Yuvavahini

ಘಟಕಗಳು

ವೈದ್ಯರಿಗೆ ಯುವವಾಹಿನಿಯಿಂದ ಗೌರವಾರ್ಪಣೆ

ಉಪ್ಪಿನಂಗಡಿ, ಜುಲೈ 16: ವಿಶ್ವ ವೈದ್ಯರ ದಿನಾಚರಣೆ-2026ರ ಅಂಗವಾಗಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಾ. ರಾಜಾರಾಮ್ ಕೆ.ಬಿ., ಡಾ. ರಮ್ಯಾ ರಾಜಾರಾಮ್, ಡಾ. ಎಂ.ಆರ್. ಶೆಣೈ, ಡಾ. ಕೆ.ಜಿ. ಭಟ್, ಡಾ. ಎಂ.ಎನ್. ಭಟ್, ಡಾ. ರಘು, ಡಾ. ಸದಾನಂದ ಕುಂದರ್, ಡಾ. ಆಶಿತ್ ಎಂ.ವಿ., ಡಾ. ಶ್ವೇತಾ ಆಶಿತ್, […]

Read More

ಮಂಜ ಬೈದ್ಯರ ಹೆಸರನ್ನು ಉಪ್ಪಿನಂಗಡಿ ಸರ್ಕಲ್‌ಗೆ ನಾಮಕರಣ ಮಾಡಲು ಯುವವಾಹಿನಿ ಮನವಿ

ಉಪ್ಪಿನಂಗಡಿ, ಜುಲೈ 16: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ, ಉಪ್ಪಿನಂಗಡಿ ಸರ್ಕಲ್‌ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯ ಅವರ ಹೆಸರನ್ನು ನಾಮಕರಣ ಮಾಡುವುದರ ಜೊತೆಗೆ, ಅವರ ಪ್ರತಿಮೆಯನ್ನು ನಿರ್ಮಿಸಿ ಮುಂದಿನ ಪೀಳಿಗೆಗೆ ಅವರ ದೇಶಸೇವೆ ಹಾಗೂ ತ್ಯಾಗವನ್ನು ಶಾಶ್ವತವಾಗಿ ಪರಿಚಯಿಸುವಂತೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ವಿಷಯವನ್ನು ಸಕಾರಾತ್ಮಕವಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ […]

Read More

ಪ್ರತಿ ಮನೆಯಲ್ಲಿ ಒಂದು ಗಿಡ ನೆಡುವ ಸಂಕಲ್ಪ

ಬಂಟ್ವಾಳ, ಜುಲೈ 16: ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಯುವವಾಹಿನಿ (ರಿ.) ಬಂಟ್ವಾಳ ಘಟಕವು ತನ್ನ ನೂತನ ಕಾರ್ಯಕಾರಿ ಸಮಿತಿಯ ವಿಶೇಷ ಯೋಜನೆಯಾಗಿ “ಮನೆ ಮನೆ ಹಸಿರು ಅಭಿಯಾನ”ಕ್ಕೆ ಚಾಲನೆ ನೀಡಿದೆ. ಘಟಕದ ಜಂಟಿ ಸಭೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಯುವವಾಹಿನಿಯ “ಹಸಿರುಯಾನ” ಯೋಜನೆಯಡಿ ಘಟಕದ ವ್ಯಾಪ್ತಿಯ ಪ್ರತಿಯೊಂದು ಸದಸ್ಯರ ಮನೆಯಲ್ಲಿ ಕನಿಷ್ಠ ಒಂದು ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸುವ ಸಂಕಲ್ಪ ಕೈಗೊಳ್ಳಲಾಯಿತು. ಅಭಿಯಾನಕ್ಕೆ ಯುವವಾಹಿನಿ (ರಿ.) ಬಂಟ್ವಾಳ […]

Read More

ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ

ಕೆಂಜಾರು–ಕರಂಬಾರು, ಜುಲೈ 16: ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ವನಮಹೋತ್ಸವ–2026 ಕಾರ್ಯಕ್ರಮವು ಕರಂಬಾರು ಪರಿಸರದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷ ಮಿತ್ರದಾಸ್ ಉದ್ಘಾಟಿಸಿ ಮಾತನಾಡಿ, ಗಿಡ-ಮರಗಳನ್ನು ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು. ಪರಿಸರ ಸಂರಕ್ಷಣೆಗೆ ಯುವವಾಹಿನಿ ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಶ್ರೀ ದೇವಿ ಭಜನಾ ಮಂದಿರದ ಮಾಜಿ ಅಧ್ಯಕ್ಷ ಶೇಷಪ್ಪ ಅಮೀನ್, ಕಾರ್ಯದರ್ಶಿ […]

Read More

ಗಿಡ ನೆಟ್ಟು ಪೋಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಕರುಣಾಕರ್ ಪೂಜಾರಿ

