
14-09-2026, 8:00 PM
ಮಾಣಿ, ಸೆ. 14: ಗತಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಣ್ಣಾರೆ ಕಂಡು, ಅವುಗಳ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ ‘ಚೌತಿ ಚಿತ್ತಾರ’ ಕಾರ್ಯಕ್ರಮವು ಲೋಕೇಶ್ ಬಂಗೇರ ಪಳ್ಳತ್ತಿರ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಲೋಕೇಶ್ ಬಂಗೇರ ಅವರು, ಹಿಂದಿನ ಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪರಿಚಯಿಸುವ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ. ಇಂತಹ ವಿನೂತನ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವುದರೊಂದಿಗೆ […]
Read More

14-09-2026, 7:00 PM
ಬಜಪೆ ಸೆ 14 : ವಿಜಯ ವಿಠ್ಠಲ ಭಜನಾ ಮಂದಿರ, ಬಜಪೆಯಲ್ಲಿ ಸೆಪ್ಟೆಂಬರ್ 14ರಿಂದ 16ರವರೆಗೆ 58ನೇ ಸಾರ್ವಜನಿಕ ಗಣೇಶೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಗಣೇಶ ಚತುರ್ಥಿಯ ದಿನವಾದ ಸೆಪ್ಟೆಂಬರ್ 14ರಂದು ಮಂದಿರದಲ್ಲಿ ಕಣಿಶೋತ್ಸವ, ಶ್ರೀ ವಿಜಯ ಗಣಪತಿ ಪ್ರತಿಷ್ಠೆ, ಗಣಹೋಮ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮಧ್ಯಾಹ್ನದ ಬಳಿಕ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭರತನಾಟ್ಯ, ಸಂಗೀತ ಕಾರ್ಯಕ್ರಮ, ಯಕ್ಷಗಾನ ಹಾಗೂ ಭಜನಾ ಸಂಕೀರ್ತನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಭಕ್ತರ ಗಮನ ಸೆಳೆದವು. […]
Read More

14-09-2026, 6:00 PM
ಅಡ್ವೆ, ಸೆ. 14: ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ಪ್ರತಿವರ್ಷದಂತೆ ಈ ಬಾರಿಯೂ ಗಣೇಶ ಚತುರ್ಥಿ ಕ್ರೀಡಾಕೂಟವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಅಡ್ವೆ ಆವರಣದಲ್ಲಿ ಆಯೋಜಿಸಲಾಯಿತು. ಮಧ್ಯಾಹ್ನ 2 ಗಂಟೆಗೆ ಆರಂಭಗೊಂಡ ಕ್ರೀಡಾಕೂಟದಲ್ಲಿ ಯುವವಾಹಿನಿ ಸದಸ್ಯರು ಹಾಗೂ ಗ್ರಾಮಸ್ಥರಿಗಾಗಿ ಮಕ್ಕಳ ವಿಭಾಗ, ಮಹಿಳಾ ವಿಭಾಗ ಮತ್ತು ಪುರುಷರ ವಿಭಾಗಗಳಲ್ಲಿ ವಿವಿಧ ಮನರಂಜನಾ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಉಪಾಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರು, […]
Read More

13-09-2026, 8:00 PM
ಕೊಲ್ಯ, ಸೆ. 13: ಇಂದು ಸಮಸ್ತ ಜಗತ್ತು ಮೊಬೈಲ್ ಯುಗದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ, ಕುಟುಂಬದ ಸದಸ್ಯರ ನಡುವಿನ ಸಂಬಂಧಗಳು ಸಡಿಲವಾಗುತ್ತಿರುವುದು ಹಾಗೂ ಮಕ್ಕಳು, ಹಿರಿಯರು ಸೇರಿದಂತೆ ಬಹುತೇಕರು ಹೆಚ್ಚಿನ ಸಮಯವನ್ನು ಮೊಬೈಲ್ನಲ್ಲೇ ಕಳೆಯುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕೊಲ್ಯ ಘಟಕವು ಗೌರಿ ಹಬ್ಬದ ಪ್ರಯುಕ್ತ ‘ಮೊಬೈಲ್ ಉಪವಾಸ’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಸೆ. 13ರಂದು ಭಾನುವಾರ ಬೆಳಗ್ಗೆ 7ರಿಂದ ಸಂಜೆ 7ರವರೆಗೆ 12 ಗಂಟೆಗಳ ಕಾಲ ಮೊಬೈಲ್ ಬಳಕೆಯಿಂದ ದೂರವಿರುವಂತೆ ಘಟಕದ […]
Read More

13-09-2026, 8:00 PM
ಮಾಣಿ ಸೆ 13 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ 2021ರಲ್ಲಿ ಆರಂಭಿಸಲಾದ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಅಭಿಯಾನವು ಇಂದು ಯುವವಾಹಿನಿಯ ಇತರ ಘಟಕಗಳಿಗೂ ಪ್ರೇರಣೆಯಾಗಿದೆ ಎಂದು ಯುವವಾಹಿನಿ ಮಾಜಿ ಕೇಂದ್ರ ಸಮಿತಿ ಅಧ್ಯಕ್ಷರಾದ ಪ್ರೇಮನಾಥ ಕೆ. ಹೇಳಿದರು. ಮಾಣಿ ಘಟಕದ ಮಾದರಿಯನ್ನು ಅನುಸರಿಸಿ ಇತರ ಘಟಕಗಳೂ ಗುರುಗಳ ತತ್ತ್ವ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ. ಗುರುಗಳ ತತ್ತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮಲ್ಲಿ ಬದಲಾವಣೆಯನ್ನು ಕಂಡುಕೊಳ್ಳುವುದರ ಜೊತೆಗೆ, […]
Read More

