
09-08-2026, 4:00 PM
ಮಾಣಿ ಅಗಸ್ಟ್ 09: ಮಾಣಿ ಪರಿಸರದ ಜನರ ಬಹುಕಾಲದ ನಿರೀಕ್ಷೆಯಾಗಿದ್ದ ಆಂಬ್ಯುಲೆನ್ಸ್ ಸೇವೆಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ‘ಆಟಿ ಸಿರಿ ಸಂಭ್ರಮ–2026’ ಕಾರ್ಯಕ್ರಮದ ವೇದಿಕೆಯಲ್ಲಿ ನೆರವೇರಿತು.ಜನರ ತುರ್ತು ಆರೋಗ್ಯ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಿಸಲಾಗುತ್ತಿರುವ ಈ ‘ಸೇವಾ ಸ್ಪರ್ಶ–ಆಂಬ್ಯುಲೆನ್ಸ್ ಸೇವೆ’ ಮಾಣಿ ಹಾಗೂ ಸುತ್ತಮುತ್ತಲಿನ ಜನರಿಗೆ ಮಹತ್ವದ ಆರೋಗ್ಯ ಸೇವಾ ಸೌಲಭ್ಯವಾಗಲಿದೆ. ಆರೋಗ್ಯ ಸೇವೆಯ ಕ್ಷೇತ್ರದಲ್ಲಿ ಮಾನವೀಯ ಕಾಳಜಿಯೊಂದಿಗೆ ಸಮಾಜಮುಖಿ ಹೆಜ್ಜೆ ಇಟ್ಟಿರುವ ಯುವವಾಹಿನಿ (ರಿ.) ಮಾಣಿ ಘಟಕದ […]
Read More

09-08-2026, 2:00 PM
ಉಡುಪಿ, ಆಗಸ್ಟ್ 09: ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ‘ಅಟಿಡೊಂಜಿ ದಿನ’ ಕಾರ್ಯಕ್ರಮವು ಘಟಕದ ಸಭಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ನಡೆಯಿತು. ಘಟಕದ ಅಧ್ಯಕ್ಷ ವಿನೋದ್ ಮಂಚಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಮಾಜಿ ಅಧ್ಯಕ್ಷರುಗಳು ಒಗ್ಗೂಡಿ ಗುರುವಿಗೆ ದೀಪ ಬೆಳಗಿಸುವ ಮೂಲಕ ಹಾಗೂ ಪ್ರಾರ್ಥನೆಯೊಂದಿಗೆ ಆರಂಭಿಸಿದರು. ಬಳಿಕ ಚೆನ್ನಮನೆಯ ಆಟವಾಡಿ, ವಾಲೆಬೆಲ್ಲ ಹಂಚುವ ಮೂಲಕ ಸಾಂಪ್ರದಾಯಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆಟಿ ತಿಂಗಳ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಯುವವಾಹಿನಿಯ ಸದಸ್ಯರು […]
Read More

09-08-2026, 10:00 AM
ಕಾಪು, ಆಗಸ್ಟ್ 09: ಯುವಕರಲ್ಲಿ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಚೆಸ್ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಂಗಳೂರು ಸಿಎಆರ್ನ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ ಉಮೇಶ್ ಪಿ. ಹೇಳಿದರು. ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ, ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾದ ‘ಯುವವಾಹಿನಿ ಟ್ರೋಫಿ–2026’ ಓಪನ್ ಹಾಗೂ ವಯೋಮಿತಿ ಚೆಸ್ ಪಂದ್ಯಾವಳಿಗೆ […]
Read More

