18-06-2026, 3:22 PM
ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ವೃಕ್ಷೋತ್ಸವ – 2026ರ ನಾಲ್ಕನೇ ಹಂತದ ಅಂಗವಾಗಿ ಕೆದಿಲ ಗ್ರಾಮ ಪಂಚಾಯಿತಿಯ ರುದ್ರಭೂಮಿಯಲ್ಲಿ ವೃಕ್ಷಾರೋಪಣ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. “ಇಂದು ನೆಡುವ ಗಿಡ ನಾಳೆಯ ಪೀಳಿಗೆಗೆ ನೀಡುವ ಅಮೂಲ್ಯ ಉಡುಗೊರೆ” ಎಂಬ ಸಂದೇಶದೊಂದಿಗೆ ನಡೆದ ಕಾರ್ಯಕ್ರಮದಲ್ಲಿ, “ಅಂತಿಮ ಯಾತ್ರೆಯ ತಾಣವಾಗಿರುವ ರುದ್ರಭೂಮಿಯೂ ಹಸಿರಿನಿಂದ ಕಂಗೊಳಿಸಿದಾಗ, ಅದು ಜೀವನದ ನಿರಂತರತೆಯ ಸಂಕೇತವಾಗುತ್ತದೆ” ಎಂಬ ಪರಿಸರ ಕಾಳಜಿಯ ಸಂದೇಶವನ್ನು ಸಾರಲಾಯಿತು. ಈ ಸಂದರ್ಭದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು […]
Read More
17-06-2026, 11:00 AM
ವಿಟ್ಲ :“ದೇಶ ಸೇವೆಯೇ ಈಶ ಸೇವೆ” ಎಂಬ ಉದಾತ್ತ ಧ್ಯೇಯದೊಂದಿಗೆ ಭಾರತೀಯ ಭೂಸೇನೆಗೆ ಆಯ್ಕೆಯಾದ ವಿಟ್ಲ ಪರಿಸರದ ಆರು ಮಂದಿ ಸಾಧಕ ಯುವಕರಿಗೆ ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 17-06-2026ರಂದು ಬಿಲ್ಲವ ಸಂಘದ ವಿಟ್ಲ ದೇಯಿ ಬೈದಿತಿ ಸಭಾಭವನದಲ್ಲಿ ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು. ಯುವವಾಹಿನಿ ವಿಟ್ಲ ಘಟಕದ ಅಧ್ಯಕ್ಷ ಕೆ.ಟಿ. ಆನಂದ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ಜಯಪ್ರಕಾಶ್ ಪಾಣೆಮಜಲು, ನಿವೃತ್ತ ಕ್ಯಾಪ್ಟನ್ ಹಾಗೂ ಅಗ್ನಿವೀರ […]
Read More
16-06-2026, 7:30 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವು ಜೂನ್ 16ರಂದು ನಡೆಯಿತು. ಕಾರ್ಯಕ್ರಮವು ಗುರು ಪೂಜೆಯೊಂದಿಗೆ ಆರಂಭಗೊಂಡು, ಗುರು ಸ್ತುತಿಯ ಬಳಿಕ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಧ್ಯಕ್ಷರು ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರೋಲಿನ್ ಡಿ’ಸೋಜ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಹಾಗೂ […]
Read More
15-06-2026, 8:00 PM
ಮಂಗಳೂರು: ದಿನಾಂಕ: 15-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಯುವವಾಹಿನಿ (ರಿ.) ಕೂಳೂರು ಘಟಕ ಇವರ ಸಹಯೋಗದೊಂದಿಗೆ ನಡೆಯಿತು. ಕೂಳೂರು ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರ ತಂಡವು ಭಕ್ತಿ ಭಾವದಿಂದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ […]
Read More
14-06-2026, 6:00 PM
ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ವಿಜೇತ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ 2026-27 ನೇ ಸಾಲಿನ ಕಾರ್ಯಕಾರಿ ಸಮಿತಿ ಅಧ್ಯಕ್ಷರು : ವಿಜೇತ್ ವಿ ಪೂಜಾರಿಪ್ರಥಮ ಉಪಾಧ್ಯಕ್ಷರು : ಕಿಶೋರ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ಸಚಿಂದ್ರ ಕೋಟ್ಯಾನ್ಕಾರ್ಯದರ್ಶಿ : ಮನೋಜ್ ಕುಮಾರ್ ಟಿಜೊತೆ ಕಾರ್ಯದರ್ಶಿ : ಪ್ರಜ್ವಲ್ ಕೋಟ್ಯಾನ್ಕೋಶಾಧಿಕಾರಿ : ಶ್ರುತಿ ಸಾಲ್ಯಾನ್ಆಂತರಿಕ ಲೆಕ್ಕಪರಿಶೋಧಕರು : ಅಶ್ವಿನಿ ಅಮೀನ್ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು : ದೇವಿಪ್ರಸಾದ್ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಪದಗ್ರಹಣ ಸಮಾರಂಭವು ಸಂಘಟನಾ ಬದ್ಧತೆ, ಏಕತೆ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಸಂಖ್ಯೆಯು ಕೇವಲ ಹಾಜರಾತಿಯನ್ನು ಮಾತ್ರ ಸೂಚಿಸುವುದಲ್ಲ; ಸಂಘಟನೆಯ ಮೇಲಿನ ಸದಸ್ಯರ ಬದ್ಧತೆ, ಪ್ರೀತಿ ಹಾಗೂ ಅಚಲ ನಂಬಿಕೆಯ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 14 ಜೂನ್ 2026 ರಂದು ಬೆಂಗಳೂರಿನ ವಿಧಾನಸೌಧದ ಬಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಘಿಕ ಮನೋಭಾವದಿಂದ ನೆರವೇರಿತು. . ಸಂಘಟನಾ ಸಾಮರ್ಥ್ಯ ಶ್ಲಾಘನೀಯ : ಜೆ.ಪಿ.ಸುಧಾಕರ್ಬೆಂಗಳೂರು ಘಟಕದ ಸಂಘಟನಾ ಸಾಮರ್ಥ್ಯ, ಸಮಯಪಾಲನೆ, ಶಿಸ್ತು ಮತ್ತು ಸದಸ್ಯರ ನಡುವಿನ ಐಕ್ಯತೆಯು ಶ್ಲಾಘನೀಯ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಖ್ಯಾತ […]
Read More
14-06-2026, 1:00 PM
ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 14-06-2026ರಂದು ಶಕ್ತಿನಗರ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವೃಕ್ಷೋತ್ಸವವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ರುದ್ರಭೂಮಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಸದಸ್ಯರೆಲ್ಲರೂ ಒಟ್ಟಾಗಿ ಹಣ್ಣುಗಳ ಸಸಿಗಳನ್ನು ನೆಟ್ಟು ವೃಕ್ಷಾರೋಪಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ರುದ್ರಭೂಮಿಯ ವ್ಯವಸ್ಥಾಪಕರಾದ ಪದ್ಮನಾಭ ಅಂಚನ್ ಕಕ್ಕೆಬೆಟ್ಟು ಅವರು ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಸಂಸ್ಥೆಯು […]
Read More
14-06-2026, 1:00 PM
ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಹರೀಶ್ ದೋಳ ಅವರ ನಿವಾಸದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ವಿವಿಧ ಮೋಜಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಟುಂಬ ಸದಸ್ಯರ ಪರಸ್ಪರ ಒಡನಾಟ ಮತ್ತು ಸೌಹಾರ್ದತೆಯನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ […]
Read More
14-06-2026, 1:00 PM
ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]
Read More