Yuvavahini

ಘಟಕಗಳು

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ ಘಟಕಗಳ ಸಹಯೋಗದಲ್ಲಿ ಭಜನಾ ಸೇವೆ

ಮಂಗಳೂರು: ದಿನಾಂಕ 09-03-2026 ನೇ ಸೋಮವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಯುವವಾಹಿನಿ (ರಿ.) ಕಂಕನಾಡಿ ಘಟಕದ ಸಹಯೋಗದೊಂದಿಗೆ ಭಕ್ತಿಭಾವದಿಂದ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದಿಂದ ಯಶಸ್ವಿ ‘ರಾಜಸ್ಥಾನ ಪ್ರವಾಸ’

ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಏಳು ದಿನಗಳ ರಾಜಸ್ಥಾನ ಪ್ರವಾಸವು ಅತ್ಯಂತ ಯಶಸ್ವಿಯಾಗಿ ಹಾಗೂ ಸ್ಮರಣೀಯವಾಗಿ ಸಂಪನ್ನಗೊಂಡಿತು. ​ ಪ್ರವಾಸದ ಹಾದಿ ಮತ್ತು ಪ್ರಮುಖ ಕ್ಷಣಗಳು:​ಮಾರ್ಚ್ 2, 2026 ರಂದು ಆರಂಭವಾದ ಈ ಪ್ರವಾಸದಲ್ಲಿ ಒಟ್ಟು 24 ಸದಸ್ಯರ ತಂಡ ಭಾಗವಹಿಸಿತ್ತು. ಬೊಳ್ಳಿ ಟೂರಿಸಂ ಸಹಯೋಗದೊಂದಿಗೆ ಆಯೋಜಿಸಲಾದ ಈ ಪ್ರವಾಸದ ಪ್ರಮುಖ ಹಂತಗಳು ಇಲ್ಲಿವೆ:​ಜೈಪುರ ದರ್ಶನ: ಮಂಗಳೂರಿನಿಂದ ಬೆಂಗಳೂರು ಮೂಲಕ ವಿಮಾನದ ಮೂಲಕ ಜೈಪುರ ತಲುಪಿದ ತಂಡವು, ಅಲ್ಲಿನ ಐತಿಹಾಸಿಕ ಹವಾ […]

Read More

ಮಕ್ಕಳಲ್ಲಿ ಸಂಸ್ಕೃತಿ, ಸಂಪ್ರದಾಯದ ಜಾಗೃತಿ ಮೂಡಿಸುವುದು ಮಹಿಳೆಯರ ಕರ್ತವ್ಯ: ಪ್ರೇಮ ಪ್ರಭಾಕರ್

ಮಂಗಳೂರು: “ಒಬ್ಬ ಸುಸಂಸ್ಕೃತ ಮಹಿಳೆ ತನ್ನ ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ದೇಶ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಹೆಣ್ಣು ತಾನು ಹುಟ್ಟಿದ ಮನೆ ಹಾಗೂ ಸೇರಿದ ಗಂಡನ ಮನೆಯ ಹಿತ ಬಯಸುವವಳು,” ಎಂದು ಡಿವೈನ್ ಪಾರ್ಕ್‌ನ ಮಹಿಳಾ ಮೇಲ್ಮೈ ಅಧಿಕಾರಿ ಪ್ರೇಮ ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.​ಅವರು ದಿನಾಂಕ 08-03-2026 ರಂದು ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. […]

