Yuvavahini

ಘಟಕಗಳು

ಯುವವಾಹಿನಿ ಪಣಂಬೂರು–ಕುಳಾಯಿ ಘಟಕದ ತುಡರ್ ಪರ್ಬ

ಪಣಂಬೂರು–ಕುಳಾಯಿ ನ 08 : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ನವೆಂಬರ್ 8ರಂದು ಘಟಕದ ಸಲಹೆಗಾರರಾದ ಸುಜಾತ ಕುಳಾಯಿ ಅವರ ಮನೆಯಲ್ಲಿ ತುಡರ್ ಪರ್ಬ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಸುನಿಲ್ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ಸಾಂಪ್ರದಾಯಿಕವಾಗಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಆರಂಭದಲ್ಲಿ ಮನೆಯ ಮುಂಭಾಗದಲ್ಲಿ ಹಣತೆಗಳನ್ನು ಬೆಳಗಿಸುವ ಮೂಲಕ ದೀಪಾವಳಿಯ ಬೆಳಕಿನ ಹಬ್ಬಕ್ಕೆ ಚಾಲನೆ ನೀಡಲಾಯಿತು. ಬಳಿಕ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಸದಸ್ಯರಿಗಾಗಿ ವಿವಿಧ ಮನರಂಜನಾ ಆಟಗಳನ್ನು ಆಯೋಜಿಸಲಾಗಿದ್ದು, ಎಲ್ಲರೂ ಉತ್ಸಾಹದಿಂದ ಭಾಗವಹಿಸಿದರು. […]

Read More

‘ಸಿನಿದನಿ’ ಕಿರುಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ – ಕಲಾವಿದರಿಗೆ ಗೌರವಾರ್ಪಣೆ

ಬಜಪೆ ನ 08 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ – 2026ರ ಅಂಗವಾಗಿ ಆಯೋಜಿಸಲಾದ ‘ಸಿನಿದನಿ’ ಕಿರುಚಿತ್ರ ಸ್ಪರ್ಧೆಯಲ್ಲಿ ಬಜಪೆ ಘಟಕವು ದ್ವಿತೀಯ ಬಹುಮಾನ ಪಡೆದುಕೊಂಡಿದ್ದು, ಘಟಕದ ಹೆಮ್ಮೆಗೆ ಮತ್ತೊಂದು ಗರಿ ಮೂಡಿಸಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಸಂಕಲನಕಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಭವಿತ್ ಪೋರ್ಕೊಡಿ ಹಾಗೂ ದ್ವಿತೀಯ ಬಹುಮಾನ ಗಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ […]

Read More

ವಿಶೇಷ ಮಕ್ಕಳ ಮೊಗದಲ್ಲಿ ನಗು ಮೂಡಿಸಿದ ಧನ್ವಿಕಾಳ ಹುಟ್ಟುಹಬ್ಬ : ಮಾಣಿ ಘಟಕದ ‘ಧನ್ಯತೆಯ ಬೆಳಕು’

ಮಂಗಳೂರು ನ. 08 : ಹುಟ್ಟುಹಬ್ಬವೆಂಬುದು ಕೇವಲ ವೈಯಕ್ತಿಕ ಸಂಭ್ರಮವಲ್ಲ, ಅದನ್ನು ಸಮಾಜದೊಂದಿಗೆ ಹಂಚಿಕೊಂಡಾಗ ಅದರ ಸಾರ್ಥಕತೆ ಹೆಚ್ಚುತ್ತದೆ ಎಂಬ ಆಶಯದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 08-11-2026ರಂದು ಮಂಗಳೂರಿನ ಪಡೀಲ್‌ನಲ್ಲಿರುವ ಸಂವೇದನಾ ಮಕ್ಕಳ ಮನೆಯಲ್ಲಿ ‘ಧನ್ಯತೆಯ ಬೆಳಕು’ ಎಂಬ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪುಟ್ಟ ಮಗು ಧನ್ವಿಕಾಳ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ವಿಶೇಷ ಮಕ್ಕಳೊಂದಿಗೆ ಆಚರಿಸುವ ಮೂಲಕ ಪ್ರೀತಿ, ವಾತ್ಸಲ್ಯ ಹಾಗೂ ಮಾನವೀಯ ಸೇವೆಯ ಸಂದೇಶವನ್ನು ಸಾರಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳಿಗೆ […]

