Yuvavahini

ಘಟಕಗಳು

ಶ್ರೀ ಚಾಮುಂಡಿ ರಾಹುಗುಳಿಗ ದೈವಸ್ಥಾನದಲ್ಲಿ ಯುವವಾಹಿನಿ ಶಕ್ತಿನಗರ ಘಟಕದಿಂದ ಅನ್ನದಾನ ಸೇವೆ

ಶಕ್ತಿನಗರ ಅ 15 : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 15-10-2026ರಂದು ಕುಂಟಲ್ಪಾಡಿಯ ಶ್ರೀ ಚಾಮುಂಡಿ ರಾಹುಗುಳಿಗ ದೈವಸ್ಥಾನದಲ್ಲಿ ವರ್ಷಂಪ್ರತಿಯಂತೆ ಈ ಬಾರಿಯೂ ಸದಸ್ಯರ ಸಹಕಾರದೊಂದಿಗೆ ಅನ್ನದಾನ ಸೇವೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಧಾರ್ಮಿಕ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ಘಟಕವು, ಸದಸ್ಯರ ಸಹಕಾರದೊಂದಿಗೆ ಅನ್ನದಾನ ಸೇವೆಯನ್ನು ಆಯೋಜಿಸಿ ಭಕ್ತರಿಗೆ ಅನ್ನಪ್ರಸಾದ ವಿತರಿಸುವ ಮೂಲಕ ಸೇವಾ ಮನೋಭಾವವನ್ನು ಮೆರೆದಿತು. ಈ ಸಂದರ್ಭದಲ್ಲಿ ದೈವದ ಪ್ರಸಾದವನ್ನು ಸ್ವೀಕರಿಸಿ ಭಕ್ತರು ಕೃತಾರ್ಥರಾದರು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) […]

Read More

ಅನ್ನದಾನ ಸೇವೆಗೆ ದೇಣಿಗೆ ಸಮರ್ಪಣೆ; ಸದಸ್ಯರ ಸೇವೆಗೆ ಅನುಗ್ರಹ ಪತ್ರ

ಬಜಪೆ ಅ 15 : ಸೇವೆ, ಶಿಸ್ತು ಹಾಗೂ ಸಂಘಟನಾ ಬದ್ಧತೆಯನ್ನು ಮೈಗೂಡಿಸಿಕೊಂಡಿರುವ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ಮಂಗಳೂರು ದಸರಾ–2026ರ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಸ್ವಯಂಸೇವೆ ಸಲ್ಲಿಸಿ, ಅನ್ನದಾನ ಸೇವೆಗೆ ದೇಣಿಗೆ ಸಮರ್ಪಿಸಿದರು. ಕುದ್ರೋಳಿ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ವಿಜೃಂಭಣೆಯಿಂದ ನಡೆದ ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 15ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಯುವವಾಹಿನಿ ಬಜಪೆ ಘಟಕದ ಸದಸ್ಯರು ವಿವಿಧ ಸೇವಾ ಕಾರ್ಯಗಳಲ್ಲಿ ಶಿಸ್ತುಬದ್ಧವಾಗಿ ಹಾಗೂ ಉತ್ಸಾಹದಿಂದ […]

Read More

‘ನಮ್ಮ ಕೈತೋಟ, ನಮ್ಮ ಆಹಾರ’ ವಿನೂತನ ಅಭಿಯಾನಕ್ಕೆ ಚಾಲನೆ

ಕೊಲ್ಯ, ಅ. 14: ರಾಸಾಯನಿಕ ಪದಾರ್ಥಗಳ ಬಳಕೆಯ ಆತಂಕದ ನಡುವೆ ಆರೋಗ್ಯಕರ ಆಹಾರ ಸೇವನೆ ಹಾಗೂ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಸದಸ್ಯರಿಗಾಗಿ ‘ನಮ್ಮ ಕೈತೋಟ, ನಮ್ಮ ಆಹಾರ’ ಎಂಬ ವಿನೂತನ ಕಾರ್ಯಕ್ರಮವನ್ನು ಅಕ್ಟೋಬರ್ 14ರಂದು ಕೊಲ್ಯದಲ್ಲಿ ಆಯೋಜಿಸಲಾಯಿತು. ಮನೆಯ ಕೈತೋಟದಲ್ಲಿ ಸಾವಯವ ಪದ್ಧತಿಯಲ್ಲಿ ತರಕಾರಿಗಳನ್ನು ಬೆಳೆಸಿ, ಅವುಗಳನ್ನು ಆಹಾರವಾಗಿ ಬಳಸುವ ಮೂಲಕ ಆರೋಗ್ಯ ಕಾಪಾಡುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು. ಉಳ್ಳಾಲ ವಲಯದ […]

