
28-08-2026, 8:00 PM
ಬಜಪೆ ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಬಜಪೆ ಗುರುಮಂದಿರದಲ್ಲಿ ಆಗಸ್ಟ್ 28ರಂದು ವಿವಿಧ ಧಾರ್ಮಿಕ ಹಾಗೂ ಸೇವಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಗುರುಜಯಂತಿಯ ಅಂಗವಾಗಿ ಗಣಹೋಮ, ಸತ್ಯನಾರಾಯಣ ಪೂಜೆ, ಭಜನಾ ಸಂಕೀರ್ತನೆ, ಗುರುದೇವರಿಗೆ ವಿಶೇಷ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಗುರುಪೂಜೆ ಹಾಗೂ ಮಹಾಮಂಗಳಾರತಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಮಧ್ಯಾಹ್ನದಿಂದ ರಾತ್ರಿ ವರೆಗೆ ನಿರಂತರವಾಗಿ ಅನ್ನಸಂತರ್ಪಣೆ ಸೇವೆ ನಡೆಯಿತು. ಅನ್ನಸಂತರ್ಪಣೆಯ ವ್ಯವಸ್ಥೆಯಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಎಲ್ಲಾ […]
Read More

28-08-2026, 8:00 PM
ಬಜಪೆ: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.), ಬಜಪೆ–ಕರಂಬಾರು ವತಿಯಿಂದ ಆಗಸ್ಟ್ 28ರಂದು ಸಂಜೆ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಯುವವಾಹಿನಿ ಬಜಪೆ ಘಟಕದ ಮಹಿಳಾ ಹಾಗೂ ಪುರುಷ ಸದಸ್ಯರು ವಿಭಿನ್ನ ಶೈಲಿಯ ನೃತ್ಯಗಳನ್ನು ಪ್ರದರ್ಶಿಸಿ ಸಭಿಕರ ಗಮನ ಸೆಳೆದರು. ಬಳಿಕ ಘಟಕದ ಸದಸ್ಯರಾದ ನಿತೇಶ್ ಪೂಜಾರಿ ಅವರ ನಿರ್ದೇಶನದಲ್ಲಿ ‘ರಿಕ್ಷಾ ಡ್ರೈವರ್’ ಎಂಬ […]
Read More

28-08-2026, 8:00 PM
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮರೋಳಿಯ ‘ಶ್ರೀ ಮಾತಾ ಹಿರಿಯ ನಾಗರಿಕರ ಆರೋಗ್ಯ ಕೇಂದ್ರ’ದಲ್ಲಿ ಸಮಾಜಮುಖಿ ಸೇವಾ ಕಾರ್ಯಕ್ರಮವನ್ನು ಆಯೋಜಿಸಿ, ಗುರುಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗುರುದೇವರ ಸೇವಾ ಸಂದೇಶವನ್ನು ಸ್ಮರಿಸುತ್ತಾ ಆಯೋಜಿಸಲಾದ ಕಾರ್ಯಕ್ರಮವನ್ನು ಶ್ರೀ ಮಾತಾ ಹಿರಿಯ ನಾಗರಿಕರ ಆರೋಗ್ಯ ಕೇಂದ್ರದ ವ್ಯವಸ್ಥಾಪಕರಾದ ಪವಿತ್ರ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ‘ಮಾತೃ ಸ್ಪರ್ಶ’ ಸಂಪಾದಕರಾದ ಸುಮಂಗಲ ಸಿ. ಕೋಟ್ಯಾನ್ ಪ್ರಾರ್ಥಿಸಿದರು. ಘಟಕದ ಮಾಜಿ ಅಧ್ಯಕ್ಷರಾದ […]
Read More

28-08-2026, 4:00 PM
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಗಸ್ಟ್ 28ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಗುರುಪೂಜೆ ಹಾಗೂ ಬ್ರಹ್ಮ ಬೈದರ್ಕಳ ದೇವರಿಗೆ ಹೂವಿನ ಪೂಜೆಯನ್ನು ಭಕ್ತಿಭಾವದಿಂದ ಸಮರ್ಪಿಸಲಾಯಿತು. ಗುರುಜಯಂತಿಯ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಭಾಗವಹಿಸಿ ಗುರುಗಳ ಹಾಗೂ ದೈವದ ಆಶೀರ್ವಾದ ಪಡೆದರು. ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.
Read More

28-08-2026, 4:00 PM
ಉಡುಪಿ ಅಗಸ್ಟ್ 28 : ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಕಾರ್ಯಕ್ರಮವು ಆಗಸ್ಟ್ 28ರಂದು ಶುಕ್ರವಾರ ಘಟಕದ ಸಭಾಂಗಣದಲ್ಲಿ ಭಕ್ತಿಭಾವದಿಂದ ನಡೆಯಿತು. ಗುರುಜಯಂತಿಯ ಅಂಗವಾಗಿ ಬೆಳಿಗ್ಗೆ 8 ಗಂಟೆಯಿಂದ ನಾರಾಯಣ ಗುರುತತ್ವ ಪ್ರಚಾರ ನಿರ್ದೇಶಕರಾದ ಶಾರದಾ ಉಮೇಶ್ ಅವರ ಮುತುವರ್ಜಿಯಲ್ಲಿ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಸುವರ್ಣ ಅವರು ಗುರುಪೂಜೆ ನೆರವೇರಿಸಿ, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು. ನಂತರ ಭಕ್ತರಿಗೆ […]
Read More

