Yuvavahini

ಘಟಕಗಳು

“ಭವಿಷ್ಯದ ಭದ್ರತೆಗೆ ಉಳಿತಾಯ ಮತ್ತು ಹೂಡಿಕೆ ಅಗತ್ಯ” – ಬಾಲಾಜಿ ರಾವ್

ಮಂಗಳೂರು, ಸೆ. 19: ಉತ್ತಮ ಭವಿಷ್ಯಕ್ಕಾಗಿ ಆದಾಯಕ್ಕೆ ಅನುಗುಣವಾಗಿ ಉಳಿತಾಯ ಮಾಡುವುದರ ಜೊತೆಗೆ, ಸೂಕ್ತ ರೀತಿಯಲ್ಲಿ ಹೂಡಿಕೆ ಮಾಡುವ ಜ್ಞಾನವೂ ಅಗತ್ಯ ಎಂದು ಹಣಕಾಸು ತಜ್ಞ ಬಾಲಾಜಿ ರಾವ್ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ, ಐಸಿಐಸಿಐ ಮ್ಯೂಚುವಲ್ ಫಂಡ್ ಸಹಕಾರದೊಂದಿಗೆ ನಗರದ ದೀಪಾ ಕಂಫರ್ಟ್‌ನಲ್ಲಿ ನಡೆದ ಹಣಕಾಸು ನಿರ್ವಹಣೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಪ್ರಸ್ತುತ ಜೀವನಾವಶ್ಯಕ ವಸ್ತುಗಳ ಬೆಲೆ ಹಾಗೂ ಆಸ್ತಿ ಮೌಲ್ಯಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು […]

Read More

“ಸಮಾನತೆಯ ಸಮಾಜದ ಕನಸು ಕಂಡವರು ನಾರಾಯಣಗುರುಗಳು” : ಅರ್ಚನಾ ಎಂ. ಬಂಗೇರ

ಕಟ್ಟೆಮಾರ್, ಸೆ. 18: ಅಸಮಾನತೆ, ಅಜ್ಞಾನ, ಮೂಢನಂಬಿಕೆ ಹಾಗೂ ಸಾಮಾಜಿಕ ಅನ್ಯಾಯಗಳಿಂದ ಮನುಷ್ಯನಿಗೆ ಮುಕ್ತಿ ದೊರೆಯುವುದೇ ನಿಜವಾದ ಸ್ವಾತಂತ್ರ್ಯ ಎಂಬ ವಿಶಾಲ ಚಿಂತನೆಗೆ ಶ್ರೀ ನಾರಾಯಣಗುರುಗಳು ತಮ್ಮ ಜೀವನದ ಮೂಲಕ ದಾರಿ ತೋರಿಸಿದರು ಎಂದು ಬರಹಗಾರ್ತಿ ಅರ್ಚನಾ ಎಂ. ಬಂಗೇರ ಹೇಳಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ, ಮನೋಜ್ ಕಟ್ಟೆಮಾರ್ ಅವರ ಸಾನಿಧ್ಯದಲ್ಲಿ ನಡೆದ ‘ಗುರುತತ್ವವಾಹಿನಿ’ ಮಾಲಿಕೆ–78ರಲ್ಲಿ ಗುರುಸಂದೇಶ ನೀಡಿದ ಅವರು, ನಾರಾಯಣಗುರುಗಳ ಚಿಂತನೆಗಳು ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದರು. ಶಿಕ್ಷಣದಿಂದ […]

Read More

ಯುವವಾಹಿನಿ (ರಿ.) ಕೂಳೂರು ಘಟಕದಿಂದ 67ನೇ ಮನೆ ಮನೆ ಭಜನೆ

ಕೂಳೂರು ಸೆ 18 : ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 67ನೇ ಮನೆ ಮನೆ ಭಜನೆ ಕಾರ್ಯಕ್ರಮವು ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ ಭಾಸ್ಕರ್ ಅವರ ಉರುಂದಾಡಿಯ ನಿವಾಸದಲ್ಲಿ ಸೆ. 18ರಂದು ನಡೆಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಹರಿಣಾಕ್ಷಿ ಭಾಸ್ಕರ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷೆ ಗೀತಾವಸಂತ್ ಅವರು ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಿದರು. ಬಳಿಕ ಪ್ರಸಾದ […]