13-09-2026, 2:00 PM
ಕಡಬ, ಸೆ. 13: ಕಡಬ, ಸೆ. 13: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ.) ಕಡಬ ತಾಲೂಕು ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವವಾಹಿನಿ (ರಿ.) ಕಡಬ ಘಟಕದ ಸಹಕಾರದೊಂದಿಗೆ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸನ್ಮಾನ ಕಾರ್ಯಕ್ರಮವು ಸೆ. 13ರಂದು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವು ಭವ್ಯಮೆರವಣಿಗೆಯೊಂದಿಗೆ ಆರಂಭಗೊಂಡು,ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಇದರ ಪರಮಪೂಜ್ಯ ಶ್ರೀ […]
Read More

13-09-2026, 2:00 PM
ಕುಪ್ಪೆಪದವು, ಸೆ. 13: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಆನ್ಲೈನ್ ‘ಮುದ್ದುಕೃಷ್ಣ’ ಫೋಟೋ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಣಾ ಸಮಾರಂಭವು ಸೆ. 13ರಂದು ಕುಪ್ಪೆಪದವು ಶ್ರೀ ರಾಮಕೃಷ್ಣ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ಅಧ್ಯಕ್ಷ ಗೋಪಾಲ್ ಪೂಜಾರಿ (ಗಂಗಾಧರ) ಎಡಪದವು ಮಾತನಾಡಿ, ಸಂಸ್ಥೆಯ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸದ ವಿಚಾರ. ಸದಸ್ಯರ ಪರಿಶ್ರಮ ಮತ್ತು ಸಹಕಾರದಿಂದ ಇಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು […]
Read More

13-09-2026, 1:00 PM
ಮೂಡುಬಿದಿರೆ, ಸೆ. 13: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಮಾಸಿಕ ಸಭೆಯು ಸೆಪ್ಟೆಂಬರ್ 13ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮೇಘನಾ ಘಟಕದ ವರದಿಯನ್ನು ಮಂಡಿಸಿದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ 17 ಮಂದಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ […]
Read More

12-09-2026, 8:00 PM
ಮೂಲ್ಕಿ ಸೆ 12 : ಯುವವಾಹಿನಿ (ರಿ.) ಮೂಲ್ಕಿ ಘಟಕದ ಸದಸ್ಯರ ನಡುವಿನ ಸಂಪರ್ಕದ ಕೊಂಡಿಯನ್ನು ಮತ್ತಷ್ಟು ಗಟ್ಟಿಗೊಳಿಸುವ ಹಾಗೂ ಸದಸ್ಯರ ಕುಟುಂಬದೊಂದಿಗೆ ಆತ್ಮೀಯವಾಗಿ ಬೆರೆಯುವ ಉದ್ದೇಶದಿಂದ ಹಮ್ಮಿಕೊಂಡಿರುವ ಮನೆಮನೆ ಭಜನೆ ಕಾರ್ಯಕ್ರಮವು ಸೆ. 12ರಂದು ಘಟಕದ ಅಧ್ಯಕ್ಷೆ ಚರಿಷ್ಮಾ ಶ್ರೀನಿವಾಸ್ ಅವರ ಮನೆಯಲ್ಲಿ ನಡೆಯಿತು. ಸಂಜೆ 6ರಿಂದ 7 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಾಗವಹಿಸಿ ಭಜನೆ, ಪ್ರಾರ್ಥನೆ ಹಾಗೂ ಭಕ್ತಿಗೀತೆಗಳ ಮೂಲಕ ಭಕ್ತಿಭಾವ ಮೆರೆದರು. ಬಳಿಕ ಮಹಾಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದ ನಂತರ […]
Read More

12-09-2026, 2:00 PM
ಬಜಪೆ ಸೆ 12 : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸೆ. 12ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆಯಲ್ಲಿ ಆಚರಿಸಲಾಯಿತು. ಬೋಧನಾ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಗಳಲ್ಲಿ ಒಂದೆಂದು ಪರಿಗಣಿಸಿರುವ ನಮ್ಮ ದೇಶದಲ್ಲಿ, ಶಿಕ್ಷಕರು ಕೇವಲ ಅಕ್ಷರ ಜ್ಞಾನವನ್ನು ನೀಡುವವರಲ್ಲ; ವಿದ್ಯಾರ್ಥಿಗಳ ಬದುಕಿನಲ್ಲಿ ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕನ್ನು ಬೆಳಗಿಸುವವರು. ಮಕ್ಕಳಲ್ಲಿರುವ ಪ್ರತಿಭೆ ಮತ್ತು ಆಸಕ್ತಿಯನ್ನು ಗುರುತಿಸಿ ಬೆಳೆಸುವುದರ ಜೊತೆಗೆ, ಅವರ ತಪ್ಪುಗಳನ್ನು ತಿದ್ದಿ, ಜೀವನಕ್ಕೆ ಸೂಕ್ತವಾದ ಗುರಿಯನ್ನು […]
Read More