Read More

ಹಣತೆಯ ಬೆಳಕಿಗಿಂತ ಮಿಗಿಲಾದ ಪ್ರೀತಿಯ ಬೆಳಕು ಮೂಡಿಸಿದ ದೀಪಾವಳಿ ಸಂಭ್ರಮ

ಕಡಬ ನ. 08 : ದೀಪಾವಳಿ ಎಂದರೆ ಕೇವಲ ಹಣತೆ ಬೆಳಗಿಸಿ ಪಟಾಕಿ ಸಿಡಿಸುವ ಹಬ್ಬವಲ್ಲ; ಮತ್ತೊಬ್ಬರ ಬದುಕಿನಲ್ಲಿ ಪ್ರೀತಿ, ವಿಶ್ವಾಸ ಹಾಗೂ ಸಂತೋಷದ ಬೆಳಕು ಮೂಡಿಸುವ ಮಾನವೀಯತೆಯ ಹಬ್ಬ ಎಂಬುದನ್ನು ಯುವವಾಹಿನಿ (ರಿ.) ಕಡಬ ಘಟಕವು ವಿಶಿಷ್ಟವಾಗಿ ಸಾರಿತು. ದೀಪಾವಳಿ ಪ್ರಯುಕ್ತ ಕಡಬದ ಉಮ್ಮಕ್ಕ ಯಾನೆ ದೋಳದ ಅಪ್ಪೆ ಅವರ ಮನೆಯಲ್ಲಿ ನವೆಂಬರ್ 8ರಂದು ‘ಕರುಣೆಯ ಬೆಳಕು’ ಎಂಬ ಶೀರ್ಷಿಕೆಯಡಿ ಅರ್ಥಪೂರ್ಣ ದೀಪಾವಳಿ ಆಚರಣೆಯನ್ನು ಹಮ್ಮಿಕೊಳ್ಳಲಾಯಿತು. ದೋಳದ ಅಪ್ಪೆ ಅವರು ಹಣತೆ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ […]

Read More

ಯುವವಾಹಿನಿ ಸಂಸ್ಥೆಯ ಕಾರ್ಯ ಅಭಿನಂದನಾರ್ಹ – ಕೆ. ಅಭಯಚಂದ್ರ ಜೈನ್

ಮೂಡುಬಿದಿರೆ ನ 07: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ಸಮಾಜ ಮಂದಿರ ಸಭಾ (ರಿ.) ಮೂಡುಬಿದಿರೆ ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 7ರಂದು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಸಾರ್ವಜನಿಕರಿಗಾಗಿ ಆಯೋಜಿಸಿದ್ದ ಐದನೇ ವರ್ಷದ *‘ಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ’*ಯ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಮಾಜ ಮಂದಿರ ಸಭಾ (ರಿ.) ಅಧ್ಯಕ್ಷರೂ, ಮಾಜಿ ಸಚಿವರೂ ಆಗಿರುವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಸಮಾಜ […]

Read More

ಸರ್ವಧರ್ಮ ಭಾವೈಕ್ಯತೆಯ ಸಂದೇಶ ಸಾರಿದ ತುಳುವೆರೆ ತುಡರ್ ಪರ್ಬ ಆಚರಣೆ

ಮುಲ್ಕಿ ನ 07 : ಸರ್ವಧರ್ಮ ಭಾವೈಕ್ಯತೆಯ ಮೂಲಕ ದೀಪಾವಳಿ ಆಚರಿಸುವ ಯುವವಾಹಿನಿಯ ಕಾರ್ಯ ಅಭಿನಂದನೀಯ. ಇಂದಿನ ಯುವಜನಾಂಗಕ್ಕೆ ಹಿಂದಿನ ಕಾಲದ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚರಣೆಗಳ ಮಹತ್ವವನ್ನು ತಿಳಿಸಿಕೊಡುವ ಕಾರ್ಯ ನಿರಂತರವಾಗಿ ನಡೆಯಬೇಕು. ದೀಪಾವಳಿ ಆಚರಣೆಯ ಮೂಲಕ ಎಲ್ಲರ ಮನೆ ಮನಗಳಲ್ಲಿ ಬೆಳಕು ಮೂಡಲಿ, ಲೋಕದಲ್ಲಿ ಸುಖ, ಶಾಂತಿ ಹಾಗೂ ನೆಮ್ಮದಿ ನೆಲೆಸಲಿ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ವಸಂತ ಬೆರ್ನಾಡ್ ಹೇಳಿದರು. ಅವರು ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಮುಲ್ಕಿ […]

