Yuvavahini

ಘಟಕಗಳು

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ

ಕೂಳೂರು: ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ ದಿನಾಂಕ 18/11/2018 ರಿಂದ ದಿನಾಂಕ 22/11/2018ರ ತನಕ ಏರ್ಪಡಿಸಲಾಗಿದ್ದು 45 ಮಂದಿ ಸದಸ್ಯರನ್ನೊಳಗೊಂಡ ತಂಡಕ್ಕೆ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ಚಾಲನೆ ನೀಡಿದರು. ದಿನಾಂಕ 18/11/2018 ರವಿವಾರ ರಾತ್ರಿ 9.45 ಕ್ಕೆ ಮಂಗಳೂರಿನಿಂದ ಹೊರಟು 19/11/18 ಸೋಮವಾರ ಸಂಜೆ 6 ಗಂಟೆಗೆ ಸರಿಯಾಗಿ ನಾಸಿಕ್ ತಲುಪಿದೆವು. ಅದೇ ದಿನ ರಾತ್ರಿ ಮೊದಲನೆಯದಾಗಿ ಬಿಲ್ಲವರ ಗುರುವಾದ ಗಿರ್ನಾರ್‍ದಲ್ಲಿರುವ ನಾರಾಯಣಗುರು ಸ್ವಾಮಿಯವರ ಮಂದಿರಕ್ಕೆ ಭೇಟಿ ನೀಡಿದೆವು. […]

Read More

ಯುವವಾಹಿನಿ (ರಿ) ಕಂಕನಾಡಿ ಘಟಕದಿಂದ ಶೈಕ್ಷಣಿಕ ನೆರವು

ಕಂಕನಾಡಿ : ಯುವವಾಹಿನಿ (ರಿ) ಕಂಕನಾಡಿ ಘಟಕವು ಮಕ್ಕಳ ದಿನಾಚರಣೆ ಪ್ರಯುಕ್ತ ದಿನಾಂಕ 16-11-2018ರಂದು ಮಂಗಳೂರಿನ ಗೋರಿಗುಡ್ಡ ಕಿಟ್ಟೆಲ್ ಮೆಮೋರಿಯಲ್ ಶಾಲಾ ಬಡ ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ ಕಂಕನಾಡಿ ಘಟಕದ ಸದಸ್ಯರು ಹಾಗೂ ಅದೇ ಶಾಲೆಯ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಹತ್ತು ಸಾವಿರ ರೂಪಾಯಿ ಶೈಕ್ಷಣಿಕ ನೆರವು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್, ಕಾರ್ಯದರ್ಶಿ ಸುಮಾ ವಸಂತ್, ಸದಸ್ಯೆ ಚಂದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.

Read More

ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು : ಹರಿಶ್ಚಂದ್ರ ಪಿ. ಸಾಲ್ಯಾನ್

ಮುಲ್ಕಿ : ಓದಿನಲ್ಲಿ ಸಿಗುವ ಆನಂದ ಅನುಭವ, ಒಳ್ಳೆಯ ವಿಚಾರ ಬೇರೆ ಯಾವ ತಂತ್ರಾಂಶದಿಂದ ಸಿಗಲು ಸಾಧ್ಯವಿಲ್ಲ. ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು, ಈ ನಿಟ್ಟಿನಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ಪತ್ರಿಕೆಯ ಸಾಧನೆ ಗಮನಾರ್ಹವಾದುದು ಎಂದು ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕರಾದ ಹರಿಶ್ಚಂದ್ರ ಪಿ. ಸಾಲ್ಯಾನ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 14.11.2018 ರಂದು ಮುಲ್ಕಿ ಸಿ. ಎಸ್. ಐ ಬಾಲಿಕಾಶ್ರಮದಲ್ಲಿ ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ನಡೆದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ […]