Read More

ಆಧುನಿಕ ಜೀವನಶೈಲಿ ಆರೋಗ್ಯಕ್ಕೆ ಸವಾಲು: ಕನಕಾ ಮೋಹನ್ ಕಳಕಳಿ

ಪಣಂಬೂರು: “ಇಂದಿನ ಬದಲಾದ ಜೀವನಶೈಲಿ ಮನುಷ್ಯನನ್ನು ರೋಗಗಳ ಗೂಡಾಗಿಸುತ್ತಿದೆ. ಅನಿಯಮಿತ ಆಹಾರ ಪದ್ಧತಿ ಮತ್ತು ವ್ಯಾಯಾಮದ ಕೊರತೆಯಿಂದ ಆಯುಷ್ಯ ಕ್ಷೀಣಿಸುತ್ತಿರುವುದು ಆತಂಕಕಾರಿ ಸಂಗತಿ. ಆರೋಗ್ಯಕರ ಬದುಕಿಗಾಗಿ ದಿನದ 24 ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯನ್ನಾದರೂ ಯೋಗಾಭ್ಯಾಸಕ್ಕೆ ಮೀಸಲಿಡುವುದು ಅನಿವಾರ್ಯ,” ಎಂದು SPYSS(R) ಜಿಲ್ಲಾ ಸಂಯೋಜಕಿ ಕನಕಾ ಮೋಹನ್ ತಿಳಿಸಿದರು. ​ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾರ್ಚ್ 8ರ ಭಾನುವಾರ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆರೋಗ್ಯ ಪದ್ಧತಿಯ […]

Read More

ಯುವವಾಹಿನಿ ಕೂಳೂರು ಘಟಕದ ಸ್ನೇಹ ಸಮ್ಮಿಲನ

ಕಾಪು: ಸಮಾಜದ ಯುವ ಸಮುದಾಯವನ್ನು ಪರಸ್ಪರ ಸಂಪರ್ಕದಲ್ಲಿರಿಸಿ ಒಗ್ಗಟ್ಟಿನಿಂದ ಸಮಾಜ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ “ಸ್ನೇಹ ಸಮ್ಮಿಲನ–2026” ಕಾರ್ಯಕ್ರಮವನ್ನು ದಿನಾಂಕ 8-03-2026 ರಂದು ಕಾಪು ಸಮೀಪದ ನೆಕ್ಸಸ್ ಹೋಂಸ್ಟೇನಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಮಾರ್ಗದರ್ಶಕರಾದ ಚಂದಪ್ಪ ಸನಿಲ್ ಅವರು ಶ್ರೀ ಗುರುವರ್ಯರಿಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸ್ನೇಹದ ಮಹತ್ವವನ್ನು ವಿವರಿಸಿ, ಸದಸ್ಯರು ಪರಸ್ಪರ ಸಹಕಾರ ಮತ್ತು ಒಗ್ಗಟ್ಟಿನಿಂದ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಮುಂದುವರೆಸಬೇಕೆಂದು ಸಲಹೆ […]

Read More

ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟ

ಪಡುಬಿದ್ರಿ : ದಿನಾಂಕ 08/03/2026 ರಂದು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವನ್ನು ಮುಲ್ಕಿಯ ಚೆನ್ನಯ ಕುದುರುದಲ್ಲಿರುವ ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್‌ನಲ್ಲಿ ಆಯೋಜಿಸಲಾಯಿತು.ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಾಗಿ ಕೇಂದ್ರ […]

Read More

ಬೃಹತ್ ರಕ್ತದಾನ ಶಿಬಿರ

ಕುಳಾಯಿ : ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ದಿನಾಂಕ 08.03.2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕುಳಾಯಿ, ಮಹಿಳಾ ಮಂಡಲ (ರಿ) ಕುಳಾಯಿ, ತಿರಂಗ ಟ್ರಸ್ಟ್ (ರಿ) ಮಂಗಳೂರು, ಶ್ರೀನಿವಾಸ ಆಸ್ಪತ್ರೆ ಮುಕ್ಕ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ನಡೆಯಿತು. ಮಹಿಳಾ ದಿನಾಚರಣೆಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ರೋಗಿಗಳ ಪ್ರಾಣ ಉಳಿಸುವ ಉದಾತ್ತ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶ್ರೀನಿವಾಸ […]

