25-04-2026, 4:00 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆರ್ಗ್ಯಾನಿಕ್ ಕೋನ್ ತಯಾರಿಕಾ ತರಬೇತಿ ಕಾರ್ಯಗಾರವು ದಿನಾಂಕ 25-04-2026 ರಂದು ಸಂಜೆ 4 ಗಂಟೆಗೆ ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೆಹೆಂದಿ ಕೋನ್ ತಯಾರಿಸುವ ಸರಿಯಾದ ವಿಧಾನಗಳ ಕುರಿತು ತರಬೇತುದಾರರಾಗಿ ಆಗಮಿಸಿದ ಪ್ರಾರ್ಥನಾ ಅವರು ಸಮಗ್ರ ಮಾಹಿತಿ ನೀಡಿದರು. ಬಳಿಕ ಕೋನ್ ತಯಾರಿಸುವ ವಿಧಾನ ಹಾಗೂ ಕೋನ್ ಫಿಲ್ಲಿಂಗ್ ಮಾಡುವ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ತೋರಿಸಿ ಮಾರ್ಗದರ್ಶನ ನೀಡಿದರು. ಉತ್ತಮ ಹಾಗೂ ಉಪಯುಕ್ತ ತರಬೇತಿ ನೀಡಿದ ಪ್ರಾರ್ಥನಾ […]
Read More
24-04-2026, 10:00 PM
ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಕಾರ್ಯಕ್ರಮ “ಯುವಬಾಂಧವ್ಯ..2026” ದಿನಾಂಕ 25-04-2026 ನೇ ಶನಿವಾರದಂದು ಬಿಳಿಯೂರು ಗ್ರಾಮದ ಪೂಜಾರಿಪಾಲು ಹೊಸಮನೆಯಲ್ಲಿ ಸಂಜೆ 6.30ಕ್ಕೆ ನಡೆಯಿತು.ಗುರುಸ್ತುತಿಯೊಂದಿಗೆ ಪ್ರಾರಂಭವಾದ ಯುವ ಬಾಂಧವ್ಯದ ಸಭಾಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷರಾದ ಮನೋಜ್ ಸಾಲ್ಯಾನ್ ಸ್ವಾಗತಿಸಿದರು, ಘಟಕದ ಕಾರ್ಯಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಆತಿಥ್ಯ ವಹಿಸಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯರೂ , ಸಮಾಜಸೇವಕರಾದ ತನಿಯಪ್ಪ ಪೂಜಾರಿಯವರು ಯುವಬಾಂಧವ್ಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಮ್ಮ ಸಮಾಜದ ಸಂಘಟನೆಗಳು ಯಾವುದೇ ಇದ್ದರೂ ಸೇವಾ […]
Read More
23-04-2026, 1:00 PM
ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ಸಹಯೋಗದಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ ಒಂದು ವಾರದ ಉಚಿತ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಏಪ್ರಿಲ್ 23ರಂದು ಮೂಡುಬಿದಿರೆಯ ಸಮಾಜ ಮಂದಿರದ ಸ್ವರ್ಣ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಯುವವಾಹಿನಿ ಸಂಸ್ಥೆಯ ಸೇವಾ ಮನೋಭಾವ ಮತ್ತು ಕಾರ್ಯವೈಖರಿಯನ್ನು ಕೊಂಡಾಡಿದರು. ಸಂಸ್ಥೆ ಬಲಿಷ್ಠವಾಗಿ ಬೆಳೆದಿದ್ದು, ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು. ಇಂತಹ […]
Read More
22-04-2026, 9:00 PM
ದಿನಾಂಕ 22/04/2026 ರಂದು ಕುಲಶೇಖರ ಪದವುದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ, ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಸೇವೆಯನ್ನು ಸಲ್ಲಿಸಲಾಯಿತು.ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಭಾಗವಹಿಸಿ, ಭಕ್ತರಿಗೆ ವಿವಿಧ ರೀತಿಯ ಸಹಾಯ ಸಹಕಾರ ನೀಡಿದರು.
Read More
21-04-2026, 6:00 PM
ಮಂಗಳೂರು: ದಿನಾಂಕ 21/04/2026 ರಂದು ನಡೆದ ಯುವವಾಹಿನಿಯ ಕಟ್ಟಡ ಸಮಿತಿಯ ಸಭೆಯಲ್ಲಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೂತನ ಆಡಳಿತ ಕಚೇರಿ ನಿರ್ಮಾಣಕ್ಕಾಗಿ ಸಂಗ್ರಹಿಸಿದ ರೂ. 76,500/- ದೇಣಿಗೆಯನ್ನು ಮಂಗಳೂರು ಘಟಕದ ವತಿಯಿಂದ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಘಟಕದ ಹಾಗೂ ಕೇಂದ್ರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕಟ್ಟಡ ಸಮಿತಿಯ ಸಂಚಾಲಕರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
Read More
21-04-2026, 11:00 AM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರವು ದಿನಾಂಕ 21-04-2026 ರಂದು ಆಳ್ವಾಸ್ ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದ 18 ಹಾಗೂ ಪಿಯುಸಿ ವಿಭಾಗದ 8 ವಿದ್ಯಾರ್ಥಿಗಳು ಸೇರಿ ಒಟ್ಟು 26 ವಿದ್ಯಾರ್ಥಿಗಳು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ […]
Read More
20-04-2026, 9:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 20-04-2026 ರಂದು ಸಂಜೆ 5.30 ಗಂಟೆಗೆ ಶ್ರೀ ವಿಶ್ವಂಭರ ಭಜನಾ ಮಂಡಳಿ ಉರ್ವ ಸ್ಟೋರ್ ಇವರ ಸಹಯೋಗದೊಂದಿಗೆ ನಡೆಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Read More
19-04-2026, 9:00 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು.
Read More
19-04-2026, 8:55 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಪಣಂಬೂರು ಕುಳಾಯಿ ಘಟಕವು ₹25,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಪ್ರಥಮ ರನ್ನರ್ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Read More
19-04-2026, 8:50 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಉಡುಪಿ ಘಟಕವು ಆಕರ್ಷಕ ಟ್ರೋಫಿಯೊಂದಿಗೆ ದ್ವಿತೀಯ ರನ್ನರ್ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Read More