Yuvavahini

ಘಟಕಗಳು

ಯುವವಾಹಿನಿ (ರಿ) ಕಡಬ ಘಟಕ : ಗುರುಸ್ಪೂರ್ತಿ, ಭಜನೆ, ಸಾಧಕರಿಗೆ ಸನ್ಮಾನ

ಕಡಬ : ಯುವವಾಹಿನಿ (ರಿ ) ಕಡಬ ಘಟಕದ ವತಿಯಿಂದ ದಿನಾಂಕ 09-11-2024 ನೇ ಶನಿವಾರ ಸಂಜೆ 5 ರಿಂದ ಉಮೇಶ್ ಪೂಜಾರಿ ಬುಡೆಂಗಿ ಬಳ್ಪ ಮನೆಯಲ್ಲಿ ಗುರು ಸ್ಫೂರ್ತಿ, ಭಜನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ನಾಟಿ ವೈದ್ಯರಾದ ಶ್ರೀಮತಿ ಬಾಲಕ್ಕ ಕೊರಪ್ಪಣೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ ವಹಿಸಿದ್ದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಗಣೇಶ್ ನಡವಾಲ್, […]

Read More

ಯುವವಾಹಿನಿ (ರಿ) ಬೆಳ್ತಂಗಡಿ ವತಿಯಿಂದ ತುಳುನಾಡ ತುಡರ ಪರ್ಬ – ಸಾಮೂಹಿಕ ದೀಪಾವಳಿ ಆಚರಣೆ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 6ನೇ ವರ್ಷದ ತುಳುನಾಡ ತುಡರ ಪರ್ಬ- 2024 ಸಾಮೂಹಿಕ ದೀಪಾವಳಿ ಹಬ್ಬ ಆಚರಣೆಯನ್ನು 1001 ದೀಪಗಳನ್ನು ಬೆಳಗುವುದರ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಉಪಾಧ್ಯಕ್ಷರಾದ ಶ್ರೀ ಸುಂದರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಘಟಕದ ಅಧ್ಯಕ್ಷರಾದ ಶ್ರೀ ಸದಾಶಿವ ಊರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಿಳಾ ಬಿಲ್ಲವ […]

Read More

ವಿಜಿಲೆನ್ಸ್ ಜಾಗೃತಿ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) […]

Read More

ಕ್ರೀಡೆಯ ಮೂಲಕ ಅಶಕ್ತರ ಬಾಳಿನಲ್ಲಿ ಬೆಳಕು ಮೂಡಿಸುವ ಯುವವಾಹಿನಿ ಕಾರ್ಯ ಶ್ಲಾಘನೀಯ : ಅರ್ಜುನ್ ಭಂಡಾರ್ಕರ್

ಬಂಟ್ವಾಳ : ಈ ನಾಡು ಕಂಡ ಶ್ರೇಷ್ಠ ಸಮಾಜಸೇವಕ ಕೀರ್ತಿಶೇಷ ಕೆ.ಸೇಸಪ್ಪ ಕೋಟ್ಯಾನ್ ಸ್ಮರಣಾರ್ಥ ನಡೆಯುವ ಕ್ರೀಡೆಯ ಮೂಲಕ ಅಶಕ್ತರಿಗೆ ಸಹಾಯಹಸ್ತ ನೀಡುವ ಯುವವಾಹಿನಿ ಕಾರ್ಯ ಇತರರಿಗೂ ಸ್ಪೂರ್ತಿ ಹಾಗೂ ಪ್ರೇರಣೆ ನೀಡಿದೆ ಎಂದು ಸಮಾಜಸೇವಕ ಸೇವ್ ಲೈಪ್ ಚಾರಿಟೇಬಲ್ ಟ್ರಸ್ಸ್ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ತಿಳಿಸಿದರು. ಅವರು ದಿನಾಂಕ 27.10.2024 ರಂದು ಬಂಟ್ವಾಳ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಬೈದಶ್ರೀ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ದೀಪ ಬೆಳಗಿಸಿ […]

Read More

ಖುಷಿಯಲ್ಲಿರುವಾಗ ಚಪ್ಪಾಳೆ ತಟ್ಟುವ ಹತ್ತು ಕೈಗಳಿಗಿಂತ ಕಷ್ಟದಲ್ಲಿರುವಾಗ ಕಣ್ಣೀರು ಒರೆಸುವ ಹತ್ತು ಕೈಗಳು ಮಹತ್ವವಾದದ್ದು

ಕೂಳೂರು : ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವು ಎಲ್ಲರ ಮನ ಮನೆ ಬೆಳಗಿದಂತೆ ಬಡವರ ಬಾಳಿನಲ್ಲೂ ಬೆಳಕನ್ನು ತರಲಿ ಎಂಬ ಉದ್ದೇಶದಿಂದ ಯುವವಾಹಿನಿ (ರಿ) ಕೂಳೂರು ಘಟಕ ಕಳೆದ 9 ವರುಷಗಳಿಂದ ಅಶಕ್ತ ಕುಟುಂಬಗಳಿಗೆ ನೆರವಿನ ಆಶಾ ದೀಪ ಎಂಬ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದು ಪ್ರತಿ ವರ್ಷವೂ ಕಡು ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆ ಹಬ್ಬವನ್ನು ಆಚರಿಸಲು ಬೇಕಾದ ಎಲ್ಲ ದಿನಸಿ ಸಾಮಾಗ್ರಿಗಳನ್ನು ನೀಡುತ್ತಾ ಬಂದಿದೆ. ಅದೇ ರೀತಿ ಈ ವರ್ಷವೂ ಕುಟುಂಬ ಸಂಪರ್ಕ ನಿರ್ದೇಶಕರಾದ […]

