Yuvavahini

ಘಟಕಗಳು

‘ಚೌತಿ ಚಿತ್ತಾರ’ದಲ್ಲಿ ಸಂಸ್ಕೃತಿ ಅನಾವರಣ

ಮಾಣಿ, ಸೆ. 14: ಗತಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಣ್ಣಾರೆ ಕಂಡು, ಅವುಗಳ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ ‘ಚೌತಿ ಚಿತ್ತಾರ’ ಕಾರ್ಯಕ್ರಮವು ಲೋಕೇಶ್ ಬಂಗೇರ ಪಳ್ಳತ್ತಿರ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಲೋಕೇಶ್ ಬಂಗೇರ ಅವರು, ಹಿಂದಿನ ಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪರಿಚಯಿಸುವ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ. ಇಂತಹ ವಿನೂತನ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವುದರೊಂದಿಗೆ […]

Read More

ಯುವವಾಹಿನಿ ಬಜಪೆ ಘಟಕದಿಂದ ಸ್ವಯಂಸೇವಾ ಕಾರ್ಯ

ಬಜಪೆ ಸೆ 14 : ವಿಜಯ ವಿಠ್ಠಲ ಭಜನಾ ಮಂದಿರ, ಬಜಪೆಯಲ್ಲಿ ಸೆಪ್ಟೆಂಬರ್ 14ರಿಂದ 16ರವರೆಗೆ 58ನೇ ಸಾರ್ವಜನಿಕ ಗಣೇಶೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಗಣೇಶ ಚತುರ್ಥಿಯ ದಿನವಾದ ಸೆಪ್ಟೆಂಬರ್ 14ರಂದು ಮಂದಿರದಲ್ಲಿ ಕಣಿಶೋತ್ಸವ, ಶ್ರೀ ವಿಜಯ ಗಣಪತಿ ಪ್ರತಿಷ್ಠೆ, ಗಣಹೋಮ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮಧ್ಯಾಹ್ನದ ಬಳಿಕ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭರತನಾಟ್ಯ, ಸಂಗೀತ ಕಾರ್ಯಕ್ರಮ, ಯಕ್ಷಗಾನ ಹಾಗೂ ಭಜನಾ ಸಂಕೀರ್ತನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಭಕ್ತರ ಗಮನ ಸೆಳೆದವು. […]

Read More

ಅಡ್ವೆ ಘಟಕದಿಂದ ಗಣೇಶ ಚತುರ್ಥಿ ಕ್ರೀಡಾಕೂಟ

ಅಡ್ವೆ, ಸೆ. 14: ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ಪ್ರತಿವರ್ಷದಂತೆ ಈ ಬಾರಿಯೂ ಗಣೇಶ ಚತುರ್ಥಿ ಕ್ರೀಡಾಕೂಟವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಅಡ್ವೆ ಆವರಣದಲ್ಲಿ ಆಯೋಜಿಸಲಾಯಿತು. ಮಧ್ಯಾಹ್ನ 2 ಗಂಟೆಗೆ ಆರಂಭಗೊಂಡ ಕ್ರೀಡಾಕೂಟದಲ್ಲಿ ಯುವವಾಹಿನಿ ಸದಸ್ಯರು ಹಾಗೂ ಗ್ರಾಮಸ್ಥರಿಗಾಗಿ ಮಕ್ಕಳ ವಿಭಾಗ, ಮಹಿಳಾ ವಿಭಾಗ ಮತ್ತು ಪುರುಷರ ವಿಭಾಗಗಳಲ್ಲಿ ವಿವಿಧ ಮನರಂಜನಾ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಉಪಾಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರು, […]

Read More

ಯುವವಾಹಿನಿ ಕೊಲ್ಯ ಘಟಕದಿಂದ ‘ಮೊಬೈಲ್ ಉಪವಾಸ’

