Yuvavahini

ಘಟಕಗಳು

ಸಹಾಯ ಹಸ್ತದ ಮೂಲಕ ₹75 ಸಾವಿರ ಧನಸಹಾಯ ಹಸ್ತಾಂತರ

ಮಂಗಳೂರು, ಜು. 13: ಯುವವಾಹಿನಿ (ರಿ.) ಮಂಗಳೂರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ದಿವಂಗತ ಅಶೋಕ್ ಅಂಚನ್ ಕೋಡಿಕಲ್ ಅವರ ಕುಟುಂಬಕ್ಕೆ ಯುವವಾಹಿನಿ (ರಿ.) ಮಂಗಳೂರು ಘಟಕವು ಮಾನವೀಯ ಕಾಳಜಿಯಿಂದ ₹75,000/- ಧನಸಹಾಯವನ್ನು ಹಸ್ತಾಂತರಿಸಿತು. ಅಶೋಕ್ ಅಂಚನ್ ಕೋಡಿಕಲ್ ಅವರು ದಿನಾಂಕ 30-06-2026ರಂದು ದೈವಾದೀನರಾಗಿದ್ದರು. ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವುದನ್ನು ಮನಗಂಡ ಯುವವಾಹಿನಿ (ರಿ.) ಮಂಗಳೂರು ಘಟಕವು, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಹಾಗೂ ವಿವಿಧ ಘಟಕಗಳ ಸದಸ್ಯರ ಸಹಕಾರದೊಂದಿಗೆ ಧನಸಹಾಯವನ್ನು ಸಂಗ್ರಹಿಸಿತು. ದಿನಾಂಕ 13-07-2026ರಂದು […]

Read More

ಯುವವಾಹಿನಿಯಿಂದ ಸಂಸ್ಕೃತಿ–ಕ್ರೀಡೆಯ ಸಮ್ಮಿಲನ

ಅಡ್ವೆ, ಜು.12: ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಘಟಕದ ಸದಸ್ಯರು ಹಾಗೂ ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗಾಗಿ ಅಡ್ವೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ದೇವರ ಗದ್ದೆಯಲ್ಲಿ ‘ಕೆಸರ್‌ಡೊಂಜಿ ದಿನ-2026’ ಕಾರ್ಯಕ್ರಮವು ಭಾನುವಾರ ಬೆಳಗ್ಗಿನಿಂದ ಸಂಜೆಯವರೆಗೆ ಅತ್ಯಂತ ಸಂಭ್ರಮ, ಸಡಗರ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಗಂಧಪ್ರಸಾದ, ತೀರ್ಥ, ಸಿಯಾಳ, ಹಾಲು ಸಮರ್ಪಣೆ ಹಾಗೂ ತೆಂಗಿನಕಾಯಿ ಒಡೆಯುವ […]

Read More

ಅಧ್ಯಕ್ಷರಾಗಿ ಲೀಲಾವತಿ ಕೆ ಆಯ್ಕೆ

ಬೆಳ್ತಂಗಡಿ ಜುಲೈ 12 : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಲೀಲಾವತಿ ಕೆ ಆಯ್ಕೆಯಾಗಿದ್ದಾರೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿಕೆ ಆಯ್ಕೆಯಾದರು

Read More

ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

ಉಪ್ಪಿನಂಗಡಿ, ಜು. 12: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಉಪಯುಕ್ತವಾಗಿದ್ದು, […]

Read More

ಫ್ಯಾಬ್ರಿಕ್ ಬ್ಯಾಗ್ ತರಬೇತಿ ಮಹಿಳೆಯರ ಸ್ವಾವಲಂಬನೆಗೆ ನೆರವಾಗಲಿ: ಕಸ್ತೂರಿ ಮಹೇಶ್

ಮಂಗಳೂರು, ಜುಲೈ 11: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಹಾಗೂ ಭಾರತಿ ಟ್ರೈನಿಂಗ್ ಸೆಂಟರ್‌ನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಐದು ದಿನಗಳ ಫ್ಯಾಬ್ರಿಕ್ ಬ್ಯಾಗ್ ತರಬೇತಿಯ ಸಮಾರೋಪ ಸಮಾರಂಭವು ಜುಲೈ 11ರಂದು ಕೊಟ್ಟಾರ ಚೌಕಿಯ ಭಾರತಿ ಟ್ರೈನಿಂಗ್ ಸೆಂಟರ್‌ನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್, ಯಾವುದೇ ವಿಷಯವನ್ನು ಕಲಿಯಲು ಮತ್ತು ಸಾಧಿಸಲು ಆಸಕ್ತಿ ಅತ್ಯಗತ್ಯ. ಆರಂಭದಲ್ಲಿ ಹಿಂಜರಿಕೆ ಸಹಜವಾದರೂ ಧೈರ್ಯದಿಂದ ಮುಂದುವರಿದರೆ ಯಶಸ್ಸು […]

Read More

ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ

ಮೂಡುಬಿದಿರೆ, ಜುಲೈ 11: ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಮಾನಸಿಕ ಆರೋಗ್ಯದ ಮಹತ್ವ ತಿಳಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ-ಮಾದಕ ವಸ್ತು ವ್ಯಸನ ಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಹಾಗೂ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿ ಮನೋಹಿತ” ಆರೋಗ್ಯ ಮಾಹಿತಿ ಕಾರ್ಯಾಗಾರ ಜ್ಯೋತಿನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಆಪೋಲೀನೋ […]

Read More

ಪ್ರಕೃತಿ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ದಿನೇಶ್ ಸುವರ್ಣ ರಾಯಿ

ಕಲ್ಲಡ್ಕ, ಜುಲೈ 9: “ಪ್ರಕೃತಿಯ ನಾಶ ಜಗತ್ತಿನ ಸರ್ವನಾಶ” ಎಂಬುದು ಬ್ರಹ್ಮಶ್ರೀ ನಾರಾಯಣ ಗುರುಗಳ ಪರಿಸರ ಸಂರಕ್ಷಣೆಯ ಸಂದೇಶದ ಸಾರವಾಗಿದ್ದು, ಪ್ರಕೃತಿಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹೇಳಿದರು. ಅವರು ಜುಲೈ 9ರಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ‘ಗುರುತತ್ವವಾಹಿನಿ’ 70ನೇ ಮಾಲಿಕೆ ಕಾರ್ಯಕ್ರಮದಲ್ಲಿ, ವೀರಕಂಭ ಗ್ರಾಮದ ಗೋಳಿಮಾರು ಜನಾರ್ದನ ಪೂಜಾರಿಯವರ ನೂತನ ಗೃಹ “ಬ್ರಹ್ಮಶ್ರೀ” ನಿವಾಸದಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು. […]

Read More

ಪಂಚಾಯತ್ ಸಿಬ್ಬಂದಿಗೆ ಛತ್ರಿ, ರೇನ್‌ಕೋಟ್ ವಿತರಣೆ

ಕಾರ್ಕಳ, ಜುಲೈ 9: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಕೆರ್ವಾಶೆ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಎಸ್‌ಎಲ್‌ಆರ್‌ಎಂ (SLRM) ಮತ್ತು ವಿಆರ್‌ಡಬ್ಲ್ಯು (VRW) ಸಿಬ್ಬಂದಿಗಳಿಗೆ ಮಳೆಗಾಲದ ಸೇವಾ ಕಾರ್ಯವನ್ನು ಸುಗಮಗೊಳಿಸುವ ಉದ್ದೇಶದಿಂದ ಛತ್ರಿ ಹಾಗೂ ರೇನ್‌ಕೋಟ್‌ಗಳನ್ನು ವಿತರಿಸಲಾಯಿತು. ಕೆರ್ವಾಶೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜುಲೈ 9ರಂದು ನಡೆದ ಸರಳ ಸಮಾರಂಭದಲ್ಲಿ ಯುವವಾಹಿನಿ (ರಿ.) ಕಾರ್ಕಳ ಘಟಕದ ಅಧ್ಯಕ್ಷ ಪ್ರಕಾಶ್ ಪೂಜಾರಿ ಕೆರ್ವಾಶೆ, ಕಾರ್ಯದರ್ಶಿ ರಾಕೇಶ್ ಅಮೀನ್, ಕ್ರೀಡಾ ನಿರ್ದೇಶಕ ಪ್ರಶಾಂತ್ ಬಜಗೋಳಿ, ಜೊತೆ ಕಾರ್ಯದರ್ಶಿ ಶ್ರೇಯಸ್, […]

Read More

ಗುರು ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಮೋಹನ್ ಮಾಡೂರು

ಕೊಲ್ಯ, ಜುಲೈ 9: ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಶ್ರೀ ದುರ್ಗಾಪರಮೇಶ್ವರ ದೇವಸ್ಥಾನ, ಕುಂಪಲದಲ್ಲಿ ಗುರುವಾರ ಸಂಜೆ ನಡೆದ “ಗುರು ಆರಾಧನೆ – ಗುರು ಸಂದೇಶ” ಕಾರ್ಯಕ್ರಮವು ಭಕ್ತಿಭಾವದಿಂದ ಹಾಗೂ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಭವಾನಿ ಶಂಕರ್ ದೀಪ ಪ್ರಜ್ವಲನೆಗೈದು ಉದ್ಘಾಟಿಸಿದರು. ಬಳಿಕ ಯುವವಾಹಿನಿ ಘಟಕದ ಸದಸ್ಯರು ಹಾಗೂ ಕ್ಷೇತ್ರದ ಭಕ್ತರಿಂದ ಸುಮಧುರ ಗುರು ಭಜನಾ ಸಂಕೀರ್ತನೆ ನಡೆಯಿತು. ಭಜನೆಯ ನಂತರ ಕ್ಷೇತ್ರದ ಪ್ರಧಾನ ದೇವರಿಗೆ ಮಹಾಪೂಜೆ ನೆರವೇರಿಸಿ, ಶ್ರೀ ನಾರಾಯಣ […]

Read More

‘ಯುವ ಆರೋಗ್ಯ ಸ್ಪರ್ಶ’ ಯೋಜನೆಯಡಿ ಮಾನವೀಯ ನೆರವು

ಮಾಣಿ, ಜುಲೈ 8: ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಯುವವಾಹಿನಿ (ರಿ.) ಮಾಣಿ ಘಟಕವು ತನ್ನ ‘ಯುವ ಆರೋಗ್ಯ ಸ್ಪರ್ಶ’ ಯೋಜನೆಯಡಿ ಘಟಕದ ಸಕ್ರಿಯ ಸದಸ್ಯ ಯಶೋಧರ ಕೊಡಾಜೆ (ಮಾಣಿ ಗ್ರಾಮದ ದೈವಪಾತ್ರಿ) ಅವರ ಚಿಕಿತ್ಸೆಗೆ ₹50,000 ಧನಸಹಾಯವನ್ನು ವಿತರಿಸಿತು. ಯಶೋಧರ ಕೊಡಾಜೆ ಅವರು ಎಲುಬುಗಳಿಗೆ ಸಂಬಂಧಿಸಿದ ಅಪರೂಪದ ಆಲ್ಕಾಪ್ಟೋನೂರಿಯಾ (Alkaptonuria) ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಹಲವು ವರ್ಷಗಳಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!