Yuvavahini

ಘಟಕಗಳು

ಬೆಳಕಿನ ಹಬ್ಬದ ಸಂಭ್ರಮದಲ್ಲಿ ಒಂದಾದ ಯುವವಾಹಿನಿ ಶಕ್ತಿನಗರ ಘಟಕ

ನಾರಾಯಣ ಗುರು ಮಂದಿರದಲ್ಲಿ ದೀಪಾವಳಿ ಆಚರಣೆ – ನೂರಕ್ಕೂ ಅಧಿಕ ಮಂದಿ ಭಾಗಿ ಶಕ್ತಿನಗರ ನ 12 : ಕತ್ತಲೆಯ ಮೇಲೆ ಬೆಳಕಿನ, ಕೆಟ್ಟದರ ಮೇಲೆ ಒಳ್ಳೆಯದರ ಹಾಗೂ ಅಜ್ಞಾನದ ಮೇಲೆ ಜ್ಞಾನದ ವಿಜಯದ ಸಂಕೇತವಾದ ದೀಪಾವಳಿ ಹಬ್ಬವನ್ನು ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಇದರ ಸಹಭಾಗಿತ್ವದಲ್ಲಿ ದಿನಾಂಕ 12-11-2026ರಂದು ಕುಂಟಲ್ಪಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ […]

Read More

ಸದಸ್ಯೆಯ ಕುಟುಂಬದ ಸಂಕಷ್ಟಕ್ಕೆ ಸಾಂತ್ವನದ ಆಸರೆಯಾದ ಯುವವಾಹಿನಿ ಮಹಿಳಾ ಘಟಕ”

ಮಂಗಳೂರು ನ 12 : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಘಟಕದ ಸಕ್ರಿಯ ಸದಸ್ಯೆಯೊಬ್ಬರ ವಿವಾಹದ ಸಂದರ್ಭದಲ್ಲಿ ಹಾಗೂ ಅವರ ತಾಯಿಯವರ ಅನಾರೋಗ್ಯದ ಹಿನ್ನೆಲೆಯಲ್ಲಿ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಮಾನವೀಯ ಸಹಾಯ ಹಸ್ತ ಚಾಚಲಾಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯೆಯರು ಪ್ರೀತಿಯಿಂದ ಸಂಗ್ರಹಿಸಿದ ಒಟ್ಟು ₹39,500/- ಧನಸಹಾಯವನ್ನು ದಿನಾಂಕ 12-11-2026ರಂದು ಅವರ ಮನೆಗೆ ತೆರಳಿ, ಅವರ ತಾಯಿಯವರ ಕೈಯಲ್ಲಿ ಆತ್ಮೀಯವಾಗಿ ಹಸ್ತಾಂತರಿಸಲಾಯಿತು. ಸಂಘಟನೆ ಎಂಬುದು ಕೇವಲ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಸದಸ್ಯರ […]

Read More

ಕುಟುಂಬದ ಬಾಂಧವ್ಯ ಬೆಸೆಯುವ ಸಂಭ್ರಮದ ದೀಪಾವಳಿ ಆಚರಣೆ

ಕೊಲ್ಯ ನ 11 : ಕತ್ತಲೆಯನ್ನು ದೂರಮಾಡಿ ಬೆಳಕನ್ನು ಪಸರಿಸುವ ದೀಪಾವಳಿ ಹಬ್ಬವು ಸಂತೋಷ, ಸಂಭ್ರಮ ಹಾಗೂ ಸೌಹಾರ್ದತೆಯ ಸಂಕೇತವಾಗಿದೆ. ಕುಟುಂಬದ ಸದಸ್ಯರೆಲ್ಲರೂ ಒಂದೆಡೆ ಸೇರಿ ಹಬ್ಬವನ್ನು ಆಚರಿಸುವುದರಿಂದ ಪ್ರೀತಿ, ವಿಶ್ವಾಸ ಮತ್ತು ಬಾಂಧವ್ಯ ಮತ್ತಷ್ಟು ಗಟ್ಟಿಯಾಗುತ್ತದೆ. ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ ‘ದೀಪಾವಳಿ ಸಂಭ್ರಮ’ ಕಾರ್ಯಕ್ರಮವು ದಿನಾಂಕ 11.11.2026ರ ಬುಧವಾರದಂದು ಕನೀರುತೋಟದ ಸಮನ್ವಿ ಫಾರ್ಮ್ ಹೌಸ್‌ನಲ್ಲಿ ಸಡಗರ ಹಾಗೂ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಸದಸ್ಯರೆಲ್ಲರೂ ಹಣತೆಗಳನ್ನು ಬೆಳಗಿಸಿ, ಪಟಾಕಿ ಸಿಡಿಸಿ, ಸಿಹಿ ತಿಂಡಿಗಳನ್ನು […]

Read More

ಅಂಧಕಾರದಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಸುಜ್ಞಾನದ ಕಡೆಗೆ – ಅರ್ಥಪೂರ್ಣ ದೀಪಾವಳಿ ಆಚರಣೆ