Read More

ನಾರಾಯಣಗುರುಗಳು ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮೌನಕ್ರಾಂತಿಯ ಹರಿಕಾರರು : ದಿನೇಶ್ ಸುವರ್ಣ ರಾಯಿ

ಬಂಟ್ವಾಳ : ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಬಂಟ್ಟಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು. ಅವರು ದಿನಾಂಕ 25.10.2024 ರಂದು ಬಂಟ್ವಾಳದ ಯಶೋಧರ ಪೂಜಾರಿ ಕಡಂಬಲ್ಕೆ ಇವರ ಮನೆಯಲ್ಲಿ ನಡೆದ ಗುರುತತ್ವ ವಾಹಿನಿ ಮಾಲಿಕೆ 17 ರಲ್ಲಿ ಗುರುಸಂದೇಶ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ […]

Read More

ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕವು ಸ್ಥಳೀಯ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ದಿನಾಂಕ 20-10-2024 ರಂದು ಆದಿತ್ಯವಾರ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬೈಲೂರು ಶ್ರೀ ವಾಸುದೇವ ಕೃಪಾ ವಿದ್ಯಾ ಮಂದಿರ ಶಾಲೆಯಲ್ಲಿ ಆಯೋಜಿಸಿತ್ತು. ಉಡುಪಿಯ ಖ್ಯಾತ ವಕೀಲರಾದ ಮಟ್ಟಾರ್ ರತ್ನಾಕರ್ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಲೂರು ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾರಾಯಣ […]

Read More

ಯುವವಾಹಿನಿಯ 35ನೇ ಘಟಕ – ಪೆರ್ಮಂಕಿ ಉದ್ಘಾಟನೆ

ಪೆರ್ಮಂಕಿ : ಯುವವಾಹಿನಿಯ 35 ನೇ ಘಟಕವಾಗಿ ಪೆರ್ಮಂಕಿ ಘಟಕವನ್ನು ನಾರಾಯಣಗುರು ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟೀ ಹಾಗೂ ಉದ್ಯಮಿ ಶೈಲೇಂದ್ರ ವೈ ಸುವರ್ಣ ಉದ್ಘಾಟಿಸಿದರು. ವಿದ್ಯೆಯಿಂದ ಸ್ವಾವಲಂಬಿ ಬದುಕು ಸಾಧ್ಯ, ಈ ನಿಟ್ಟಿನಲ್ಲಿ ಯುವ ಸಮುದಾಯಕ್ಕೆ ಯುವವಾಹಿನಿಯ ಕೊಡುಗೆ ಅಪಾರ ಎಂದರು. ಅವರು ದಿನಾಂಕ 20-10-2024 ರಂದು ವಿಶಾಲ್ ಗಾರ್ಡನ್, ಕೊಂಬೆಲ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತಾನಾಡಿದರು. 340 ಸದಸ್ಯರ ಬಲಿಷ್ಠ ಪೆರ್ಮಂಕಿ ತಂಡದ ಪ್ರಥಮ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರತಿಜ್ಞಾವಿಧಿ ಭೋದನೆ ನನ್ನ ಸೌಭಾಗ್ಯ […]

Read More

ಅಶಕ್ತ ಮಕ್ಕಳ ಮನೆಗಳಿಗೆ ನೆರವು

ಉಪ್ಪಿನಂಗಡಿ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತ ಕುದ್ರೋಳಿ ಗೋಕರ್ಣನಾಥ- ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವದ ಸುಸಂದರ್ಭದಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆ ಪ್ರಯುಕ್ತ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಎಂಡೋ ಪೀಡಿತ, ಅಶಕ್ತ ಮಕ್ಕಳ ಮನೆಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಗ್ರೀಷ್ಮ ಬೆದ್ರೋಡಿ, ಪ್ರಜ್ಞಾ ವಳಾಲು, ರೂಪೇಶ್ ಮಣ್ಣಂಗಳ- ವಳಾಲು, ಸುರೇಶ್ ಕಾಂಚನ ಕ್ರಾಸ್ ಬಳಿ ಮತ್ತು ಪ್ರತೀಕ್ ಶಿವಾರು […]

Read More

ಯುವವಾಹಿನಿ (ರಿ.) ಬೆಂಗಳೂರು ಘಟಕದ ಕುಟುಂಬ ಸಮ್ಮಿಲನ ಬಾಂಧವ್ಯ – 2024

ಬೆಂಗಳೂರು : ಘಟಕದ ಒಂದು ದಿನದ ಪ್ರವಾಸ ಕಾರ್ಯ ಯೋಜನೆಯು ದಿನಾಂಕ ಅಕ್ಟೋಬರ್ 6 ಆದಿತ್ಯವಾರದಂದು ಯಶಸ್ವಿಯಾಗಿ ನಡೆಯಿತು. ಈ ಪ್ರವಾಸದಲ್ಲಿ ಘಟಕದ ಸದಸ್ಯರು ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿ, ಮಠಾಧೀಶರಾದ ರಾಮನಗರ ಜಿಲ್ಲೆಯ ಸೋಲೂರು ಮಠ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನ ಮತ್ತು ಎಡಿಯೂರು ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಗಳಿಗೆ ಭೇಟಿಕೊಟ್ಟು ಶ್ರೀದೇವರ ದರ್ಶನವನ್ನು ಮಾಡಿದರು. ಬೆಳಿಗ್ಗೆ 9:00ಗೆ ಬೆಂಗಳೂರಿನ ಜೆಪಿ ನಗರದಿಂದ ಬಸ್ ಮೂಲಕ ಬಾಂಧವ್ಯದ ಪಯಣ ಆರಂಭಗೊಂಡಿತು. ಸದಸ್ಯರು, ಪದಾಧಿಕಾರಿಗಳು ಸೇರಿ ಒಟ್ಟು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!