Yuvavahini

ಘಟಕಗಳು

ಗುರುಪೂಜೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಸಂಭ್ರಮದಿಂದ ಸಂಪನ್ನ

ಕೂಳೂರು ಸೆ 11 : ಯುವವಾಹಿನಿ (ರಿ.) ಕೂಳೂರು ಘಟಕದ ದಶಮಾನೋತ್ಸವದ ಅಂಗವಾಗಿ ಘಟಕದ ಸಭಾಭವನದ ಫಲ್ಗುಣಿ ಸಭಾಂಗಣದಲ್ಲಿ ಗುರುಪೂಜೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯನ್ನು ಸೆ. 11ರಂದು ಶ್ರದ್ಧಾ–ಭಕ್ತಿಯಿಂದ ಹಾಗೂ ಸಂಭ್ರಮದಿಂದ ನೆರವೇರಿಸಲಾಯಿತು. ಸಂಜೆ 5 ಗಂಟೆಗೆ ಭಜನಾ ಸಂಕೀರ್ತನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಗುರುಸ್ತುತಿಯನ್ನು ನೆರವೇರಿಸಿದರು. ಸಂಜೆ 6 ಗಂಟೆಗೆ ಘಟಕದ ಅಧ್ಯಕ್ಷರಾದ ಗೀತಾ ವಸಂತ್ ದಂಪತಿ, ಹಿರಿಯರಾದ ಜಾನಕಿ ಅಮ್ಮ ಹಾಗೂ ಮಾರ್ಗದರ್ಶಕರಾದ ಚಂದಪ್ಪ ಸನಿಲ್ ಅವರು ದೀಪ […]

Read More

ಸಂಘಟನೆಯೇ ಸಮಾಜದ ಶಕ್ತಿ, ಸೇವೆಯೇ ಅದರ ಸಾರ್ಥಕತೆ : ಡಾ. ತ್ರಿವೇಣಿ ರಮೇಶ್

ಮಾಣಿ, ಸೆ. 11: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮವು ಸೆ. 11ರಂದು ಕೇಶವ ಪೂಜಾರಿ ಬರಿಮಾರು ಅವರ ಮನೆಯಲ್ಲಿ ನಡೆಯಿತು. ಭಜನಾ ಸಂಕೀರ್ತನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜನಾರ್ದನ ಪೂಜಾರಿ ಕೊಡಂಗೆ ಹಾಗೂ ತಂಡದವರು ಭಜನಾ ಸೇವೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ತ್ರಿವೇಣಿ ರಮೇಶ್, “ಸಂಘಟನೆಯೇ ಸಮಾಜದ ಶಕ್ತಿ, ಸೇವೆಯೇ ಅದರ ಸಾರ್ಥಕತೆ” ಎಂಬ ಸಂದೇಶವನ್ನು ನೀಡಿದರು. ಸಂಘಟನೆಯ ಮೂಲಕ ಕುಟುಂಬಗಳಲ್ಲಿ ಒಗ್ಗಟ್ಟನ್ನು ಬೆಳೆಸಬೇಕು. ಸೇವಾ […]

Read More

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ – ಸಮವಸ್ತ್ರ ವಿತರಣೆ

ಮಾಣಿ ಸೆ 10 : ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಹಾಗೂ ಅವರ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸೆಪ್ಟೆಂಬರ್ 10ರಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಏಮಾಜೆಯ ಎಲ್‌ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.ವಿದ್ಯಾರ್ಥಿಗಳ ಮೇಲಿನ ಅಭಿಮಾನ ಹಾಗೂ ಕಾಳಜಿಯಿಂದ ಯುವವಾಹಿನಿ (ರಿ.) ಮಾಣಿ ಘಟಕದ ಸಂಘಟನಾ ಕಾರ್ಯದರ್ಶಿ ಸುಚಿತ್ ಅಂಚನ್ ಅವರು ಸಮವಸ್ತ್ರಗಳ ಸಂಪೂರ್ಣ ವೆಚ್ಚವನ್ನು ಭರಿಸುವ ಮೂಲಕ ಈ ಸೇವಾ ಕಾರ್ಯಕ್ಕೆ ಆರ್ಥಿಕ ಸಹಕಾರ ನೀಡಿದರು. […]