08-08-2026, 8:00 PM
ಮಂಗಳೂರು, ಆಗಸ್ಟ್ 08: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಯೋಜಿಸಲಾದ ‘ಸ್ನೇಹ ಮಿಲನ’ ಕಾರ್ಯಕ್ರಮವು ಉರ್ವಸ್ಟೋರ್ನ ಯುವವಾಹಿನಿ ಸಭಾಂಗಣದಲ್ಲಿ ಸಂಭ್ರಮ ಹಾಗೂ ಆತ್ಮೀಯತೆಯಿಂದ ನಡೆಯಿತು. ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ, ಗುರುಸ್ತುತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷೆಯರು ಯುವವಾಹಿನಿ ಹಾಗೂ ಮಂಗಳೂರು ಮಹಿಳಾ ಘಟಕದೊಂದಿಗಿನ ತಮ್ಮ ಒಡನಾಟ ಮತ್ತು ಅನುಭವಗಳನ್ನು ಹಂಚಿಕೊಂಡರು. ಘಟಕದ ಬೆಳವಣಿಗೆ […]
Read More

08-08-2026, 4:00 PM
ಅಡ್ವೆ, ಆಗಸ್ಟ್ 8: ಯುವವಾಹಿನಿ (ರಿ.) ಅಡ್ವೆ ಘಟಕ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಲಿಮಾರು ಇಲ್ಲಿನ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಆಗಸ್ಟ್ 8ರಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷ ಪ್ರಸಾದ್ ಪಲಿಮಾರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಘಟಕದ ಗೌರವ ಸಲಹೆಗಾರ ನವೀನ್ ಚಂದ್ರ ಸುವರ್ಣ ಅವರು ಆಟಿ ತಿಂಗಳ ವಿಶೇಷತೆ, ತುಳುನಾಡಿನ […]
Read More

07-08-2026, 2:00 PM
ಬಜಪೆ, ಆಗಸ್ಟ್ 7: ನಶಿಸುತ್ತಿರುವ ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಉತ್ತೇಜನ ನೀಡುವುದರೊಂದಿಗೆ ಕೃಷಿಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆಯೋಜಿಸಿರುವ ಸಸ್ಯೋತ್ಸವ ಹಾಗೂ ಹಲಸು ಆಹಾರ ಮೇಳ ಶ್ಲಾಘನೀಯ ಕಾರ್ಯಕ್ರಮವಾಗಿದೆ ಎಂದು ಬಜಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಹೇಳಿದರು. ಯುವವಾಹಿನಿ (ರಿ.) ಬಜಪೆ ಘಟಕ ಹಾಗೂ ರೋಟರಿ ಕ್ಲಬ್ ಬಜಪೆ ಸಹಯೋಗದಲ್ಲಿ ರೈತ ಕುಡ್ಲ ಪ್ರತಿಷ್ಠಾನದ ನೇತೃತ್ವದಲ್ಲಿ ಬಜಪೆಯ ಬಿ. ಸಂಜೀವ ಶೆಟ್ಟಿ ಸಭಾಂಗಣದಲ್ಲಿ ಆಗಸ್ಟ್ 7ರಿಂದ 9ರವರೆಗೆ ನಡೆಯುವ ‘ಸಸ್ಯೋತ್ಸವ ಹಾಗೂ ಹಲಸು ಆಹಾರ […]
Read More

04-08-2026, 11:30 AM
ಕಂಕನಾಡಿ, ಆ. 4: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ (ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ) ಸಹಯೋಗದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (KSTA) ಭವನ, ಗೋರಿಗುಡ್ಡದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಯುಷ್ ಇಲಾಖೆಯ ಹೋಮಿಯೋಪತಿ ತಜ್ಞೆ ಡಾ. ಶ್ರೀ ದೇವಿ ವೆಂಕಟಾಪುರ ಅವರು, “ಹೋಮಿಯೋಪತಿ ಔಷಧಿಗಳಿಗೆ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಶಿಶುವಿನಿಂದ ಹಿಡಿದು ಎಲ್ಲಾ ವಯೋಮಾನದವರು […]
Read More

03-08-2026, 8:00 PM
ಮಂಗಳೂರು, ಆ. 3: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಆಗಸ್ಟ್ 3ರಂದು ಸಂಜೆ ಭಜನಾ ಸೇವೆ ಭಕ್ತಿಭಾವದಿಂದ ನಡೆಯಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ.), ಕರ್ನಾಟಕ, ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಹಾಡಿ, ಶ್ರೀ ಗೋಕರ್ಣನಾಥ ಸ್ವಾಮಿ […]
Read More