Yuvavahini

ಘಟಕಗಳು

ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವೆ

ಕೊಲ್ಯ : ದಿನಾಂಕ 03-02-2026ರಿಂದ 06-02-2026ರವರೆಗೆ ಉಮಾಪುರಿ ಕಾಪಿಕಾಡಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಜರಗಿದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಶ್ರದ್ಧಾ–ಭಕ್ತಿಯಿಂದ ಸ್ವಯಂಸೇವೆಯಲ್ಲಿ ತೊಡಗಿ ಭಕ್ತರ ಸೇವೆಯಲ್ಲಿ ನಿರತರಾದರು. ಧಾರ್ಮಿಕ ಭಾವನೆ ಮತ್ತು ಸೇವಾ ಮನೋಭಾವದಿಂದ ದೇವಸ್ಥಾನದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಶ್ರೀದೇವಿಯ ಸಾನಿಧ್ಯದಲ್ಲಿ ಕೃತಾರ್ಥರಾದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ನಿತಿನ್ ಕರ್ಕೇರ ಅವರು ಸ್ವಯಂಸೇವೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ, ಅವರ ಸಹಕಾರ ಮತ್ತು ಸಮರ್ಪಣಾ ಮನೋಭಾವಕ್ಕೆ […]

Read More

ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂದರ್ಭ ಸೇವೆ

ಸಸಿಹಿತ್ಲು : ಯುವವಾಹಿನಿ (ರಿ.) ಸಸಿಹಿತ್ಲು ಘಟಕದ ಸದಸ್ಯರು ದಿನಾಂಕ 04.02.2026 ರಿಂದ 08.02.2026ರವರೆಗೆ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು ಇಲ್ಲಿ ನಡೆದ ಹಸಿರು ಹೊರೆಕಾಣಿಕೆ, ನೇಮೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಐದು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರ ವ್ಯವಸ್ಥೆ, ಅನ್ನಸಂತರ್ಪಣೆ, ಶಿಸ್ತು ನಿರ್ವಹಣೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಸದಸ್ಯರು ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಯುವವಾಹಿನಿ ಸದಸ್ಯರು ಶ್ರದ್ಧಾಭಕ್ತಿಯಿಂದ ಸೇವೆ ಸಲ್ಲಿಸಿ ದೈವಸ್ಥಾನದ ಆಡಳಿತ […]

Read More

ಯುವವಾಹಿನಿಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣದ ಶಿಲಾನ್ಯಾಸ

ಮೂಡುಬಿದಿರೆ : ಸೇವೆಯೇ ಧರ್ಮ ಎಂಬ ತತ್ವವನ್ನು ಕಾರ್ಯರೂಪಕ್ಕೆ ತಂದು, ಯುವವಾಹಿನಿ (ರಿ.) ಮೂಡುಬಿದಿರೆ ಘಟಕವು ಮಾನವೀಯತೆಯ ಮೌಲ್ಯವನ್ನು ಮತ್ತೊಮ್ಮೆ ಪ್ರತಿಪಾದಿಸಿದೆ. ಮೂಡುಮಾರ್ನಾಡು ಗ್ರಾಮದ ಸುಮಿತ್ರಾ–ವಿಶ್ವನಾಥ್ ದಂಪತಿಯ ಶೋಚನೀಯ ಸ್ಥಿತಿಯಲ್ಲಿದ್ದ ಮನೆಯನ್ನು ಮರುನಿರ್ಮಿಸಲು ಸುಮಾರು 6 ಲಕ್ಷ ರೂ. ವೆಚ್ಚದ ಯೋಜನೆ ರೂಪಿಸಿ, ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಸುಮಾರು 600 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಾಣದ ಮೂಲಕ ಅಶಕ್ತ ಕುಟುಂಬಕ್ಕೆ ಭದ್ರ ಆಶ್ರಯ ಕಲ್ಪಿಸುವ ಸಂಕಲ್ಪವನ್ನು ಘಟಕ ಕೈಗೊಂಡಿದೆ. ಯುವವಾಹಿನಿಯ ಮಾಜಿ ಅಧ್ಯಕ್ಷರು […]