Read More

ಭಜನೆಯಿಂದ ಮನಸ್ಸಿಗೆ ಶಾಂತಿ, ಸೇವೆಯಲ್ಲಿ ಸಾರ್ಥಕತೆ: ನಾರಾಯಣ ಪೂಜಾರಿ

ಬಜಪೆ, ಅ. 14: ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಸುಂಕದಕಟ್ಟೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ ಭಕ್ತಿಭಾವದಿಂದ ನೆರವೇರಿತು. ಶಕ್ತಿ ಸ್ವರೂಪಿಣಿಯಾದ ಶ್ರೀ ದೇವಿಯನ್ನು ಆರಾಧಿಸುವ ನವರಾತ್ರಿಯ ನಾಲ್ಕನೇ ದಿನವಾದ ಬುಧವಾರ, ಅಕ್ಟೋಬರ್ 14ರಂದು ಸಂಜೆ 6ರಿಂದ ರಾತ್ರಿ 8ರವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಯುವವಾಹಿನಿ ಬಜಪೆ ಘಟಕದ ಸದಸ್ಯರು ಶ್ರೀ ದೇವಿಯ ನಾಮಸ್ಮರಣೆ ಹಾಗೂ ಭಜನೆಗಳನ್ನು ಭಕ್ತಿಯಿಂದ ಹಾಡಿ, ಕ್ಷೇತ್ರದಲ್ಲಿ ಆಧ್ಯಾತ್ಮಿಕ ವಾತಾವರಣವನ್ನು ನಿರ್ಮಿಸಿದರು. ಭಜನಾ ಕಾರ್ಯಕ್ರಮದ […]

Read More

ನವರಾತ್ರಿ ಸಂಭ್ರಮದಲ್ಲಿ ಭಕ್ತಿರಸದ ಕಂಪು ಹರಿಸಿದ ಭಜನಾ ಕಾರ್ಯಕ್ರಮ

ಮಂಗಳೂರು, ಅ. 14: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಅಕ್ಟೋಬರ್ 14ರಂದು ಕೊಂಚಾಡಿಯ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ 9ರಿಂದ 10.30ರವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಘಟಕದ ಸದಸ್ಯೆಯರು ಭಕ್ತಿಭಾವದಿಂದ ಪಾಲ್ಗೊಂಡು, ದೇವಿಯ ಸ್ತುತಿಗೀತೆಗಳನ್ನು ಹಾಡುವ ಮೂಲಕ ಭಕ್ತಿರಸವನ್ನು ಪಸರಿಸಿದರು. ಸಾಮೂಹಿಕ ಭಜನೆಯ ಮೂಲಕ ಆಧ್ಯಾತ್ಮಿಕ ವಾತಾವರಣ ನಿರ್ಮಾಣಗೊಂಡಿತು. ಭಕ್ತಿಪೂರ್ವಕವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸದಸ್ಯೆಯರು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾದರು.

Read More

ಹೆಜಮಾಡಿ ಗುರುಮಂದಿರದಲ್ಲಿ ನವರಾತ್ರಿ ಪೂಜೆ ಹಾಗೂ ಅನ್ನಸಂತರ್ಪಣೆ

ಹೆಜಮಾಡಿ, ಅ. 12: ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಹೆಜಮಾಡಿಯ ನಾರಾಯಣಗುರು ಮಂದಿರದಲ್ಲಿ ನವರಾತ್ರಿ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವು ಭಕ್ತಿಭಾವ ಮತ್ತು ಶ್ರದ್ಧಾಪೂರ್ವಕವಾಗಿ ನೆರವೇರಿತು. ನವರಾತ್ರಿಯ ಎರಡನೇ ದಿನದ ಶುಭ ಸಂದರ್ಭದಲ್ಲಿ ಗುರುಮಂದಿರದಲ್ಲಿ ಶ್ರೀದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಘಟಕದ ಸದಸ್ಯರು ಹಾಗೂ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು. ಪೂಜೆಯ ಬಳಿಕ ಘಟಕದ ವತಿಯಿಂದ ಅನ್ನಸಂತರ್ಪಣೆ ಆಯೋಜಿಸಲಾಯಿತು. ಭಕ್ತರು ಪ್ರಸಾದ ಸ್ವೀಕರಿಸಿ ಕಾರ್ಯಕ್ರಮದ ಧಾರ್ಮಿಕ ವಾತಾವರಣದಲ್ಲಿ ಭಾಗಿಯಾದರು. […]