Read More

ಅಕ್ಷರ ಕಲಿಸಿದ ಶಿಕ್ಷಕರಿಗೆ, ಬದುಕು ರೂಪಿಸಿದ ಮಾತಾ–ಪಿತರಿಗೆ ಆರತಿ ಬೆಳಗಿ ಗುರುನಮನ

ಕೊಲ್ಯ: ಗುರುಗಳು ದೇವರ ಸಮಾನರು. ಅಜ್ಞಾನದ ಕತ್ತಲನ್ನು ಹೋಗಲಾಡಿಸಿ ಜ್ಞಾನದ ದೀವಿಗೆ ಹಚ್ಚುವ ಗುರುಗಳನ್ನು ಹಾಗೂ ಬದುಕಿನಲ್ಲಿ ಮೊದಲ ಗುರುಗಳಾಗಿ ಮಾರ್ಗದರ್ಶನ ನೀಡಿದ ಮಾತಾ–ಪಿತರನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರದ ಪ್ರತೀಕವಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಹಿರಿಯರನ್ನು ಗೌರವಿಸುವ ಹಾಗೂ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಪರಂಪರೆಯನ್ನು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಗುರುನಮನದಂತಹ ಸಾಂಪ್ರದಾಯಿಕ ಆಚರಣೆಗಳಿಗೆ ಯಾವುದೇ ಚ್ಯುತಿ ಬಾರದಂತೆ ಮುಂದುವರಿಸಬೇಕು ಎಂದು ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ, ಕೊಲ್ಯದ ಗುರುಗಳಾದ ಡಾ. ಅರುಣ್ ಉಳ್ಳಾಲ್ […]

Read More

ಮನೆಮನೆಗೆ ನಾರಾಯಣಗುರು ಸಂದೇಶ ತಲುಪಿಸುತ್ತಿರುವ ಯುವವಾಹಿನಿ ಕಾರ್ಯ ಶ್ಲಾಘನೀಯ : ಗಿರೀಶ್ ಪೆರ್ವ

ದಡ್ಡಲಕಾಡು ಸೆ 09 : ನಾರಾಯಣಗುರುಗಳ ಸಂದೇಶಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಸಮಾಜದಲ್ಲಿ ಗುರುತತ್ವದ ಅರಿವು ಮೂಡಿಸುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾಗಿದೆ. ದಾಸ ಪರಂಪರೆಯ ಭಜನಾ ಸಂಕೀರ್ತನೆಯ ಮೂಲಕ ಗುರುತತ್ವವಾಹಿನಿ ಕಾರ್ಯಕ್ರಮವು ಅದ್ಭುತ ಯಶಸ್ಸು ಕಂಡಿದೆ ಎಂದು ಸಜಿಪಮೂಡ ಈಶ್ವರಮಂಗಲ ಸದಾಶಿವ ದೇವಸ್ಥಾನದ ಅಧ್ಯಕ್ಷ ಗಿರೀಶ್ ಪೆರ್ವ ಹೇಳಿದರು.ಅವರು ಸೆಪ್ಟೆಂಬರ್ 9ರಂದು ದಡ್ಡಲಕಾಡು ದೇವೀನಗರದ ಚೈತ್ರಾ ವಿಠ್ಠಲ ಪೂಜಾರಿ ಅವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ–77ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ […]

Read More

ಕೈಬರಹದ ಮೂಲಕ ಸ್ವಯಂ ಅರಿವು ಮತ್ತು ವ್ಯಕ್ತಿತ್ವದ ಅರಿವು”

ಮಂಗಳೂರು ಸೆ 09: ಭವಿಷ್ಯವನ್ನು ಆಯ್ಕೆಮಾಡುವ ಮೊದಲು ನಮ್ಮನ್ನು ನಾವು ಅರಿತುಕೊಳ್ಳುವುದು ಅತ್ಯಂತ ಮುಖ್ಯ. ನಮ್ಮ ಆಸಕ್ತಿ ಮತ್ತು ವೃತ್ತಿಯನ್ನು ಸಮನ್ವಯಗೊಳಿಸಿ ಸಾಗಬೇಕಾದರೆ ಜೀವನದಲ್ಲಿ ತೃಪ್ತಿ ಅಗತ್ಯ. ಇಂದಿನ ದಿನಗಳಲ್ಲಿ ಶಿಕ್ಷಣ ಹಾಗೂ ಬುದ್ಧಿವಂತಿಕೆ ಇದ್ದರೂ ಅನೇಕರು ಅತಿಯಾದ ಚಿಂತನೆಗೆ ಒಳಗಾಗುತ್ತಿದ್ದಾರೆ. ಜನರನ್ನು ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಜೀವನ ಮಾರ್ಗದರ್ಶನದ ಕ್ಷೇತ್ರಕ್ಕೆ ಬಂದಾಗ ಕೈಬರಹ ವಿಶ್ಲೇಷಣೆ ಸಹಾಯಕವಾಯಿತು ಎಂದು ಸಂಪನ್ಮೂಲ ವ್ಯಕ್ತಿ ಅಶ್ವಿನಿ ಜಿ. ಎನ್. ತಿಳಿಸಿದರು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಶ್ರೀ ಗೋಕರ್ಣನಾಥೇಶ್ವರ […]

