
21-09-2026, 11:00 AM
ಮಂಗಳೂರು, ಸೆ. 21: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಸೆಪ್ಟೆಂಬರ್ ಸಂಚಿಕೆಯನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಜೈರಾಜ್ ಸೋಮಸುಂದರಂ ಅವರು ಬಿಡುಗಡೆಗೊಳಿಸಿದರು. ಸೆಪ್ಟೆಂಬರ್ 21ರಂದು ಲೋಕಶಾಂತಿಯ ಹರಿಕಾರ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ದಿನದ ಅಂಗವಾಗಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರು ಸಾನಿಧ್ಯದಲ್ಲಿ ‘ಯುವಸಿಂಚನ’ ಸೆಪ್ಟೆಂಬರ್ ಸಂಚಿಕೆಯನ್ನು ಬಿಡುಗಡೆ ಮಾಡಿ, ಪತ್ರಿಕೆಗೆ ಶುಭಹಾರೈಸಿದರು. ಯುವವಾಹಿನಿಯ ಚಟುವಟಿಕೆಗಳು, ಸಾಮಾಜಿಕ ಕಳಕಳಿ, ಶೈಕ್ಷಣಿಕ […]
Read More

20-09-2026, 9:00 PM
ಕೂಳೂರು ಸೆ 20 : “ಜೀವ ಜಡರೂಪ ಪ್ರಪಂಚವನದಾವುದೋ | ಆವರಿಸಿಕೊಂಡು ಮೊಳನೆರೆದುಮಿಹುದಂತೆ || ಭಾವಕೊಳಪಡದಂತೆ ಅಳತೆಗಳವಡದಂತೆ | ಆ ವಿಶೇಷಕೆ ನಮಿಸೊ – ಮಂಕುತಿಮ್ಮ ||” ಎಂಬ ಡಿ.ವಿ. ಗುಂಡಪ್ಪ (ಡಿ.ವಿ.ಜಿ.) ಅವರ ಮಂಕುತಿಮ್ಮನ ಕಗ್ಗದ ಸಾಲುಗಳು ಜೀವನದ ಅಗಾಧತೆಯತ್ತ ನಮ್ಮನ್ನು ಕರೆದೊಯ್ಯುತ್ತವೆ. ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸೆಪ್ಟೆಂಬರ್ 20ರಂದು ಕೇರಳ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ “ಕ್ಷೇತ್ರ ದರ್ಶನ – 2026” ಆಧ್ಯಾತ್ಮಿಕ ಹಾಗೂ ಸ್ಮರಣೀಯ ಪ್ರವಾಸವನ್ನು ಆಯೋಜಿಸಲಾಯಿತು. ಬೆಳಗ್ಗೆ 5 […]
Read More

20-09-2026, 8:00 PM
ಮಾಣಿ, ಸೆ. 20: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಸದಾನಂದ ಪೂಜಾರಿ ಬರಿಮಾರು ಅವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ನಿರ್ದೇಶಕ ರಾಜೇಶ್ ಬಲ್ಯ, ಸಮಾಜದಲ್ಲಿ ಸಮಾನತೆ ಹಾಗೂ ಸಾಮಾಜಿಕ ಬದಲಾವಣೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳು ದಾರಿದೀಪವಾಗಿದ್ದಾರೆ. ಮದ್ಯಪಾನ, ಮೂಢನಂಬಿಕೆ ಹಾಗೂ ಅನಿಷ್ಟ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಅವರು, ಸರಳತೆ, ಶಿಕ್ಷಣ ಹಾಗೂ ಮಾನವೀಯತೆಯ ಮಹತ್ವವನ್ನು ಸಮಾಜಕ್ಕೆ […]
Read More

