
15-08-2026, 9:05 AM
ಕೊಣಾಜೆ, ಆಗಸ್ಟ್ 15: ಯುವವಾಹಿನಿ (ರಿ.) ಕೊಲ್ಯ ಘಟಕ, ರೋಟರಿ ಕ್ಲಬ್ ಮಂಗಳೂರು ಪೂರ್ವ ಹಾಗೂ ರೋಟರಿ ಸಮುದಾಯ ದಳ ಕೊಲ್ಯ–ಸೋಮೇಶ್ವರ ಇವರ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಕೊಣಾಜೆಯ ಅಭಯ ಆಶ್ರಮ ವೃದ್ಧಾಶ್ರಮದಲ್ಲಿ ಹಿರಿಯರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಿರಿಯರೊಂದಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಹಂಚಿಕೊಳ್ಳುವ ಉದ್ದೇಶದಿಂದ ಮೂರು ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ಸದಸ್ಯರು ಆಶ್ರಮದ ಹಿರಿಯರೊಂದಿಗೆ ಬೆರೆತು ವಿವಿಧ ಮನರಂಜನಾ ಮತ್ತು ಆರೋಗ್ಯ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಧ್ಯಾನ, ಪ್ರಾಣಾಯಾಮ ಹಾಗೂ ಮನರಂಜನಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. […]
Read More

15-08-2026, 9:00 AM
ಹೆಜಮಾಡಿ, ಆಗಸ್ಟ್ 15: ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಹೆಜಮಾಡಿ ಬಿಲ್ಲವರ ಸಂಘದ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಹಾಗೂ ವನಮಹೋತ್ಸವ ಕಾರ್ಯಕ್ರಮವು ಆಗಸ್ಟ್ 15ರಂದು ನಡೆಯಿತು. ಹೆಜಮಾಡಿ ಬಿಲ್ಲವರ ಸಂಘದಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಜನತೆ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು, ಜವಾಬ್ದಾರಿಯುತ ಹಾಗೂ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವ ನಿಟ್ಟಿನಲ್ಲಿ ಪೋಷಕರು ಮತ್ತು […]
Read More

15-08-2026, 9:00 AM
ಮಂಗಳೂರು: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಯಿತು. ಬಳಿಕ ಉಪಸ್ಥಿತರಿದ್ದವರಿಗೆ ಸಿಹಿತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕಂಕನಾಡಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Read More

15-08-2026, 9:00 AM
ಅಡ್ವೆ: ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಡ್ವೆಯಲ್ಲಿ ಶಾಲಾ ಮಕ್ಕಳು ಹಾಗೂ ಘಟಕದ ಸದಸ್ಯರ ಉಪಸ್ಥಿತಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಿತು. ಇದೇ ಸಂದರ್ಭದಲ್ಲಿ ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಶಾಲಾ ಮಕ್ಕಳಿಗೆ ಶಾಲಾ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಮಾಜಿ ಅಧ್ಯಕ್ಷರುಗಳು, ಗೌರವ ಸಲಹೆಗಾರರು, ಕಾರ್ಯಕಾರಿ ಸಮಿತಿಯ […]
Read More

14-08-2026, 6:00 PM
ಕಡಬ, ಆಗಸ್ಟ್ 14: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಬಳ್ಪ ಮತ್ತು ಎಣ್ಣೆಮಜಲು ಅಂಗನವಾಡಿ ಶಾಲೆಗಳ ಮಕ್ಕಳಿಗೆ ಗುರುತಿನ ಚೀಟಿ (ಐಡಿ ಕಾರ್ಡ್) ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಯುವವಾಹಿನಿ (ರಿ.) ಕಡಬ ಘಟಕದ ಅಧ್ಯಕ್ಷ ಉಮೇಶ್ ಬಳ್ಪ ಅವರು, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಅಗತ್ಯವಾದ ಪ್ರೋತ್ಸಾಹ ಹಾಗೂ ಸಹಕಾರ ನೀಡುವ ಮೂಲಕ ಅವರ ಉತ್ತಮ ಭವಿಷ್ಯ ರೂಪಿಸಲು […]
Read More

14-08-2026, 4:00 PM
ಕಡಬ, ಆಗಸ್ಟ್ 14: ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯುವ ಸಮೂಹದ ಸಹಕಾರ ಹಾಗೂ ಪೋಷಕರ ಜವಾಬ್ದಾರಿ ಅತ್ಯಂತ ಅಗತ್ಯ ಎಂದು ಕಡಬ ಪಟ್ಟಣ ಪಂಚಾಯತ್ ಸದಸ್ಯ ದಯಾನಂದ ಪಿಜಕ್ಕಳ ಹೇಳಿದರು. ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಿಜಕ್ಕಳ ಹಾಗೂ ಪನ್ಯ–ಗುರಿಯಡ್ಕ ಸರ್ಕಾರಿ ಶಾಲಾ ಮಕ್ಕಳಿಗೆ ಗುರುತಿನ ಚೀಟಿ (ಐಡಿ ಕಾರ್ಡ್) ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳು ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಪ್ರಮುಖ […]
Read More

