Yuvavahini

ಘಟಕಗಳು

ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂಸೇವೆ; ಅನ್ನದಾನಕ್ಕೆ ₹75,001 ದೇಣಿಗೆ

ಮಂಗಳೂರು, ಅ. 20: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕ್ರಮದ ಸಂಚಾಲಕರ ಸಂಪೂರ್ಣ ಸಹಕಾರದೊಂದಿಗೆ ಸದಸ್ಯರು ಕ್ಷೇತ್ರದಲ್ಲಿ ಸ್ವಯಂಸೇವೆ ಸಲ್ಲಿಸಿ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹75,001 (ಎಪ್ಪತ್ತೈದು ಸಾವಿರದ ಒಂದು ರೂಪಾಯಿ) ಮೊತ್ತದ ದೇಣಿಗೆಯನ್ನು […]

Read More

ಸ್ವಯಂಸೇವೆ; ಅನ್ನದಾನಕ್ಕೆ ₹15,000 ದೇಣಿಗೆ

ಮಂಗಳೂರು, ಅ. 20: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 20ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗಾಗಿ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಲಾದ ₹15,000/- ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಪಡ್ಪು […]

Read More

ಮನೆಮನೆ ಭಜನಾ ಕಾರ್ಯಕ್ರಮ ಸಂಪನ್ನ

ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ಹಮ್ಮಿಕೊಂಡಿರುವ ಮನೆಮನೆ ಭಜನಾ ಕಾರ್ಯಕ್ರಮದ ಅಂಗವಾಗಿ ದಿನಾಂಕ 20-10-2026ರ ಮಂಗಳವಾರ ಸಂಜೆ ಕೋಡಿಕಲ್‌ನ ಶ್ರೀ ಜಗದಂಬ ದೇವಸ್ಥಾನದ ಮೀನಾ ಪೂಜಾರ್ತಿ ಅವರ ಮನೆಯಲ್ಲಿ ಭಜನಾ ಸೇವೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಭಜನೆಯ ಮೂಲಕ ಭಕ್ತಿ, ಆಧ್ಯಾತ್ಮಿಕತೆ ಹಾಗೂ ಗುರುತತ್ವದ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಕ್ತಿಯಿಂದ ಪಾಲ್ಗೊಂಡು ಭಜನಾ ಸೇವೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಭಜನಾ ಸೇವೆ ಸಲ್ಲಿಸಿದ ಎಲ್ಲಾ ಸದಸ್ಯರಿಗೂ ಹಾಗೂ ಆತ್ಮೀಯವಾಗಿ ಆತಿಥ್ಯ ನೀಡಿದ ಕುಟುಂಬದವರಿಗೂ […]

Read More

ಅನ್ನದಾನ ಸೇವೆಗೆ ₹33,500 ದೇಣಿಗೆ ಸಮರ್ಪಣೆ

ಮುಲ್ಕಿ ಅ 20 : ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಮೂಲ್ಕಿ ಘಟಕದ ವತಿಯಿಂದ ದಿನಾಂಕ 20-10-2026ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಯಲ್ಲಿಯೂ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದ ಅನ್ನದಾನ ಸೇವೆಗಾಗಿ ಘಟಕದ ಸರ್ವ ಸದಸ್ಯರ ಸಹಕಾರದೊಂದಿಗೆ […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಜನಾ ಸಂಕೀರ್ತನೆ

ಶಕ್ತಿನಗರ ಅ 20 : ನವರಾತ್ರಿ ಮಹೋತ್ಸವದ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ದಿನಾಂಕ 20-10-2026ರಂದು ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಲಾಯಿತು. ಸಂಜೆ 5:30ರಿಂದ 7:00 ಗಂಟೆಯವರೆಗೆ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರೆಲ್ಲರೂ ಒಗ್ಗೂಡಿ ಭಾಗವಹಿಸಿ, ಭಕ್ತಿಗೀತೆಗಳ ಮೂಲಕ ಶ್ರೀ ಗೋಕರ್ಣನಾಥ ದೇವರ ಆರಾಧನೆ ಸಲ್ಲಿಸಿದರು. ಭಜನಾ […]

Read More

ಕುದ್ರೋಳಿ ಕ್ಷೇತ್ರದಲ್ಲಿ 65ಕ್ಕೂ ಅಧಿಕ ಸದಸ್ಯರಿಂದ ಸ್ವಯಂಸೇವೆ, ‘ಮಾಣಿ ಬಾಲೆ ಮಾಯಾಂದಲ್’ ನೃತ್ಯರೂಪಕ ಪ್ರದರ್ಶನ