28-08-2026, 2:00 PM
ಕೊಲ್ಯ ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿಯು ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಹಾಗೂ ಬಿಲ್ಲವ ಸೇವಾ ಸಮಾಜ (ರಿ.) ಕೊಲ್ಯದ ಆಶ್ರಯದಲ್ಲಿ, ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಹಾಗೂ ಯುವವಾಹಿನಿ (ರಿ.) ಕೊಲ್ಯ ಘಟಕದ ಸಹಭಾಗಿತ್ವದಲ್ಲಿ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಭಕ್ತಿಭಾವದಿಂದ ನಡೆಯಿತು. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಯ ಇದರ ಅಧ್ಯಕ್ಷರಾದ ಚಂದ್ರಹಾಸ ಪಂಡಿತ್ ಹೌಸ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ […]
Read More

28-08-2026, 2:00 PM
ಕಡಬ ಅಗಸ್ಟ್ 28 : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ಪ್ರಯುಕ್ತ ನೆಟ್ಟಣ ಗುರುಮಂದಿರಕ್ಕೆ ಭೇಟಿ ನೀಡಿ ಗುರುಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಉಪಾಧ್ಯಕ್ಷರಾದ ಸರಿತಾ ಉಂಡಿಲ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಘಟಕದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಎನ್.ಎಸ್. ಕಡಬ ಹಾಗೂ ಸದಸ್ಯರಾದ ಸುವರ್ಣ ಉಂಡಿಲ ಉಪಸ್ಥಿತರಿದ್ದರು. ಗುರುಜಯಂತಿಯ ಅಂಗವಾಗಿ ಮಧ್ಯಾಹ್ನದ ಅನ್ನಸಂತರ್ಪಣೆಯ ಸಂದರ್ಭದಲ್ಲಿ ಘಟಕದ […]
Read More

28-08-2026, 1:30 PM
ಮಂಗಳೂರು ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಶಾಲಾ ಮಕ್ಕಳು ಹಾಗೂ ಅಂಗನವಾಡಿ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಗುರುಜಯಂತಿಯನ್ನು ಆಚರಿಸಲಾಯಿತು. ಆಗಸ್ಟ್ 28ರಂದು ಕೊಟ್ಟಾರದಲ್ಲಿರುವ ಸೇಂಟ್ ಪೀಟರ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಯ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಅನ್ನದಾನವು ಶ್ರೇಷ್ಠ ದಾನವಾಗಿದ್ದು, ಸಾಧ್ಯವಾದಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಭಗವಂತನ ಸೇವೆ ಮಾಡಿದ ತೃಪ್ತಿ ದೊರೆಯುತ್ತದೆ ಎಂಬ ಆಶಯದೊಂದಿಗೆ ಕಾರ್ಯಕ್ರಮ […]
Read More

28-08-2026, 1:00 PM
ಕಡಬ ಅಗಸ್ಟ್ 28 : ಕಡಬ ತಾಲೂಕು ಕಚೇರಿ ಹಾಗೂ ನಾಡಹಬ್ಬಗಳ ಸಮಿತಿ, ಕಡಬ ತಾಲೂಕು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆ ಕಾರ್ಯಕ್ರಮವು ಶುಕ್ರವಾರ ಆಡಳಿತ ಸೌಧ, ಕಡಬದಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕಡಬ ಘಟಕದ ಅಧ್ಯಕ್ಷ ಉಮೇಶ್ ಬಲ್ಪ, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕ ಶಿವಪ್ರಸಾದ್ ನೂಚಿಲ, ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಅಮೈ ಹಾಗೂ ಪ್ರಶಾಂತ್ ಎನ್.ಎಸ್., ಉಪಾಧ್ಯಕ್ಷೆ ಸರಿತಾ ಉಂಡಿಲ, ಬಿಲ್ಲವ ಪ್ರಮುಖರಾದ ಅಭಿಲಾಷ್ […]
Read More

28-08-2026, 1:00 PM
ಕೊಣಾಜೆ ಅಗಸ್ಟ್ 28 : ಯುವವಾಹಿನಿ (ರಿ.) ಕೊಲ್ಯ ಹಾಗೂ ಗ್ರಾಮಚಾವಡಿ–ಕೊಣಾಜೆ ಘಟಕದ ವತಿಯಿಂದ ವಿಶ್ವ ಬಿಲ್ಲವರ ಸೇವಾ ಚಾವಡಿಯ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಅಸೈಗೋಳಿಯ ಅಭಯ ಆಶ್ರಯದಲ್ಲಿರುವ ಹಿರಿಯರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಭಯ ಆಶ್ರಯದ ಹಿರಿಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವ ಬಿಲ್ಲವರ ಸೇವಾ ಚಾವಡಿಯ ಸದಸ್ಯ ಹಾಗೂ ಗ್ರಾಮಚಾವಡಿ ಘಟಕದ ಪ್ರಥಮ ಉಪಾಧ್ಯಕ್ಷ ಅಜಿತ್ ಪಜೀರ್ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]
Read More