20-09-2026, 8:00 PM
ಕೊಲ್ಯ ಸೆ 20 : ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಈ ವರ್ಷದ ಮೊದಲ ದೇಗುಲ ದರ್ಶನ ಪ್ರವಾಸವನ್ನು ಆಯೋಜಿಸಲಾಗಿದ್ದು, ಸುಮಾರು 60 ಮಂದಿ ಸದಸ್ಯರು ಹಾಗೂ ಕುಟುಂಬ ಸದಸ್ಯರು ಭಾಗವಹಿಸಿದ್ದರು. ತಲಪಾಡಿಯಿಂದ ಆರಂಭಗೊಂಡ ಈ ಪವಿತ್ರ ಪಯಣವು ವಿವಿಧ ಪುಣ್ಯಕ್ಷೇತ್ರಗಳ ದರ್ಶನದೊಂದಿಗೆ ಭಕ್ತಿ, ಸ್ನೇಹ, ಒಗ್ಗಟ್ಟು ಹಾಗೂ ಸಂತಸದ ಅನುಭವವನ್ನು ನೀಡಿತು. ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಶಶಿಕಾಂತ್ ಪರ್ಯತ್ತೂರು ಪ್ರಾರ್ಥನೆ ನೆರವೇರಿಸಿ ಪ್ರಯಾಣಕ್ಕೆ ಚಾಲನೆ ನೀಡಿದರು. ಘಟಕದ ಅಧ್ಯಕ್ಷ ಜೀವನ್ […]
Read More

20-09-2026, 3:00 PM
ಬೆಳ್ಳಾರೆ, ಸೆ. 20: ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ, ಗುರುಪೂಜೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವು ಸೆ. 20ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಎ. ಕೃಷ್ಣಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ರಾಜ್ಯಶಾಸ್ತ್ರ ಉಪನ್ಯಾಸಕ ದಯಾನಂದ ಕರ್ಕೇರ ಉಗ್ಗೇಲುಬೆಟ್ಟು ಅವರು ಗುರು ಸಂದೇಶ ನೀಡುತ್ತಾ, “ಬ್ರಹ್ಮಶ್ರೀ ನಾರಾಯಣ ಗುರುಗಳು ಮಹತ್ಕಾರ್ಯ ಮಾಡಿದವರು. ಶಿಕ್ಷಣಕ್ಕೆ ಹೆಚ್ಚಿನ […]
Read More

20-09-2026, 2:00 PM
ಬೆಂಗಳೂರು, ಸೆ. 20: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸೆ. 20ರಂದು ವಿಜಯನಗರದ ಹೊಸಹಳ್ಳಿಯ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು. ಬೆಳಿಗ್ಗೆ ಭಜನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು, ಪುತ್ತೂರಿನ ಹರೀಶ ಶಾಂತಿ ಅವರ ನೇತೃತ್ವದಲ್ಲಿ ಗುರುಪೂಜೆ ನೆರವೇರಿತು. ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ ಹಾಗೂ ಉದ್ಘಾಟಕ ಗೋವಿಂದ ಬಾಬು ಪೂಜಾರಿ ಅವರನ್ನು ಪೂರ್ಣಕುಂಭ ಹಾಗೂ ಕುಣಿತ ಭಜನೆಯೊಂದಿಗೆ ಸ್ವಾಗತಿಸಲಾಯಿತು. ಬಳಿಕ ಮಹಾಪೂಜೆ ನಡೆಯಿತು. ಘಟಕದ ಅಧ್ಯಕ್ಷ ವಿಜೇತ್ ವಿ. […]
Read More

20-09-2026, 1:00 PM
ಸುರತ್ಕಲ್, ಸೆ. 20: ಯುವವಾಹಿನಿ (ರಿ.) ಸುರತ್ಕಲ್ ಘಟಕದ ಗುರುಸ್ಮರಣೆ ಕಾರ್ಯಕ್ರಮವು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಭಜನಾ ತಂಡಗಳ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಲೋಕೇಶ್ ಅಮೀನ್ ಹಾಗೂ ಶಿವಾನಂದ ದೀಪ ಬೆಳಗಿಸಿ ಸ್ಪರ್ಧೆಗೆ ಚಾಲನೆ ನೀಡಿದರು. ಭಜನಾ ಕ್ಷೇತ್ರದ ತೀರ್ಪುಗಾರರಾಗಿ ರಮೇಶ್ ಕಲ್ಮಾಡಿ, ಗಣೇಶ್ ನೀರ್ಕೆರೆ ಹಾಗೂ ಸುರೇಶ್ ಆಚಾರ್ಯ ಭಾಗವಹಿಸಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ […]
Read More

