06-07-2026, 10:00 PM
ಮಾಣಿ, ಜೂನ್: ಯುವವಾಹಿನಿ (ರಿ.) ಮಾಣಿ ಘಟಕದ ‘ಯುವ ಸೇವಾ ಸ್ಪರ್ಶ’ ಯೋಜನೆಯಡಿ ಗೋಳಿಕಟ್ಟೆಯ ನಿವಾಸಿಗಳಾದ ಆನಂದ ಹಾಗೂ ಲೀಲಾ ದಂಪತಿಗಳಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಅನಾರೋಗ್ಯದಿಂದ ಬಳಲುತ್ತಿರುವ ಲೀಲಾ ಅವರು ನಡೆಯಲೂ ಕಷ್ಟಪಡುತ್ತಿರುವುದಲ್ಲದೆ ಆನಂದ ಅವರ ಆರೋಗ್ಯವೂ ಉತ್ತಮವಾಗಿಲ್ಲ. ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಈ ದಂಪತಿಗಳಿಗೆ ಮಾನವೀಯ ಕಾಳಜಿಯಿಂದ ಯುವವಾಹಿನಿ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಿಸಿ ನೆರವು ನೀಡಲಾಯಿತು. ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ಅವರ ಅಧ್ಯಕ್ಷತೆಯಲ್ಲಿ ಹಾಗೂ […]
Read More
06-07-2026, 8:00 PM
ಮಂಗಳೂರು, ಜುಲೈ 6: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಜುಲೈ 6ರಂದು ಸಂಜೆ ಭಜನಾ ಸೇವೆ ಭಕ್ತಿಭಾವದಿಂದ ನೆರವೇರಿತು. ಈ ವಾರದ ಭಜನಾ ಸೇವೆಯನ್ನು ಭಜಕ ವೃಂದ ಕೋಡಿಕಲ್ ತಂಡವು ನಡೆಸಿಕೊಟ್ಟು, ಶ್ರೀ ಗೋಕರ್ಣನಾಥ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚರಣಕ್ಕೆ ಭಕ್ತಿ ಸಂಗೀತವನ್ನು ಸಮರ್ಪಿಸಿತು. ಭಜನಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಕ್ತಿಮಯ ವಾತಾವರಣಕ್ಕೆ ಸಾಕ್ಷಿಯಾದರು. […]
Read More
05-07-2026, 9:00 PM
ಕೂಳೂರು, ಜುಲೈ 5: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ಜುಲೈ 5ರಂದು ಉಡುಪಿ ಜಿಲ್ಲೆಯ ವಿವಿಧ ಪ್ರಸಿದ್ಧ ದೇವಾಲಯಗಳಿಗೆ ಆಧ್ಯಾತ್ಮಿಕ ಕ್ಷೇತ್ರದರ್ಶನ ಯಾತ್ರೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಳಿಗ್ಗೆ ಕೂಳೂರಿನಿಂದ ನಾಲ್ಕು ಬಸ್‌ಗಳಲ್ಲಿ ಸುಮಾರು 200ಕ್ಕೂ ಅಧಿಕ ಸದಸ್ಯರು ವಿವಿಧ ತಂಡಗಳಾಗಿ ಹೊರಟು ವೇಣುಗೋಪಾಲ ದೇವಸ್ಥಾನ (ಮಣಿಪಾಲ), ಗುಡ್ಡಟ್ಟು ಶ್ರೀ ವಿನಾಯಕ ದೇವಸ್ಥಾನ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ವೀರಕಲ್ಲುಟಿಗ ದೇವಸ್ಥಾನ, ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮಿ […]
Read More
05-07-2026, 8:00 PM
ಗ್ರಾಮಚಾವಡಿ-ಕೊಣಾಜೆ, ಜುಲೈ 5: ಯುವವಾಹಿನಿ (ರಿ.) ಗ್ರಾಮಚಾವಡಿ-ಕೊಣಾಜೆ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜುಲೈ 5ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಚಾವಡಿ-ಕೊಣಾಜೆಯ ಅಧ್ಯಕ್ಷರಾದ ವಿಜೇತ್ ಪಜೀರು ಉದ್ಘಾಟಿಸಿದರು. ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಬಾಬು ಬಂಗೇರ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ […]
Read More
05-07-2026, 4:13 PM
ಗ್ರಾಮಚಾವಡಿ ಕೊಣಾಜೆ ಜುಲೈ 5 : ಯುವವಾಹಿನಿ(ರಿ) ಗ್ರಾಮ ಚಾವಡಿ ಕೊಣಾಜೆ ಘಟಕದ 2026-27ನೇ ಸಾಲಿನಅಧ್ಯಕ್ಷರಾಗಿ ಮುರಳೀಧರ ಕೋಣಾಜೆ ಆಯ್ಕೆಯಾಗಿದ್ದರೆ ಕಾರ್ಯದರ್ಶಿಯಾಗಿ ಆಶಾ ಪ್ರವೀಣ್ ಆಯ್ಕೆಯಾದರು
