
29-08-2026, 4:00 PM
ಶಕ್ತಿನಗರ ಅಗಸ್ಟ್ 29 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಹಾಗೂ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಸಹಯೋಗದಲ್ಲಿ ಆಗಸ್ಟ್ 29ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜನ್ಮ ಜಯಂತಿ ಮಹೋತ್ಸವ ಹಾಗೂ ಬೃಹತ್ ಶೋಭಾಯಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗಣಹೋಮ ನೆರವೇರಿಸಿ ಮಂದಿರವನ್ನು ಶುದ್ಧೀಕರಿಸಲಾಯಿತು. ಬಳಿಕ ಗುರುಗಳ ಪಂಚಲೋಹದ ಮೂರ್ತಿಗೆ ವಿಶೇಷ […]
Read More

29-08-2026, 2:00 PM
ಮಂಗಳೂರು ಅಗಸ್ಟ್ 29 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಗಸ್ಟ್ 29ರಂದು ಬೆಳಿಗ್ಗೆ 10 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಗುರುಪೂಜೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮಹೇಶ್ ಅವರು ದೀಪ ಬೆಳಗಿಸಿ, ಗುರುಸ್ತುತಿಯೊಂದಿಗೆ ಗುರುಪೂಜೆಗೆ ಚಾಲನೆ ನೀಡಿದರು. ಬಳಿಕ ಮಹಿಳಾ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಎಸ್.ಎನ್.ಡಿ.ಪಿ., ಕೃಷ್ಣ ಭಜನಾ ಮಂದಿರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]
Read More

28-08-2026, 10:00 PM
ಪೆರ್ಮಂಕಿ ಅಗಸ್ಟ್ 28: ಯುವವಾಹಿನಿ (ರಿ.) ಪೆರ್ಮಂಕಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಗುರುಜಯಂತಿಯ ಪ್ರಯುಕ್ತ ಪೆರ್ಮಂಕಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಭಜನಾ ಕಾರ್ಯಕ್ರಮ ಹಾಗೂ ಗುರುಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಪೆರ್ಮಂಕಿ ಘಟಕದ ನಾರಾಯಣ ಗುರುತತ್ವ ಪ್ರಚಾರ ನಿರ್ದೇಶಕರಾದ ಕೀರ್ತಿರಾಜ್ ಕರಂದಾಡಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ತತ್ವಾದರ್ಶಗಳು ಹಾಗೂ ಸಮಾಜಕ್ಕೆ ಅವರು ಸಾರಿದ ಸಂದೇಶಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ […]
Read More

28-08-2026, 9:00 PM
ಅಡ್ವೆ ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಆಗಸ್ಟ್ 28ರಂದು ಸಂಜೆ ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಅಡ್ವೆಯಲ್ಲಿ ಭಜನಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ಶ್ರೀ ಬ್ರಹ್ಮ ಬೈದರ್ಕಳ ಭಜನಾ ಮಂಡಳಿ, ಯುವವಾಹಿನಿ ಸದಸ್ಯರು ಹಾಗೂ ಸಮಾಜ ಬಾಂಧವರು ಒಗ್ಗೂಡಿ ಭಜನಾ ಕಾರ್ಯಕ್ರಮವನ್ನು ನೆರವೇರಿಸಿದರು. ಗರಡಿಯನ್ನು ಹೂವಿನ ಅಲಂಕಾರದಿಂದ ಸಿಂಗರಿಸಲಾಗಿದ್ದು, ಸಂಜೆ 7 ಗಂಟೆಗೆ ಕಲಶ ಪ್ರತಿಷ್ಠಾಪನೆಯ ವಿಧಿ ವಿಧಾನಗಳೊಂದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ […]
Read More

28-08-2026, 9:00 PM
ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಗುರು ಜಯಂತಿಯ ಪ್ರಯುಕ್ತ ಆಗಸ್ಟ್ 28ರಂದು ‘ಗುರುನಮನ’ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಘಟಕದ ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗೌರವ ಸಲಹೆಗಾರರು, ಮಾಜಿ ಅಧ್ಯಕ್ಷರು, ನಿರ್ದೇಶಕರು, ಪದಾಧಿಕಾರಿಗಳು ಹಾಗೂ ಸದಸ್ಯರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಗುರು ಜಯಂತಿಯ ವಿಶೇಷ ಅಂಗವಾಗಿ ‘ಗುರು ಚಿಂತನ’ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿರುವ ಆನ್ಲೈನ್ ಭಾಷಣ ಸ್ಪರ್ಧೆಯ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು. […]
Read More

28-08-2026, 9:00 PM
ಮಂಗಳೂರು ಅಗಸ್ಟ್ 28 : ಭಾರತವು ಹಬ್ಬಗಳ ತವರೂರಾಗಿದ್ದು, ಇಲ್ಲಿ ಆಚರಿಸಲಾಗುವ ಪ್ರತಿಯೊಂದು ಹಬ್ಬವೂ ತನ್ನದೇ ಆದ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವವನ್ನು ಹೊಂದಿದೆ. ಅಂತಹ ವಿಶಿಷ್ಟ ಹಬ್ಬಗಳಲ್ಲಿ ಒಂದಾದ ‘ರಕ್ಷಾ ಬಂಧನ’ವನ್ನು ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಆಗಸ್ಟ್ 28ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕುಂಟಲ್ಪಾಡಿ ಇಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ರಕ್ಷಾ ಬಂಧನವು ಸಹೋದರ–ಸಹೋದರಿಯರ ನಡುವಿನ ಪವಿತ್ರ ಪ್ರೀತಿ, ವಿಶ್ವಾಸ ಹಾಗೂ ಬಾಂಧವ್ಯದ ಸಂಕೇತವಾಗಿದೆ. ಇದೇ ಆಶಯದೊಂದಿಗೆ […]
Read More

