
24-09-2026, 8:00 PM
ಮಾಣಿ, ಸೆ. 24: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಸುಜಿತ್ ಬಾಕಿಲ ಅವರ ಮನೆಯಲ್ಲಿ ನಡೆಯಿತು. “ಒಂದು ಜಾತಿ, ಒಂದು ಮತ, ಒಬ್ಬ ದೇವರು – ಮನುಷ್ಯನಿಗೆ” ಎಂಬ ಶ್ರೀ ನಾರಾಯಣ ಗುರುಗಳ ದೂರದೃಷ್ಟಿಯ ತತ್ತ್ವಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಜೀವಂತ ಸಾಕ್ಷಿಯಾಗಿದೆ ಎಂದು ಸಚಿನ್ ಅಮೀನ್ ಪೆರಾಜೆ ಹೇಳಿದರು. ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿ, ಧಾರ್ಮಿಕತೆಯೊಂದಿಗೆ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಕುದ್ರೋಳಿ ಕ್ಷೇತ್ರದ ಬೆಳವಣಿಗೆಯು […]
Read More

24-09-2026, 8:00 PM
ಮಾಣಿ, ಸೆ. 24: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾದ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಸುಜಿತ್ ಬಾಕಿಲ ಅವರ ಮನೆಯಲ್ಲಿ ನಡೆಯಿತು. “ಒಂದು ಜಾತಿ, ಒಂದು ಮತ, ಒಬ್ಬ ದೇವರು – ಮನುಷ್ಯನಿಗೆ” ಎಂಬ ನಾರಾಯಣ ಗುರುಗಳ ದೂರದೃಷ್ಟಿಯ ಚಿಂತನೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಜೀವಂತ ಸಾಕ್ಷಿಯಾಗಿದೆ ಎಂದು ಸಚಿನ್ ಅಮೀನ್ ಪೆರಾಜೆ ಹೇಳಿದರು. ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿ, ಧಾರ್ಮಿಕತೆಯೊಂದಿಗೆ ಸಾಮಾಜಿಕ ಜಾಗೃತಿಯನ್ನೂ ಮೂಡಿಸುತ್ತಿರುವ ಕುದ್ರೋಳಿ ಕ್ಷೇತ್ರದ ಬೆಳವಣಿಗೆ ನಾರಾಯಣ […]
Read More

24-09-2026, 8:00 PM
ಉಡುಪಿ, ಸೆ. 24: ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಗುರು ಸತ್ಸಂಗ ಕಾರ್ಯಕ್ರಮವು ಘಟಕದ ನಿಕಟಪೂರ್ವ ಅಧ್ಯಕ್ಷ ದಯಾನಂದ ಕರ್ಕೆರ ಅವರ ಮನೆಯಲ್ಲಿ ನಡೆಯಿತು. ಮನೆಯವರು ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಭಜನಾ ಸಂಕೀರ್ತನೆ ನಡೆಯಿತು. ಗುರು ಸಂದೇಶ ನೀಡಿದ ವಿಶ್ರಾಂತ ಪ್ರಾಧ್ಯಾಪಕಿ ಡಾ. ಸುನಿತಾ ವಿ. ಮಾತನಾಡಿ, ಗುರುಗಳ ತತ್ವ–ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಭಜನೆಯ ಮೂಲಕ ಎಲ್ಲರೂ ಒಂದಾಗಿ ಸೇರುವ ಅವಕಾಶ ಕಲ್ಪಿಸುವ ಇಂತಹ ಗುರು ಸತ್ಸಂಗ […]
Read More

24-09-2026, 8:00 PM
ಕಾರ್ಕಳ ಸೆ 24: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ಆದರ್ಶ ಮತ್ತು ಸಂದೇಶಗಳನ್ನು ಹರಿಕಥೆಯ ಮಾಧ್ಯಮದ ಮೂಲಕ ಜನಮಾನಸಕ್ಕೆ ಇನ್ನಷ್ಟು ಪರಿಚಯಿಸುವ ಅಗತ್ಯವಿದೆ ಎಂದು ಕರ್ನಾಟಕ ಸರಕಾರದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಮುದ್ರಾಡಿ ಅಭಿಪ್ರಾಯಪಟ್ಟರು. ಸೆಪ್ಟೆಂಬರ್ 24ರಂದು ಶ್ರೀ ಕೃಷ್ಣ ಕ್ಷೇತ್ರ, ಆನೆಕೆರೆ, ಕಾರ್ಕಳದಲ್ಲಿ ಬಿಲ್ಲವ ಸಂಘ ಕಾರ್ಕಳ, ಶ್ರೀ ಕೃಷ್ಣ ಕ್ಷೇತ್ರ ಕಾರ್ಕಳ, ಯೂತ್ ಬಿಲ್ಲವ (ರಿ.) ಕಾರ್ಕಳ ಹಾಗೂ ಸೇವಾದಳದ ಸಹಕಾರದೊಂದಿಗೆ ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಆಯೋಜಿಸಲಾದ […]
Read More

24-09-2026, 2:00 PM
ಮೂಡಬಿದಿರೆ ಸೆ 24 : ಯುವವಾಹಿನಿ (ರಿ.) ಮೂಡಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ, ಮೂಡಬಿದಿರೆ ಇವರ ಸಹಯೋಗದಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮವನ್ನು ಮೂಡಬಿದಿರೆಯ ಬಿಲ್ಲವ ಸಂಘದಲ್ಲಿ ಆಯೋಜಿಸಲಾಯಿತು. ಯುವವಾಹಿನಿ (ರಿ.) ಮೂಡಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು, ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಮಹಾ ಪ್ರಬಂಧಕ ಅರುಣ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ದಕ್ಷಿಣ ಕನ್ನಡ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ […]
Read More