ಮೂಲ್ಕಿ, ಜುಲೈ 16: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ವನಮಹೋತ್ಸವದಂತಹ ಕಾರ್ಯಕ್ರಮಗಳ ಮೂಲಕ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಕೊಯ್ಯರ್ ಫ್ರೆಂಡ್ಸ್ ಅಧ್ಯಕ್ಷ ಕರುಣಾಕರ್ ಪೂಜಾರಿ ಹೇಳಿದರು. ಅವರು ಯುವವಾಹಿನಿ (ರಿ.) ಮೂಲ್ಕಿ ಘಟಕದ ವತಿಯಿಂದ ಬಬ್ಬು ಸ್ವಾಮಿ ದೈವಸ್ಥಾನದ ಪರಿಸರದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಬ್ಬು ಸ್ವಾಮಿ ದೈವಸ್ಥಾನದ ಅರ್ಚಕ ಗಣೇಶ್ ಕೊಯ್ಯರ್ ಮಾತನಾಡಿ, ಯುವವಾಹಿನಿ ಮೂಲ್ಕಿ ಘಟಕವು ದೈವಸ್ಥಾನದ ಪರಿಸರದಲ್ಲಿ ವನಮಹೋತ್ಸವ […]

Read More

ಯುವವಾಹಿನಿ ಕ್ರೀಡೋತ್ಸವದ ಯಶಸ್ವಿ ಆಯೋಜನೆಗೆ ಆಳ್ವಾಸ್ ಫೌಂಡೇಶನ್ ಸಹಕಾರದ ಭರವಸೆ

ಮೂಡುಬಿದಿರೆ, ಜುಲೈ 16: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ಯಶಸ್ವಿ ಆಯೋಜನೆ ಕುರಿತು ಸಮಾಲೋಚನಾ ಸಭೆ ಇಂದು ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರನ್ನು ಭೇಟಿ ಮಾಡಿ ನಡೆಸಲಾಯಿತು. ಸಭೆಯಲ್ಲಿ ಕ್ರೀಡೋತ್ಸವದ ರೂಪುರೇಷೆ, ವ್ಯವಸ್ಥಾಪನೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಚರ್ಚಿಸಿ, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಆಳ್ವಾಸ್ ಫೌಂಡೇಶನ್‌ನ ಸಹಕಾರ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ […]

Read More

ಯುವವಾಹಿನಿ ಮಾಣಿ ಘಟಕದಿಂದ ₹75 ಸಾವಿರ ಧನಸಹಾಯ

ಮಾಣಿ, ಜುಲೈ 15: ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕರಾದ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ₹75,000 ಧನಸಹಾಯ ಹಸ್ತಾಂತರಿಸಲಾಯಿತು. ಘಟಕದ ಸದಸ್ಯರ ಸ್ವಯಂಪ್ರೇರಿತ ಸಹಕಾರದಿಂದ ಈ ಧನಸಹಾಯವನ್ನು ಸಂಗ್ರಹಿಸಿ, ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ, ಸಂಕಷ್ಟದ […]

Read More

ಉಚಿತ ನೇತ್ರ ತಪಾಸಣೆ ಮತ್ತು ಪೊರೆ ತಪಾಸಣಾ ಶಿಬಿರ

ಅಜೆಕಾರು, ಜು. 15: ಯುವವಾಹಿನಿ (ರಿ.) ಕಾರ್ಕಳ ಘಟಕವು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಜೆಕಾರು ಶ್ರೀರಾಮ ಮಂದಿರದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಪೊರೆ (ಕಣ್ಣಿನ ಮುತ್ತು) ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಂಡ ಸಾರ್ವಜನಿಕರಿಗೆ ಸಮಗ್ರ ನೇತ್ರ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಿತು. ಕಣ್ಣಿನ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ […]

Read More

ಧೂಮಪಾನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಪುಂಡಲೀಕ ಲಕಾಟಿ

ಮಂಗಳೂರು, ಜು.14: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ “ಧೂಮಪಾನ ನಿಷೇಧ ಮತ್ತು ಕಾನೂನು ನಿಯಮ” ಕುರಿತು ಜಾಗೃತಿ ಕಾರ್ಯಕ್ರಮವು ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗುರುಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪುಂಡಲೀಕ ಲಕಾಟಿ ಅವರು ಧೂಮಪಾನ ಮತ್ತು ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಧೂಮಪಾನದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

“ಎಲ್ಲಿ ನಾಮವಿದೆಯೋ ಅಲ್ಲಿ ನಾರಾಯಣನಿದ್ದಾನೆ. ಎಲ್ಲಿ ಭಜನೆಯಿದೆಯೋ ಅಲ್ಲಿ ಶಾಂತಿಯಿದೆ. ಮಂಗಳೂರು ಜುಲೈ 13 : ದಿನಾಂಕ: 13-07-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಪ್ರಥಮ್ ಮತ್ತು ಬಳಗ ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!