Yuvavahini

ಘಟಕಗಳು

ಅಸ್ಪೃಶ್ಯತೆ, ಅಂಧಶ್ರದ್ಧೆಯ ವಿರುದ್ಧದ ತ್ರಿವಿಧ ಕ್ರಾಂತಿ ಇಂದಿಗೂ ಪ್ರಸ್ತುತ: ದಿನೇಶ್ ಸುವರ್ಣ ರಾಯಿ

ಕಲ್ಲಡ್ಕ: “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಸಂದೇಶದ ಮೂಲಕ ಸಂಸ್ಕಾರಯುತ ಶಿಕ್ಷಣ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳು ಇಂದಿಗೂ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು. ಅವರು ಕಲ್ಲಡ್ಕ ಪೂರ್ಲಿಪಾಡಿಯ ಚಂದ್ರಶೇಖರ್ ಸಾಲಿಯಾನ್ ಅವರ ನಿವಾಸದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ–69’ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು.ಬ್ರಹ್ಮಶ್ರೀ ನಾರಾಯಣ ಗುರುಗಳು ಆಧ್ಯಾತ್ಮಿಕ […]

Read More

ಕಿರು ಪ್ರವಾಸ

ಸುರತ್ಕಲ್, ಮೇ 28: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಸದಸ್ಯರ ನಡುವಿನ ಒಡನಾಟ ಹಾಗೂ ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ 2026ರ ಮೇ 28ರಂದು ಒಂದು ದಿನದ ಕಿರು ಪ್ರವಾಸವನ್ನು ಮುರುಡೇಶ್ವರ ದೇವಸ್ಥಾನ, ಇಡಗುಂಜಿ ಮಹಾಗಣಪತಿ ದೇವಸ್ಥಾನ ಹಾಗೂ ಹೊನ್ನಾವರದ ಜೋಯ್ ಎಂಜಾಯ್ ವಾಟರ್ ಪಾರ್ಕ್‌ಗೆ ಆಯೋಜಿಸಲಾಗಿತ್ತು. ಈ ಪ್ರವಾಸದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯರ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 50 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 6.00 […]

Read More

ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿ ಸಮಾರೋಪ

ಮೂಡುಬಿದಿರೆ, ಮೇ 28: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ನೋಮಿ ನೆಟ್ವರ್ಕ್ ಪ್ರಾಯೋಜಕತ್ವದಲ್ಲಿ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಸಹಯೋಗದೊಂದಿಗೆ ಆಯೋಜಿಸಲಾದ 15 ದಿನಗಳ ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು 28-05-2026 ರಂದು ವಿಚೀಸ್ ಕೌಶಲ್ಯ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಅವರು, ಮಹಿಳೆಯರು ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದು […]

Read More

ಕ್ರಾಂತಿವೀರ ಮಂಜ ಬೈದ್ಯರ ಸಂಸ್ಮರಣಾ ಕಾರ್ಯಕ್ರಮ

​ಮಂಗಳೂರು, ಮೇ 27: ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ತುಳುನಾಡಿನ ಅಪ್ರತಿಮ ಕ್ರಾಂತಿವೀರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ಮೇ 27, 2026 ರಂದು ಕುಂಟಲ್ಪಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಯೋಜಿಸಲಾಯಿತು. ​ಬ್ರಿಟಿಷರ ದಾಸ್ಯದಿಂದ ಜನರನ್ನು ಮುಕ್ತಗೊಳಿಸುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಂಜ ಬೈದ್ಯರು, ತಮ್ಮ ಧೈರ್ಯಶಾಲಿ ಹೋರಾಟದ ಪರಿಣಾಮವಾಗಿ 1837 ರ ಮೇ 27 ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟು ವೀರಮರಣವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅವರ […]

Read More

ಸಂಕಷ್ಟದಲ್ಲಿದ್ದ ಯುವಕನಿಗೆ ಆರ್ಥಿಕ ನೆರವು

ಕೂಳೂರು : ಸಮಾಜಮುಖಿ ಮತ್ತು ಜನಪರ ಕಾರ್ಯಕ್ರಮಗಳ ಮೂಲಕ ಸದಾ ಮುಂಚೂಣಿಯಲ್ಲಿರುವ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮತ್ತೊಂದು ಶ್ಲಾಘನೀಯ ಸೇವಾ ಕಾರ್ಯ ನಡೆದಿದೆ. ಘಟಕದ 26ನೇ ಸೇವಾನಿಧಿ ಯೋಜನೆಯಾದ ಸಹಾಯಹಸ್ತ ಕಾರ್ಯಕ್ರಮದಡಿ, ಇತ್ತೀಚೆಗೆ ಸಂಭವಿಸಿದ ಭೀಕರ ವಾಹನ ಅಪಘಾತದಿಂದ ತೀವ್ರ ತೊಂದರೆಗೆ ಒಳಗಾಗಿದ್ದ ಕಾರ್ಕಳದ ಈದು ನಿವಾಸಿ ದಯಾನಂದ ಪೂಜಾರಿ (26) ಅವರ ಕುಟುಂಬಕ್ಕೆ ತುರ್ತು ಚಿಕಿತ್ಸಾ ವೆಚ್ಚಕ್ಕಾಗಿ ರೂ.16,000/-ಧನಸಹಾಯವನ್ನು ನೀಡಲಾಯಿತು.ದಿನಾಂಕ 27-05-2026ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಘಟಕದ ಅಧ್ಯಕ್ಷೆ ಗೀತಾ ವಸಂತ್ […]