Read More

ಮಾನವಕುಲಕ್ಕೆ ಸಮಾನತೆಯ ಸಂದೇಶ ನೀಡಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರು : ದಿನಕರ ಅಂಚನ್ ಬರಿಮಾರು

ಮಾಣಿ, ಸೆ. 18: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೀನಪ್ಪ ಪೂಜಾರಿ ಬರಿಮಾರು ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಉಪನ್ಯಾಸ ನೀಡಿದ ದಿನಕರ ಅಂಚನ್ ಬರಿಮಾರು ಮಾತನಾಡಿ, “ಮಾನವಕುಲಕ್ಕೆ ಸಮಾನತೆಯ ಸಂದೇಶ ನೀಡಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುಗಳು ಜಾತಿ, ಮತ, ಭೇದಭಾವಗಳನ್ನು ಮೀರಿ ಮಾನವೀಯತೆಯ ಬದುಕಿಗೆ ದಾರಿ ತೋರಿಸಿದರು. ಶಿಕ್ಷಣದ ಮೂಲಕ ಜ್ಞಾನವನ್ನು ಬೆಳೆಸಬೇಕು, ಸಂಘಟನೆಯ ಮೂಲಕ ಸಮಾಜವನ್ನು ಬಲಪಡಿಸಬೇಕು ಹಾಗೂ ಸಮಾನತೆಯ […]

Read More

ಸ್ವಚ್ಛ ಸಾಗರ್ – ಸುರಕ್ಷಿತ ಸಾಗರ್ ಅಭಿಯಾನ

ಪಣಂಬೂರು ಕುಳಾಯಿ ಸೆ 18 : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ “ಸ್ವಚ್ಛ ಸಾಗರ್ – ಸುರಕ್ಷಿತ ಸಾಗರ್ ಅಭಿಯಾನ – 2026”ರ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಅಭಿಯಾನದ ಅಂಗವಾಗಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಛಗೊಳಿಸಿದರು. ಈ ಮೂಲಕ ಕಡಲತೀರದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈಜೋಡಿಸಿದರು. ಸ್ವಚ್ಛ ಹಾಗೂ ಸುರಕ್ಷಿತ ಕಡಲತೀರ ನಿರ್ಮಾಣದ […]

Read More

ನೂತನ ತಂಡದ ಪಯಣಕ್ಕೆ ಗುರುಚರಣದಲ್ಲಿ ಭಕ್ತಿಯ ನಮನ

ಪಡುಬಿದ್ರಿ, ಸೆ. 17: ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ನೂತನ ತಂಡದ ಪದಗ್ರಹಣ ಕಾರ್ಯಕ್ರಮಕ್ಕೂ ಮುನ್ನ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಹಾಗೂ ಭಜನಾ ಸೇವೆ ಸಲ್ಲಿಸುವುದು ಘಟಕದ ಸಂಪ್ರದಾಯವಾಗಿದೆ. ಅದರಂತೆ, ಸೆಪ್ಟೆಂಬರ್ 17ರಂದು ಗುರುವಾರ ಘಟಕದ ವತಿಯಿಂದ ಪಡುಬಿದ್ರಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಹಾಗೂ ಭಜನಾ ಸೇವೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಗುರುಗಳ ಸನ್ನಿಧಿಯಲ್ಲಿ ನೂತನ ತಂಡದ ಯಶಸ್ವಿ ಕಾರ್ಯಚಟುವಟಿಕೆಗಳಿಗೆ ಪ್ರಾರ್ಥನೆ ಸಲ್ಲಿಸಿ, ಗುರುತತ್ವ ಹಾಗೂ ಸೇವಾ ಮನೋಭಾವವನ್ನು ಮೈಗೂಡಿಸಿಕೊಂಡು ಮುನ್ನಡೆಯುವ ಸಂಕಲ್ಪವನ್ನು ಕೈಗೊಳ್ಳಲಾಯಿತು. […]

Read More

ಭೇದಭಾವದ ಬೇರುಗಳನ್ನು ಕಿತ್ತೊಗೆದು ಸಮಾನತೆಯ ಸಮಾಜ ಕಟ್ಟಿದ ನಾರಾಯಣ ಗುರು : ಸಚಿನ್ ಅಮೀನ್ ಪೆರಾಜೆ