ಕೊಲ್ಯ, ಸೆ. 13: ಇಂದು ಸಮಸ್ತ ಜಗತ್ತು ಮೊಬೈಲ್ ಯುಗದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ, ಕುಟುಂಬದ ಸದಸ್ಯರ ನಡುವಿನ ಸಂಬಂಧಗಳು ಸಡಿಲವಾಗುತ್ತಿರುವುದು ಹಾಗೂ ಮಕ್ಕಳು, ಹಿರಿಯರು ಸೇರಿದಂತೆ ಬಹುತೇಕರು ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲೇ ಕಳೆಯುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕೊಲ್ಯ ಘಟಕವು ಗೌರಿ ಹಬ್ಬದ ಪ್ರಯುಕ್ತ ‘ಮೊಬೈಲ್ ಉಪವಾಸ’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಸೆ. 13ರಂದು ಭಾನುವಾರ ಬೆಳಗ್ಗೆ 7ರಿಂದ ಸಂಜೆ 7ರವರೆಗೆ 12 ಗಂಟೆಗಳ ಕಾಲ ಮೊಬೈಲ್ ಬಳಕೆಯಿಂದ ದೂರವಿರುವಂತೆ ಘಟಕದ […]

Read More

ಮನೆ ಮನೆಗೆಗುರುತತ್ತ್ವ ಸಂದೇಶ ಅಭಿಯಾನ ಇತರ ಘಟಕಗಳಿಗೆ ಮಾದರಿ: ಪ್ರೇಮನಾಥ ಕೆ.

ಮಾಣಿ ಸೆ 13 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ 2021ರಲ್ಲಿ ಆರಂಭಿಸಲಾದ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಅಭಿಯಾನವು ಇಂದು ಯುವವಾಹಿನಿಯ ಇತರ ಘಟಕಗಳಿಗೂ ಪ್ರೇರಣೆಯಾಗಿದೆ ಎಂದು ಯುವವಾಹಿನಿ ಮಾಜಿ ಕೇಂದ್ರ ಸಮಿತಿ ಅಧ್ಯಕ್ಷರಾದ ಪ್ರೇಮನಾಥ ಕೆ. ಹೇಳಿದರು. ಮಾಣಿ ಘಟಕದ ಮಾದರಿಯನ್ನು ಅನುಸರಿಸಿ ಇತರ ಘಟಕಗಳೂ ಗುರುಗಳ ತತ್ತ್ವ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ. ಗುರುಗಳ ತತ್ತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮಲ್ಲಿ ಬದಲಾವಣೆಯನ್ನು ಕಂಡುಕೊಳ್ಳುವುದರ ಜೊತೆಗೆ, […]

Read More

ಕಡಬದಲ್ಲಿ ನಾರಾಯಣಗುರು ಜಯಂತಿ ಆಚರಣೆ

ಕಡಬ, ಸೆ. 13: ಕಡಬ, ಸೆ. 13: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ.) ಕಡಬ ತಾಲೂಕು ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವವಾಹಿನಿ (ರಿ.) ಕಡಬ ಘಟಕದ ಸಹಕಾರದೊಂದಿಗೆ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸನ್ಮಾನ ಕಾರ್ಯಕ್ರಮವು ಸೆ. 13ರಂದು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವು ಭವ್ಯಮೆರವಣಿಗೆಯೊಂದಿಗೆ ಆರಂಭಗೊಂಡು,ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಇದರ ಪರಮಪೂಜ್ಯ ಶ್ರೀ […]

Read More

ಮುದ್ದುಕೃಷ್ಣ ಫೋಟೋ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಕುಪ್ಪೆಪದವು, ಸೆ. 13: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಆನ್‌ಲೈನ್ ‘ಮುದ್ದುಕೃಷ್ಣ’ ಫೋಟೋ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಣಾ ಸಮಾರಂಭವು ಸೆ. 13ರಂದು ಕುಪ್ಪೆಪದವು ಶ್ರೀ ರಾಮಕೃಷ್ಣ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ಅಧ್ಯಕ್ಷ ಗೋಪಾಲ್ ಪೂಜಾರಿ (ಗಂಗಾಧರ) ಎಡಪದವು ಮಾತನಾಡಿ, ಸಂಸ್ಥೆಯ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸದ ವಿಚಾರ. ಸದಸ್ಯರ ಪರಿಶ್ರಮ ಮತ್ತು ಸಹಕಾರದಿಂದ ಇಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು […]