Read More

ಬ್ರಿಟಿಷರ ಹುಟ್ಟಡಗಿಸಿದ ಇತಿಹಾಸ ಮರೆತ, ಇತಿಹಾಸ ಪುರುಷನ ಸಂಸ್ಮರಣೆ

ಕೊಲ್ಯ: ತುಳುನಾಡಿನ ಹೆಮ್ಮೆಯ ಕ್ರಾಂತಿಕಾರಿ ವೀರ, ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ಇತಿಹಾಸ ಪುರುಷ ಮಂಜ ಬೈದ್ಯರ 190ನೇ ಪುಣ್ಯತಿಥಿ ಪ್ರಯುಕ್ತ ಸಂಸ್ಮರಣಾ ಕಾರ್ಯಕ್ರಮವು ಮೇ 27ರಂದು ಇಲ್ಲಿನ ಕೊಲ್ಯ ಬಿಲ್ಲವ ಸಂಘದ ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ–ಸೋಮೇಶ್ವರ ಇದರ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಸುವರ್ಣ ಕನೀರುತೋಟ ಅವರು ದೀಪ ಪ್ರಜ್ವಲಿಸಿ, ಮಂಜ ಬೈದ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]

Read More

ಅಂಚೆ ಜನಸಂಪರ್ಕ ಅಭಿಯಾನ ಹಾಗೂ ಆಧಾರ್ ನೋಂದಣಿ–ತಿದ್ದುಪಡಿ ಶಿಬಿರ

ಬಜಪೆ, ಮೇ 26: ಯುವವಾಹಿನಿ (ರಿ.) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಹಾಗೂ ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಇವರ ಸಹಯೋಗದಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವನ್ನು 26-05-2026 ರಂದು ನಾರಾಯಣ ಗುರು ಸಮುದಾಯ ಭವನ, ಬಜಪೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ನಡೆದ ಶಿಬಿರದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಗಳೊಂದಿಗೆ ಅಂಚೆ ಕಚೇರಿಯ […]

Read More

ಸ್ನೇಹ ಪ್ರವಾಸ

ಬಜಪೆ, ಮೇ 24: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಸದಸ್ಯರ ನಡುವಿನ ಬಾಂಧವ್ಯ ವೃದ್ಧಿ ಹಾಗೂ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ತುಂಬುವ ಉದ್ದೇಶದಿಂದ 24-05-2026 ರಂದು ಒಂದು ದಿನದ ಸ್ನೇಹ ಪ್ರವಾಸವನ್ನು “ಕಿಂಗ್ ಆಫ್ ಕಿಂಗ್ಸ್” ವಾಟರ್ ಪಾರ್ಕ್‌ಗೆ ಆಯೋಜಿಸಲಾಯಿತು. ಪ್ರವಾಸದಲ್ಲಿ ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 33 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿವಿಧ ಮನರಂಜನಾ ಚಟುವಟಿಕೆಗಳು […]

Read More

ಯುವ ಸ್ನೇಹ ಸಂಭ್ರಮ – 2026

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮೇ 24, 2026ರಂದು ಆಯೋಜಿಸಲಾದ “ಯುವ ಸ್ನೇಹ ಸಂಭ್ರಮ – 2026” ಎಂಬ ಒಂದು ದಿನದ ಸ್ನೇಹ ಪ್ರವಾಸವು ಅತ್ಯಂತ ಸಂತೋಷ, ಸೌಹಾರ್ದತೆ ಹಾಗೂ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ಪ್ರವಾಸ ಆರಂಭಕ್ಕೂ ಮುನ್ನ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಕೊಡಾಜೆ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬೆಳಿಗ್ಗೆ 6.00 ಗಂಟೆಗೆ ಸದಸ್ಯರು ಪ್ರವಾಸಕ್ಕೆ ಚಾಲನೆ ನೀಡಿದರು. ಮೊದಲಿಗೆ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರ ಹಾಗೂ ಬಳಿಕ […]

Read More

ಉಚಿತ ನೋಟ್ ಪುಸ್ತಕ ವಿತರಣೆ

ವಿಟ್ಲ : ಕುಂಡಡ್ಕ ಬಿಲ್ಲವ ಸಭಾ ಭವನದಲ್ಲಿ ದಿನಾಂಕ 24/05/2026 ರಂದು ಬಿಲ್ಲವ ಸಂಘ (ರಿ.) ಕುಂಡಡ್ಕ ಬೆಳ್ಳಿ ಹಬ್ಬ ಸಮಿತಿ ಹಾಗೂ ಯುವವಾಹಿನಿ (ರಿ.) ವಿಟ್ಲ ಘಟಕದ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಜರುಗಿತು. ಸಮಾಜಮುಖಿ ಕಾರ್ಯಗಳ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದಾತ್ತ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಅವರಿಗೆ ಅಗತ್ಯವಿರುವ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಅರ್ಥಪೂರ್ಣ ಕಾರ್ಯಕ್ರಮವು ನೆರೆದಿದ್ದ ವಿದ್ಯಾರ್ಥಿಗಳು, ಪೋಷಕರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!