Read More

ಯುವವಾಹಿನಿಯ ಭವಿಷ್ಯದ ನೆಲೆ ರೂಪಿಸುವಲ್ಲಿ ಒಗ್ಗಟ್ಟಿನಿಂದ ಶ್ರಮಿಸೋಣ : ಅಶೋಕ್ ಕುಮಾರ್ ಪಡ್ಪು

ಮಂಗಳೂರು : ಬಿಲ್ಲವ ಸಮಾಜದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ಸಮಾಜಸೇವೆಯ ದೀರ್ಘ ಪಯಣದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯು ಶಾಶ್ವತ ಆಡಳಿತ ಕಚೇರಿ ನಿರ್ಮಾಣ ಎಂಬ ಮಹತ್ತರ ಸಂಕಲ್ಪವನ್ನು ಕೈಗೊಂಡಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹೇಳಿದರು. ಸರಕಾರದಿಂದ ಮಂಜೂರಾದ ಸ್ವಂತ ನಿವೇಶನದಲ್ಲಿ ನೂತನ ಆಡಳಿತ ಕಚೇರಿ ಕಟ್ಟಡದ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಶುಭಾರಂಭ ಮಾಡಲಾಗಿದೆ. ಈ ಮಹತ್ವದ ಯೋಜನೆ ಯುವವಾಹಿನಿಯ ಸದಸ್ಯರ ದೇಣಿಗೆಯಿಂದಲೇ ಸಾಕಾರಗೊಳ್ಳಬೇಕು ಎಂಬುದು ಕೇಂದ್ರ ಸಮಿತಿಯ ದೃಢ […]

Read More

ಮುಲ್ಲಕಾಡಿನಲ್ಲಿ ನಡೆದ ಯಕ್ಷಗಾನ ಬಯಲಾಟದಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಿಗೆ ಗೌರವ

ಮುಲ್ಲಕಾಡ್ : ಯುವವಾಹಿನಿ (ರಿ.) ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ನಾಗೇಶ್ ಅಮೀನ್ ಮುಲ್ಲಕಾಡ್ ಅವರ ಕುಟುಂಬಸ್ಥರ ಆಶ್ರಯದಲ್ಲಿ ನಡೆಸಿಕೊಡಲಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯ ಯಕ್ಷಗಾನ ಬಯಲಾಟವು ದಿನಾಂಕ 02-02-2026ರ ಸೋಮವಾರ ನಡೆಯಿತು. ಈ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಹರೀಶ್ ಕೆ. ಸುವರ್ಣ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.ಈ ಸಮಾರಂಭದಲ್ಲಿ ಯುವವಾಹಿನಿ ಮಂಗಳೂರು ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಅನೇಕ ಸದಸ್ಯರು […]

Read More

ಕ್ರೀಡಾಂಗಣದಲ್ಲಿ ಮಹಿಳಾ ಶಕ್ತಿ : ಯುವವಾಹಿನಿಯ ಸಾಧನೆಗೆ ಸಮಾಜದ ಮೆಚ್ಚುಗೆ

ಪಡುಬಿದ್ರೆ/ಮಂಗಳೂರು : ಮಹಿಳಾ ಸಬಲೀಕರಣಕ್ಕೆ ಕ್ರೀಡೆಯನ್ನೇ ವೇದಿಕೆಯಾಗಿಸಿಕೊಂಡು, ಮಹಿಳಾ ಶಕ್ತಿಯನ್ನು ಸಮಾಜದ ಮುಂದಿಡುವ ಶ್ಲಾಘನೀಯ ಕಾರ್ಯವನ್ನು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಯಶಸ್ವಿಯಾಗಿ ನೆರವೇರಿಸಿದೆ. ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸ್ಥಳೀಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ “ಬಿಲ್ಲವ ಪ್ರೀಮಿಯರ್ ಲೀಗ್ (BPL) – 2026” ಮಹಿಳಾ ಕ್ರಿಕೆಟ್ ಪಂದ್ಯಾಟವು ಕೇವಲ ಕ್ರೀಡಾಕೂಟವಲ್ಲದೆ, ಸಂಘಟನೆ, ಏಕತೆ ಹಾಗೂ ಸಬಲೀಕರಣದ ಜೀವಂತ ಸಂದೇಶವಾಗಿ ಮೂಡಿಬಂದಿತು. ಪ್ರಮುಖವಾಗಿ ಯುವವಾಹಿನಿಯ ಮಹಿಳಾ ಸದಸ್ಯರಿಂದಲೇ ಆಯೋಜಿಸಲ್ಪಟ್ಟ ಈ […]

