Yuvavahini

ಘಟಕಗಳು

ನವರಾತ್ರಿ ಸಂಭ್ರಮದಲ್ಲಿ ಭಕ್ತಿರಸದ ಕಂಪು ಹರಿಸಿದ ಭಜನಾ ತಂಡ

ಕಡಬ, ಅ. 18: ಪಾಲ್ತಿಮಾರು ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕಡಬ ಘಟಕದ ಭಜನಾ ತಂಡದಿಂದ ಭಾನುವಾರ ರಾತ್ರಿ ಭಜನಾ ಸೇವೆ ಭಕ್ತಿಭಾವದಿಂದ ನೆರವೇರಿತು. ರಾತ್ರಿ 7.30ರಿಂದ 9 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ತಂಡದ ಸದಸ್ಯರು ಸುಮಧುರ ಭಜನೆಗಳನ್ನು ಹಾಡುವ ಮೂಲಕ ಶ್ರೀ ದೇವಿಯ ಸನ್ನಿಧಿಯಲ್ಲಿ ಭಕ್ತಿಮಯ ವಾತಾವರಣವನ್ನು ಸೃಷ್ಟಿಸಿದರು. ಭಜನಾ ಸಂಕೀರ್ತನೆಯು ಭಕ್ತರಲ್ಲಿ ಆಧ್ಯಾತ್ಮಿಕ ಭಾವನೆ ಮೂಡಿಸಿ ನವರಾತ್ರಿ ಉತ್ಸವದ ಸಂಭ್ರಮಕ್ಕೆ ಮೆರುಗು ನೀಡಿತು. ಈ ಸಂದರ್ಭದಲ್ಲಿ […]

Read More

ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂಸೇವೆ; ಅನ್ನದಾನಕ್ಕೆ ₹10,000 ದೇಣಿಗೆ

ಮಂಗಳೂರು, ಅ. 18: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಹಳೆಯಂಗಡಿ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನೆರವೇರಿಸಲಾಯಿತು. ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹10,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು. ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಯುವವಾಹಿನಿ ಹಳೆಯಂಗಡಿ ಘಟಕವು ಮಂಗಳೂರು ದಸರಾ ಮಹೋತ್ಸವದ […]

Read More

ಸ್ವಯಂಸೇವೆ ಹಾಗೂ ಅನ್ನದಾನಕ್ಕೆ ದೇಣಿಗೆ ಸಮರ್ಪಣೆ

ಸಸಿಹಿತ್ಲು ಅ 18 : ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಸಸಿಹಿತ್ಲು ಘಟಕದ ವತಿಯಿಂದ ದಿನಾಂಕ 18-10-2026ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗಾಗಿ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಲಾದ ₹8,000/- (ಎಂಟು ಸಾವಿರ ರೂಪಾಯಿ) ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ […]

Read More

ಅನ್ನದಾನ ಸೇವೆಗೆ ₹10,000 ದೇಣಿಗೆ ಸಮರ್ಪಣೆ

ಸುಳ್ಯ 18 : ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ದಿನಾಂಕ 18-10-2026ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗಾಗಿ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಲಾದ ₹10,000/- (ಹತ್ತು ಸಾವಿರ ರೂಪಾಯಿ) ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ […]

Read More

ಬಜಪೆಯ ಶಾರದಾ ಮಾತೆಯ ಸನ್ನಿಧಿಯಲ್ಲಿ ಭಜನಾ ಸಂಕೀರ್ತನೆ

ಬಜಪೆ, ಅ. 18: ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.), ಬಜಪೆ–ಕರಂಬಾರು ಹಾಗೂ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ನವರಾತ್ರಿ ಮಹೋತ್ಸವದ ಪ್ರಯುಕ್ತ ಬಜಪೆಯ ಶಕ್ತಿ ಮಂಟಪದಲ್ಲಿ ಆರಾಧಿಸಲ್ಪಡುವ ಶ್ರೀ ಶಾರದಾ ಮಾತೆಯ ಸನ್ನಿಧಿಯಲ್ಲಿ ಅಕ್ಟೋಬರ್ 18, 2026ರ ಭಾನುವಾರ ಭಜನಾ ಸಂಕೀರ್ತನೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಿದರು. ನವರಾತ್ರಿಯ ಎಂಟನೇ ದಿನವಾದ ಮಹಾಷ್ಟಮಿಯಂದು ಮಹಾಗೌರಿ ದೇವಿಯ ಆರಾಧನೆಯ ಶುಭ ಸಂದರ್ಭದಲ್ಲಿ ಸಂಜೆ 5ರಿಂದ 6 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ದೇವರ ನಾಮಸ್ಮರಣೆಯೊಂದಿಗೆ ಭಕ್ತಿಮಯ […]

Read More

ಶ್ರೀ ಮಹಾಲಕ್ಷ್ಮಿ ಸನ್ನಿಧಿಯಲ್ಲಿ ಭಜನಾ ಸಂಕೀರ್ತನೆ

ಬಜಪೆ, ಅ. 17: ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಕರಂಬಾರು ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ ಭಕ್ತಿಭಾವದಿಂದ ನೆರವೇರಿತು. ನವರಾತ್ರಿಯ ಏಳನೇ ದಿನವಾದ ಶನಿವಾರ, ಅಕ್ಟೋಬರ್ 17ರಂದು ಸಂಜೆ 6ರಿಂದ ರಾತ್ರಿ 8ರವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಶ್ರೀ ಮಹಾಲಕ್ಷ್ಮಿ ದೇವಿಯ ಸನ್ನಿಧಿಯಲ್ಲಿ ಭಕ್ತಿಗೀತೆ ಹಾಗೂ ದೇವರ ನಾಮಸ್ಮರಣೆಯ ಮೂಲಕ ಭಕ್ತಿಮಯ ವಾತಾವರಣವನ್ನು ನಿರ್ಮಿಸಿದರು. ನವರಾತ್ರಿಯ ಏಳನೇ ದಿನದಂದು ದುರ್ಗಾದೇವಿಯನ್ನು ಕಾಳರಾತ್ರಿ ರೂಪದಲ್ಲಿ ಆರಾಧಿಸುವುದು ವಿಶೇಷ. ಅಜ್ಞಾನ […]

