Yuvavahini

ಘಟಕಗಳು

ಶಿಕ್ಷಣದಿಂದ ಜ್ಞಾನ, ಮಾನವೀಯತೆಯಿಂದ ಸಮಾನತೆಯ ಸಮಾಜ

ನಗ್ರಿ, ಅ. 29: ಶ್ರೀ ನಾರಾಯಣಗುರುಗಳು ಶಿಕ್ಷಣವನ್ನು ಸಾಮಾಜಿಕ ಪರಿವರ್ತನೆ, ಸ್ವಾಭಿಮಾನ ಮತ್ತು ಸಮಾನತೆಯ ಪ್ರಮುಖ ಸಾಧನವಾಗಿ ಪ್ರತಿಪಾದಿಸಿದರು. ಜಾತಿ-ಧರ್ಮದ ಭೇದಭಾವಗಳನ್ನು ಮೀರಿ ಮನುಷ್ಯರೆಲ್ಲರೂ ಸಮಾನರು ಎಂಬ ಮಾನವೀಯ ಸಂದೇಶವನ್ನು ಸಾರಿದ ಅವರು, ಜ್ಞಾನದ ಮೂಲಕ ಅಜ್ಞಾನ ಮತ್ತು ಸಾಮಾಜಿಕ ಅಸಮಾನತೆಗಳನ್ನು ನಿವಾರಿಸಲು ಕರೆ ನೀಡಿದರು ಎಂದು ನಿರೂಪಕ ರಾಜೇಶ್ ಬಲ್ಯ ತಿಳಿಸಿದರು. ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳು ಒಂದಕ್ಕೊಂದು ಪೂರಕವಾದಾಗ ಮಾತ್ರ ಸಮಾನತೆ, ಸಹಬಾಳ್ವೆ ಹಾಗೂ ಸಾಮಾಜಿಕ ನ್ಯಾಯ ನೆಲೆಸಲು ಸಾಧ್ಯ. ನಾರಾಯಣಗುರುಗಳ ಚಿಂತನೆಗಳು ಇಂದಿನ […]

Read More

ರಾಜ್ಯ ಮಟ್ಟದ ವಿಶು ವಿಹಂಗಮ ಮತ್ತು ವಿಶು ಕಾವ್ಯಾಮೃತ ಸ್ಪರ್ಧೆ: ಫಲಿತಾಂಶ ಪ್ರಕಟ

ಮಂಗಳೂರು ಅ 29: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ದತ್ತಿನಿಧಿ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಆನ್‌ಲೈನ್ ‘ವಿಶು ವಿಹಂಗಮ’ ಕೃತಿ ವಿಮರ್ಶೆ ಮತ್ತು ‘ವಿಶು ಕಾವ್ಯಾಮೃತ’ ಕವನ ಸ್ಪರ್ಧೆಗಳ ಫಲಿತಾಂಶ ಪ್ರಕಟಗೊಂಡಿದೆ. ಸಾಹಿತ್ಯ ಲೋಕಕ್ಕೆ ಕರಾವಳಿಯ ಅಮೂಲ್ಯ ಕೊಡುಗೆಯಾಗಿರುವ ಮೇರು ಸಾಹಿತಿ ವಿಶುಕುಮಾರ್ ಅವರ ಸಾಹಿತ್ಯ ಕೃತಿಗಳನ್ನು ಯುವ ಬರಹಗಾರರು ಹಾಗೂ ಸಾಹಿತ್ಯಾಸಕ್ತರಿಗೆ ಪರಿಚಯಿಸುವ ಉದ್ದೇಶದಿಂದ ಈ […]

Read More

ಮಹಿಳೆಯರ ಸ್ವಾವಲಂಬಿ ಬದುಕಿಗೆ ಬ್ರೈಡಲ್ ಮೇಕಪ್ ತರಬೇತಿ ಪೂರಕ: ವಿದ್ಯಾ ರಾಕೇಶ್

ಮಂಗಳೂರು ಅ 28 : ಮಹಿಳೆಯರು ಕಲಿತ ಕೌಶಲ್ಯವನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವುದರ ಜೊತೆಗೆ, ಭವಿಷ್ಯದಲ್ಲಿ ಇತರರಿಗೂ ಉದ್ಯೋಗಾವಕಾಶ ಕಲ್ಪಿಸುವ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ಹಾಗೂ ತರಬೇತಿಯ ಸಂಪನ್ಮೂಲ ವ್ಯಕ್ತಿ ವಿದ್ಯಾ ರಾಕೇಶ್ ಹೇಳಿದರು. ಯುವವಾಹಿನಿ (ರಿ.) ಕೊಲ್ಯ ಘಟಕ, ಸಿಡಾಕ್ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 30 ದಿನಗಳ ಬ್ರೈಡಲ್ ಮೇಕಪ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು […]

Read More

ಕುದ್ರೋಳಿ ದಸರಾ ಸಂಭ್ರಮದಲ್ಲಿ ಕರ್ತವ್ಯ ನಿರ್ವಹಿಸಿದ ಸಂಚಾಲಕರು ಮತ್ತು ಮಾರ್ಗದರ್ಶಕರಿಗೆ ಗೌರವಾರ್ಪಣೆ

ಮಂಗಳೂರು ಅ‌27 : ದಸರಾ ಸಂಭ್ರಮದಂದು ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂ ಸೇವೆಯ ಮತ್ತು ದಸರಾ ಶೋಭಾಯಾತ್ರೆಯ ಜವಾಬ್ದಾರಿ ಹೊತ್ತು ಕರ್ತವ್ಯ ನಿರ್ವಹಿಸಿದ ಸಂಚಾಲಕರಿಗೆ ಗೌರವ ಸಲ್ಲಿಸುವುದು ಆದ್ಯ ಕರ್ತವ್ಯ. ದಿನಾಂಕ: 27-10-2026 ರಂದು ಸಂಜೆ 6 ಗಂಟೆಗೆ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕರಾದ ಗೋಪಾಲ್ ಪೂಜಾರಿ ಅವರು ಗುರು ಪೂಜೆ ನೆರವೇರಿಸಿದರು, ಅಂದಿನ ಗುರು ಪೂಜೆಯ ಸೇವೆಯನ್ನು ಎರಡನೇ ಉಪಾಧ್ಯಕ್ಷರು ಮಹೇಶ್ ಅಮೀನ್ ನೀಡಿದ್ದು ಪೂಜೆಯ ನಂತರ ಅವರಿಗೆ ಪ್ರಸಾದ ನೀಡಲಾಯಿತು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!