Read More

ಭಕ್ತಿಭಾವ, ಸಂಘಟನೆ ಮತ್ತು ಆತ್ಮೀಯತೆಯೊಂದಿಗೆ ಸ್ಮರಣೀಯ ಪ್ರವಾಸ

ಪಣಂಬೂರು : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 01-02-2026, ರವಿವಾರ ಒಂದು ದಿನದ ದೇವಸ್ಥಾನ ಯಾತ್ರೆ ಮತ್ತು ಪ್ರವಾಸ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಆತ್ಮೀಯತೆಯೊಂದಿಗೆ ಆಯೋಜಿಸಲಾಗಿತ್ತು.ಈ ಯಾತ್ರೆಯ ಅಂಗವಾಗಿ ಕಣಿಪುರ ಗೋಪಾಲ ಕೃಷ್ಣ ದೇವಸ್ಥಾನ, ಅನಂತಪುರ ಪದ್ಮನಾಭ ಸ್ವಾಮಿ ದೇವಸ್ಥಾನ, ಮಲ್ಲ ದುರ್ಗಾ ಪರಮೇಶ್ವರಿ ದೇವಸ್ಥಾನ, ಮಧೂರು ಮದನಂತೇಶ್ವರ ವಿನಾಯಕ ದೇವಸ್ಥಾನ, ಪರಶಿನ ಕಡವು ಮುತ್ತಪ್ಪ ದೇವಸ್ಥಾನ ಹಾಗೂ ಬೇಕಲ್ ಬೀಚ್ ಪ್ರವಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಯಾತ್ರಿಗಳು ಮೊದಲಾಗಿ ಕಣಿಪುರ ಗೋಪಾಲ ಕೃಷ್ಣ ದರ್ಶನ […]

Read More

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕಕ್ಕೆ ಸ್ಮರಣೀಯ ಗೌರವ

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಆಯೋಜಿಸಲಾದ 100ನೇ ಉಚಿತ ಆರೋಗ್ಯ ಶಿಬಿರದ ಸಂದರ್ಭದಲ್ಲಿ ಸಮಾಜಸೇವೆಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕವನ್ನು ಗೌರವಿಸಲಾಯಿತು, ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರು ಗೌರವ ಸ್ವೀಕರಿಸಿದರು. ಸಾರ್ವಜನಿಕ ಆರೋಗ್ಯ ಜಾಗೃತಿ, ಸೇವಾಭಾವನೆ ಮತ್ತು ಮಹಿಳಾ ಸಬಲೀಕರಣದ ದಿಸೆಯಲ್ಲಿ ಯುವವಾಹಿನಿ ಮಹಿಳಾ ಘಟಕದ ಕೊಡುಗೆಯನ್ನು ಗುರುತಿಸಿ ನೀಡಲಾದ ಈ ಗೌರವವು ಸಂಘಟನೆಯ ಸೇವಾ ಪಯಣಕ್ಕೆ ಮತ್ತಷ್ಟು ಪ್ರೇರಣೆಯಾಯಿತು.

Read More

ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಯುವವಾಹಿನಿ ಮಂಗಳೂರು ಘಟಕದ ಕೊಡುಗೆಗೆ ಗೌರವ

ಪಡೀಲು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇವರ ಆಶ್ರಯದಲ್ಲಿ “ಆರೋಗ್ಯ ಸೇವಾ ಸಂಗಮ” ಎಂಬ ಶೀರ್ಷಿಕೆಯಡಿ 100ನೇ ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ, ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ ಸಂಘದ ಹದಿನಾಲ್ಕನೇ ವಾರ್ಷಿಕೋತ್ಸವವು ದಿನಾಂಕ 01.02.2026ರ ಆದಿತ್ಯವಾರ ಪಡೀಲಿನ ಬೈರಾಡಿ ಕೆರೆಯ ಸಮೀಪದಲ್ಲಿರುವ ಆತ್ಮಶಕ್ತಿ ಸೌಧದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಮಾರಂಭದ ಅಂಗವಾಗಿ ಶಿಬಿರಕ್ಕೆ ಸಹಯೋಗ ನೀಡಿದ ವಿವಿಧ ಸಂಘ–ಸಂಸ್ಥೆಗಳ ಗುರುತಿಸುವಿಕೆ ಮತ್ತು ಗೌರವ ಕಾರ್ಯಕ್ರಮವನ್ನು […]

Read More

ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಕೊಲ್ಯ ಘಟಕದ ತಂಡದ ಶ್ಲಾಘನೀಯ ಪ್ರದರ್ಶನ

ಕೊಲ್ಯ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲಾದ ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್ – 2026 ಕ್ರಿಕೆಟ್ ಪಂದ್ಯಾಟದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ತಂಡವು ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡಿತು. ಪಂದ್ಯಾಟದ ಅವಧಿಯಲ್ಲಿ ಕೊಲ್ಯ ಘಟಕದ ಮಹಿಳಾ ಆಟಗಾರ್ತಿಯರು ತಮ್ಮ ಆಟದ ಮೂಲಕ ಕೌಶಲ್ಯ, ಆತ್ಮವಿಶ್ವಾಸ ಮತ್ತು ತಂಡಾತ್ಮಕ ಮನೋಭಾವವನ್ನು ಪ್ರದರ್ಶಿಸಿ, ಪ್ರೇಕ್ಷಕರ ಹಾಗೂ ಸಂಘಟಕರ ಮೆಚ್ಚುಗೆಗೆ ಪಾತ್ರರಾದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!