Read More

ತುಳುನಾಡ ತುಡರ್ ಪರ್ಬ ಪ್ರೀತಿ ಬಾಂಧವ್ಯದ ಸಂಕೇತ

ಬೆಳ್ತಂಗಡಿ ನ 07 : ಯುವವಾಹಿನಿ.(ರಿ.)ಬೆಳ್ತಂಗಡಿ ‌ಘಟಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಭಜನಾ‌ ಮಂಡಳಿ (ರಿ.)ಪಣಕಜೆ, ಶ್ರೀ ಕೃಷ್ಣಾ ಮಹಿಳಾ‌ ಮಂಡಳಿ, ಧ್ವನಿ ನ್ಯೂಸ್ ಬೆಳ್ತಂಗಡಿ ಇದರ ‌ಸಹಯೋಗದಲ್ಲಿ ನವೆಂಬರ್ 7 ರಂದು ಶ್ರೀ ಕೃಷ್ಣಾ ಭಜನಾ ಮಂದಿರ ಪಣಕಜೆಯಲ್ಲಿ ತುಳುನಾಡ ತುಡರ್‌ ಪರ್ಬ-2026 ಎಂಟನೇ ವರ್ಷದ ಸಾರ್ವಜನಿಕ ದೀಪಾವಳಿ ಆಚರಣೆಯನ್ನು ಹಮ್ಮಿಕೊಳ್ಳಲಾಯಿತು. ಜೊತೆಯಲ್ಲಿ ” ತುಳುನಾಡ ತುಡರ್ ಪರ್ಬ *ಕವಿ ಗೋಷ್ಠಿ ಸಾರ್ವಜನಿಕ ಗೂಡು ದೀಪ ಸ್ಪರ್ಧೆ, ರಂಗೋಲಿ ಸ್ಪರ್ಧೆ ಯನ್ನು ಆಯೋಜಿಸಲಾಗಿತ್ತು.ಸಾವಿರದ‌ ಒಂದು […]

Read More

ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದಲ್ಲಿ

ಬಜಪೆ ನ 07 : ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಬಿಂಬ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ನವೆಂಬರ್ 8, 2026ರಂದು ಬಜಪೆಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ಹಾಗೂ ಗುರುಮಂದಿರದ ಸದಸ್ಯರು ಸೇವಾಭಾವದಿಂದ ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡರು. ವರ್ಧಂತ್ಯುತ್ಸವದ ಅಂಗವಾಗಿ ಗುರುದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಬಜಪೆ ವ್ಯಾಪ್ತಿಯ ವಿವಿಧ ಭಜನಾ ತಂಡಗಳಿಂದ ನಿರಂತರ ಭಜನಾ ಸಂಕೀರ್ತನೆ ಭಕ್ತಿಭಾವದಿಂದ ನಡೆಯಿತು. ಮಧ್ಯಾಹ್ನದ ಅನ್ನಪ್ರಸಾದ ಸೇವೆಯಲ್ಲಿ ಹಾಗೂ ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡ […]

Read More

ಇತರ ಸಂಘ ಸಂಸ್ಥೆಗಳಿಗೆ ಯುವವಾಹಿನಿ ಮಾದರಿ ಸಂಘಟನೆ: ಸಚಿವ ಯು.ಟಿ. ಖಾದರ್ ಫರೀದ್

ಮಂಗಳೂರು, ನ. 07: ಸಮಾಜಮುಖಿ ಸೇವೆ, ಶಿಕ್ಷಣ, ಉದ್ಯೋಗ ಹಾಗೂ ಯುವಜನತೆಯ ಸಬಲೀಕರಣದ ಮೂಲಕ ಯುವವಾಹಿನಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿ ಬೆಳೆದು ನಿಂತಿದೆ ಎಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಫರೀದ್ ಹೇಳಿದರು. ಯುವವಾಹಿನಿ ಕೇವಲ ಒಂದು ಸಂಘಟನೆಯಾಗಿ ಕಾರ್ಯನಿರ್ವಹಿಸದೆ, ಸಂಘಟನಾತ್ಮಕ ಶಿಸ್ತು, ಸಮಾಜಮುಖಿ ಕಾಳಜಿ, ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ಸೇವಾ ಮನೋಭಾವದ ಮೂಲಕ ವಿಶಿಷ್ಟ ಗುರುತನ್ನು ಮೂಡಿಸಿದೆ. […]

Read More

ದೀಪಾವಳಿಯ ಸಂಭ್ರಮದಲ್ಲಿ ಮಾನವೀಯತೆ ಬೆಳಕು : ಬಡ ಕುಟುಂಬಗಳಿಗೆ ರೇಷನ್ ಕಿಟ್ ವಿತರಣೆ

ಕೂಳೂರು ನ‌ 06: ಬೆಳಕಿನ ಹಬ್ಬ ದೀಪಾವಳಿಯನ್ನು ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳೊಂದಿಗೂ ಸಂತೋಷದಿಂದ ಆಚರಿಸುವ ಸದುದ್ದೇಶದಿಂದ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಬಡ ಹಾಗೂ ಅಶಕ್ತ ಕುಟುಂಬಗಳಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಧಾನ್ಯಗಳ ರೇಷನ್ ಕಿಟ್ ವಿತರಿಸುವ ಮಾನವೀಯ ಸೇವಾ ಕಾರ್ಯಕ್ರಮವು ನವೆಂಬರ್ 6, 2026ರಂದು ನಡೆಯಿತು. ಘಟಕದ ಫಲ್ಗುಣಿ ಸಭಾಂಗಣದಲ್ಲಿ ಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಜೀವನ ನಿರ್ವಹಣೆಗೆ ಕಷ್ಟಪಡುತ್ತಿರುವ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!