
24-08-2026, 4:00 PM
ಮಂಗಳೂರು: ಸಮಾಜದಲ್ಲಿ ವ್ಯವಸ್ಥಿತವಾಗಿ ಬದುಕಲು ಉದ್ಯೋಗದ ಅಗತ್ಯವಿದೆ. ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಲು ಉತ್ತಮ ಅವಕಾಶಗಳು ದೊರೆತಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಉದ್ಘಾಟಕಿ ಚಂದ್ರಿಕಾ ಎಸ್. ನಾಯಕ್ ಹೇಳಿದರು. ಅವರು ಆ. 24ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಉರ್ವ ಸ್ಟೋರ್ನ ರಘು ಬಿಲ್ಡಿಂಗ್ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (CEDOK), ಮಂಗಳೂರು […]
Read More

24-08-2026, 2:00 PM
ಮಂಗಳೂರು ಅಗಸ್ಟ್ 24 : “ಭಜನೆಯು ಕೇವಲ ಹಾಡಲ್ಲ, ಅದು ಭಕ್ತನಿಗೂ ಪರಮಾತ್ಮನಿಗೂ ನಡುವಿನ ಮಧುರವಾದ ಅನುಸಂಧಾನ” ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 24-08-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಝೆಡ್ ಕಲಾ ವೇದಿಕೆ ಭಜನಾ ತಂಡ ಕುಳಾಯಿ ಮಂಗಳೂರು ಇವರ ಸಹಯೋಗದಲ್ಲಿ ನೆರವೇರಿತು. ಹರಿನಾಮ ಸ್ಮರಣೆಯ ಭಕ್ತಿ ಭಾವ […]
Read More

24-08-2026, 2:00 PM
ಧರ್ಮಸ್ಥಳ ಅಗಸ್ಟ್ 24: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಮಹಿಳಾ ನಿರ್ದೇಶಕರಾದ ಶ್ರೀಮತಿ ವೇದ ಪ್ರಭಾಕರ್ ಅವರ ಪತಿಯವರು ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ದಿನಾಂಕ 24.08.2026ರಂದು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ನೈತಿಕ ಸ್ಥೈರ್ಯ ನೀಡುವ ಉದ್ದೇಶದಿಂದ, ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ₹10,000/- (ಹತ್ತು ಸಾವಿರ ರೂಪಾಯಿ) ಸಾಂತ್ವನ […]
Read More

24-08-2026, 11:30 AM
ಮಂಗಳೂರು ಅಗಸ್ಟ್ 24 : ಆಧುನಿಕ ಯುಗದಲ್ಲಿ ಯುವಜನರು ಉನ್ನತ ವ್ಯಾಸಂಗ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮದೊಂದಿಗೆ ನಿಗದಿತ ಗುರಿಯನ್ನು ಹೊಂದಿ ಮುನ್ನಡೆಯುವುದು ಅಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯದರ್ಶಿ ಪ್ರತಿಮ್ ಕುಮಾರ್ ಕೆ.ಎಸ್. ಅಭಿಪ್ರಾಯಪಟ್ಟರು. ಅವರು ಆ. 24ರಂದು ಮಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಆಯೋಜಿಸಲಾಗಿದ್ದ “ಯುವ ದಿಕ್ಸೂಚಿ–2026” ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ.) ಕೇಂದ್ರ […]
Read More

23-08-2026, 8:00 PM
ಮಂಗಳೂರು ಅಗಸ್ಟ್ 23 : ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಆತಿಥ್ಯದಲ್ಲಿ ನಡೆದ “ಮಾಧವ ಕೀರ್ತನೋತ್ಸವ–2026” ಅಂತರ್ ಘಟಕ ಭಜನಾ ಸ್ಪರ್ಧೆಯು ಅಗಸ್ಟ್ 23ರಂದು ಸಮಾರೋಪ ಸಮಾರಂಭವು ಸಂಜೆ 5.30ಕ್ಕೆ ಗಣ್ಯರು, ಕೇಂದ್ರ ಸಮಿತಿ ಹಾಗೂ ಘಟಕದ ಪದಾಧಿಕಾರಿಗಳು, ತೀರ್ಪುಗಾರರು, ಸ್ಪರ್ಧಾಳುಗಳು ಮತ್ತು ಭಕ್ತಾಭಿಮಾನಿಗಳ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಸ್ವಾಗತಿಸಿದರು. ಸುರೇಶ್ ಪೂಜಾರಿ […]
Read More

