
01-10-2017, 12:33 PM
ರಕ್ತದಾನ ಶ್ರೇಷ್ಠ ದಾನಗಳಲ್ಲಿ ಒಂದಾಗಿದೆ . ನಾವು ದಾನ ಮಾಡುವ ರಕ್ತದಿಂದ ಜೀವ ಉಳಿಸಬಹುದಾಗಿದೆ ;ರಕ್ತದಾನದಿಂದ ಆರೋಗ್ಯವೂ ಉಲ್ಲಾಸಮಯವಾಗಿರುತ್ತದೆ . ಯುವವಾಹಿನಿ ಪುತ್ತೂರು ಘಟಕವು ಇಂತಹ ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಾ ವರ್ಷ 365 ದಿನಗಳಲ್ಲಿ ಕೂಡ ರಕ್ತದ ಅವಶ್ಯಕತೆ ಇದ್ದವರಿಗೆ ಸೂಕ್ತವಾಗಿ ಸ್ಪಂದಿಸುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರು ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು ದಿನಾಂಕ 01.10.2017 ರಂದು ಯುವವಾಹಿನಿ (ರಿ ) ಪುತ್ತೂರು ಘಟಕದ ಆಶ್ರಯದಲ್ಲಿ […]
Read More

30-09-2017, 2:53 PM
ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಉತ್ಸವದ ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯತ್ರೆಯು ದಿನಾಂಕ 30.09.2017 ರಂದು ವೈಭವದಿಂದ ಸಂಪನ್ನಗೊಂಡಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಂಗಳೂರು ದಸರಾ ಶೋಭಾಯಾತ್ರೆಗೆ ವಿವಿಧ ಸಂಘ ಸಂಸ್ಥೆಗಳ ಪ್ರವರ್ತಿತ ಧಾರ್ಮಿಕ ,ಸಾಂಸ್ಕೃತಿಕ, ಹುಲಿವೇಷ ನೃತ್ಯ ರೂಪಕಗಳು, ದೇಶದ ಪರಂಪರೆಯ ಟ್ಯಾಬ್ಲೋಗಳು, ತೃಶ್ಯೂರಿನ ಬಣ್ಣದ ಕೊಡೆಗಳು, ಕೇರಳದ ಚೆಂಡೆ ವಾದ್ಯ, ಕಲ್ಲಡ್ಕದ ಶಿಲ್ಪಾ ಬೊಂಬೆ ಬಳಗ, ಬೆಂಗಳೂರಿನ ಬ್ಯಾಂಡ್ ಬಳಗ, ಸೋಮನ ಕುಣಿತ, ಪೂಜಾ ಕುಣಿತಗಳು, ರಾಜ್ಯದ ವಿವಿಧ ಸಾಂಸ್ಕೃತಿಕ ಕಲಾ […]
Read More

30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
Read More

27-09-2017, 2:59 AM
ಯುವವಾಹಿನಿ (ರಿ) ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ಪುಣ್ಯ ತಿಥಿಯ ಪ್ರಯುಕ್ತ ದಿನಾಂಕ 27.09.2017 ರಂದು ಪುತ್ತೂರು ಕೊಯಿಲ ಎಂಡೋ ಪಾಲನಾ ಕೇಂದ್ರಕ್ಜೆ ಬೇಟಿ ನೀಡಿ ಎಂಡೋ ಸಂತ್ರಸ್ತರಿಗೆ ವಿಶೇಷ ರೀತಿಯ 10 ಜೊತೆ ಶೂ ಹಾಗೂ ಊಟೋಪಚಾರದ ಕೊಡುಗೆ ನೀಡಿದ್ದಾರೆ. ಯುವವಾಹಿನಿ ಪುತ್ತೂರು ಘಟಕದ ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜ, ಜತೆ ಕಾರ್ಯದರ್ಶಿ ರವೀಂದ್ರ ಸಂಪ್ಯ, ಉಪಾಧ್ಯಕ್ಷರಾದ ಹರೀಶ್ ಶಾಂತಿ, ಮಾಜಿ ಅಧ್ಯಕ್ಷರಾದ ಬಿ.ಟಿ.ಮಹೇಶ್ ಚಂದ್ರ ಸಾಲ್ಯಾನ್, ಪ್ರಭಾಕರ ಸಾಲ್ಯಾನ್, ನಿರ್ದೇಶಕರಾದ ಸುರೇಶ್ ಸಂಪ್ಯ, ಹರೀಶ್ […]
Read More