Read More

ಶಿಕ್ಷಕರು ಸಮಾಜದ ಆಸ್ತಿ: ಅಶೋಕ್ ಕುಮಾರ್ ಪಡ್ಪು

ಮೂಡುಬಿದಿರೆ, ಸೆ. 13: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಮಾಸಿಕ ಸಭೆಯು ಸೆಪ್ಟೆಂಬರ್ 13ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮೇಘನಾ ಘಟಕದ ವರದಿಯನ್ನು ಮಂಡಿಸಿದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ 17 ಮಂದಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ […]

Read More

ಮನೆಮನೆ ಭಜನೆಯ ಮೂಲಕ ಸದಸ್ಯರ ಸಂಪರ್ಕಕ್ಕೆ ಮತ್ತಷ್ಟು ಬಲ

ಮೂಲ್ಕಿ ಸೆ 12 : ಯುವವಾಹಿನಿ (ರಿ.) ಮೂಲ್ಕಿ ಘಟಕದ ಸದಸ್ಯರ ನಡುವಿನ ಸಂಪರ್ಕದ ಕೊಂಡಿಯನ್ನು ಮತ್ತಷ್ಟು ಗಟ್ಟಿಗೊಳಿಸುವ ಹಾಗೂ ಸದಸ್ಯರ ಕುಟುಂಬದೊಂದಿಗೆ ಆತ್ಮೀಯವಾಗಿ ಬೆರೆಯುವ ಉದ್ದೇಶದಿಂದ ಹಮ್ಮಿಕೊಂಡಿರುವ ಮನೆಮನೆ ಭಜನೆ ಕಾರ್ಯಕ್ರಮವು ಸೆ. 12ರಂದು ಘಟಕದ ಅಧ್ಯಕ್ಷೆ ಚರಿಷ್ಮಾ ಶ್ರೀನಿವಾಸ್ ಅವರ ಮನೆಯಲ್ಲಿ ನಡೆಯಿತು. ಸಂಜೆ 6ರಿಂದ 7 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಾಗವಹಿಸಿ ಭಜನೆ, ಪ್ರಾರ್ಥನೆ ಹಾಗೂ ಭಕ್ತಿಗೀತೆಗಳ ಮೂಲಕ ಭಕ್ತಿಭಾವ ಮೆರೆದರು. ಬಳಿಕ ಮಹಾಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದ ನಂತರ […]

Read More

ಅಕ್ಷರ ಕಲಿಸಿದ ಗುರುಗಳಿಗೆ ಗೌರವ ನಮನ

ಬಜಪೆ ಸೆ 12 : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸೆ. 12ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆಯಲ್ಲಿ ಆಚರಿಸಲಾಯಿತು. ಬೋಧನಾ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಗಳಲ್ಲಿ ಒಂದೆಂದು ಪರಿಗಣಿಸಿರುವ ನಮ್ಮ ದೇಶದಲ್ಲಿ, ಶಿಕ್ಷಕರು ಕೇವಲ ಅಕ್ಷರ ಜ್ಞಾನವನ್ನು ನೀಡುವವರಲ್ಲ; ವಿದ್ಯಾರ್ಥಿಗಳ ಬದುಕಿನಲ್ಲಿ ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕನ್ನು ಬೆಳಗಿಸುವವರು. ಮಕ್ಕಳಲ್ಲಿರುವ ಪ್ರತಿಭೆ ಮತ್ತು ಆಸಕ್ತಿಯನ್ನು ಗುರುತಿಸಿ ಬೆಳೆಸುವುದರ ಜೊತೆಗೆ, ಅವರ ತಪ್ಪುಗಳನ್ನು ತಿದ್ದಿ, ಜೀವನಕ್ಕೆ ಸೂಕ್ತವಾದ ಗುರಿಯನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!