ಮಂಗಳೂರು ನ 10 : ಅಂಧಕಾರವನ್ನು ದೂರಮಾಡಿ ಬೆಳಕನ್ನು ಪಸರಿಸುವ ದೀಪಾವಳಿ ಹಬ್ಬವನ್ನು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನವೆಂಬರ್ 10ರಂದು ಘಟಕದ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ ಮಂಗಳೂರು ಘಟಕದ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕರಾದ ಗೋಪಾಲ ಪೂಜಾರಿ ಅವರು ಗುರುಪೂಜೆಯನ್ನು ನೆರವೇರಿಸಿದರು. ಅಂದಿನ ಗುರುಪೂಜೆಯ ಸೇವೆ ಹಾಗೂ ಉಪಾಹಾರದ ವ್ಯವಸ್ಥೆಯನ್ನು ಘಟಕದ ಸದಸ್ಯರಾದ ರಾಜೇಂದ್ರ ಚಿಲಿಂಬಿ ವಹಿಸಿಕೊಂಡಿದ್ದರು. ಸಂಜೆ 7 ಗಂಟೆಗೆ ಗುರು ಪ್ರಾರ್ಥನೆಯೊಂದಿಗೆ […]

Read More

ಸಂಸ್ಕೃತಿ ಮತ್ತು ಸಂಸ್ಕಾರದ ಪ್ರತೀಕವಾಗಿ ಧಾನ್ಯಪೂಜೆ ಹಾಗೂ ಗೋಪೂಜೆ

ಕುಪ್ಪೆಪದವು–ಎಡಪದವು ನ 10 : ಭಾರತೀಯ ಸಂಸ್ಕೃತಿಯಲ್ಲಿ ಧಾನ್ಯಕ್ಕೆ ಅನ್ನದಾತನ ಸಂಕೇತವಾಗಿ ಹಾಗೂ ಗೋಮಾತೆಗೆ ಪವಿತ್ರ ಸ್ಥಾನವಿದೆ. ಇಂತಹ ಸಾಂಪ್ರದಾಯಿಕ ಆಚರಣೆಗಳ ಮಹತ್ವವನ್ನು ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ವತಿಯಿಂದ ನವೆಂಬರ್ 10ರಂದು ಧಾನ್ಯಪೂಜೆ ಹಾಗೂ ಗೋಪೂಜೆ ಕಾರ್ಯಕ್ರಮವನ್ನು ಘಟಕದ ಮಾಜಿ ಅಧ್ಯಕ್ಷರಾದ ಸತೀಶ್ ಕೆ.ಎಂ. ಅವರ ಹೊಸಹೊಕ್ಳು ನಿವಾಸದಲ್ಲಿ ಭಕ್ತಿಭಾವದಿಂದ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಯುವವಾಹಿನಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಸತೀಶ್ ಮತ್ತು ಪೂರ್ಣಿಮಾ ದಂಪತಿಗಳು ಮನೆಯವರೊಂದಿಗೆ ಆತ್ಮೀಯವಾಗಿ ಶಾಲು […]

Read More

ಮಹಿಳೆಯರ ಹಗ್ಗಜಗ್ಗಾಟದಲ್ಲಿ ಯುವವಾಹಿನಿ ಬಜಪೆ ಘಟಕಕ್ಕೆ ದ್ವಿತೀಯ ಬಹುಮಾನ

ಬಜಪೆ ನ 01 : ಕ್ರೀಡಾಸ್ಫೂರ್ತಿ, ಸಂಘಟನಾ ಶಕ್ತಿ ಹಾಗೂ ಒಗ್ಗಟ್ಟಿನ ಪ್ರದರ್ಶನದೊಂದಿಗೆ ಯುವವಾಹಿನಿ (ರಿ.) ಬಜಪೆ ಘಟಕದ ಮಹಿಳಾ ಸದಸ್ಯರು ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದು ಘಟಕಕ್ಕೆ ಹೆಮ್ಮೆ ತಂದಿದ್ದಾರೆ. ನವೆಂಬರ್ 1, 2026ರಂದು ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನ, ಕಿನ್ನಿಪದವು, ಬಜಪೆ ಇಲ್ಲಿ ಗುರುಕುಲ ಬಾಲ ಸಂಸ್ಕಾರ ಕೇಂದ್ರ ಕಿನ್ನಿಪದವು ಇದರ ಚತುರ್ಥ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಲಾಗಿದೆ. ಶ್ರೀ ಶನಿಮಹಾತ್ಮೆ ತಾಳಮದ್ದಳೆ ಹಾಗೂ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು ನ 09 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 09-11-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಶಾರದಾ ಭಜನ್ಸ್ ಉಳ್ಳಾಲ ಇವರ ಸಹಯೋಗದಲ್ಲಿ ನೆರವೇರಿತು. ಸುಮಧುರ ರಾಗ ತಾಳಗಳಿಂದ ದೇವರ ನಾಮ ಸ್ಮರಣೆಯ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ […]