ಉಡುಪಿ ಅ 20 : ಯುವವಾಹಿನಿ (ರಿ.) ಉಡುಪಿ ಘಟಕವು ನವರಾತ್ರಿ ಮಹೋತ್ಸವದ ಅಂಗವಾಗಿ ಅಕ್ಟೋಬರ್ 20ರಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸ್ವಯಂಸೇವೆ, ಕಲಾಸೇವೆ ಹಾಗೂ ಶೈಕ್ಷಣಿಕ ನೆರವಿನ ಮೂಲಕ ಸಮಾಜಮುಖಿ ಕಾರ್ಯಗಳನ್ನು ನೆರವೇರಿಸಿತು. ಬೆಳಿಗ್ಗೆ 8.30ರಿಂದ ಆರಂಭಗೊಂಡ ಸ್ವಯಂಸೇವಾ ಕಾರ್ಯದಲ್ಲಿ ಘಟಕದ 65ಕ್ಕೂ ಅಧಿಕ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡು, ಕ್ಷೇತ್ರದಲ್ಲಿ ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಕ್ಷೇತ್ರದಲ್ಲಿ ನಡೆಯುವ ಅನ್ನಸಂತರ್ಪಣೆಗೆ ಘಟಕದ ವತಿಯಿಂದ ₹15,000 ದೇಣಿಗೆಯನ್ನು ಸಮರ್ಪಿಸಲಾಯಿತು. ‘ಮಾಣಿ ಬಾಲೆ ಮಾಯಾಂದಲ್’ […]

Read More

ಕುದ್ರೋಳಿ ಕ್ಷೇತ್ರದ ನವರಾತ್ರಿ ದಸರಾ ಸಂಭ್ರಮದಲ್ಲಿ ಸ್ವಯಂ ಸೇವೆ

ಮಂಗಳೂರು ಅ 20 : ಪ್ರತೀ ವರ್ಷ ಕುದ್ರೋಳಿ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ನಡೆಯುವ ನವರಾತ್ರಿಯ ಸಂಭ್ರಮದ ಸಂದರ್ಭ ನಮ್ಮ ಘಟಕದ ವತಿಯಿಂದ ಸ್ವಯಂ ಸೇವೆಯು ಪ್ರತೀ ದಿನ ಸಂಜೆ 6 ರಿಂದ ತಡರಾತ್ರಿ ವರೆಗೆ ಜವಾಬ್ದಾರಿಯುತವಾಗಿ ನೆರವೇರಿತು. ದಿನಾಂಕ: 11-10-2026 ರಿಂದ 20-10-2026 ರವರೆಗೆ ನಡೆದ ದಸರಾ ಹಬ್ಬದ ಪ್ರಯುಕ್ತ ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ದೇವಸ್ಥಾನದಲ್ಲಿ 10 ದಿನದ ಸ್ವಯಂಸೇವೆಯು ಪ್ರತೀ ದಿನ ಸಂಜೆ 6 ರಿಂದ ತಡರಾತ್ರಿ ವರೆಗೆ ಘಟಕದ ಹೆಚ್ಚಿನ ಸದಸ್ಯರ ಸಹಕಾರದಿಂದ […]

Read More

ಮಂಗಳೂರು ದಸರಾ ಸ್ವಯಂಸೇವೆ; ಅನ್ನದಾನಕ್ಕೆ ₹15,000 ದೇಣಿಗೆ

ಮಂಗಳೂರು, ಅ. 19: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನಡೆಸಲಾಯಿತು. ಕಾರ್ಯಕ್ರಮದ ಸಂಚಾಲಕಿ ಶಶಿಪ್ರಭಾ ಮಿತ್ತೂರು ಅವರ ಸಂಪೂರ್ಣ ಸಹಕಾರದೊಂದಿಗೆ ಘಟಕದ ಸದಸ್ಯರು ಸ್ವಯಂಸೇವೆ ಹಾಗೂ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹15,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ […]

Read More

ಬಲ್ಯ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಯುವವಾಹಿನಿ ಭಜನಾ ಸೇವೆ

ಕಡಬ, ಅ. 19: ಯುವವಾಹಿನಿ (ರಿ.) ಕಡಬ ಘಟಕದ ಭಜನಾ ತಂಡದ ವತಿಯಿಂದ ಸೋಮವಾರ ಬಲ್ಯ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಭಜನಾ ಸೇವೆ ಭಕ್ತಿಭಾವದಿಂದ ನೆರವೇರಿತು. ರಾತ್ರಿ 7ರಿಂದ 8 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ತಂಡದ ಸದಸ್ಯರು ಭಕ್ತಿಯಿಂದ ಭಜನೆಗಳನ್ನು ಹಾಡಿ ದೇವರ ಸನ್ನಿಧಿಯಲ್ಲಿ ಭಕ್ತಿಮಯ ವಾತಾವರಣವನ್ನು ನಿರ್ಮಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕಡಬ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಎನ್. ಎಸ್. ಕಡಬ, ನಾರಾಯಣ ಗುರು ತತ್ವ ಅನುಷ್ಠಾನ ನಿರ್ದೇಶಕ ಜಯಪ್ರಕಾಶ್ ದೋಳ ಸೇರಿದಂತೆ […]

Read More

ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂಸೇವೆ; ಅನ್ನದಾನಕ್ಕೆ ದೇಣಿಗೆ

ಮಂಗಳೂರು, ಅ. 19: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಸಂಚಾಲಕರಾದ ವಿಜೀತ್ ಮುಂಡಾಜೆ ಮತ್ತು ವಿತೇಶ್ ಕೋಟ್ಯಾನ್ ಅವರ ಸಂಪೂರ್ಣ ಸಹಕಾರದೊಂದಿಗೆ ಘಟಕದ ಸದಸ್ಯರು ಸ್ವಯಂಸೇವೆ ಹಾಗೂ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹7,500 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!