Yuvavahini

ಘಟಕಗಳು

ಮಲ್ಲಿಗೆ ಕೃಷಿಯ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯ: ಲತಾ ಹೆಗ್ಡೆ

ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ತರಬೇತಿ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ “ಉಚಿತ ಮಲ್ಲಿಗೆ ಕೃಷಿ ಮಾಹಿತಿ ಶಿಬಿರವು ದಿನಾಂಕ 17/05/2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲ್ಲಿಗೆ ಕೃಷಿ ಮಾಹಿತಿ ಮತ್ತು ಪ್ರೇರಣೆ : ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಸಮಾರಂಭ

ಯುವವಾಹಿನಿ ಉಡುಪಿ ಘಟಕದ ವತಿಯಿಂದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಮೇ 17/5/2026ರ ಭಾನುವಾರ ನಡೆಯಿತು. ಬದುಕಿನ ಅನುಭವ ಸಾಧನೆಗೆ ಪ್ರೇರಕ: ಡಾ| ಅಭಯ ಕುಮಾರ್ : ಬದುಕಿನ ಅನುಭವ ಮನುಷ್ಯನ ಸಾಧನೆಗೆ ಪ್ರೇರಕ. ಶಿಕ್ಷಣ ಮತ್ತು ಸಿಕ್ಕ ಅವಕಾಶಗಳನ್ನು ನಾವು ಬಳಸಿಕೊಳ್ಳುವುದರಿಂದ ವೃದ್ಧಿಯಾಗುತ್ತದೆ ವ್ಯಕ್ತಿತ್ವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಡಾ ಅಭಯ ಕುಮಾ‌ರ್ ಹೇಳಿದರು. ಯುವವಾಹಿನಿ ಉಡುಪಿ ಘಟಕದ ವತಿಯಿಂದ ರವಿವಾರ ಚಿಟ್ಟಾಡಿ ಲಕ್ಷ್ಮೀ ಟ್ರೇಡ್ ಸೆಂಟರ್ […]

Read More

ಸೌರಶಕ್ತಿ ಹಾಗೂ ಬ್ಯಾಂಕ್ ಸಾಲ ಸೌಲಭ್ಯ ಮಾಹಿತಿ ಕಾರ್ಯಕ್ರಮ

ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (ಬಿ.ವಿ.ಟಿ.) ಮಣಿಪಾಲ (ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ) ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಸೌರಶಕ್ತಿ ಯೋಜನೆ ಹಾಗೂ ಬ್ಯಾಂಕ್ ಸಾಲ ಸೌಲಭ್ಯಗಳ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಸಮಾಜ ಮಂದಿರದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ. ಅವರು, “ಪ್ರಸ್ತುತ ದಿನಗಳಲ್ಲಿ ಸೌರಶಕ್ತಿ ಆಧಾರಿತ ತಂತ್ರಜ್ಞಾನಗಳ ಬಳಕೆ […]

Read More

ಬಜಪೆ ಶನೀಶ್ವರ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ ಹಾಗೂ ಸ್ವಯಂಸೇವೆ

ಬಜಪೆ : ಶನೀಶ್ವರ ಜಯಂತಿ ಪ್ರಯುಕ್ತ ದಿನಾಂಕ 16.05.2026 ರಂದು ಶ್ರೀ ಶನೀಶ್ವರ ದೇವಸ್ಥಾನದಲ್ಲಿ ವಿಶೇಷ ಭಜನಾ ಸಂಕೀರ್ತನೆ ಹಾಗೂ ಸ್ವಯಂಸೇವಾ ಕಾರ್ಯಕ್ರಮಗಳು ಅತ್ಯಂತ ಭಕ್ತಿ-ಭಾವದಿಂದ ಜರಗಿದವು. ಬೆಳಿಗ್ಗೆ 6.30 ರಿಂದ 8.00 ಗಂಟೆಯವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಹಾಗೂ ಯುವವಾಹಿನಿ ಬಜಪೆ ಘಟಕದ ಸದಸ್ಯರ ಜಂಟಿ ಆಶ್ರಯದಲ್ಲಿ ಸುಶ್ರಾವ್ಯ ಭಜನಾ ಸಂಕೀರ್ತನೆ ಭಕ್ತಿಪೂರ್ವಕವಾಗಿ ನೆರವೇರಿತು. ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡ ಸದಸ್ಯರು ಕ್ಷೇತ್ರದಲ್ಲಿ ಮುಂಜಾನೆಯಿಂದ ಸಂಜೆಯವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ ವಿಶೇಷ ಪೂಜಾ […]

