸದ ವಿಚಾರ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್ ತಿಳಿಸಿದರು. ಅವರು ದಿನಾಂಕ 2024 ನೇ ಜನವರಿ 25 ರಂದು ಕೊಕ್ರಾಡಿ ಬ್ರಹ್ಮಶ್ರೀ ನಾರಾಯಣಗುರು ಸಬಾಭವನದಲ್ಕಿ ಜರಗಿದ ಯುವವಾಹಿನಿ(ರಿ.) ವೇಣೂರು ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಕೆ ಹರೀಶ್ ಕುಮಾರ್ ಕಾರ್ಯಕ್ರಮವನ್ನು […]
Read More
21-01-2024, 1:29 PM
ಮೂಡಬಿದಿರೆ: ಶ್ರೀ ಕ್ಷೇತ್ರ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ತಾಡಿ – ವಾಲ್ಪಾಡಿ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 21-01-2024 ರಂದು ಯುವವಾಹಿನಿ(ರಿ) ಮೂಡುಬಿದಿರೆ ಘಟಕ ದ ಸುಮಾರು 20ಕ್ಕೂ ಹೆಚ್ಚು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.
Read More
21-01-2024, 1:28 PM
ಕಡಬ : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶಗಳು ಯುವವಾಹಿನಿ ಸಂಸ್ಥೆಗೆ ಸದಾ ಪ್ರೇರಕ ಶಕ್ತಿಯಾಗಿದೆ. ಗುರುಗಳ ಸಂದೇಶ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯುವವಾಹಿನಿಯ ಘಟಕಗಳ ಕಾರ್ಯ ಶ್ಲಾಘನೀಯ ಎಂದು ಚಲನಚಿತ್ರ ನಿರ್ದೇಶಕ, ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸ್ಮಿತೇಶ್ ಎಸ್.ಬಾರ್ಯ ತಿಳಿಸಿದರು. ಅವರು 2024 ನೇ ಜನವರಿ 21 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ಯುವವಾಹಿನಿ (ರಿ.) ಕಡಬ ಘಟಕ ಮತ್ತು ಕಡಬ ತಾಲೂಕು ವಲಯದ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ […]
Read More
21-01-2024, 1:18 PM
ಕೂಳೂರು : ವಿದ್ಯಾನಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು ಉದ್ಯೋಗ ಪಡೆದ ನಂತರ ವಿದ್ಯಾನಿಧಿ ನೀಡುವ ಮನೋಭಾವ ಬೆಳೆಸಿಕೊಂಡು, ಮುಂಬರುವ ದಿನಗಳಲ್ಲಿ ವಿದ್ಯಾ ನಿಧಿ ವಿತರಿಸುವಂತಾಗಲಿ ಎಂದು ಡಾ.ಉಜ್ವಲ್ ಯು.ಸುವರ್ಣ ಎಂದು ಹಾರೈಸಿದರು. ಅವರು ದಿನಾಂಕ 21-01-2024 ರಂದು ಕೂಳೂರು ಫಲ್ಗುಣಿ ಸಭಾಂಗಣ ನಡೆದ ಯುವವಾಹಿನಿ (ರಿ.) ಕೂಳೂರು ಘಟಕದ ಪದಗ್ರಹಣ ಹಾಗೂ ವಿದ್ಯಾನಿಧಿ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಯಶವಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ರವಿಶಂಕರ್ […]
Read More
21-01-2024, 10:00 AM
ಮೂಡುಬಿದಿರೆ : ಯಾವ ವ್ಯಕ್ತಿಯಲ್ಲಿ ಸ್ವಾಭಿಮಾನದ ಜೊತೆಗೆ ಎಲ್ಲರನ್ನೂ ಗೌರವಿಸಿ ಮಾತನಾಡುವ ಗುಣವಿದೆಯೋ ಅಂಥವರು ಒಬ್ಬ ಉತ್ತಮ ನಾಯಕ ಎನಿಸಿಕೊಳ್ಳಲು ಅರ್ಹನಾಗಿರುತ್ತಾನೆ, ನಿನ್ನೊಳಗಿನ ನಾಯಕನ ಅನ್ವೇಷಣೆ ಕಾರ್ಯ ನಿರಂತರ ನಡೆಯಬೇಕಾಗಿದೆ, ಇದು ನಾಯಕತ್ವದ ಹೆಬ್ಬಾಗಿಲು ಎಂದು ಸಂಪನ್ಮೂಲ ವ್ಯಕ್ತಿ ನಿತೇಶ್ ಬಲ್ಲಾಳ್ ರವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಅವರು ಯುವವಾಹಿನಿ (ರಿ.) ಮೂಡಬಿದರೆ ಘಟಕದ ವತಿಯಿಂದ 2024 ನೇ ಜನವರಿ 21 ರಂದು ನಡೆದ ವ್ಯಕ್ತಿತ್ವ ವಿಕಸನ ಶಿಬಿರ ನಿನ್ನೊಳಗಿನ ನಾಯಕ ಇದರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ […]
Read More
21-01-2024, 10:00 AM
ವಿಟ್ಲ : ಶ್ರೀಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 2024ನೇ ಜನವರಿ 21 ರಂದು ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಯುವವಾಹಿನಿ (ರಿ ) ವಿಟ್ಲ ಘಟಕದ ಸುಮಾರು 20ಕ್ಕೂ ಹೆಚ್ಚು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.
Read More
21-01-2024, 9:18 AM
ಯುವವಾಹಿನಿ (ರಿ.) ಶಕ್ತಿನಗರ ಘಟಕ ಮತ್ತು ನಾರಾಯಣಗುರು ಮಂದಿರ ಕುಂಟಲ್ಪಾಡಿ ಇದರ ವತಿಯಿಂದ ಗುರು ಪೂಜೆಯು ದಿನಾಂಕ 18-01-2024 ರ ಗುರುವಾರದಂದು ಸಂಜೆ 8:30ಕ್ಕೆ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕರಾದ ಜಯರಾಮ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿಯವರನ್ನು ಗೌರವಿಸಲಾಯಿತು. ಕೇಂದ್ರ ಸಮಿತಿಯ ಕೋಶಾಧಿಕಾರಿಗಳಾದ ಹರೀಶ್ ವಿ ಪಚ್ಚನಾಡಿ, ಪ್ರಚಾರ ನಿರ್ದೇಶಕರಾದ ಪೃಥ್ವಿರಾಜ್ ಎಂ ಕಂಕನಾಡಿ, ಘಟಕದ ಮಾಜಿ ಅಧ್ಯಕ್ಷರಾದ ಭಾರತಿ ಜಿ.ಅಮೀನ್, ಕೇಂದ್ರ […]
Read More
21-01-2024, 7:00 AM
ಕಂಕನಾಡಿ : ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನ ಉಜ್ಜೋಡಿ ಕಂಕನಾಡಿ ಇದರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ದೈವಸ್ಥಾನ ಹಾಗೂ ಉಜ್ಜೋಡಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವು 2024 ನೇ ಜನವರಿ 21 ರಂದು ಬೆಳಗ್ಗೆ 7 ರಿಂದ 10ರ ವರೆಗೆ ಕಂಕನಾಡಿ ಘಟಕದ ಸದಸ್ಯರ ನೇತ್ರತ್ವದಲ್ಲಿ ಜರಗಿತು. ಈ ಸ್ವಚ್ಚತಾ ಅಭಿಯಾನದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು ಹಾಗೂ ಎಲ್ಲಾ ಸದಸ್ಯರು ಭಾಗವಹಿಸಿದ್ದರು.
Read More