ಮಾಣಿ, ಸೆ. 17: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಸೆಪ್ಟೆಂಬರ್ 17ರಂದು ಮೋಹನ ಪೂಜಾರಿ ಮುಜಲ ಅವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿನ್ ಅಮೀನ್ ಪೆರಾಜೆ ಅವರು, ಹಿಂದಿನ ಕಾಲದ ಕೇರಳದಲ್ಲಿ ನೆಲೆಸಿದ್ದ ಮೇಲು–ಕೀಳು ಭೇದಭಾವ ಹಾಗೂ ಅನಿಷ್ಟ ಪದ್ಧತಿಗಳಿಂದಾಗಿ ಸಮಾಜದಲ್ಲಿ ಅಸಮಾನತೆ ಬೇರೂರಿತ್ತು. ಇಂತಹ ಸಾಮಾಜಿಕ ಅನಿಷ್ಟಗಳನ್ನು ತೊಡೆದುಹಾಕಿ, ಸಮಾನತೆ, ಶಿಕ್ಷಣ ಮತ್ತು ಸಂಘಟನೆಯ ಮೂಲಕ ಸಮಾಜವನ್ನು ಮುನ್ನಡೆಸುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ […]

Read More

ಶಾಲಾ ಮಕ್ಕಳಿಗೆ ಮೊಬೈಲ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಮಾಹಿತಿ ಶಿಬಿರ

ಕೊಲ್ಯ, ಸೆ. 16: ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಸಹಯೋಗದಲ್ಲಿ ಪಿಎಂ ಶ್ರೀ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಒಂಬತ್ತುಕೆರೆ, ಉಳ್ಳಾಲ ಇಲ್ಲಿನ ವಿದ್ಯಾರ್ಥಿಗಳಿಗೆ ಮೊಬೈಲ್ ಅಡಿಕ್ಷನ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಮಾಹಿತಿ ಶಿಬಿರವು ಸೆ. 16ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ಹಿನ್ನೆಲೆಯಲ್ಲಿ ಮೊಬೈಲ್ ಅಡಿಕ್ಷನ್ […]

Read More

ವ್ಯಕ್ತಿತ್ವ ವಿಕಸನಕ್ಕೆ ಯುವವಾಹಿನಿ ಉತ್ತಮ ವೇದಿಕೆ: ಜೀವನ್ ಕೊಲ್ಯ

ಮಂಗಳೂರು, ಸೆ. 16: ಯುವಕರ ವ್ಯಕ್ತಿತ್ವ ವಿಕಸನಕ್ಕೆ ಅವಕಾಶ ಕಲ್ಪಿಸುವುದರ ಜೊತೆಗೆ, ಅವರೊಳಗಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ ಬೆಳೆಸಲು ಯುವವಾಹಿನಿ ಸಂಸ್ಥೆಯು ಉತ್ತಮ ವೇದಿಕೆಯನ್ನು ನಿರ್ಮಿಸುತ್ತಿದೆ ಎಂದು ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ವ್ಯವಸ್ಥಾಪಕ ಹಾಗೂ ಮುಖ್ಯ ತರಬೇತುದಾರ, ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕದ ಸಾಪ್ತಾಹಿಕ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವ್ಯಕ್ತಿತ್ವ ವಿಕಸನದ ಕುರಿತು ಉಪನ್ಯಾಸ ನೀಡಿದ ಅವರು, ಇಂದಿನ ಯುವಕರಿಗೆ ತಮ್ಮ […]

Read More

ಎಡಪದವು ಗಣೇಶೋತ್ಸವದಲ್ಲಿ ಯುವವಾಹಿನಿಯಿಂದ ಸ್ವಯಂಸೇವೆ

ಎಡಪದವು, ಸೆ. 15: ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರಿ ದೇವಸ್ಥಾನ, ಎಡಪದವು ಇದರ ಆಶ್ರಯದಲ್ಲಿ ನಡೆಯುತ್ತಿರುವ 17ನೇ ವರ್ಷದ ಎಡಪದವು ಗಣೇಶೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ವತಿಯಿಂದ ಸೆ. 15ರಂದು ಒಂದು ದಿನದ ಸ್ವಯಂಸೇವಾ ಕಾರ್ಯ ನಡೆಸಲಾಯಿತು. ಮಧ್ಯಾಹ್ನ 1 ಗಂಟೆಯಿಂದ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಗಣೇಶೋತ್ಸವದ ವಿವಿಧ ಸೇವಾ ಕಾರ್ಯಗಳಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಸೇವಾ ಮನೋಭಾವದಿಂದ ಕೈಜೋಡಿಸುವ ಮೂಲಕ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!