Read More

‘ಶಿವಗಿರಿ ಕ್ಷೇತ್ರ ದರ್ಶನ’

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ: 14-05-2026 ರಿಂದ 16-05-2026 ರವರೆಗೆ ಆಯೋಜಿಸಲಾಗಿದ್ದ ಮೂರು ದಿನಗಳ ‘ಶಿವಗಿರಿ ಯಾತ್ರೆ’ಯು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಆಧ್ಯಾತ್ಮಿಕ ಅನುಭೂತಿ ನೀಡಿದ ಯಾತ್ರೆ : ಘಟಕದ ಪ್ರವಾಸ ಸಂಚಾಲಕರಾದ ಸದಾನಂದ ಪೂಜಾರಿ ಕುಳಾಯಿ ಅವರು ಯಾತ್ರಾರ್ಥಿಗಳಿಗೆ ಶಿವಗಿರಿ ಕ್ಷೇತ್ರದ ಇತಿಹಾಸ, ಮಹಿಮೆ ಮತ್ತು ಮಹತ್ವವನ್ನು ಮನವರಿಕೆ ಮಾಡಿಕೊಡುತ್ತಾ ಸುಸೂತ್ರವಾಗಿ ಕ್ಷೇತ್ರ ದರ್ಶನ ಮಾಡಿಸಿದರು. ಈ ಆಧ್ಯಾತ್ಮಿಕ ಪ್ರವಾಸದಲ್ಲಿ ಒಟ್ಟು 53 ಹಿರಿಯರು ಹಾಗೂ 7 ಮಕ್ಕಳು ಸೇರಿದಂತೆ […]

Read More

ಯುವವಾಹಿನಿ ಕೂಳೂರು ಘಟಕದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮ

ಕೂಳೂರು, ಮೇ 15: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮವು 15-05-2026 ರಂದು ಘಟಕದ ಮಾರ್ಗದರ್ಶಕರಾದ ಜಯಾನಂದ ಅಮೀನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನೆರವೇರಿತು.ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಕ್ತಿಗೀತೆಗಳ ಮೂಲಕ ಆಧ್ಯಾತ್ಮಿಕ ವಾತಾವರಣ ನಿರ್ಮಿಸಿದರು. ಈ ಸಂದರ್ಭದಲ್ಲಿ ಆತಿಥ್ಯ ವಹಿಸಿದ್ದ ಜಯಾನಂದ ಅಮೀನ್ ದಂಪತಿಗಳನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಅವರು ಶಾಲು ಹೊದಿಸಿ, […]

Read More

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಯುವವಾಹಿನಿ ಸಂಸ್ಥೆಯಿಂದ ಕೃತಜ್ಞತಾ ಪತ್ರ ಸಮರ್ಪಣೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಯುವವಾಹಿನಿ ಸಂಸ್ಥೆಯ ನಿಯೋಗ ಇತ್ತೀಚೆಗೆ ಭೇಟಿಯಾಗಿ, ಸಂಸ್ಥೆಯ ವತಿಯಿಂದ ಗೌರವಪೂರ್ವಕ ಕೃತಜ್ಞತಾ ಪತ್ರವನ್ನು ಹಸ್ತಾಂತರಿಸಿದರು. ​ಯುವವಾಹಿನಿ ಸಂಸ್ಥೆಯು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದ ‘ಡೆನ್ನಾನ ಡೆನ್ನನ’ ಸಾಂಸ್ಕೃತಿಕ ಹಬ್ಬದಲ್ಲಿ ಸಂಸದರು ಸಕ್ರಿಯವಾಗಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಆರ್ಥಿಕ ಸಹಕಾರವನ್ನು ನೀಡಿದ್ದರು. ಅವರ ಈ ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಈ ಭೇಟಿಯನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಹೆಮ್ಮೆಯ ನಡೆ […]