Read More

ಸಂಘಟನೆ ಗಟ್ಟಿಯಾದರೆ ಸಮಾಜ ಬಲಿಷ್ಠ: ನಾರಾಯಣ ಗುರುಗಳ ತತ್ವವೇ ನಮ್ಮ ದಾರಿ – ರೇಣುಕಾ ಕಣಿಯೂರು

ಮಾಣಿ ಸೆಪ್ಟೆಂಬರ್ 8 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೆಪ್ಟೆಂಬರ್ 8ರಂದು ಪೆರಾಜೆ ಗ್ರಾಮದ ರೂಪಶ್ರೀ ದಿನೇಶ್ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವು ಭಜನಾ ಸಂಕೀರ್ತನೆಯೊಂದಿಗೆ ಭಕ್ತಿಭಾವದಿಂದ ಆರಂಭಗೊಂಡಿತು. ಭಜನಾ ಸಂಕೀರ್ತನೆಯ ಜವಾಬ್ದಾರಿಯನ್ನು ಜನಾರ್ಧನ ಪೂಜಾರಿ ಕೊಡಂಗೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರೇಣುಕಾ ಕಣಿಯೂರು, ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಸಂದೇಶವು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರದೆ, ಇಡೀ ಸಮಾಜದ ಉನ್ನತಿ ಹಾಗೂ […]

Read More

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು; ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ : ಲತಾಕಿಶೋರ್ ಕೆ. ಬಿಜೈ

ಮಂಗಳೂರು ಸೆ 08 : ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು, ಭವಿಷ್ಯದ ಭಾರತವನ್ನು ನಿರ್ಮಿಸುವ ಜವಾಬ್ದಾರಿ ಅವರ ಮೇಲಿದೆ. ಮಕ್ಕಳಲ್ಲಿ ಉತ್ತಮ ಗುಣ, ಮೌಲ್ಯ ಹಾಗೂ ಜವಾಬ್ದಾರಿಯುತ ನಾಗರಿಕ ಪ್ರಜ್ಞೆಯನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಹಾಗೂ ಶಿಕ್ಷಕಿ ಲತಾಕಿಶೋರ್ ಕೆ. ಬಿಜೈ ಹೇಳಿದರು.ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸೆಪ್ಟೆಂಬರ್ 8ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಾಹಿತಿ ನೀಡಿದ ಅವರು, ಶಿಕ್ಷಕರ […]

Read More

ಉದ್ಯಮಶೀಲತಾಭಿವೃದ್ಧಿ ತರಬೇತಿ ಯಶಸ್ವಿಯಾಗಿದೆ ಎನ್ನುವುದಕ್ಕೆ ಅಭ್ಯರ್ಥಿಗಳ ಆತ್ಮವಿಶ್ವಾಸವೇ ಸಾಕ್ಷಿ: ಹರೀಶ್ ಕೆ. ಸುವರ್ಣ

ಮಂಗಳೂರು ಸೆಪ್ಟೆಂಬರ್ 7 : ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಕೌಶಲ್ಯ ಮಿಷನ್, ಮಂಗಳೂರು ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಹಯೋಗದಲ್ಲಿ ಹತ್ತು ದಿನಗಳ ಕಾಲ ನಡೆದ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಸೆ. 7ರಂದು ಉರ್ವಸ್ಟೋರ್‌ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಮಾತನಾಡಿ, ತರಬೇತಿ ಕಾರ್ಯಾಗಾರದ ಆರಂಭದ ದಿನಗಳಿಗೆ ಹೋಲಿಸಿದರೆ ಇದೀಗ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 07-09-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಯುವವಾಹಿನಿ (ರಿ.) ಶಕ್ತಿನಗರ ಘಟಕ ಇವರ ಸಹಯೋಗದಲ್ಲಿ ನೆರವೇರಿತು. ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!