Read More

ಮಕ್ಕಳಿಗೆ ಸ್ವಾವಲಂಬನೆಯ ಬದುಕು, ವಾಸ್ತವದ ಅರಿವು ತಿಳಿಸುವುದು ಸೂಕ್ತ : ಜಯಂತ ನಡುಬೈಲು

ಮುಲ್ಕಿ: ಮಕ್ಕಳಿಗೆ ವಾಸ್ತವದ ಅರಿವನ್ನು ಮಾಡಿ ಸುತ್ತಾ, ಸ್ವಾವಲಂಬನೆಯ ಬದುಕನ್ನು ಕಲಿಸುವುದು ಒಳಿತು, ಅಂದಾಗ ಮಾತ್ರ ಒಂದು ಮಗು ಮುಂದಿನ ಸಮಾಜದ ಒಳ್ಳೆಯ ಪ್ರಜೆಯಾಗಲು ಸಾಧ್ಯ.ಬಾಲ್ಯವೆಂದರೆ ಹಾಗೆ ಏನೂ ತಿಳಿಯದ ಮುಗ್ಧ ಸ್ಥಿತಿ. ನೆನಪುಗಳು ಅತಿ ಸುಂದರ, ಬೆಳೆದಂತೆ ನಮ್ಮ ಬುದ್ಧಿ ವಿಕಸನ ಹೊಂದಿ ನೆನಪುಗಳ ವ್ಯೂಹದಲ್ಲಿ ಅದು ಅವಿಸ್ಮರಣೀಯ ಇತಿಹಾಸವಾಗಿ ಉಳಿದುಬಿಡುತ್ತದೆ. ಹೋದ ಹೋದಂತೆ ಅದು ಮಸುಕಾದರೂ ನಮ್ಮ ಅರಿವಿನ ಸಂಕೋಲೆಗಳಿಂದ ದೂರ ನಡೆಯುವುದಿಲ್ಲ. ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂಬ ಮಾತಿದೆ.  […]

Read More

ಯುವವಾಹಿನಿ ಬಂಟ್ವಾಳದ ಸಾಧನೆ ಶ್ಲಾಘನೀಯ : ನಡುಬೈಲು

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯ ವಾದುದು. ಕಳೆದ 30 ವರ್ಷಗಳಿಂದ ಬಂಟ್ವಾಳ ತಾಲೂಕಿನಲ್ಲಿ ನಿರಂತರ ಸಮಾಜಮುಖಿ ಕಾರ್ಯಗಳ ಮೂಲಕ ಮನೆಮಾತಾಗಿವೆ. ಬಡವರಿಗೆ ಸೂರು, ವಿದ್ಯಾರ್ಥಿ ವೇತನ, ಅನ್ವೇಷಣಾ ಶಿಬಿರ ಹೀಗೆ ಹತ್ತು ಹಲವು ಯೋಜನೆಗಳು ಘಟಕದ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ. ರಜತ ಸಂಭ್ರಮ, ಯುವ ಬಿಲ್ಲವ ಸಮಾವೇಶವು ಯುವವಾಹಿನಿಯ ಇತಿಹಾಸದ ದಾಖಲೆಯ ಪುಟ ಸೇರಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲು ತಿಳಿಸಿದರು. ಅವರು ದಿನಾಂಕ 04.11.2018 ರಂದು ಬಿ.ಸಿ.ರೋಡ್ […]

Read More

ಪ್ರೊ.ತುಕರಾಮ ಪೂಜಾರಿಯವರಿಗೆ ಗೌರವ ಅಭಿನಂದನೆ

ಬಂಟ್ವಾಳ : ಡಿಸೆಂಬರ್ 7 ಮತ್ತು 8 ರಂದು ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ತುಕರಾಮ ಪೂಜಾರಿ ಆಯ್ಕೆಯಾದ ಹಿನ್ನೆಲೆಯಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಸದಸ್ಯರು ಪ್ರೊ.ತುಕರಾಮ ಪೂಜಾರಿ ಯವರನ್ನು ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ದಿನಾಂಕ 14-11-18 ರಂದು ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ ಮಾತಾನಾಡಿದ ಪ್ರೊ.ತುಕರಾಮ ಪೂಜಾರಿ ಯುವವಾಹಿನಿ ಸದಸ್ಯರು ನೀಡಿದ ಅಭಿನಂದನೆ, ಪ್ರೀತಿ ತನಗೆ ಇನ್ನಷ್ಟು ಸ್ಪೂರ್ತಿ […]

Read More

ಮುಗ್ಧ ಮನಸ್ಸಿನ ಸಮ್ಮಿಲನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ಮಕ್ಕಳ ದಿನಾಚರಣೆ -ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 14/11/2018 ಬುಧವಾರ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು.ಮೂರು ಅಂಗನವಾಡಿ ಕೇಂದ್ರದ ಸುಮಾರು 60 ಮಂದಿ ಪುಟ್ಟ ಮಕ್ಕಳು ಹಾಗೂ ಅವರ ಪೋಷಕರು ಇಲ್ಲಿ ಭಾಗಿಯಾಗಿದ್ದು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ನಂತರ ಮನರಂಜನೆಗಾಗಿ ಮಕ್ಕಳಿಂದ ಅಭಿನಯ ಗೀತೆ, ನೃತ್ಯ ಹಾಗೂ ಮಕ್ಕಳ ಪೋಷಕರಿಗೂ ಕೂಡ ಮಕ್ಕಳ ಜತೆ ನೃತ್ಯ […]