23-08-2026, 6:00 PM
ಕೊಲ್ಯ ಅಗಸ್ಟ್ 23: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಪ್ರಯುಕ್ತ ಉಳ್ಳಾಲ ವಲಯದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಆ. 23ರಂದು ಕೊಲ್ಯ ನಾರಾಯಣ ಗುರು ಸಭಾಗೃಹದಲ್ಲಿ ಸಂಭ್ರಮದಿಂದ ನಡೆಯಿತು. ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಇದರ ಆಶ್ರಯದಲ್ಲಿ, ಬಿಲ್ಲವ ಸೇವಾ ಸಮಾಜ (ರಿ.) ಕೊಲ್ಯ ಇದರ ಸಹಭಾಗಿತ್ವದಲ್ಲಿ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. […]
Read More

23-08-2026, 2:00 PM
ಕುಪ್ಪೆಪದವು : ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ಹತ್ತು ವರ್ಷದೊಳಗಿನ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಎಂಟನೇ ವರ್ಷದ ಕೃಷ್ಣ ವೇಷ ಸ್ಪರ್ಧೆ ಕುಲವೂರು ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿ ಭವಾನಂದ ಶೆಟ್ಟಿ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಇಲಾಖೆಯ ನಿವೃತ್ತ ಸಿಬ್ಬಂದಿ ಚಂದ್ರಶೇಖರ್ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ವೈ. ಭರತ್ ಶೆಟ್ಟಿ ಮಾತನಾಡಿ, ಪುಟ್ಟ ಮಕ್ಕಳು ಶ್ರೀಕೃಷ್ಣನ ವೇಷಭೂಷಣ ಧರಿಸಿ ಶ್ರೀಕೃಷ್ಣ […]
Read More

23-08-2026, 11:00 AM
ಮಂಗಳೂರು ಅಗಸ್ಟ್ 23 : ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಆತಿಥ್ಯದಲ್ಲಿ ಆಯೋಜಿಸಲಾದ ಅಂತರ್ ಘಟಕ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ–2026 “ರ ಉದ್ಘಾಟನಾ ಸಮಾರಂಭವು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಭಕ್ತಿಭಾವ ಹಾಗೂ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಕೇಂದ್ರ ಸಮಿತಿ ಹಾಗೂ ಪಣಂಬೂರು–ಕುಳಾಯಿ ಘಟಕದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. […]
Read More

21-08-2026, 8:00 PM
ಮಂಗಳೂರು ಅಗಸ್ಟ್ 21: “ಕ್ಯಾನ್ಸರ್ ರೋಗಕ್ಕೆ ಭಯಪಡುವ ಅಗತ್ಯವಿಲ್ಲ. ಆರಂಭದ ಹಂತದಲ್ಲಿಯೇ ರೋಗವನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಗುಣಪಡಿಸಲು ಸಾಧ್ಯ. ದೇಹದಲ್ಲಿ ಯಾವುದೇ ಅಸಹಜ ಬದಲಾವಣೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಕ್ಯಾನ್ಸರ್ ವಿಭಾಗದ ಸಲಹೆಗಾರ್ತಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಮಮತಾ ಸುವರ್ಣ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆ.21ರಂದು ಆಯೋಜಿಸಲಾದ ಕ್ಯಾನ್ಸರ್ ರೋಗದ ಮಾಹಿತಿ ಹಾಗೂ ಜಾಗೃತಿ […]
Read More

20-08-2026, 9:00 PM
ಉಡುಪಿ, ಆಗಸ್ಟ್.20: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ಘಟಕದ ಅಧ್ಯಕ್ಷ ವಿನೋದ್ ಮಂಚಿ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಮನೆಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗುರು ಸತ್ಸಂಗ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ಯುವವಾಹಿನಿ (ರಿ.) ಉಡುಪಿ ಘಟಕದ ಮಾಜಿ ಅಧ್ಯಕ್ಷ ಅಶೋಕ್ ಕೋಟ್ಯಾನ್ ಅವರು ಗುರುಸಂದೇಶ ನೀಡುತ್ತಾ, “ಯುವಜನತೆಗೆ ಸದಾ ಪ್ರೇರಣೆಯಾಗುವಂತಹ ಸಮಾಜಮುಖಿ ಕಾರ್ಯಗಳನ್ನು ಯುವವಾಹಿನಿ ಕೈಗೊಳ್ಳುತ್ತಿರುವುದು ಶ್ಲಾಘನೀಯ” ಎಂದು ಹೇಳಿದರು. ಮಾಜಿ ಅಧ್ಯಕ್ಷ […]
Read More