Read More

ಮಕ್ಕಳ ಸಂತಸವೇ ದೀಪಾವಳಿಯ ಬೆಳಕು – ಚಿಣ್ಣರೊಂದಿಗೆ ಸಂಭ್ರಮ

ಮಂಗಳೂರು ನ 09 : ಹಬ್ಬಗಳ ಸಂಭ್ರಮವು ಕೇವಲ ನಮ್ಮ ಮನೆಗಳಿಗೆ ಸೀಮಿತವಾಗದೆ, ಸಮಾಜದ ಪ್ರತಿಯೊಬ್ಬರ ಬದುಕಿನಲ್ಲೂ ಸಂತೋಷದ ಬೆಳಕು ಮೂಡಿಸಬೇಕು ಎಂಬ ಆಶಯದೊಂದಿಗೆ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕವು ಬಿಜೈ ಕಾಪಿಕಾಡ್‌ನ ಚಿಣ್ಣರ ತಂಗುಧಾಮದಲ್ಲಿ ಪುಟಾಣಿ ಮಕ್ಕಳೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿತು. ನವೆಂಬರ್ 9ರಂದು ಸಂಜೆ ನಡೆದ ಕಾರ್ಯಕ್ರಮವು ದೀಪ ಪ್ರಜ್ವಲನೆ ಹಾಗೂ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂತೋಷ್ ಕುಲಾಲ್ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷೆ ದೀಪಿಕಾ ಮನೋಜ್, ಕಾರ್ಯದರ್ಶಿ ಪ್ರಿಯಾ ಸುರೇಶ್ […]

Read More

ಗೋಪೂಜೆ ಹಾಗೂ ಗೋಸೇವಾ ಕಾರ್ಯ

ಶಕ್ತಿನಗರ ನ 09 : ಹಿಂದೂ ಸಂಸ್ಕೃತಿಯಲ್ಲಿ ಗೋಮಾತೆಗೆ ಪವಿತ್ರ ಹಾಗೂ ವಿಶಿಷ್ಟ ಸ್ಥಾನವಿದ್ದು, ಗೋಸೇವೆಯನ್ನು ಪುಣ್ಯದ ಕಾರ್ಯವೆಂದು ಪರಿಗಣಿಸಲಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಇದರ ಜಂಟಿ ಆಶ್ರಯದಲ್ಲಿ ನವೆಂಬರ್ 9ರಂದು ಘಟಕದ ಸದಸ್ಯರಾದ ವಾಣಿ ಅವರ ಮನೆಯಲ್ಲಿ ಗೋಪೂಜೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಲಾಯಿತು. ಈ ಸಂದರ್ಭದಲ್ಲಿ ಗೋವಿನ ದೈನಂದಿನ ಆಹಾರಕ್ಕಾಗಿ 50 ಕೆ.ಜಿ. ಹಿಂಡಿಯನ್ನು ನೀಡಿ ಗೋಸೇವಾ […]

Read More

ಮಹಾತ್ಮರನ್ನು ಆರಾಧನೆಗೆ ಸೀಮಿತಗೊಳಿಸದೆ ಅವರ ವಿಚಾರಗಳನ್ನು ಅನುಸರಿಸೋಣ – ಸುಧಾಕರ ಸುವರ್ಣ

ಸುಳ್ಯ ನ 08 : ಬ್ರಹ್ಮಶ್ರೀ ನಾರಾಯಣ ಗುರುಗಳಂತಹ ಮಹಾತ್ಮರನ್ನು ಗುಡಿ ಕಟ್ಟಿ ಆರಾಧನೆಗೆ ಮಾತ್ರ ಸೀಮಿತಗೊಳಿಸದೆ, ಅವರ ಚಿಂತನೆ ಮತ್ತು ಆದರ್ಶಗಳನ್ನು ಮನನ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪತ್ರಕರ್ತ ಸುಧಾಕರ ಸುವರ್ಣ ತಿಂಗಳಾಡಿ ಹೇಳಿದರು. ಅವರು ನವೆಂಬರ್ 8ರಂದು ಸುಳ್ಯ ತಾಲೂಕು ಯುವವಾಹಿನಿ ಘಟಕದ ವತಿಯಿಂದ ಸುಳ್ಯದ ಕಾನತ್ತಿಲದಲ್ಲಿರುವ ಸುಂದರ ಪೂಜಾರಿಯವರ ಮನೆಯಲ್ಲಿ ಆಯೋಜಿಸಲಾದ ‘ಗುರುಸ್ಫೂರ್ತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾರಾಯಣ ಗುರುಗಳ ತತ್ವಚಿಂತನೆ, ಸಾಮಾಜಿಕ ಪರಿವರ್ತನೆಯ ಸಂದೇಶ ಹಾಗೂ ಯುವವಾಹಿನಿ ಸಂಸ್ಥೆಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!