Read More

ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ : ಅಶೋಕ್ ಕುಮಾರ್ ಅಭಿಮತ

ಕೊಲ್ಯ : ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ, ಕಾರ್ಯಕ್ರಮದ ಆಯೋಜನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮುದ್ದುಮಕ್ಕಳ ಮಾಯಾ ಲೋಕವನ್ನೆ ಸೃಷ್ಟಿಸಿದ ಈ ಕಾರ್ಯಕ್ರಮ ಅರ್ಥಪೂರ್ಣ ಆಚರಣೆ ಎಂದು ಯುವವಾಹಿನಿ (ರಿ)ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರು ಮತ್ತು ಕೊಲ್ಯ ಘಟಕದ ಸಲಹೆಗಾರರೂ ಆಗಿರುವ ಅಶೋಕ್ ಕುಮಾರ್ ತಿಳಿಸಿದರು. ಅವರು ದಿನಾಂಕ 14/11/2018 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಜರುಗಿದ ಕೊಂಡಾಟದ ಬಾಲೆ -2018 […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಗೂಡುದೀಪ ಸ್ಪರ್ಧೆ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ದಿನಾಂಕ 19.11.2018 ರಂದು ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ದೀಪಾವಳಿ ಮತ್ತು ಕ್ಷೇತ್ರದ ಭಜನಾ ಸಪ್ತಾಹದ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಿತೇಶ್ ಬಿ. ಕೋಟ್ಯಾನ್ ವಹಿಸಿದರು. ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷ ರತ್ನಾಕರ್ ಆಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಅಶೋಕ್ ಎಮ್. ಸುವರ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್, ಹಾಗೂ ಸದಸ್ಯರು, […]

Read More

ಯುವಾಹಿನಿ (ರಿ) ಕುಪ್ಪೆಪದವು ಘಟಕದ ವತಿಯಿಂದ ಅಶಕ್ತರಿಗೆ ನೆರವು

ಕುಪ್ಪೆಪದವು : ಕುಪ್ಪೆಪದವು ಗ್ರಾಮದ ದೊಡ್ಡಳಿಕೆ ಎಂಬ ಜನವಸತಿ ಪ್ರದೇಶದಲ್ಲಿ ವಾಸಿಸುತ್ತಿರುವ ತಮ್ಮೆರಡು ಕಣ್ಣುಗಳನ್ನು ಕಳೆದುಕೊಂಡು ದುಡಿಯಲು ಅಶಕ್ತರಾಗಿರುವ ಅಲ್ಲದೆ ಆರ್ಥಿಕವಾಗಿ ದುರ್ಬಲ ಪರಿಸ್ಥಿತಿಯಲ್ಲಿರುವ ಸೀತಾರಾಮ ಪೂಜಾರಿಯವರ ಮಗಳ ಮದುವೆಗಾಗಿ ಕುಪ್ಪೆಪದವು ಘಟಕದ ಮಹಿಳೆಯರ ವತಿಯಿಂದ ದಿನಾಂಕ 08-11-2018 ರಂದು 50 ಕೆ ಜಿ ಅಕ್ಕಿ, ಉಪಾದ್ಯಕ್ಯರು ಅಜಯ್ ಅಮೀನ್ ರವರು ವೈಯಕ್ತಿಕವಾಗಿ 50 ತೆಂಗಿನಕಾಯಿ ಹಾಗೂ ಇತರ ಪದಾಧಿಕಾರಿಗಳು ಸದಸ್ಯರ ವತಿಯಿಂದ ರೂಪಾಯಿ ಐದು ಸಾವಿರ ನಗದನ್ನು ಅಧ್ಯಕ್ಷರು, ಉಪಾದ್ಯಕ್ಯರು, ಕಾರ್ಯದರ್ಶಿ, ಎಲ್ಲಾ ಸದಸ್ಯರು ಪದಾಧಿಕಾರಿಗಳ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!