19-09-2026, 11:00 AM
ಮಂಗಳೂರು, ಸೆ. 19: ಉತ್ತಮ ಭವಿಷ್ಯಕ್ಕಾಗಿ ಆದಾಯಕ್ಕೆ ಅನುಗುಣವಾಗಿ ಉಳಿತಾಯ ಮಾಡುವುದರ ಜೊತೆಗೆ, ಸೂಕ್ತ ರೀತಿಯಲ್ಲಿ ಹೂಡಿಕೆ ಮಾಡುವ ಜ್ಞಾನವೂ ಅಗತ್ಯ ಎಂದು ಹಣಕಾಸು ತಜ್ಞ ಬಾಲಾಜಿ ರಾವ್ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ, ಐಸಿಐಸಿಐ ಮ್ಯೂಚುವಲ್ ಫಂಡ್ ಸಹಕಾರದೊಂದಿಗೆ ನಗರದ ದೀಪಾ ಕಂಫರ್ಟ್ನಲ್ಲಿ ನಡೆದ ಹಣಕಾಸು ನಿರ್ವಹಣೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಪ್ರಸ್ತುತ ಜೀವನಾವಶ್ಯಕ ವಸ್ತುಗಳ ಬೆಲೆ ಹಾಗೂ ಆಸ್ತಿ ಮೌಲ್ಯಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು […]
Read More

18-09-2026, 8:00 PM
ಕಟ್ಟೆಮಾರ್, ಸೆ. 18: ಅಸಮಾನತೆ, ಅಜ್ಞಾನ, ಮೂಢನಂಬಿಕೆ ಹಾಗೂ ಸಾಮಾಜಿಕ ಅನ್ಯಾಯಗಳಿಂದ ಮನುಷ್ಯನಿಗೆ ಮುಕ್ತಿ ದೊರೆಯುವುದೇ ನಿಜವಾದ ಸ್ವಾತಂತ್ರ್ಯ ಎಂಬ ವಿಶಾಲ ಚಿಂತನೆಗೆ ಶ್ರೀ ನಾರಾಯಣಗುರುಗಳು ತಮ್ಮ ಜೀವನದ ಮೂಲಕ ದಾರಿ ತೋರಿಸಿದರು ಎಂದು ಬರಹಗಾರ್ತಿ ಅರ್ಚನಾ ಎಂ. ಬಂಗೇರ ಹೇಳಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ, ಮನೋಜ್ ಕಟ್ಟೆಮಾರ್ ಅವರ ಸಾನಿಧ್ಯದಲ್ಲಿ ನಡೆದ ‘ಗುರುತತ್ವವಾಹಿನಿ’ ಮಾಲಿಕೆ–78ರಲ್ಲಿ ಗುರುಸಂದೇಶ ನೀಡಿದ ಅವರು, ನಾರಾಯಣಗುರುಗಳ ಚಿಂತನೆಗಳು ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದರು. ಶಿಕ್ಷಣದಿಂದ […]
Read More

18-09-2026, 8:00 PM
ಕೂಳೂರು ಸೆ 18 : ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 67ನೇ ಮನೆ ಮನೆ ಭಜನೆ ಕಾರ್ಯಕ್ರಮವು ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ ಭಾಸ್ಕರ್ ಅವರ ಉರುಂದಾಡಿಯ ನಿವಾಸದಲ್ಲಿ ಸೆ. 18ರಂದು ನಡೆಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಹರಿಣಾಕ್ಷಿ ಭಾಸ್ಕರ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷೆ ಗೀತಾವಸಂತ್ ಅವರು ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಿದರು. ಬಳಿಕ ಪ್ರಸಾದ […]
Read More