14-06-2026, 1:00 PM
ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 14-06-2026ರಂದು ಶಕ್ತಿನಗರ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವೃಕ್ಷೋತ್ಸವವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ರುದ್ರಭೂಮಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಸದಸ್ಯರೆಲ್ಲರೂ ಒಟ್ಟಾಗಿ ಹಣ್ಣುಗಳ ಸಸಿಗಳನ್ನು ನೆಟ್ಟು ವೃಕ್ಷಾರೋಪಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ರುದ್ರಭೂಮಿಯ ವ್ಯವಸ್ಥಾಪಕರಾದ ಪದ್ಮನಾಭ ಅಂಚನ್ ಕಕ್ಕೆಬೆಟ್ಟು ಅವರು ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಸಂಸ್ಥೆಯು […]
Read More
14-06-2026, 1:00 PM
ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಹರೀಶ್ ದೋಳ ಅವರ ನಿವಾಸದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ವಿವಿಧ ಮೋಜಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಟುಂಬ ಸದಸ್ಯರ ಪರಸ್ಪರ ಒಡನಾಟ ಮತ್ತು ಸೌಹಾರ್ದತೆಯನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ […]
Read More
14-06-2026, 1:00 PM
ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]
Read More
13-06-2026, 1:00 PM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರಸಿದ್ಧ ಕೊಟ್ಟಿಯೂರು ಮಹಾದೇವ ದೇವಸ್ಥಾನಕ್ಕೆ ದಿನಾಂಕ 14.06.2026ರಂದು ಭಕ್ತಿಪೂರ್ವಕ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ದಿನಾಂಕ 13.06.2026ರಂದು ರಾತ್ರಿ 10:30 ಗಂಟೆಗೆ ಬಳ್ಪದಿಂದ ಸುಬ್ರಹ್ಮಣ್ಯ – ಇರಿಟ್ಟಿ ಮಾರ್ಗವಾಗಿ ವ್ಯಾನ್ನಲ್ಲಿ ಪ್ರಯಾಣ ಆರಂಭಿಸಲಾಯಿತು. ಈ ಯಾತ್ರೆಯಲ್ಲಿ ಘಟಕದ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ನಿರ್ದೇಶಕರು, ಬಳ್ಪ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರು ಸೇರಿದಂತೆ ಸುಮಾರು 26 ಮಂದಿ ಸದಸ್ಯರು ಭಾಗವಹಿಸಿದ್ದರು. ಮರುದಿನ ಬೆಳಿಗ್ಗೆ ಸುಮಾರು 4:00 […]
Read More
13-06-2026, 1:00 PM
ಮಾಣಿ : “ಮರದ ನೆರಳು ಬದುಕಿಗೆ ನೆರಳು” ಎಂಬ ಧ್ಯೇಯೋದ್ದೇಶದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಕೆದಿಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬರಿಮಾರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಹಾಗೂ ಅಂಗನವಾಡಿ ಕೇಂದ್ರ ಪೆರಾಜೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರದ ಕುರಿತು ಜಾಗೃತಿ […]
Read More
13-06-2026, 1:00 PM
ಮಂಗಳೂರು : ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮಹಿಳಾ ಆರೋಗ್ಯ, ಋತುಬಂಧ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮದಲ್ಲಿ, ಋತುಬಂಧದ ಸಂದರ್ಭದಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಕ್ಯಾನ್ಸರ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ತಪಾಸಣೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ಸಂಪನ್ಮೂಲ ವ್ಯಕ್ತಿ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. 40 ವರ್ಷಗಳ ಬಳಿಕ […]
Read More
07-06-2026, 10:00 PM
ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]
Read More
07-06-2026, 10:00 PM
ಕೂಳೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಮಹಾದೇವ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ತನ್ನ ಆಧ್ಯಾತ್ಮಿಕ ಮಹತ್ವದಿಂದ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಈ ಪುಣ್ಯಕ್ಷೇತ್ರಕ್ಕೆ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ವಿಶೇಷ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ಜೂನ್ 6, 2026ರಂದು ರಾತ್ರಿ 10.00 ಗಂಟೆಗೆ ಕೂಳೂರಿನಿಂದ ಬಸ್ಸಿನ ಮೂಲಕ ಯಾತ್ರೆ ಆರಂಭಗೊಂಡಿತು. ಈ ಯಾತ್ರೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 40 ಮಂದಿ […]
Read More
07-06-2026, 10:00 PM
ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು. ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು. ಕೊಟ್ಟಿಯೂರು ಕ್ಷೇತ್ರವು ತನ್ನ […]
Read More