23-09-2026, 11:00 PM
ಕೊಲ್ಯ, ಸೆ. 23: ಯುವವಾಹಿನಿ (ರಿ.) ಕೊಲ್ಯ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ KSTA ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಮಂಗಳೂರು ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ 30 ದಿನಗಳ ಉಚಿತ ಬ್ರೈಡಲ್ ಮೇಕಪ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಸೆ. 23ರಂದು ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ (KSTA) ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಅಧಿಕಾರಿ ಶೈಲಾ ಕಾರ್ಗಿ, ತರಬೇತಿಯ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ […]
Read More

23-09-2026, 8:00 PM
ಮಾಣಿ, ಸೆ. 23: “ಬದುಕು ಒಂದು ಹೋರಾಟ. ಮನುಷ್ಯತ್ವ, ಸತ್ಯ, ಸಮಾನತೆ ಮತ್ತು ಪರಸ್ಪರ ಗೌರವವನ್ನು ಬದುಕಿನ ಮೌಲ್ಯಗಳಾಗಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ನಿಜವಾದ ಪರಿವರ್ತನೆ ಸಾಧ್ಯ” ಎಂದು ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ಅಧ್ಯಕ್ಷ ಪ್ರಶಾಂತ್ ಬಿ. ಅನಂತಾಡಿ ಹೇಳಿದರು. ಜಾತಿ–ಮತಗಳ ಹೆಸರಿನಲ್ಲಿ ಸಮಾಜದಲ್ಲಿ ಬೇರೂರಿದ್ದ ಮೌಢ್ಯ, ಅಸಮಾನತೆ ಹಾಗೂ ತಾರತಮ್ಯಗಳ ವಿರುದ್ಧ ಹೋರಾಡಿ ಮಾನವ ಸಮಾನತೆಯ ಸಂದೇಶ ಸಾರಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಅವರು ಹೇಳಿದರು. ಗೋಳಿಕಟ್ಟೆಯ ಗಂಗಾಧರ ಪಂಡಿತ್ ಅವರ […]
Read More

23-09-2026, 8:00 PM
ದಿನಾಂಕ 23-09-2026 ರಂದು ಶ್ರೀ ಆದಿಶಕ್ತಿ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಾರ್ಮಿಕ ಕಾಲೊನಿ ಇಲ್ಲಿ ನಡೆದ ಪುನರ್ಪ್ರತಿಷ್ಠೆ ಹಾಗೂ ಸಹಸ್ರ ಕಳಶ ಸಹಿತ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಯುವವಾಹಿನಿ(ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಇವರ ಸಹಭಾಗಿತ್ವದಲ್ಲಿ ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಜನಾ ಸಂಕೀರ್ತನೆಯ ಮೂಲಕ ಭಕ್ತಿಮಯ ವಾತಾವರಣ ನಿರ್ಮಿಸಿ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸುವಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು.
Read More

22-09-2026, 9:00 PM
ಮಾಣಿ, ಸೆ. 22: “ಸಂಕಷ್ಟದಲ್ಲಿರುವವರ ಬದುಕಿಗೆ ಮಾನವೀಯ ಸ್ಪರ್ಶ ನೀಡುವುದೇ ಗುರುತತ್ತ್ವದ ನಿಜವಾದ ಅನುಷ್ಠಾನ. ಸಮಾಜದ ಅಂಚಿನಲ್ಲಿರುವವರ ಬದುಕಿಗೆ ಸ್ಪಂದಿಸಿದಾಗ ಮಾತ್ರ ನಾರಾಯಣ ಗುರುಗಳ ತತ್ವಗಳು ಅರ್ಥಪೂರ್ಣವಾಗುತ್ತವೆ” ಎಂದು ಯುವವಾಹಿನಿ (ರಿ.) ಮಾಣಿ ಘಟಕದ ಕೋಶಾಧಿಕಾರಿ ಡಾ. ತ್ರಿವೇಣಿ ರಮೇಶ್ ಹೇಳಿದರು. ಯುವವಾಹಿನಿ (ರಿ.) ಮಾಣಿ ಘಟಕದ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 22ರಂದು ಲಲಿತಾ ಅವರ ಮನೆಯಲ್ಲಿ ಭಜನಾ ಸಂಕೀರ್ತನೆ ಹಾಗೂ ನಾರಾಯಣ ಗುರುಗಳ ತತ್ವಸಂದೇಶ ಕಾರ್ಯಕ್ರಮ ನಡೆಯಿತು. ತಂದೆ-ತಾಯಿಯ ಆಶ್ರಯವಿಲ್ಲದೆ […]
Read More

22-09-2026, 8:00 PM
ಮಂಗಳೂರು ಸೆ 22 : ಸಮಾಜದಲ್ಲಿ ಬದಲಾವಣೆ ತರಲು ಬಯಸುವ ವ್ಯಕ್ತಿ ಮೊದಲು ತನ್ನ ಜೀವನದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಪರಿಸರವಾದಿ ನಾಗರಾಜ್ ಬಜಾಲ್ ಹೇಳಿದರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸೆ. 22ರಂದು ನಡೆದ ಕಾರ್ಯಕ್ರಮದಲ್ಲಿ “ಕಸ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆ” ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಕಸವನ್ನು ಹಸಿ ಮತ್ತು ಒಣ ಕಸ ಎಂದು ವಿಂಗಡಿಸಿ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.ಕಸ ವಿಲೇವಾರಿ ಮಾಡುವ ಕಾರ್ಮಿಕರು ಸಮಾಜದ […]
Read More