
30-08-2026, 8:00 PM
ಉಪ್ಪಿನಂಗಡಿ ಅಗಸ್ಟ್ 30 : ಮಾನವ ಕುಲಕ್ಕೆ ಜ್ಞಾನದ ಬೆಳಕನ್ನು ಪಸರಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ವಿವಿಧ ಸಮಾಜಗಳ ಮುಖಂಡರ ಸಹಭಾಗಿತ್ವದೊಂದಿಗೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಆಗಸ್ಟ್ 30ರಂದು ಉಪ್ಪಿನಂಗಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವ ಮಾನವ ಕುಲವನ್ನು ಗೌರವಿಸುವ ಹಾಗೂ ಸಮಾನತೆಯ ಸಂದೇಶ ಸಾರಿದ […]
Read More

30-08-2026, 2:00 PM
ಪಡುಬಿದ್ರಿ ಅಗಸ್ಟ್ 30 : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ಪಿ.ಕೆ. ಜಯರಾಮ್ ಪ್ರವರ್ತಿತ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಆಗಸ್ಟ್ 30ರಂದು ಪಡುಬಿದ್ರಿಯ ಸಹಕಾರ ಸಂಗಮ ಸಿ.ಎ. ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಪಿ.ಕೆ. ಮನೋಜ್ ಪೂಜಾರಿ ಅವರು, “ಯುವವಾಹಿನಿ ಸ್ಫೂರ್ತಿದಾಯಕ ಸಂಸ್ಥೆಯಾಗಿದ್ದು, ಯುವಜನರನ್ನು ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ರೂಪಿಸಲು ಶ್ರಮಿಸುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸವು ಸಣ್ಣ ವಯಸ್ಸಿನಲ್ಲಿಯೇ ಮೂಡಿಬರಬೇಕು. […]
Read More

30-08-2026, 2:00 PM
ಪಡುಬಿದ್ರೆ ಅಗಸ್ಟ್ 30 : ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2026-2027ನೇ ಸಾಲಿನ ಅಧ್ಯಕ್ಷರಾಗಿ ನಿಖಿಲ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ವರಿ ಅವಿನಾಶ್ ಆಯ್ಕೆಯಾಗಿದ್ದಾರೆ ನೂತನ ಕಾರ್ಯಕಾರಿ ಸಮಿತಿ : 2026-27 ಅಧ್ಯಕ್ಷರು : ನಿಖಿಲ್ ಪೂಜಾರಿಪ್ರಥಮ ಉಪಾಧ್ಯಕ್ಷರು : ಸುಜಾತ ಪ್ರಸಾದ್ದ್ವಿತೀಯ ಉಪಾಧ್ಯಕ್ಷರು : ಭಾಸ್ಕರ್ ಎನ್ ಅಂಚನ್ಕಾರ್ಯದರ್ಶಿ : ರಾಜೇಶ್ವರಿ ಅವಿನಾಶ್ಜೊತೆ ಕಾರ್ಯದರ್ಶಿ : ಮನೀಶ್ಕೋಶಾಧಿಕಾರಿ : ಪೂರ್ಣಿಮ ವಿಧಿತ್ ಆಂತರಿಕ ಲೆಕ್ಕ ಪರಿಶೋಧಕರು : ನಿಶ್ಮಿತಾ ಪಿ ಎಚ್ವ್ಯಕ್ತಿತ್ವ ವಿಕಸನ ನಿರ್ದೇಶಕರು : […]
Read More

29-08-2026, 9:00 PM
ಅಡ್ವೆ ಅಗಸ್ಟ್ 29 : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಪುಟಾಣಿ ಮಕ್ಕಳಿಗಾಗಿ ಆಯೋಜಿಸಿದ್ದ ‘ಮುದ್ದುಕೃಷ್ಣ ಸ್ಪರ್ಧೆ–2026’ ಕಾರ್ಯಕ್ರಮವು ಆಗಸ್ಟ್ 29ರಂದು ಅಡ್ವೆ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದಿಂದ ನಡೆಯಿತು. ಅಂಗನವಾಡಿ ಕಾರ್ಯಕರ್ತೆಯರಾದ ಲತಾ ಅಶೋಕ್ ಹಾಗೂ ಅಂಬಿಕಾ ಸುರೇಶ್ ಅವರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯುವವಾಹಿನಿ (ರಿ.) ಅಡ್ವೆ ಘಟಕದ ಕಾರ್ಯದರ್ಶಿ ಅಕ್ಷಯ ಸುವರ್ಣ, ಮಾಜಿ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಪುಟಾಣಿ […]
Read More