Read More

ಉಳ್ಳಾಲ್ತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಯುವವಾಹಿನಿ ಭಜನಾ ಸಂಕೀರ್ತನೆ

ವಿಟ್ಲ, ಅ. 12: ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ವಿಟ್ಲ ಸೀಮೆಯ ಒಡೆಯ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಜೆ ಭಜನಾ ಸಂಕೀರ್ತನೆ ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು. ಸಂಜೆ 6.15ರಿಂದ ರಾತ್ರಿ 8 ಗಂಟೆಯವರೆಗೆ ನಡೆದ ಭಜನಾ ಸಂಕೀರ್ತನೆಯಲ್ಲಿ ಭಕ್ತಿಗೀತೆಗಳ ಗಾಯನದ ಮೂಲಕ ಭಕ್ತಿಮಯ ವಾತಾವರಣ ನಿರ್ಮಾಣಗೊಂಡಿತು. ಶ್ರದ್ಧೆ ಮತ್ತು ಭಕ್ತಿಯಿಂದ ನಡೆದ ಈ ಭಜನಾ ಸೇವೆಯು ಭಾಗವಹಿಸಿದ ಭಕ್ತಾದಿಗಳನ್ನು ಭಕ್ತಿರಸದಲ್ಲಿ ಮಿಂದೇಳುವಂತೆ ಮಾಡಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) […]

Read More

ಗೆಜ್ಜೆಗಿರಿ ಸನ್ನಿಧಾನದಲ್ಲಿ ಭಕ್ತಿಭಾವದ ಭಜನಾ ಸಂಕೀರ್ತನೆ

ಮಾಣಿ, ಅ. 12: ನವರಾತ್ರಿ ಉತ್ಸವದ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಅಕ್ಟೋಬರ್ 12ರಂದು ಗೆಜ್ಜೆಗಿರಿ ನಂದನ ಬಿತ್ತಿಲು ಸನ್ನಿಧಾನದಲ್ಲಿ ಭಜನಾ ಸಂಕೀರ್ತನೆಯನ್ನು ಭಕ್ತಿಭಾವದಿಂದ ನಡೆಸಲಾಯಿತು. ಈ ಸಂದರ್ಭದಲ್ಲಿ ಘಟಕದ ಮಹಿಳಾ ನಿರ್ದೇಶಕಿ ಪುಷ್ಪಶ್ರೀ ನಾಗೇಶ್, ಮಾಜಿ ಅಧ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು, ಜನಾರ್ದನ ಪೂಜಾರಿ ಕೊಡಂಗೆ, ಯಶೋಧರ, ಲೋಕೇಶ್ ಕೋರ್ಯಾ, ಸುಜಿತ್ ಬಾಕಿಲ ಹಾಗೂ ಪುಟಾಣಿ ಮಕ್ಕಳು ಭಾಗವಹಿಸಿ ಭಜನಾ ಸೇವೆ ಸಲ್ಲಿಸಿದರು. ಭಕ್ತಿಗೀತೆಗಳ ಗಾಯನ, ನಾಮಸ್ಮರಣೆ ಹಾಗೂ ಪುಟಾಣಿ ಮಕ್ಕಳ ಉತ್ಸಾಹಭರಿತ […]

Read More

ಮಂಗಳೂರು ದಸರಾ : ಸ್ವಯಂಸೇವೆ ಹಾಗೂ ಅನ್ನದಾನಕ್ಕೆ ₹26,000 ದೇಣಿಗೆ

ಶಕ್ತಿನಗರ ಅ 12 : ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 12-10-2026ರಂದು ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಅಲ್ಲದೆ, ಪ್ರತಿವರ್ಷ ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ವಿವಿಧ ಘಟಕಗಳ ಸಹಭಾಗಿತ್ವದಲ್ಲಿ ನಡೆಯುವ ಅನ್ನದಾನ ಸೇವೆಗಾಗಿ ಶಕ್ತಿನಗರ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಲಾದ ₹26,000/- ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು. ಈ […]

Read More

ಯುವವಾಹಿನಿ ಬಂಟ್ವಾಳ ಘಟಕದಿಂದ ದಸರಾ ಮಹೋತ್ಸವದಲ್ಲಿ ಸ್ವಯಂಸೇವಾ ಸೇವೆ

ಬಂಟ್ವಾಳ, ಅ. 12: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ದಸರಾ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 12ರಂದು ಬಿ.ಸಿ. ರೋಡ್‌ನ ಅನ್ನಪೂರ್ಣ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು. ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿ ಸೇವಾ ಮನೋಭಾವ ಮೆರೆದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!