24-09-2017, 3:51 PM
ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರವಿ ಬಂಗೇರ ಆಯ್ಕೆಯಾದರು. ದಿನಾಂಕ 24.09.2017 ರಂದು ಬೆಳುವಾಯಿ ಷನ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಅನುಷಾ ಎಸ್.ಪೂಜಾರಿ, ಉಪಾಧ್ಯಕ್ಷರಾಗಿ ಶರತ್ ಪೂಜಾರಿ, ಜತೆ ಕಾರ್ಯದರ್ಶಿಯಾಗಿ ಸುರೇಖಾ ಚಂದ್ರಶೇಖರ್, ಕೋಶಾಧಿಕಾರಿ ಯಾಗಿ ಅಶೋಕ್ ಕುಮಾರ್, ಸಂಘಟನಾ ಕಾರ್ಯದರ್ಶಿ ಯಾಗಿ ನಿತಿನ್ ಬೆಳುವಾಯಿ, ಸೂರಜ್ ಬೆಳುವಾಯಿ, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರಾಗಿ ಸಂತೋಷ್ ನಿಡ್ಡೋಡಿ, ಸಂಜಯ್ ಪೂಜಾರಿ, ಸಮಾಜ ಸೇವಾ ನಿರ್ದೇಶಕರಾಗಿ ಮನೋಹರ್ […]
Read More

24-09-2017, 3:19 AM
ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಾಣದ ನಮ್ಮ ಹಿರಿಯರ ಕನಸು ಮಾಡುವಲ್ಲಿ ಯುವವಾಹಿನಿ ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಹಿರಿಯ ಪತ್ರಕರ್ತರು ಹಾಗೂ ರಂಗ ನಿರ್ದೇಶಕರಾದ ಪರಮಾನಂದ ಸಾಲ್ಯಾನ್ ತಿಳಿಸಿದರು. ದಿನಾಂಕ 24.09.2017 ರಂದು ಬೆಳುವಾಯಿ ಷಣ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹೊಸ ಚಿಂತನೆಗಳು, ಕ್ರಿಯಾಶೀಲ ಯೋಜನೆ, ಯೋಚನೆಯ ಮೂಲಕ ಯುವವಾಹಿನಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ […]
Read More

24-09-2017, 3:03 AM
ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಲ್ಲಿ ದೇಹದ ಸಮತೋಲನದಿಂದ ದಿನಪೂರ್ತಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯ. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಸೂಕ್ತ ವೈದ್ಯರಲ್ಲಿ ನಡೆಸಿಕೊಂಡು ರೋಗ ಬರುವ ಮೊದಲೇ ಆರೋಗ್ಯದ ಬಗ್ಗೆ ತಿಳಿದುಕೊಳ್ಳಿರಿ ಎಂದು ಲಯನ್ಸ್ ಕ್ಲಬ್ನ ಜಿಲ್ಲಾ ಸಮಿತಿಯ ಅಧಿಕಾರಿ ರಮೇಶ್ ಬಂಗೇರ ಹೇಳಿದರು. ಅವರು ದಿನಾಂಕ 24.09.2017 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಯುವವಾಹಿನಿ ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ,ಲಯನ್ಸ್, ಲಿಯೋ ಮತ್ತು ಪೂಜಾ ಫ಼್ರೆಂಡ್ಸ್ನ ಹಾಗೂ ಮುಕ್ಕದ […]
Read More

21-09-2017, 5:02 PM
ಆಧುನೀಕರಣ ಪ್ರಭಾವದಿಂದ ತಂತ್ರಜ್ಞಾನದ ಒಳಿತುಗಳಂತೆ ಕೆಡುಕುಗಳು ಉಂಟಾಗಿ ಯುವ ಸಮುದಾಯದ ಮೇಲೆ ಅದರ ಪರಿಣಾಮ ಪ್ರಖರವಾಗಿದೆ. ಹೆತ್ತವರು ಉತ್ತಮವಾಗಿ ಶಿಶು ಆರೈಕೆಯೊಂದಿಗೆ ಮಕ್ಕಳ ಮೇಲೆ ಯಾವುದೇ ಕೆಟ್ಟ ಪ್ರಭಾವ ಆಗದಂತೆ ನೋಡಬೇಕಾಗಿದೆ. ಈ ನಿಟ್ಟಿನಲ್ಲಿ ನಾರಾಯಣಗುರುವರ್ಯರಂತ ಮಹನೀಯರ ತತ್ವಾದರ್ಶಗಳನ್ನು ತಿಳಿಸಬೇಕಾದ ಅನಿವಾರ್ಯತೆ ಇದೆ ಎಂದು ಕೇಂಜ, ಕುತ್ಯಾರು ಬ್ರಹ್ಮಬೈದರ್ಕಳ ಗರಡಿಯ ಗಡಿ ಪ್ರಧಾನರಾದ ಬಗ್ಗ ಪೂಜಾರಿ ಉಮೇಶ್ ಕೋಟ್ಯಾನ್ ತಿಳಿಸಿದರು. ಅವರು ಪಡುಬಿದ್ರಿ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ […]
Read More

21-09-2017, 1:01 PM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 21.09.2017ರಂದು ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಥಮ ದಿನ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಯೋಗೀಶ್ ಕೋಟ್ಯಾನ್, ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ,ನಿಕಟ ಪೂರ್ವ ಅಧ್ಯಕ್ಷರಾದ ಚೇತನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು
Read More