Read More

ಗುರು ಸ್ಮರಣೆ-ಗುರು ಭಜನೆ

ಕೋಟೆಕಾರ್: ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ದಿನಾಂಕ 14-05-2026 ನೇ ಗುರುವಾರ ಸಾಯಂಕಾಲ 7 ಗಂಟೆಗೆ, ನೆತ್ತಿಲ ಕೋಟೆಕಾರಿನಲ್ಲಿರುವ ಘಟಕದ ಕಾರ್ಯದರ್ಶಿ ಸೌಮ್ಯ ಯೋಗೀಶ್ ರವರ ಗೃಹದಲ್ಲಿ ಗುರು ಸ್ಮರಣೆ-ಗುರು ಭಜನೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಯೋಗೀಶ್ ಕೋಟೆಕಾರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಭಕ್ತಿಪೂರ್ವಕ ಚಾಲನೆ ನೀಡಿದರು. ಘಟಕದ ಸದಸ್ಯರಿಂದ ಸುಮಧುರ ಗುರು ಭಜನಾ ಸಂಕೀರ್ತನೆ ನೆರವೇರಿತು.ಭಜನೆಯ ಬಳಿಕ ಗುರುಗಳಿಗೆ ಮಹಾಪೂಜೆ ನಡೆದು, ಕಾಫಿ ತೀರ್ಥ ಪ್ರಸಾದ ವಿತರಿಸಲಾಯಿತು. ಘಟಕದ ಮಾಜಿ […]

Read More

ಕ್ಯೂಆರ್ ಕೋಡ್ ಆಧಾರಿತ ಶಿಕ್ಷಣ ಸಂಪನ್ಮೂಲಗಳ ಪರಿಚಯ

ಕಂಕನಾಡಿ ಮೇ 14 : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಮೇ 14, 2026ರಂದು ನಡೆದ ಸಭೆಯಲ್ಲಿ ಘಟಕದ ಸದಸ್ಯರಾದ ಮೋಹನ್ ಅಮೀನ್ ಅವರು ಕ್ಯೂಆರ್ ಕೋಡ್ ಆಧಾರಿತ ಶಿಕ್ಷಣ ಸಂಪನ್ಮೂಲಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅವರು ಭಗವದ್ಗೀತೆಯನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ದೃಶ್ಯ-ಶ್ರವ್ಯ ಮಾಧ್ಯಮದ ಸಹಾಯದಿಂದ ಸುಲಭವಾಗಿ ಅಧ್ಯಯನ ಮಾಡಬಹುದಾದ ಪುಸ್ತಕವನ್ನು ಪರಿಚಯಿಸಿದರು. ಅಲ್ಲದೆ, ಎಜುಟೆಕ್ ಸಂಸ್ಥೆ ಪ್ರಕಟಿಸಿರುವ 8ನೇ ಹಾಗೂ 9ನೇ ತರಗತಿಯ ಗಣಿತ ಮತ್ತು ವಿಜ್ಞಾನ […]

Read More

ಗುರು ಸತ್ಸಂಗ ಹಾಗೂ ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಆಮಂತ್ರಣ ಬಿಡುಗಡೆ

ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ‘ಗುರು ಸತ್ಸಂಗ’ ಕಾರ್ಯಕ್ರಮವು ಬಲಯಿಪಾದೆಯ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಪ್ರೀತ್ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಜರುಗಿತು. ದೀಪ ಪ್ರಜ್ವಲನೆ ಮತ್ತು ಗುರು ಸಂದೇಶ:ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ಅವರು ಜಂಟಿಯಾಗಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಭಕ್ತಿಪೂರ್ವಕ ‘ಗುರು ಸತ್ಸಂಗ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!