29-08-2026, 8:00 PM
ಕೊಲ್ಯ ಅಗಸ್ಟ್ 29 : ರೋಟರಿ ಸಮುದಾಯ ದಳ, ಕೊಲ್ಯ–ಸೋಮೇಶ್ವರದ ಆಶ್ರಯದಲ್ಲಿ, ರೋಟರಿ ಕ್ಲಬ್ ಮಂಗಳೂರು ಪೂರ್ವ, ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ಜರ್ನಿ ಥಿಯೇಟರ್ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ‘ಸಾಂಸ್ಕೃತಿಕ ಸಂಜೆ’ ಕಾರ್ಯಕ್ರಮವು ಆಗಸ್ಟ್ 29ರಂದು ಕೊಲ್ಯ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಸಂಭ್ರಮದಿಂದ ನಡೆಯಿತು. ಕರ್ನಾಟಕ ರಾಜ್ಯೋತ್ಸವ ಹಾಗೂ ಶಾಂತಲಾ ನಾಟ್ಯ ಪುರಸ್ಕೃತ ನೃತ್ಯಗುರು ಉಳ್ಳಾಲ ಮೋಹನ್ ಕುಮಾರ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ […]
Read More

29-08-2026, 4:00 PM
ಶಕ್ತಿನಗರ ಅಗಸ್ಟ್ 29 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಹಾಗೂ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಸಹಯೋಗದಲ್ಲಿ ಆಗಸ್ಟ್ 29ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜನ್ಮ ಜಯಂತಿ ಮಹೋತ್ಸವ ಹಾಗೂ ಬೃಹತ್ ಶೋಭಾಯಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗಣಹೋಮ ನೆರವೇರಿಸಿ ಮಂದಿರವನ್ನು ಶುದ್ಧೀಕರಿಸಲಾಯಿತು. ಬಳಿಕ ಗುರುಗಳ ಪಂಚಲೋಹದ ಮೂರ್ತಿಗೆ ವಿಶೇಷ […]
Read More

29-08-2026, 2:00 PM
ಮಂಗಳೂರು ಅಗಸ್ಟ್ 29 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಗಸ್ಟ್ 29ರಂದು ಬೆಳಿಗ್ಗೆ 10 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಗುರುಪೂಜೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮಹೇಶ್ ಅವರು ದೀಪ ಬೆಳಗಿಸಿ, ಗುರುಸ್ತುತಿಯೊಂದಿಗೆ ಗುರುಪೂಜೆಗೆ ಚಾಲನೆ ನೀಡಿದರು. ಬಳಿಕ ಮಹಿಳಾ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಎಸ್.ಎನ್.ಡಿ.ಪಿ., ಕೃಷ್ಣ ಭಜನಾ ಮಂದಿರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]
Read More

28-08-2026, 10:00 PM
ಪೆರ್ಮಂಕಿ ಅಗಸ್ಟ್ 28: ಯುವವಾಹಿನಿ (ರಿ.) ಪೆರ್ಮಂಕಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಗುರುಜಯಂತಿಯ ಪ್ರಯುಕ್ತ ಪೆರ್ಮಂಕಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಭಜನಾ ಕಾರ್ಯಕ್ರಮ ಹಾಗೂ ಗುರುಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಪೆರ್ಮಂಕಿ ಘಟಕದ ನಾರಾಯಣ ಗುರುತತ್ವ ಪ್ರಚಾರ ನಿರ್ದೇಶಕರಾದ ಕೀರ್ತಿರಾಜ್ ಕರಂದಾಡಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ತತ್ವಾದರ್ಶಗಳು ಹಾಗೂ ಸಮಾಜಕ್ಕೆ ಅವರು ಸಾರಿದ ಸಂದೇಶಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ […]
Read More

28-08-2026, 9:00 PM
ಅಡ್ವೆ ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಆಗಸ್ಟ್ 28ರಂದು ಸಂಜೆ ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಅಡ್ವೆಯಲ್ಲಿ ಭಜನಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ಶ್ರೀ ಬ್ರಹ್ಮ ಬೈದರ್ಕಳ ಭಜನಾ ಮಂಡಳಿ, ಯುವವಾಹಿನಿ ಸದಸ್ಯರು ಹಾಗೂ ಸಮಾಜ ಬಾಂಧವರು ಒಗ್ಗೂಡಿ ಭಜನಾ ಕಾರ್ಯಕ್ರಮವನ್ನು ನೆರವೇರಿಸಿದರು. ಗರಡಿಯನ್ನು ಹೂವಿನ ಅಲಂಕಾರದಿಂದ ಸಿಂಗರಿಸಲಾಗಿದ್ದು, ಸಂಜೆ 7 ಗಂಟೆಗೆ ಕಲಶ ಪ್ರತಿಷ್ಠಾಪನೆಯ ವಿಧಿ ವಿಧಾನಗಳೊಂದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ […]
Read More

28-08-2026, 9:00 PM
ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಗುರು ಜಯಂತಿಯ ಪ್ರಯುಕ್ತ ಆಗಸ್ಟ್ 28ರಂದು ‘ಗುರುನಮನ’ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಘಟಕದ ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗೌರವ ಸಲಹೆಗಾರರು, ಮಾಜಿ ಅಧ್ಯಕ್ಷರು, ನಿರ್ದೇಶಕರು, ಪದಾಧಿಕಾರಿಗಳು ಹಾಗೂ ಸದಸ್ಯರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಗುರು ಜಯಂತಿಯ ವಿಶೇಷ ಅಂಗವಾಗಿ ‘ಗುರು ಚಿಂತನ’ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿರುವ ಆನ್ಲೈನ್ ಭಾಷಣ ಸ್ಪರ್ಧೆಯ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು. […]
Read More