14-08-2026, 2:00 PM
ಮೂಡುಬಿದಿರೆ, ಆಗಸ್ಟ್ 14: ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಆರೋಗ್ಯದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ‘ವಿದ್ಯಾರ್ಥಿ ಮನೋಹಿತ’ ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರವು ಮಿಜಾರು ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆಯಿತು. ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ–ಮಾದಕ ವಸ್ತು ವ್ಯಸನಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಮತ್ತು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ, ಶೋಭಾವನ, ಮಿಜಾರು ಇವರ ಸಹಯೋಗದಲ್ಲಿ […]
Read More

12-08-2026, 7:00 AM
ಮುಲ್ಕಿ, ಆಗಸ್ಟ್ 12: ತುಳುನಾಡಿನ ಸಂಪ್ರದಾಯ, ಆಚರಣೆಗಳ ಹಿಂದೆ ವೈಜ್ಞಾನಿಕ ಹಾಗೂ ಆರೋಗ್ಯದ ಮಹತ್ವ ಅಡಗಿದೆ. ಆಷಾಢ ಮಾಸದ ಅಮಾವಾಸ್ಯೆಯಂದು ತುಳುವರು ಸೇವಿಸುವ ಔಷಧೀಯ ಗುಣವುಳ್ಳ ಕಷಾಯವು ಆರೋಗ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಯುವವಾಹಿನಿ (ರಿ.) ಮುಲ್ಕಿ ಘಟಕದ ಅಧ್ಯಕ್ಷೆ ಚರೀಷ್ಮಾ ಶ್ರೀನಿವಾಸ್ ಹೇಳಿದರು. ಅವರು ಆಗಸ್ಟ್ 12ರಂದು ಮುಲ್ಕಿ ಬಸ್ ನಿಲ್ದಾಣದ ಬಳಿ ಯುವವಾಹಿನಿ (ರಿ.) ಮುಲ್ಕಿ ಘಟಕದ ಸಂಯೋಜನೆಯಲ್ಲಿ ಲಯನ್ಸ್ ಕ್ಲಬ್ ಮುಲ್ಕಿ, ಲಿಯೋ ಕ್ಲಬ್, ರೋಟರಿ ಕ್ಲಬ್ ಮುಲ್ಕಿ ಹಾಗೂ ನವದುರ್ಗ ಯುವಕ […]
Read More

11-08-2026, 8:00 PM
ಮಂಗಳೂರು ಅಗಸ್ಟ್ 11: “ಭಾರತವು ವಿಶ್ವದಲ್ಲೇ ಅತೀ ಹೆಚ್ಚು ಡಿಜಿಟಲ್ ಪಾವತಿ ವ್ಯವಸ್ಥೆ ಬಳಸುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದೆ. ಬೀದಿಬದಿ ಅಂಗಡಿಗಳಿಂದ ಹಿಡಿದು ದೊಡ್ಡ ವ್ಯಾಪಾರ ವಹಿವಾಟುಗಳವರೆಗೆ ಡಿಜಿಟಲ್ ಪಾವತಿ ವ್ಯಾಪಕವಾಗಿ ಬಳಕೆಯಾಗುತ್ತಿದೆ. ವೈಯಕ್ತಿಕ ಡಿಜಿಟಲ್ ಪಾವತಿಗೆ ಪ್ರಸ್ತುತ ಯಾವುದೇ ಶುಲ್ಕವಿಲ್ಲದಿದ್ದರೂ, ವಾಣಿಜ್ಯ ವಹಿವಾಟುಗಳಲ್ಲಿ ಮುಂದಿನ ದಿನಗಳಲ್ಲಿ ನಿರ್ದಿಷ್ಟ ಮಿತಿಯನ್ನು ಮೀರಿದ ಪಾವತಿಗಳಿಗೆ ಸೇವಾ ಶುಲ್ಕ ವಿಧಿಸುವ ಸಾಧ್ಯತೆಯಿದೆ” ಎಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಕೋಶಾಧಿಕಾರಿ ಹಾಗೂ ಹಣಕಾಸು ನಿರ್ವಹಣಾ ತಜ್ಞ ಚಂದ್ರಶೇಖರ್ ಕಿನ್ನಿಗೋಳಿ ಹೇಳಿದರು. ಯುವವಾಹಿನಿ […]
Read More

11-08-2026, 7:00 PM
ಯುವವಾಹಿನಿ (ರಿ) ಕೊಲ್ಯ ಘಟಕದ ನೇತೃತ್ವದಲ್ಲಿ ಕಳೆದ ಆರು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿರುವ ಧರ್ಮ ಶಿಕ್ಷಣ ತರಗತಿಯಲ್ಲಿ ಆಟಿ ತಿಂಗಳ ವಿಶೇಷ ಕಾರ್ಯಕ್ರಮ ಈ ತಿಂಗಳ ಪ್ರತಿ ಮಂಗಳವಾರ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ನಡೆಸಲಾಯಿತು. ಮೊದಲ ವಾರ ಆಟಿ ತಿಂಗಳ ಮಹತ್ವ, ನಮ್ಮ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ರಸಪ್ರಶ್ನೆ ನಡೆಸಲಾಯಿತು. 2 ನೇ ವಾರದಲ್ಲಿ ಧರ್ಮ ಶಿಕ್ಷಣ ಶಿಕ್ಷಾರ್ಥಿಗಳು ತುಳು ಕನ್ನಡ ಗೀತೆಗಳನ್ನು ತರಗತಿಯಲ್ಲಿ ಹಾಡಿದರು. 3 […]
Read More