28-08-2026, 9:00 PM
ಮಾಣಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಿರುವ ‘ಮನೆ ಮನೆಗೆ ಗುರುತತ್ವ ಸಂದೇಶ’ ಕಾರ್ಯಕ್ರಮಕ್ಕೆ ನಾರಾಯಣ ಗುರುತತ್ವ ನಿರ್ದೇಶಕರಾದ ಶ್ರೀಧರ ಪೂಜಾರಿ ಮುಜಾಲ ಅವರ ಮನೆಯಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಶಾಂತ್ ಬಿ. ಅನಂತಾಡಿ ಅವರು, “ವಿಶ್ವಗುರು ನಾರಾಯಣ ಗುರುಗಳು ಕೇವಲ ಒಬ್ಬ ಗುರುವಾಗಿರದೆ, ಸಮಾಜಕ್ಕೆ ಉತ್ತಮ ತತ್ವಸಂದೇಶ ಹಾಗೂ ಮಾರ್ಗದರ್ಶನ ನೀಡಿದ ಮಹಾನ್ ದಾರ್ಶನಿಕರು. ಇಂದಿನ ಸಮಾಜದಲ್ಲಿಯೂ ಅವರ ತತ್ವಸಂದೇಶಗಳು ಅತ್ಯಂತ ಪ್ರಸ್ತುತವಾಗಿವೆ” ಎಂದು ಹೇಳಿದರು. […]
Read More

28-08-2026, 9:00 PM
ಕಂಕನಾಡಿ : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಗಸ್ಟ್ 28ರಂದು ಘಟಕದ ಸಭಾಂಗಣದಲ್ಲಿ ಗುರುಪೂಜೆ ಹಾಗೂ ವರಮಹಾಲಕ್ಷ್ಮಿ ಪೂಜೆಯನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ಘಟಕದ ಸದಸ್ಯರ ಭಜನೆಯೊಂದಿಗೆ ಶಾಸ್ತ್ರೋಕ್ತವಾಗಿ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಸರ್ವ ಸದಸ್ಯರು, ಬಂಧು–ಮಿತ್ರರು ಸೇರಿದಂತೆ ಹಲವರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಪೂಜಾ ಕಾರ್ಯಕ್ರಮದ ಬಳಿಕ ಎಲ್ಲರಿಗೂ ಅನ್ನಸಂತರ್ಪಣೆ ನೆರವೇರಿಸಲಾಯಿತು.
Read More

28-08-2026, 8:00 PM
ಸಜಿಪ, ಆಗಸ್ಟ್ 27 : “ಜ್ಞಾನದ ಬೆಳಕು ಜಗತ್ತಿನ ಬೆಳಕು” ಎಂದು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಶಿಕ್ಷಣದ ಮೂಲಕ ಅಜ್ಞಾನ, ಅಂಧಕಾರ ಹಾಗೂ ಅಸಮಾನತೆಯನ್ನು ದೂರಮಾಡುವ ಮಾರ್ಗವನ್ನು ಸಮಾಜಕ್ಕೆ ತೋರಿಸಿಕೊಟ್ಟರು. ಜ್ಞಾನದಿಂದ ವ್ಯಕ್ತಿಯ ಉನ್ನತಿಯೊಂದಿಗೆ ಸಮಾಜದ ಪ್ರಗತಿಯೂ ಸಾಧ್ಯವಾಗುತ್ತದೆ. ಆದ್ದರಿಂದ ನಾರಾಯಣ ಗುರುಗಳ ಜ್ಞಾನ ಮತ್ತು ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಕುಸುಮಾಕರ ಕುಂಪಲ ತಿಳಿಸಿದರು. ಅವರು ಸಜಿಪ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದಲ್ಲಿ […]
Read More

28-08-2026, 8:00 PM
ಮಂಗಳೂರು ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆಗಸ್ಟ್ 28ರಂದು ಸಂಜೆ 6.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುಪೂಜೆ ನೆರವೇರಿಸಲಾಯಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರವು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶಯ ಹಾಗೂ ಬಿಲ್ಲವ ಸಮಾಜದ ಸಂಘಟಿತ ಪ್ರಯತ್ನದ ಪ್ರತೀಕವಾಗಿ ರೂಪುಗೊಂಡ ಕ್ಷೇತ್ರವಾಗಿದೆ. 1908ರಲ್ಲಿ ಬಿಲ್ಲವ ಸಮಾಜದ ಮುಖಂಡ ಹಾಗೂ ಉದ್ಯಮಿ ಹೋಯ್ಗೆ ಬಜಾರ್ ಕೊರಗಪ್ಪ ಅವರು ಕೇರಳಕ್ಕೆ ತೆರಳಿ ನಾರಾಯಣ ಗುರುಗಳನ್ನು […]
Read More