Read More
30-06-2026, 7:00 PM
ಮಂಗಳೂರು, ಜೂನ್ 30: ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಸಿಡಾಕ್ ಮಂಗಳೂರು ವತಿಯಿಂದ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಸಹಕಾರದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಕೌಶಲ್ಯ ಮಿಷನ್, ಯುವವಾಹಿನಿ (ರಿ.) ಸುರತ್ಕಲ್ ಘಟಕ, ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಹಾಗೂ ಮಹಿಳಾ ಮಂಡಲ (ರಿ.) ಕುಳಾಯಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಒಂದು ದಿನದ ಉದ್ಯಮಶೀಲತಾ ತರಬೇತಿ ಶಿಬಿರ ಕುಳಾಯಿಯ ಮಹಿಳಾ ಮಂಡಲ ಸಭಾಂಗಣದಲ್ಲಿ […]
Read More
30-06-2026, 3:00 PM
ಮಂಗಳೂರು, ಜೂನ್ 30: ಮಹಿಳೆಯರು ಸ್ವಂತ ಉದ್ಯಮ ಆರಂಭಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ದಿಟ್ಟ ನಿರ್ಧಾರ ಮತ್ತು ಆತ್ಮವಿಶ್ವಾಸದಿಂದ ಯಾವುದೇ ಕ್ಷೇತ್ರದಲ್ಲಿಯೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ ಹೇಳಿದರು. ಅವರು ಮಹಿಳಾ ಮಂಡಲ (ರಿ.) ಕುಳಾಯಿ, ಮಂಗಳೂರಿನಲ್ಲಿ ನಡೆದ “ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮಾತನಾಡಿ, ಮಹಿಳೆಯರು ಸಣ್ಣ-ಪುಟ್ಟ […]
Read More
30-06-2026, 1:00 PM
ಪರಪಾದೆ, ಜೂನ್ 30: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಪರಪಾದೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 135 ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡೆಗಳನ್ನು ವಿತರಿಸುವ ಸಮಾಜಮುಖಿ ಸೇವಾ ಕಾರ್ಯಕ್ರಮ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆ ಗೀತಾ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ವಂದೀಪ್, ಕಾರ್ಯಕ್ರಮದ ಸಂಚಾಲಕಿ ಹಾಗೂ ವಿದ್ಯಾರ್ಥಿ ಸಂಘಟನೆ ನಿರ್ದೇಶಕಿ ವೀಣಾ ಭಾಸ್ಕರ್, ಮಾರ್ಗದರ್ಶಕರಾದ ಜಯಾನಂದ ಅಮೀನ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಖಾ […]
Read More
29-06-2026, 9:00 PM
ಮಂಗಳೂರು: ದಿನಾಂಕ: 29-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಮಿತ್ರ ಮಂಡಳಿ ಯೋಗ ಭಜನಾ ತಂಡ ಬಿಜೈ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿಯ ನಾಮ ಸ್ಮರಣೆ ಒಂದೇ ಮುಕ್ತಿಯ ದಾರಿ ಎಂಬಂತೆ ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ […]
Read More
29-06-2026, 2:00 PM
ಮೂಡುಬಿದಿರೆ, ಜೂನ್ 29: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮೂಡುಬಿದಿರೆಯ ಸಮಾಜ ಮಂದಿರದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಮಾತನಾಡಿ, ಮಹಿಳೆಯರು ಕಾಲಕ್ಕೆ ತಕ್ಕಂತೆ ಬೇಡಿಕೆಯಿರುವ ಕೌಶಲ್ಯಗಳನ್ನು ಕಲಿತು ಸ್ವಯಂ […]
Read More