Read More

ಬಿರಮಲೆ ಪ್ರಜ್ಞಾ ಆಶ್ರಮಕ್ಕೆ ಬಿಸಿ ನೀರಿನ ಗೀಸರ್ ಕೊಡುಗೆ

ಪುತ್ತೂರು: ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಭಾನುವಾರ, ದಿನಾಂಕ 08-03-2026 ರಂದು ಬಿರಮಲೆ ಪ್ರಜ್ಞಾ ಆಶ್ರಮದ ನಿವಾಸಿಗಳ ಸೌಕರ್ಯಕ್ಕಾಗಿ ಅಗತ್ಯವಿರುವ ಬಿಸಿ ನೀರಿನ ಗೀಸರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ​ಪುತ್ತೂರಿನ ಪ್ರಜ್ಞಾ ಆಶ್ರಮದಲ್ಲಿ ನಡೆದ ಸರಳ ಸಮಾರಂಭದಲ್ಲಿ ಘಟಕದ ವತಿಯಿಂದ ಈ ಉಪಕರಣವನ್ನು ಹಸ್ತಾಂತರಿಸಲಾಯಿತು.ಸಮಾಜದ ದೀನದಲಿತರ ಮತ್ತು ಅಶಕ್ತರ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಯುವವಾಹಿನಿ ಸಂಸ್ಥೆಯು, ಆಶ್ರಮದ ನಿವಾಸಿಗಳಿಗೆ ದೈನಂದಿನ ಬಳಕೆಗೆ ಅನುಕೂಲವಾಗುವಂತೆ ಈ ಗೀಸರ್ ಅನ್ನು ಅಳವಡಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದೆ.ಈ ಸಂದರ್ಭದಲ್ಲಿ […]

Read More

ಸೋಶಿಯಲ್ ಮೀಡಿಯಾವನ್ನು ಜವಾಬ್ದಾರಿಯುತವಾಗಿ ಬಳಸಿ: ಎಸಿಪಿ ರೀನಾ ಸುವರ್ಣ

ಬೆಂಗಳೂರು: “ಇಂದಿನ ಯುವ ಪೀಳಿಗೆ ಮತ್ತು ಮಹಿಳೆಯರು ಸೋಶಿಯಲ್ ಮೀಡಿಯಾವನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣಗಳು ಕೇವಲ ಮನೋರಂಜನೆಗೆ ಸೀಮಿತವಾಗದೆ, ಜ್ಞಾನಾರ್ಜನೆ ಮತ್ತು ಸಮಾಜದ ಏಳಿಗೆಗೆ ಪೂರಕವಾಗಿರಲಿ,” ಎಂದು ಬೆಂಗಳೂರು ನಗರದ ಸಹಾಯಕ ಪೊಲೀಸ್ ಆಯುಕ್ತರಾದ (ACP) ರೀನಾ ಸುವರ್ಣ ಅವರು ಕಿವಿಮಾತು ಹೇಳಿದರು. ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 08.03.2026 ರಂದು ಇತ್ತೀಚೆಗೆ ನಗರದ ಕರ್ನಾಟಕ ಗವರ್ನ್ಮೆಂಟ್ ಸೆಕ್ರೆಟೇರಿಯಟ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ […]

Read More

ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆ

ಬಜ್ಪೆ : ಯುವವಾಹಿನಿ(ರಿ) ಬಜ್ಪೆ ಘಟಕದ 2026 -27ನೇ ಸಾಲಿನ ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಪೂಜಾ ಕಿರಣ್ ಅತ್ತೋಳಿಗೆ ದ್ವಿತೀಯ ಉಪಾಧ್ಯಕ್ಷರು : ಶರ್ಮಿಳಾ ಚಂದ್ರಶೇಖರ್ ಕಾರ್ಯದರ್ಶಿ : ಸುಚಿತಾ ದೇವರಾಜ್ ಜೊತೆ ಕಾರ್ಯದರ್ಶಿ : ದಿವ್ಯಾ ಸುನಿಲ್ ಕೋಶಾಧಿಕಾರಿ : ಸಂದೀಪ್ ಪೂಜಾರಿ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಸಂಧ್ಯಾ ಸುನಿಲ್ ವ್ಯಕ್ತಿತ್ವ ವಿಕಸನ ನಿರ್ದೇಶಕರು : ದಯಾನಂದ್ ಅಮೀನ್ ಮಹಿಳಾ ಸಂಘಟನಾ ನಿರ್ದೇಶಕರು : […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!