Read More

ಯುವವಾಹಿನಿ ಮೂಲ್ಕಿ ಘಟಕದಿಂದ ಮನೆ ಮನೆ ಭಜನೆ

ಮೂಲ್ಕಿ, ಅ. 17: ಯುವವಾಹಿನಿ (ರಿ.) ಮೂಲ್ಕಿ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರೊಂದಿಗೆ ಆತ್ಮೀಯ ಸಂಬಂಧ ಬೆಸೆಯುವ ಮತ್ತು ಸದಸ್ಯರ ನಡುವಿನ ಸಂಪರ್ಕದ ಕೊಂಡಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮನೆ ಮನೆ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಘಟಕದ ಕಾರ್ಯದರ್ಶಿ ಶ್ರೀಮತಿ ವೇದಾ ಜಯ ಕುಬೇರ್ ಅವರ ಮನೆಯಲ್ಲಿ ಅಕ್ಟೋಬರ್ 17ರಂದು ನಡೆದ ಈ ಕಾರ್ಯಕ್ರಮದಲ್ಲಿ ಗುರು ಸಂದೇಶವನ್ನು ಸಾರುವ ಭಜನೆಗಳನ್ನು ಭಕ್ತಿಭಾವದಿಂದ ಹಾಡಲಾಯಿತು. ಭಜನಾ ಸಂಕೀರ್ತನೆಯ ಮೂಲಕ ಗುರುಗಳ ತತ್ವಾದರ್ಶಗಳನ್ನು ಸ್ಮರಿಸುವುದರೊಂದಿಗೆ ಸದಸ್ಯರು ಹಾಗೂ ಅವರ […]

Read More

ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂಸೇವೆ; ಅನ್ನದಾನಕ್ಕೆ ₹20,000 ದೇಣಿಗೆ

ಮಂಗಳೂರು, ಅ. 17: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನೆರವೇರಿಸಲಾಯಿತು. ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹20,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು. ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ ಮಂಗಳೂರು ಮಹಿಳಾ ಘಟಕವು ಮಂಗಳೂರು […]

Read More

‘ಪುದ್ದಾರ್ದ ಪೊರ್ಲು’ ಮೂಲಕ ತುಳುನಾಡಿನ ಸಂಸ್ಕೃತಿಗೆ ಮೆರುಗು

ಮಾಣಿ, ಅ. 17: ತುಳುನಾಡಿನ ಮಣ್ಣಿನ ಸೊಗಡು, ಕೃಷಿ ಸಂಸ್ಕೃತಿ ಹಾಗೂ ಹಿರಿಯರು ಪಾಲಿಸಿಕೊಂಡು ಬಂದ ಸಂಪ್ರದಾಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಅಕ್ಟೋಬರ್ 17ರಂದು ಬಿಲ್ಲವ ಕಿರೋಡಿಯನ್ಸ್ ಕುಟುಂಬದ ಚಾವಡಿಯಲ್ಲಿ ‘ಪುದ್ದಾರ್ದ ಪೊರ್ಲು’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಮಾತುಗಾರರಾಗಿ ಭಾಗವಹಿಸಿದ ಲೋಕನಾಥ್ ತಿಮರಾಜೆ ಅವರು ಮಾತನಾಡಿ, ಹಿಂದಿನ ಕಾಲದಲ್ಲಿ ಭತ್ತ ಮತ್ತು ಅನ್ನಕ್ಕೆ ನೀಡಲಾಗುತ್ತಿದ್ದ ಮಹತ್ವವನ್ನು ವಿವರಿಸಿದರು. ಭತ್ತವನ್ನು ದೈವಸ್ವರೂಪವಾಗಿ ಕಂಡು, ಅನ್ನವನ್ನು ದೇವರ ಪ್ರಸಾದವೆಂದು ಗೌರವಿಸುವ […]

Read More

ಮಂಗಳೂರು ದಸರಾ ಭಜನಾ ಸೇವೆ

ಮಂಗಳೂರು, ಅ. 16: ಮಂಗಳೂರು ದಸರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ಮಾತೆಯ ಸನ್ನಿಧಿಯಲ್ಲಿ ಭಜನಾ ಸೇವೆ ಭಕ್ತಿಭಾವದಿಂದ ನೆರವೇರಿತು. ಅಕ್ಟೋಬರ್ 16ರಂದು ಬೆಳಿಗ್ಗೆ 10ರಿಂದ 11 ಗಂಟೆಯವರೆಗೆ ನಡೆದ ಭಜನಾ ಸೇವೆಯಲ್ಲಿ ಘಟಕದ ಸದಸ್ಯರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಶಾರದಾ ಮಾತೆಯ ನಾಮಸ್ಮರಣೆ ಹಾಗೂ ಸುಮಧುರ ಭಜನೆಗಳನ್ನು ಹಾಡಿದರು. ಸದಸ್ಯರ ಭಕ್ತಿಪೂರ್ಣ ಗಾಯನವು ಭಕ್ತರ ಮನಸೂರೆಗೊಂಡಿತು. ಭಜನಾ ಸಂಕೀರ್ತನೆಯಿಂದ ಕ್ಷೇತ್ರದ ಪರಿಸರದಲ್ಲಿ ಭಕ್ತಿಮಯ ವಾತಾವರಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!